Author: admin

ಕಾಸರಗೋಡು, ಡಿ. 30 : ನದಿಯಲ್ಲಿ ಸ್ನಾನಕ್ಕಿಳಿದ ಮೂವರು ಬಾಲಕರು ಮುಳುಗಿ ಸಾವನ್ನಪ್ಪಿದ ಘಟನೆ ಡಿ. 28,ಶನಿವಾರ ಬೋವಿಕ್ಕಾನ ಸಮೀಪದ ಎರಿ೦ಞಪುಯದಲ್ಲಿ ನಡೆದಿದೆ. ಸಿದ್ದಿಕ್ ರವರ ಪುತ್ರ ರಿಯಾಜ್ (16), ಅಶ್ರಫ್ ರವರ ಪುತ್ರ ಯಾಸಿನ್ (13) ಮತ್ತು ಮಜೀದ್ ರವರ ಪುತ್ರ ಸಮದ್ (13) ಮೃತರು. ಬೋವಿಕ್ಕಾನ ಸಮೀಪದ ಎರಿ೦ಞಪುಯದಲ್ಲಿ ಶನಿವಾರ ಮಧ್ಯಾಹ್ನ ಮೂವರು ಬಾಲಕರು ತಮ್ಮ ಮನೆಯ ಸಮೀಪ ಇರುವ ಪಯಸ್ವಿನಿ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದರು . ಈ ಸಂದರ್ಭದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Read More

ಬಂಟ್ವಾಳ, ಡಿ.30 : ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಗರ ಸಂಘದ ವತಿಯಿಂದ ವಿಟ್ಲ ಅಕ್ಷಯ ಸಮುದಾಯ ಭವನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.29, ಆದಿತ್ಯವಾರದಂದು ಜರಗಿತು. ಅಂದು ಬೆಳಗ್ಗೆ 7ಗಂಟೆಗೆ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಪೂರ್ಣಾನುಗ್ರಹದೊಂದಿಗೆ ಶ್ರೀ ಗಣಪತಿ ಹೋಮ, 8 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಮಾತೃ ಸಂಘದ ಅಧ್ಯಕ್ಷರಾದ ಲೋಕಯ್ಯ ಗೌಡ ಅವರು, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಗರ ಸಂಘದಿಂದ ನಡೆಯುವ ಈ ಸಾಮಾಜಿಕ ಕಾರ್ಯಕ್ಕೆ ಶ್ಲಾಘನೀಯ ಎಂದರು. ಎಂ. ಬಿ. ಪೌಂಡೇಶನ್ ಸುಳ್ಯ ಇದರ ಅಧ್ಯಕ್ಷರು ಎಂ. ಬಿ. ಸದಾಶಿವ ಮಾತನಾಡಿ, ಮಕ್ಕಳಿಗೆ ಸಂಸ್ಥಾರಯುತ ಶಿಕ್ಷಣ ನೀಡಬೇಕು. ಡಿಜಿಟಲ್ ಯುಗದಲ್ಲಿ ನಾವು ಶೈಕ್ಷಣಿಕ,ಸಾಮಾಜಿಕ ಬದಲಾವಣೆಗಳನ್ನು ಕಾಣಬೇಕು ಎಂದು ಹೇಳಿದರು ಪುತ್ತೂರು ವಿಧಾನ…

