Author: admin

ಮಂಗಳೂರು, ಜ.9 : ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು ಎಂದು ದೇವಳದ ಮೆನೇಜಿಂಗ್ ಟ್ರಷ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ದೇವಸ್ಥಾನದಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು ಪ್ರತೀ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಲೋಕ ಕಲ್ಯಾಣಕ್ಕಾಗಿ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 4 ಗಂಟೆಗೆ ಡೊಂಗರಕೇರಿ ಕಟ್ಟೆಯಿಂದ ಪುಷ್ಪಯಾಗದ ಹೂವಿನ ವಿಶೇಷ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದ ಉಸ್ತುವಾರಿ ಗಣೇಶ್ ನಾಗ್ವೇಕರ್ ಬೋಳಾರ್ ಮಾತಾಡಿ “ಅಂದು ಬೆಳಗ್ಗೆ 7ರಿಂದ 8ರವರೆಗೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12ಕ್ಕೆ ಮಹಾಪೂಜೆ, 1ರಿಂದ 3ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 9ಕ್ಕೆ ದೀಪಾರಾಧನೆ ಮಹಾಪೂಜೆ ಬಳಿಕ 10 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ“ ಎಂದು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ವಿನಾಯಕ ಶೇಟ್, ಸಾಯಿದತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Read More

ಬಂಟ್ವಾಳ, ಜ.8: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು, ನಮ್ಮ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿರುವ ಜಿಲ್ಲೆಯಾಗಿದೆ. ನಮ್ಮ ಜಿಲ್ಲೆಯಲ್ಲಿ ಶೇ 100ರಷ್ಟು ಕೃಷಿ ಸಾಲ ಮರುಪಾವತಿಯಾಗುತ್ತಿದೆ. ಮಹಿಳೆಯರ ಸ್ವಾವಲಂಬನೆಗಾಗಿ ನಮ್ಮ ಬ್ಯಾಂಕ್ ಪ್ರಾಮಾಣಿಕ ಪ್ರಯತ್ನ ಪಡುತ್ತಿದೆ. ಮಹಿಳೆಯರು ನಮ್ಮ ಬ್ಯಾಂಕ್ ನಿಂದ ಲೋನ್ ಪಡೆದು ಪುರುಷರಿಗೆ ಸರಿಸಮಾನವಾಗಿ ಬೆಳೆದಿದ್ದಾರೆ. ಆರ್ಥಿಕವಾಗಿ ಸಶಕ್ತರಾಗಿ ಸ್ವಾವಲಂಬನೆಯ ಜೀವನ ಸಾಗಿಸುತ್ತಿದ್ದಾರೆ. ಬ್ಯಾಂಕ್ ನಲ್ಲಿ ಗ್ರಾಹಕರಿಗೆ ವಿನೂತನ ಸೇವೆಯನ್ನು ಒದಗಿಸುವ ದೃಷ್ಟಿಯಿಂದ ಹೊಸ ಶಾಖೆಗೆ ಸ್ಥಳಾಂತರ ಮಾಡಲಾಗಿದೆ ಎಂದರು. ಮಾಜಿ ಶಾಸಕ ರುಕ್ಮಯ ಪೂಜಾರಿ ಮಾತಾಡಿ, ಬೆಳೆಯುತ್ತಿರುವ ಕಲ್ಲಡ್ಕದಲ್ಲಿ ಇಂತಹ ಗ್ರಾಹಕ…

