Author: admin

ಮಂಗಳೂರು,ಜು.28 : ನಗರದ ಕುಲಶೇಖರ ಕೋಟಿಮುರ ಸಿಲ್ವರ್ ಗೇಟ್ ನ ಗ್ರಂಥಾಲಯದ ಬಳಿ ಇರುವ ನಾಗೇಶ್ ಎಂಬುವವರ ಮನೆ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ರವರು ಕುಟುಂಬಸ್ಥರಿಗೆ ಧೈರ್ಯ ತುಂಬಿ ಪರಿಹಾರ ಕಾರ್ಯದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕರೆ ಮಾಡಿ ಸೂಚಿಸಿದರು. ಸ್ಥಳದಲ್ಲಿ ಅಜಯ್ ಕುಲಶೇಖರ, ನಿತಿನ್ ಕುಮಾರ್, ಅನಿಲ್, ಹರಿಣಿ ಪ್ರೇಮ್, ಪ್ರಶಾಂತ್, ಸುಶಾಂತ್ ಮೊದಲಾದವರು ಉಪಸ್ಥಿತರಿದ್ದರು.

Read More

ಮಂಗಳೂರು,ಜು.28 : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿಆಟಿಡೊಂಜಿ ದಿನ ಕಾರ್ಯಕ್ರಮ ಕದ್ರಿ  ಶ್ರೀ ಗೋರಕ್ಷಣಾಥ ಮಿನಿ ಹಾಲ್ ನಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಶ್ರೀ ನವೀನ್ ಶೆಟ್ಟಿಅವರು ಇತರ ಗಣ್ಯರೊಂದಿಗೆ ಸೇರಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ನಂತರ ಮಾತಾಡಿ ಹಿಂದಿನ ದಿನಗಳಲ್ಲಿ ಆಟಿ ದಿನಗಳು ಕಷ್ಟಕರವಾಗಿದ್ದವು. ಅಂದಿನ ದಿನಗಳನ್ನು ನೆನಪಿಸುವ ಸಲುವಾಗಿ ಈ ಆಟಿಡೊಂಜಿ ಕಾರ್ಯಕ್ರಮಗಳನ್ನು ಅಲ್ಲಲ್ಲಿಆಚರಿಸುತ್ತಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸನ್ಮಾನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು.ಸ್ವಾಗತ ಮತ್ತು ಪ್ರಸ್ತಾವಿಕ ಭಾಷಣವನ್ನು ಪ್ರಕಾಶ್ ಮೂಲತ್ವ ನೆರವೇರಿಸಿದರು. ಅತಿಥಿ ಗಳಿಗೆ ಶ್ರೀ ಲಕ್ಷ್ಮೀಶ ಕೋಟ್ಯಾನ್‌- ಶಾಲ್, ಶ್ರೀಮತಿ ಕಲ್ಲನಾ ಕೋಟ್ಯಾನ್- ಹೂವು, ಮಹೇಶ್ ಅಮೀನ್- ವೀಳ್ಯದೇಲೆ ಅಡಿಕೆ, ಶ್ರೀ ಪ್ರಶಾಂತ್ ರೈ- ಮುಟ್ಟಲೆ, ಶ್ರೀಮತಿ ಶೈನಿಕೈಲ್ – ಶ್ರೀಮತಿ ಜಯಶ್ರೀ -ಕುಡುಪು ಹಾಗೂ ಶ್ರೀ ರಾಮ್ ಪ್ರಸಾದ್- ಅಕ್ಕಿ ನೀಡಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಪ್ರಕಾಶ್ ಮೂಲತ್ವ, ಶ್ರೀ ಲಕ್ಷ್ಮೀಶ ಕೋಟ್ಯಾನ್‌, ಶ್ರೀಮತಿ ಕಲ್ಲನಾ ಕೋಟ್ಯಾನ್,…