Read More

ಉಳ್ಳಾಲ,ಡಿ.29 : ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸೋಮೇಶ್ವರ ಬಳಿ ಆದಿತ್ಯವಾರ ನಡೆದಿದೆ. ಮೃತರನ್ನು ಬೆಂಗಳೂರು ಶಿವಾಜಿ ನಗರ ಮೂಲದ ಸಜ್ಜಾದ್ ಅಲಿ (45) ಎಂದು ಗುರುತಿಸಲಾಗಿದೆ. ಬೆಂಗಳೂರು ಮೂಲದ 11 ಮಂದಿಯ ಕುಟುಂಬ ಸುತ್ತಾಡುತ್ತಾ ಆದಿತ್ಯವಾರ ಮಂಗಳೂರಿಗೆ ತಲುಪಿದ್ದರು. ಉಳ್ಳಾಲ ದರ್ಗಾಕ್ಕೆ ತೆರಳಿ ಬಳಿಕ ಅವರು ಸೋಮೇಶ್ವರ ಬೀಚ್ ಗೆ ತೆರಳಿದ್ದು, ಬೀಚ್ ನಲ್ಲಿ ಸಜ್ಜಾದ್ ಅವರ ಸಹೋದರನ ಮಗಳು ನೀರು ಪಾಲಾಗಿದ್ದು, ಆಕೆಯನ್ನು ರಕ್ಷಣೆಗೆ ತೆರಳಿದ ಸಜ್ಜಾದ್ ಅಲಿ ಅವರು ಸಮುದ್ರ ಪಾಲಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು,ಡಿ.28: ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಕ್ಯಾ.ಬ್ರಿ ಜೇಶ್ ಚೌಟ ನೇತೃತ್ವದ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ 8 ನೇ ವರ್ಷದ ಮಂಗಳೂರು ಕಂಬಳಕ್ಕೆ ಶನಿವಾರ ಕ್ಯಾಪ್ಟನ್ ಎಂ.ವಿ. ಪ್ರಾಜಲ್ ಅವರ ತಂದೆ, ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ. ವೆಂಕಟೇಶ್ ಅವರು ಚಾಲನೆಯನ್ನು ನೀಡಿದರು. 8 ನೇ ವರ್ಷದ ಮಂಗಳೂರು ಕಂಬಳಕ್ಕೆ ಚಾಲನೆಯನ್ನು ನೀಡಿದ ಎಂ. ವೆಂಕಟೇಶ್ ಅವರು ಮಾತನಾಡಿ, ಕಂಬಳವು ತುಳುನಾಡಿನ ಸಾಂಸ್ಕೃತಿಕ ವೈಭವವಾಗಿದೆ. ನಾವೆಲ್ಲರೂ ಈ ಭವ್ಯ ತುಳುನಾಡಿನ ಸಂಸ್ಕೃತಿಯ ಭಾಗವಾಗಿದ್ದು. ತುಳುನಾಡಿನ ಮಣ್ಣಿನ ಜನಪದ ಕ್ರೀಡೆ ಕಂಬಳ ಉಚ್ಚ್ರಾಯ ಸ್ಥಿತಿಯಲ್ಲಿರುವುದು ಬಹಳ ಹೆಮ್ಮಯ ವಿಚಾರ ಎಂದು ಅವರು ಹೇಳಿದರು. ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಚೌಟ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ, ಕಂಬಳವು ತುಳುನಾಡಿನ ಸಂಸ್ಕೃತಿ ಭಾಗವಾಗಿದ್ದು. ಕಂಬಳವನ್ನು ಉಳಿಸುವ ಮತ್ತು ಪರಿಚಯಿಸುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಂಬಳವನ್ನು ನಡೆಸುತ್ತಾ ಬಂದಿದ್ದೇವೆ. ಎಂ.ಆರ್.…

Read More

ಮಂಗಳೂರು, ಡಿ. 28 : ಡಿ.29ರಂದು ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನ 39ನೇ ಎಕ್ಸ್ಪರ್ಟ್ ಕಾಲೇಜು ದಿನಾಚರಣೆ ಮತ್ತು ಡಿ.30ರಂದು ಟೈಂ ಸ್ಕ್ವೇರ್ ಮ್ಯೂಸಿಕ್ ಫೆಸ್ಟಿವಲ್-2024 ಜರುಗಲಿದೆ ಎಂದು ಕಾಲೇಜು ಪ್ರಾಂಶುಪಾಲರಾದ ಡಾ.ಎನ್.ಕೆ.ವಿಜಯನ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಡಿ.29ರಂದು ಬೆಳಿಗ್ಗೆ 8:35ಕ್ಕೆ ಎಕ್ಸ್ಪರ್ಟ್ ದಿನಾಚರಗಳ ಅಂಗವಾಗಿ ಧ್ವಜಾರೋಹಣ ನಡೆಯಲಿದೆ. ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್. ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಎ.ಅಮೃತ್ ಕಿಣಿ ಭಾಗವಹಿಸುವರು.ಸಂಜೆ 5:20ಕ್ಕೆ ನಡೆಯುವ ಎಕ್ಸ್ ಪರ್ಟ್ ದಿನಾಚರಣೆ ಸಮಾರಂಭವನ್ನು ಮನಿಲಾದ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರ ಹಿರಿಯ ಸಲಹೆಗಾರರಾದ ಪೊನ್ನುರಾಜ್ ಅವರು ಉದ್ಘಾಟಿಸುವರು.ಯೇನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಯೇನೆಪೋಯ ಅಬ್ದುಲ್ ಕುಂಞ ಗೌರವ ಅತಿಥಿಯಾಗಿ ಭಾಗವಹಿಸುವರು. ಎಕ್ಸ್ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್. ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಕ್ಸ್ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್ ಪ್ರಾಸ್ತಾವಿಕ ಭಾಷಣ ಮಾಡುವರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು. ಡಿ.30ರಂದು…

Read More

ನವದೆಹಲಿ,ಡಿ.27 : ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಡಿ.26, ಶುಕ್ರವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 1991ರ ಅಕ್ಟೋಬರ್ ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು.ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Read More

ಮಂಗಳೂರು,ಡಿ.26 : ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28, 29ರಂದು 8ನೇ ವರ್ಷದ ‘ಮಂಗಳೂರು ಕಂಬಳ’ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಗುರುವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡಿ. 28ರಂದು ಬೆಳಿಗ್ಗೆ 8.30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ತಂದೆ, ಎಂಆರ್ಪಿಎಲ್ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್ ಕಂಬಳ ಉದ್ಘಾಟಿಸಲಿದ್ದಾರೆ.ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್ ಅವರು ದೀಪ ಪ್ರಜ್ವಲನೆ ನೆರವೇರಿಸಲಿದ್ದು, ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಶ್ರೀ ಜಿತಕಾಮಾನಂದ ಜೀ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ,…