Read More

ಮಂಗಳೂರು, ಜ.7: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಶ್ರೀ ಸಾನಿಧ್ಯ ವಸತಿ ಸಾಲು ಸಂಕೀರ್ಣ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ 2024- 25ರ ಜ್ಞಾನದೀಪ ಕಾರ್ಯಕ್ರಮದ ಉದ್ಘಾಟನೆವನ್ನು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮಂಗಳವಾರ ಉದ್ಘಾಟಿಸಿದರು. ವಸತಿ ಸಾಲು ಸಂಕೀರ್ಣವನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿಮಾತನಾಡಿದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು, ಧಾರ್ಮಿಕ ಸಂಸ್ಥೆಗಳು ಸಮಾನತೆಯ ಕೇಂದ್ರಗಳಾಗಿದ್ದು,ದೇವರ ಮುಂದೆ ಯಾವ ವ್ಯಕ್ತಿ ಮೇಲಲ್ಲ ಹೀಗಾಗಿ ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು ಎನ್ನುವ ತತ್ವ ಪಾಲಿಸಬೇಕು ಧಾರ್ಮಿಕ ಕೇಂದ್ರಗಳ ಮೂಲಕ ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರ ಗಳ ಅಭಿವೃದ್ಧಿ ಕೊಡುಗೆ ನೀಡುತ್ತಿದೆ. ಜೊತೆಗೆ ಧಾರ್ಮಿಕ ಕೇಂದ್ರಗಳು ಪ್ರಾಚೀನ ನಮ್ಮ ಪರಂಪರೆಯನ್ನು ಉಳಿಸುವ ಕೆಲಸದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಜನರೊಂದಿಗೆ ಉತ್ತಮ ಮಾತುಕತೆ ನಡೆಸಬೇಕು. ದೇಶದ ವೈವಿಧ್ಯತೆ ಯ ಸಂಸ್ಕೃತಿಯನ್ನು ಉಳಿಸಿಕೊಂಡು ದೇಶದ ಸೌಹಾರ್ದ ತೆಯನ್ನು ಕಾಪಾಡಿಕೊಂಡು ವಿಶ್ವ ಭ್ರಾತೃತ್ವವನ್ನು ತೋರಿಸಬೇಕಾಗಿದೆ ಎಂದರು. ಸಮಾರಂಭದಲ್ಲಿ ಸಂಸದ ಬ್ರಿಜೇಶ್ ಚೌಟ,…

Read More

ಉಳ್ಳಾಲ, ಜ.07 ನಾಟೆಕಲ್ ಸಮೀಪದ ತಿಬ್ಲಪದವು ಎಂಬಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ದೇರಳಕಟ್ಟೆ ಮೆಡಿಕಲ್ ಮಾಲೀಕ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಮೃತರನ್ನು ದೇರಳಕಟ್ಟೆ ನಿವಾಸಿ ಜಲೀಲ್ ಎಂಬವರ ಪುತ್ರ ಹಾಜಿರಾ ಮೆಡಿಕಲ್ ಮಾಲೀಕ ಅವ್ಸಾಫ್ (25) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಅವ್ಸಾಫ್ ದೇರಳಕಟ್ಟೆ ಕಡೆಯಿಂದ ತಿಬ್ಲಪದವು ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ ತಿಬ್ಲಪದವು ಡಿವೈಡರ್ ಸಮೀಪ ಲಾರಿಯೊಂದ ಹಠಾತ್ತನೆ ತಿರುಗಿದ ಪರಿಣಾಮ ಲಾರಿ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವ್ಸಾಫ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜ. 5: ಮಲ್ಲೂರು ಬದ್ರಿಯಾ ನಗರದ ಅಲ್ ಮಸ್ಟಿದುಲ್ ಬದ್ರಿಯಾ ಜುಮಾ ಮಸೀದಿಯ ಇದರ ಆಡಳಿತ ಸಮಿತಿಯ ವತಿಯಿಂದ ವರ್ಷಂಪ್ರತಿ ನಡೆಸಲ್ಪಡುವ 38ನೇ ಸ್ವಲಾತ್ ವಾರ್ಷಿಕ ಹಾಗೂ 8ನೇ ವರ್ಷದ ಮಜ್ಜಿಸುನ್ನೂರ್ ಕಾರ್ಯಕ್ರಮ ಜ. 9ರಿಂದ 12ರವರೆಗೆ ನಡೆಯಲಿದೆ ಎಂದು ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಮುಹಮ್ಮದ್ ಅಶ್ರಫ್ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು,ಜ.9ರಂದು ಬೆಳಗ್ಗೆ 9ಕ್ಕೆ ಸಮಿತಿಯ ಅಧ್ಯಕ್ಷ ಮುಹಮ್ಮದ್ ಅಶ್ರಫ್ ಧ್ವಜಾರೋಹಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆ ದಿನ ಮಗ್ರಿಬ್ ನಮಾಝ್ ನಂತರ ಮದ್ರಸದ ಹಳೆ ವಿದ್ಯಾರ್ಥಿಗಳಿಂದ ಕಲಾ ಸಾಹಿತ್ಯ ಸ್ಪರ್ಧೆ ನಡೆಯಲಿದ್ದು ಇಶಾ ನಮಾಝ್ ನಂತರ ಇರ್ಶಾದ್ ದಾರಿಮಿ ಮಿತ್ತಬೈಲ್ ಕಾರ್ಯಕ್ರಮ ಉದ್ಘಾಟಿಸುವರು. ಯು.ಕೆ. ಮುಹಮ್ಮದ್ ಹನೀಫ್ ನಿಝಾಮಿ ಅಲ್ ಮುರ್ಷಿದಿ ಮೊಗ್ರಾಲ್ ಮತ ಪ್ರವಚನ ನೀಡಲಿದ್ದಾರೆ. ಎ.10ರಂದು ಅಸರ್ ನಮಾಜ್ ನಂತರ ನೂರುಲ್ ಹುದಾ ಮದ್ರಸದದ ವಿದ್ಯಾರ್ಥಿಗಳಿಂದ ಅಲ್ ನಜಾಹ್ ಆರ್ಟ್ ಫೆಸ್ಟ್ ನಡೆಯಲಿದೆ. ಮುಹಮ್ಮದ್ ಅಝರ್ ಫೈಝಿ ಉದ್ಘಾಟನೆ…