Read More

ಬೈಂದೂರು, ಜು 27 : ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಪೈಂಟರೊಬ್ಬರು ಸಾವನ್ನಪ್ಪಿದ ಘಟನೆ ನಾವುಂದ ಎಂಬಲ್ಲಿ ಶುಕ್ರವಾರ ನಡೆದಿದೆ.ಗಂಗೊಳ್ಳಿ ನಿವಾಸಿ ಸಂದೀಪ್( 40 ) ಮೃತರು. ಸಂದೀಪ್ ಇವರು ಟ್ರಾನ್ಸ್ಪೋರ್ಟ್ ಸಂಸ್ಥೆಯೊಂದರ ಲಾರಿಗಳ ಪೇಂಟಿಂಗ್ ಮಾಡಲು ಆಗಮಿಸಿದ್ದು, ಈ ವೇಳೆ ಪೇಂಟಿಂಗ್ ಕಂಪ್ರೆಸರ್ ಯಂತ್ರದಲ್ಲಿ ವಿದ್ಯುತ್ ಹರಿದ ಪರಿಣಾಮ ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟರು ಎಂದು ಹೇಳಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿಯಾಗಿರುವ ಡಾ.ರಜನೀಶ್ ಗೋಯಲ್ ಅವರು ಜು.31ಕ್ಕೆಸೇವಾ ನಿವೃತ್ತಿ ಹೊಂದಲಿದ್ದಾರೆ. ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಶುಕ್ರವಾರ (ಜು.26) ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಡಾ.ಶಾಲಿನಿ ರಜನೀಶ್ ಅವರ ಡಾ.ರಜನೀಶ್ ಗೋಯಲ್ ಪತ್ನಿ. 1989ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.ಆಗಸ್ಟ್ 1 ರಿಂದ ಶಾಲಿನಿ ರಜನೀಶ್ ಅವರು ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Read More

ಹರಿಯಾಣ, ಜು 25 : ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಭೂಕಂಪನಗಳು ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಾದ್ಯಂತ ಕಂಪನದ ಅನುಭವವಾಗಿದೆ. ಫರಿದಾಬಾದ್ ಜಿಲ್ಲೆಯಲ್ಲಿ ಗುರುವಾರ 2 ಬಾರಿ ಭೂಮಿ ಕಂಪಿಸಿದೆ. ರಾಷ್ಟ್ರೀಯ ಭೂಕಂಪನ ಶಾಸ್ತ್ರದ ಕೇಂದ್ರದ ಮಾಹಿತಿಯ ಪ್ರಕಾರ, ಮೊದಲ ಕಂಪನವು ಬೆಳಗ್ಗೆ 10.54ಕ್ಕೆ ಸಂಭವಿಸಿದೆ, ಇದಾಗಿ ಒಂದು ಗಂಟೆಯೊಳಗೆ ಎರಡನೆಯ ಬಾರಿಗೆ 11.43ಕ್ಕೆ ಭೂಮಿ ಕಂಪಿಸಿದೆ. ದೇಶದ ರಾಜಧಾನಿ ದೆಹಲಿ-ಎನ್‌ಸಿಆರ್ನ ಹಲವಾರು ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ ಎಂಬ ಮಾಹಿತಿ ಇದೆ.