Read More

ಬೆಂಗಳೂರು, ಡಿ. 26 : 7ಜಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ನಟ ಆದಿ ಪಿನಿಶೆಟ್ಟಿ ಅಭಿನಯದ ಚಿತ್ರ ‘ಶಬ್ದ’ ಫೆಬ್ರವರಿ 28 ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ಈ ಚಿತ್ರ ಹಾರರ್-ಥ್ರಿಲ್ಲರ್ ಆಗಿದ್ದು, ಅರಿವಳಗನ್ ವೆಂಕಟಾಚಲಂ ನಿರ್ದೇಶಿಸಿದ್ದಾರೆ. ‘ಶಬ್ದ’ ಚಿತ್ರದಲ್ಲಿ ಲಕ್ಷ್ಮಿ ಮೆನನ್, ಲೈಲಾ ಮತ್ತು ಸಿಮ್ರನ್ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಎಸ್ ಎಸ್ ತಮನ್ ಸಂಗೀತ ನಿರ್ದೇಶನ, ಅರುಣ್ ಪದ್ಮನಾಭನ್ ಛಾಯಾಗ್ರಹಣ ಮತ್ತು ವಿಜೆ ಸಾಬು ಜೋಸೆಫ್ ಅವರ ಸಂಕಲನ ಈ ಚಿತ್ರಕ್ಕಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರವನ್ನು ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಚಿತ್ರದ ಆಡಿಯೋ ಮತ್ತು ಟ್ರೈಲರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

Read More

ಮಂಗಳೂರು, ಡಿ.25 : ಕರಾವಳಿಯಾದ್ಯಂತ ಕ್ರೈಸ್ತರು ಕ್ರಿಸ್ಮಸ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿ ಸಂಭ್ರಮಿಸಿದರು.ಮಧ್ಯರಾತ್ರಿ ವೇಳೆಯಲ್ಲಿ ಕ್ರಿಸ್ತ ಜನಿಸಿದ ನೆನಪು ಸ್ಮರಿಸಿ ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಸಂಪ್ರದಾಯವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತರು ಬಲಿಪೂಜೆಯಲ್ಲಿ ಭಾಗವಹಿಸಿದ್ದರು. ದ.ಕ. ಜಿಲ್ಲೆಯ ಮಂಗಳೂರು ಧರ್ಮಪ್ರಾಂತಕ್ಕೆ ಒಳಗೊಂಡ ವಿವಿಧ ಚರ್ಚ್ಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು. ಕ್ರೈಸ್ತರ ಮನೆಗಳಲ್ಲಿ, ವಿವಿಧ ಚರ್ಚ್ಗಳ ಆವರಣದಲ್ಲಿ ಗೋದಲಿ ನಿರ್ಮಿಸಲಾಗಿತ್ತು. ರಾತ್ರಿ ವೇಳೆ ಚರ್ಚ್ಗಳಲ್ಲಿ ಕ್ಯಾರೊಲ್ ಗಾಯನದ ಮೂಲಕ ಕ್ರಿಸ್ತ ಜನನ ಸ್ಮರಿಸಿ ಬಲಿಪೂಜೆ, ಪ್ರಾರ್ಥನೆ ನಡೆದವು. ಮಂಗಳೂರು ಧರ್ಮಪ್ರಾಂತದ ಬಿಷಪ್ ರೈ| ರೆ|ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ರೊಸಾರಿಯೊ ಕೆಥೆಡ್ರಲ್ನಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ಅರ್ಪಿಸಿ ಕ್ರಿಸ್ತ ಜನನದ ಮಹತ್ವ ಹಾಗೂ ಕ್ರಿಸ್ಮಸ್ ಸಂದೇಶ ನೀಡಿದರು. ರೊಸಾರಿಯೋ ಕೆಥೆಡ್ರಲ್, ಮಿಲಾಗ್ರಿಸ್, ಬಿಜೈ, ಉರ್ವ, ಬೆಂದೂರ್ ವೆಲ್, ಕುಲಶೇಖರ, ಶಕ್ತಿನಗರ, ಬಿಕರ್ನಕಟ್ಟೆ, ಕೂಳೂರು, ಅಶೋಕನಗರ, ವಾಮಂಜೂರು, ಬೋಂದೆಲ್ , ಬಂಟ್ವಾಳ, ಮುಡಿಪು, ಪೆರ್ಮಾನ್ನೂರು ಸೇರಿದಂತೆ ಎಲ್ಲ ಚರ್ಚ್ಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಮಂಗಳೂರು: ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ- ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ ಕಾಪು ವಿಧನಾಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಮತ್ತು ಉಪಸ್ಥಿತರಿರಲಿದ್ದಾರೆ ಎಂದು ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. “ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗುತ್ತಿದೆ. ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ.…

Read More