Read More

ಮಂಗಳೂರು, ಜ. 5 : ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಭೈರವೈಕ್ಯ ಶ್ರೀ ಡಾ| ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಬಿಜಿಎಸ್‌ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಕಾರ್ಯಕ್ರಮ  ಕಾವೂರು ಬಿಜಿಎಸ್ ಪಿಯು ಕಾಲೇಜು ಆವರಣದಲ್ಲಿ ಗುರುವಾರ ಜರಗಿತು. ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ| ನಿರ್ಮಲಾನಂದನಾಥ ಸ್ವಾಮೀಜಿ ಅವರು, ಶಾಖಾ ಮಠಗಳು ಆರಂಭವಾಗಲು ಭಕ್ತರು ಕಾರಣ. ಮಂಗಳೂರಿನ ಕಾವೂರಿನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಠವನ್ನು ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿಯವರು 25 ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ್ದಾರೆ ಎಂದರು. ಕೇಂದ್ರ ಗ್ರಾಹಕ ವ್ಯವಹಾರಗಳು ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವಪ್ರಹ್ಲಾದ್ ಜೋಷಿ  ಅವರು ಮಾತನಾಡಿ, ಮಕ್ಕಳಿಗೆ ಧರ್ಮ, ಅಧ್ಯಾತ್ಮ ಸಂಸ್ಕಾರ, ಪೂಜಾ ಪದ್ಧತಿಗಳನ್ನು ತಿಳಿಸಬೇಕು, ಈ ಕಾರ್ಯವನ್ನು ಆದಿಚುಂಚನಗಿರಿ ಮಠ  ಮಾಡುತ್ತಿದೆ ಎಂದು ಹೇಳಿದರು. ಚಿತ್ರದುರ್ಗ ಶಿವ ಶರಣ…

Read More

ಮಂಗಳೂರು, ಜ.4 : ಕಾವೂರು ಬಿಜಿಎಸ್ ಕಾಲೇಜಿನ ಆವರಣದಲ್ಲಿ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಹಾಗೂ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಕಾರ್ಯಕ್ರಮ ಬುಧವಾರ ನಡೆಯಿತು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, ಬಿಜಿಎಸ್ ಶಿಕ್ಷಣ ಸಂಸ್ಥಯಲ್ಲಿ ಆಧುನಿಕ ಶಿಕ್ಷಣದ ಜತೆ ಆಧ್ಯಾತ್ಮಿಕ ಶಿಕ್ಷಣ ನೀಡುವ ಕಾರ್ಯವಾಗುತ್ತಿದ್ದು, ಮಕ್ಕಳನ್ನು ಸಂಸ್ಕಾರಯುತರನ್ನಾಗಿ ಮಾಡುವ ಮಹತ್ತರ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಪ್ರಸಕ್ತ ಸಮಾಜದಲ್ಲಿ ಧರ್ಮಾಧಾರಿತ ಮತ್ತು ಮೌಲ್ಯಧಾರಿತ ಶಿಕ್ಷಣದ ಕೊರತೆಯನ್ನು ನೀಗಿಸುವ ಕೆಲಸವನ್ನು ಬಿಜಿಎಸ್ ಶಿಕ್ಷಣ ಸಂಸ್ಟೆಯಿಂದ ಆಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಕಾವೂರು ಆದಿಚುಂಚನಗಿರಿ ಶಾಖಾ ಮಠದ ಅಧ್ಯಕ್ಷ ಡಾ.ಧರ್ಮಪಾಲನಾಥ ಸ್ವಾಮೀಜಿ,ಶಿವಲಿಂಗನಾಥ ಮಹಾಸ್ವಾಮೀಜಿ, ಬಸವಶಿವಮೂರ್ತಿ ಸ್ವಾಮೀಜಿ, ಮಾದಾರ ಚೆನ್ನಯ್ಯ ಮಹಾ ಸ್ವಾಮೀಜಿ, ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಮಾಜಿ…