Read More

ಪತ್ರಿಕಾಭವನ, ಜು. 24: ದೇಶದ ಎಲ್ಲಾ ರಾಜ್ಯ ಹಾಗೂ ಭಾಷೆಗಳ ಜನರನ್ನು ಒಂದೇ ವೇದಿಕೆಯಡಿ ಸೇರಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಭಾರತ – ಭಾರತಿ ಸಂಸ್ಥೆಯ ಮಂಗಳೂರು ಶಾಖೆ ಅಸ್ತಿತ್ವಕ್ಕೆ ಬಂದಿದೆ ಎಂದು ಮಂಗಳವಾರ ಪತ್ರಿಕಾಭವನ ದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತ – ಭಾರತಿ. ಕರ್ನಾಟಕ ಪ್ರಾಂತ ಸಂಯೋಜಕಿ ಅನಿತಾ ಆಚಾರ್ಯ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರೇರಣೆಯಿಂದ, ಸುಬ್ರಹ್ಮಣ್ಯನ್ ಸ್ವಾಮಿ ಅವರ ಪ್ರೋತ್ಸಾಹದಿಂದ ರಾಷ್ಟ್ರೀಯ ಏಕಾತ್ಮತೆ ಹಾಗೂ ಹಿಂದುತ್ವದ ಪುನರುತ್ಥಾನದ ಸಂಕಲ್ಪದ ಆಧಾರದಲ್ಲಿ ಸಂಸ್ಥೆ ಆರಂಭಗೊಂಡಿದೆ. ದೇಶಾದ್ಯಂತ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಇದೀಗ 60ನೇ ಶಾಖೆಯಾಗಿ ಮಂಗಳೂರು ಶಾಖೆ ಅಸ್ತಿತ್ವಕ್ಕೆ ಬಂದಿದೆ ಎಂದು ಅವರು ಹೇಳಿದರು. ಸಂಸ್ಥೆಯ ಸ್ಥಾಪನಾ ದಿನ, ರಕ್ಷಾ ಬಂಧನ, ರಾಜ್ಯೋತ್ಸವ, ಗಣರಾಜ್ಯೋತ್ಸವ ಮುಂತಾದ ಕಾರ್ಯಕ್ರಮಗಳನ್ನು ಸಂಸ್ಥೆ ಹಮ್ಮಿಕೊಳ್ಳುತ್ತಿದೆ. ರಾಷ್ಟ್ರೀಯ ಹಬ್ಬಗಳನ್ನು ಎಲ್ಲ ರಾಜ್ಯ, ಭಾಷೆಯ ಜನರು ಜತೆಗೂಡಿ ಆಚರಿಸುತ್ತಿದ್ದೇವೆ. ಡಿಸೆಂಬರ್ ಅಥವಾ ಜನವರಿಯಲ್ಲಿ ಮಂಗಳೂರಿನಲ್ಲಿ ನೆಲೆಸಿರುವ ವಿವಿಧ ರಾಜ್ಯಗಳ ಜನರಿಂದ ಆಹಾರ…

Read More

ಮಂಗಳೂರು, ಜು.  24 :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ   ಕಾನೂನು ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಂಸ್ಥೆ ವತಿಯಿಂದ  26ರಿಂದ 28ರ ತನಕ ರಾಷ್ಟ್ರಮಟ್ಟದ ಕಾನೂನು ಹಬ್ಬ ‘ಲೆಕ್ಸ್ ಅಲ್ಟಿ ಮಾ – 2024’ ಆಯೋಜಿಸಲಾಗಿದೆ ಎಂದು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಲೇಜು ಪ್ರಾಂಶುಪಾಲ ಡಾ| ತಾರನಾಥ ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 26ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ವಿ.ವಿ.ಯ ಕುಲಪತಿ  ಪ್ರೊ. ಪಿ.ಎಲ್. ಧರ್ಮ ಅವರು ಉದ್ಘಾಟಿಸಲಿದ್ದಾರೆ. ಜು. 28ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಇಂಗಲಗುಪ್ಪೆ ಸೀತಾರಾಮಯ್ಯ   ಇಂದ್ರೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾನೂನು ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ದೇವರಾಜ್ ಹಾಗೂ ಪೋಷಕ ರಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ್ ಭಟ್ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸುಮಾರು 43 ಕಾನೂನು ಶಾಲೆಗಳು, ಕಾಲೇಜುಗಳು  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 9 ರೀತಿಯ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ…

Read More

ಸುಳ್ಯ ಜು.23: ಬಸ್ ಮತ್ತು ಸ್ಕೂಟಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಸೋಮವಾರ ಸೋಣಂಗೇರಿಯ ಸುತ್ತುಕೋಟೆ ಬಳಿ ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಚಂದ್ರ ಪ್ರಭು(65) ಮೃತಪಟ್ಟವರು. ರಾಮಚಂದ್ರ ಪ್ರಭು ತನ್ನ ದ್ವಿಚಕ್ರ ವಾಹನದಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಧ್ಯೆ ಸುತ್ತುಕೋಟೆ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ರಾಮಚಂದ್ರರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Read More