Read More

ಮಂಗಳೂರು, ಡಿ. 3: ನಗರದ ಪುರಭವನದಲ್ಲಿ ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಡಿ.29,ರವಿವಾರ ನಡೆಯಿತು. ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಸಮಾರಂಭವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು,ಗಾಣಿಗ ಸಮಾಜ ಸರಳ ವಿವಾಹದ ಪರಂಪರೆಯನ್ನು ಇಂದಿಗೂ ಮುಂದುವರಿಸಿಕೊಂಡು ಇಡೀ ಜಗತ್ತಿಗೆ ಉತ್ತಮ ಸಂದೇಶ ನೀಡಿದೆ. ಗಾಣಿಗ ಸಮುದಾಯದಲ್ಲಿರುವ ಕಡು ಬಡವರಿಗೆ ಸಹಾಯ,ಸರಕಾರದಿಂದ ಸಿಗುವ ಸವಲತ್ತುಗಳನ್ನು ಪಡೆಯಲು ಸಹಕರಿಸುವುದು  ಮೊದಲಾದ ಉದ್ದೇಶಗಳೊಂದಿಗೆ ರಚನೆಯಾಗಿರುವ ಸಮಾಜ ಸೇವಾ ಸಂಘದಿಂದ ಇನ್ನಷ್ಟು ಉತ್ತಮ ಕಾರ್ಯಗಳು ಆಗಲಿ ಎಂದರು. ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ। ಭರತ್ ಶೆಟ್ಟಿ ವೈ, ಮಾತನಾಡಿ ಗಾಣಿಗ ಸಮಾಜಕ್ಕೆ ಜಿಲ್ಲಾ ಮಟ್ಟದ ಸಂಘದ ಅಗತ್ಯವಿತ್ತು. ಅದು ಈಗ ಸಾಕಾರಗೊಂಡಿರುವುದು ಸಂತಸದ ವಿಚಾರ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿದರು. ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ರಾಮ ಮುಗೋಡಿ ಅಧ್ಯಕ್ಷತೆ…