ಮಹಾನಗರ, ಜು, 22 : ಶ್ರೀ ಮಾತಾ ಅಮೃತಾನಂದಮಯಿ ಮಠ ಮಂಗಳೂರು ಇದರ ವತಿಯಿಂದ ಗುರು ಪೂರ್ಣಿಮಾ ದಿನವಾದ 21ರಂದು ಬೆಳಗ್ಗೆ 9 ಗಂಟೆಯಿಂದ ಉರ್ವದ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಮಾತಾ ಅಮೃತಾನಂದಮಯಿ ಮಠ ಮಂಗಳೂರು ಇದರ ಮಠಾಧಿಪತಿ ಸಂಪೂಜ್ಯ ಸ್ವಾಮಿನಿ  ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ಶ್ರೀ ಗುರು ಪಾದುಕಾ ಪೂಜೆ, ದೇವೀ ಪೂಜೆ, ನಡೆಯಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಗುರು ಪೂರ್ಣಿಮಾ ದಿನದ ಮಹತ್ವದ ಕುರಿತು ಸಂದೇಶ ನೀಡಿದರು. ಕಾರ್ಯಕ್ರಮದ ಅಂಗವಾಗಿ ಸರ್ವೈ ಶ್ವರ್ಯ ಪೂಜೆ,ಅರ್ಚನೆ, ಭಜನೆ, ಆರತಿ, ಭಕ್ತರಿಂದ ಕ್ಷೀರಾಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಲಕ್ಷಣ ಅಮೀನ್, ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಅಧ್ಯಕ್ಷ ಡಾ| ವಸಂತ ಕುಮಾರ್ ಪೆರ್ಲ, ಸೇವಾ ಸಮಿತಿ ಉಪಾಧ್ಯಕ್ಷ ಸುರೇಶ್ ಅಮೀನ್, ಕಾವ್ಯದರ್ಶಿ ಡಾ| ಅಶೋಕ್ ಶೆಣೈ  ಮೊದಲಾದವರು ಭಾಗವಹಿಸಿದ್ದರು.

Read More

ಮಂಗಳೂರು, ಜು. 21 : ನಗರದ ಕೊಡಿಯಾಲಬೈಲು ಸಮೀಪ ಭಗವತಿ ನಗರದಲ್ಲಿರುವ ಮಹಾಲಸಾ ದೃಶ್ಯಕಲಾ ಮಹಾ ವಿದ್ಯಾಲಯದಲ್ಲಿ ಶುಕ್ರವಾರ ವಾರ್ಷಿಕ ಕಲಾ ಪ್ರದರ್ಶನ ಜರಗಿತು.ವಾರ್ಷಿಕ ಕಲಾಪ್ರದರ್ಶನ ಹಾಗೂ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಅವರು ಇತರ ಗಣ್ಯರೊಂದಿಗೆ ಸೇರಿ ಉದ್ಘಾಟಿಸಿದರು. ಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ವಿದ್ಯಾರ್ಥಿಗಳ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳೂರಿನ ಕಾರಂಜಿ ಇನ್ಫೋಟೆಕ್ ಪೈ.ಲಿ. ನಿರ್ದೇಶಕ ವಿಕ್ರಮ್ ಕೆಮ್ಮೆ ಮತ್ತು ಸಂಸ್ಥೆಯ ಅಧ್ಯಕ್ಷ ಬಾಬು ರಾವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಲಾಯಿತು. ವಾರ್ಷಿಕ ಕಲಾ ಪ್ರದರ್ಶನದಲ್ಲಿ ಕ್ರಿಯೇಟಿವ್ ಪೈಂಟಿಂಗ್, ಕಲಂಕಾರಿ ಸಾಂಪ್ರದಾಯಿಕ ಕಲೆ, ರಿಯಲಿಸ್ಟಿಕ್ ಪೈಂಟಿಂಗ್, ಸಾಂಪ್ರದಾಯಿಕ ಕಲೆಗಳು, ತಾಂಜಾವೂರುಸಾಂಪ್ರದಾಯಿಕ ಕಲೆ, ಪಠಚಿತ್ರ, ಆಯಿಲ್ ಪೈಂಟ್, ಕೈಯಿಂದಮಾಡಲಾದ ಗ್ರಾಫಿಕ್ ಡಿಸೈನ್, ಪೆನ್ಸಿಲ್ ಆರ್ಟ್, ಚಾರ್ಕೋಲ್…

Read More