Read More

ಬೆಂಗಳೂರು,ಡಿ.2 : ಕೆ.ವಿ.ಎನ್ ಪ್ರೊಡಕ್ಷನ್ಸ್ ಮತ್ತು ತೆಸ್ಪಿಯನ್ ಫಿಲ್ಮ್ಸ್  ಒಂದು ಹೊಸ ಚಿತ್ರಕ್ಕಾಗಿ ಕೈ ಜೋಡಿಸಿದ್ದಾರೆ. ಈ  ಹೊಸ ಶೈಲಿಯ ಚಿತ್ರಕ್ಕಾಗಿ  ನಿರ್ದೇಶಕ  ಚಿದಂಬರಂ ಮತ್ತು ಜೀತು ಮಾಧವನ್ ಜೋಡಿಯ ಕೈಗಿತ್ತಿದ್ದಾರೆ. ತೆಸ್ಪಿಯನ್ ಫಿಲ್ಮ್ಸ್ ನ ಶ್ರೀಮತಿ ಶೈಲಜಾ ದೇಸಾಯಿ ಜೊತೆಗೆ  ಕೆವಿಎನ್ ಪ್ರೊಡಕ್ಷನ್ಸ್ ನ ಈ ಕಾಂಬಿನೇಶನ್ ಬಗ್ಗೆ ಶ್ರೀ ವೆಂಕಟ್ ಕೆ ನಾರಾಯಣ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ನ ಸಂಸ್ಥಾಪಕ ವೆಂಕಟ ಕೆ ನಾರಾಯಣ ಅವರು ಮಾತನಾಡ್ತಾ,  ನಾವು ನಮ್ಮ ಸಂಸ್ಥೆಯಿಂದ  ಭಿನ್ನ ಬಗೆಯ, ಸದಭಿರುಚಿಯ ಮನರಂಜನಾತ್ಮಕ ಸಿನಿಮಾಗಳನ್ನ ಕೊಡೋ ದೃಷ್ಟಿಯಿಂದ ಕೆಲಸ ಮಾಡ್ತೇವೆ. ಅದ್ರಂತೆ ಇಂಥ ಹೊಸ ಬಗೆಯ ಚಿಂತನೆಯುಳ್ಳ, ನಿರ್ದೇಶಕರಿಂದ ಜನರನ್ನ ಮನರಂಜಿಸೊ ಕೆಲಸಕ್ಕೆ ಕೈ ಹಾಕಿರೋದೆ ಒಂದು ಒಳ್ಳೆಯ ಪ್ರಯತ್ನ. ಇಂತಹ ತಂಡದ ಜೊತೆಗೆ ಸಿನಿಮಾ ಮಾಡೋ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಡ್ತಿರೋದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದರು. ನಿರ್ದೇಶಕ ಚಿದಂಬರಂ  ಮಾತನಾಡ್ತಾ,ಒಂದು ಕಥೆಯನ್ನ ತೆರೆಮೇಲೆ ತರೊ ಪ್ರಕ್ರಿಯೆನೇ ರೋಮಾಂಚಕ. …

Read More

ವಳಚ್ಚಿಲ್,ಜ.1 : ವಳಚ್ಚಿಲ್ ನಲ್ಲಿ ಎಕ್ಸ್ ಪರ್ಟ್  ಪದವಿಪೂರ್ವ ಕಾಲೇಜಿನ 39ನೇ ಎಕ್ಸ್ ಪರ್ಟ್ ಕಾಲೇಜು ದಿನಾಚರಣೆ ಭಾನುವಾರ ನಡೆಯಿತು. ಕಾರ್ಯಕ್ರಮದಲ್ಲಿ ಮನಿಲಾದ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರ ಹಿರಿಯ ಸಲಹೆಗಾರ ವಿ.ಪೊನ್ನುರಾಜ್ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಅತ್ಯುತ್ತಮ ಜ್ಞಾನವನ್ನು ಸಂಪಾದನೆ ಮಾಡಬೇಕು. ಅಂಕದ ಜತೆಗೆ ಜ್ಞಾನ ಎರಡೂ ಕೂಡ ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಸಹಾಯ ಮಾಡುತ್ತದೆ ಎಂದರು. ಯೇನೆಪೊಯ ಪರಿಗಣಿತ ವಿವಿ ಕುಲಸಚಿವ ಡಾ.ಯೆನೆಪೋಯ ಅಬ್ದುಲ್ ಕುಂಞ ಮಾತನಾಡಿ, ಯಶಸ್ಸು ಸುಲಭದ ಹಾದಿಯಲ್ಲ, ಯಶಸನ್ನು ಸಂಪಾದಿಸಬೇಕಾದರೆ ಸತತ ಪರಿಶ್ರಮದ ಜತೆ ಅಚಲ ನಿರ್ಧಾರ ಇದ್ದರಷ್ಟೇ ಅವರು ಬದುಕಿನಲ್ಲಿ ಮುಂದೆ ಸಾಗುತ್ತಾರೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿಸಿದ್ದ ಎಕ್ಸ್ ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್.ನಾಯಕ್ ಮಾತನಾಡಿ, ಎಕ್ಸ್ ಪರ್ಟ್ ಕಾಲೇಜು ದಿನಾಚರಣೆಯ ಮೂಲಕ ರ‍್ಯಾಂಕ್‌ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿದಾಗ ಇತರ ವಿದ್ಯಾರ್ಥಿಗಳು ಕೂಡ ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತಾರೆ ಎಂದರು.…

Read More