Subscribe to Updates
Get the latest creative news from FooBar about art, design and business.
Author: admin
ಬಂಟ್ವಾಳ, ಡಿ.13 : ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುಳಾಲು ಕುಡ್ತಡ್ಕ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕುಡ್ತಡ್ಕ ನಿವಾಸಿ ಸಿಪ್ರಿಯಾನ್ ಮೊಂತೆರೋ ಎಂದು ಗುರುತಿಸಲಾಗಿದೆ. ಸಿಪ್ರಿಯಾನ್ ಅವರು ಸೋಮವಾರದಿಂದ ಮನೆಗೆ ಹೋಗದೇ ನಾಪತ್ತೆಯಾಗಿದ್ದರು. ಡಿ.11 ರಂದು ಬೆಳಗ್ಗೆ ಹುಡುಕಾಡಿದಾಗ ದಾರಿ ಮಧ್ಯದ ತೋಟದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು, ಡಿ.12 : ಮಂಗಳೂರಿನ ಇಂಡಿಯಾನಾ ಕನ್ವೆನ್ಶನ್ ಸೆಂಟರ್ ನಲ್ಲಿ ಚಾರ್ಟಡ್ ಅಕೌಂಟೆಂಟ್ ಗಳ ರಾಷ್ಟ್ರೀಯ ಸಮ್ಮೇಳನ ‘ದಕ್ಷ್’ ಡಿ.12 ಗುರುವಾರ ನಡೆಯಿತು.ಸಮ್ಮೇಳನವನ್ನು ಐಸಿಎಐನ ಗೌರವಾನ್ವಿತ ಮಾಜಿ ಅಧ್ಯಕ್ಷ ಸಿಎ ಅನಿಕೇತ್ ಸುನಿಲ್ ತಲಾಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಸಿಎ ಅನಿಕೇತ್ ಸುನಿಲ್ ತಲಾಟಿ ಮತ್ತು ಕರ್ನಾಟಕ ಸರ್ಕಾರದ ಗೌರವಾನ್ವಿತ ಮಾಜಿ ಕ್ಯಾಬಿನೆಟ್ ಸಚಿವರಾದ ಶ್ರೀ ಪುಮೋದ್ ಮಧ್ವರಾಜ್ ಸಮ್ಮೇಳನವನ್ನು ಉದ್ದೇಶಿಸಿ ಮಾತಾಡಿದರು. ‘ದಕ್ಷ್’ ರಾಷ್ಟ್ರೀಯ ಸಮ್ಮೇಳನದಲ್ಲಿ ಅಕೌಂಟಿಂಗ್ ನಲ್ಲಿ ತಂತ್ರಜ್ಞಾನ ಮತ್ತು ಆಟೋಮೇಷನ್ ಆದಾಯ ತೆರಿಗೆ ಮತ್ತು ಜಿಎಸಿ ಬೆಳವಣಿಗೆಗಳು,ಸೈಬರ್ ಭದ್ರತೆ, ಫೋರನ್ನಿಕ್ ಅಕೌಂಟಿಂಗ್ & ಇನ್ನೆಸ್ಟಿಗೇಟಿವ್ ಸರ್ವೀಸಸ್ ಹಣಕಾಸು ವರದಿ ಮತ್ತು ಪರಿಶೀಲನಾ ಮಾನದಂಡಗಳು ಈ ವಿಷಯಗಳ ಬಗ್ಗೆ ಅತ್ಯುತ್ತಮ ಡೊಮೇನ್ ತಜ್ಞರು ಮತ್ತು ತಜ್ಞರಿಂದ ಚರ್ಚೆ ನಡೆಯಿತು. ಕಾರ್ಯಕ್ರಮದಲ್ಲಿ ಸಿಎ ಅಧ್ಯಕ್ಷ ಗೌತಮ್ ಪೈ ಡಿ., ಉಪಾಧ್ಯಕ್ಷರು ಸಿಎ ಪ್ರಶಾಂತ್ ಪೈ, ಕಾರ್ಯದರ್ಶಿ ಸಿಎ ಡೇನಿಯಲ್ ಪಿರೇರಾ, ನಿಕಟಪೂರ್ವ ಅಧ್ಯಕ್ಷ, ಸಿಎ ಗೌತಮ್…
ಮಂಗಳೂರು, ಡಿ. 11: ಸದ್ಗುರು ಮಾತಾ ಅಮೃತಾನಂದಮಯಿ ದೇವಿಯವರ ಹಿರಿಯ ಶಿಷ್ಯ ಹಾಗೂ ಮಠದ ಕಾರ್ಯದರ್ಶಿಯೂ ಆಗಿರುವ ಸ್ವಾಮಿ ಪೂರ್ಣಾಮೃತಾನಂದ ಪುರಿ ಅವರು ಡಿಸೆಂಬರ್ 14ರಂದು ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠಕ್ಕೆ ಆಗಮಿಸಲಿದ್ದಾರೆ. ಎಂದು ಬೋಳೂರು ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಅಧ್ಯಕ್ಷ ಸುರೇಶ್ ಅಮೀನ್ ಅವರು ಮ೦ಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಮಾತಾನಾಡಿ ಬೋಳೂರಿನಲ್ಲಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ನಡೆಯುವ ಸಾಮೂಹಿಕ ಶನಿ ದೋಷ ನಿವಾರಣೆ ಪೂಜೆಗೆ ಚಾಲನೆ ನೀಡಲಿದ್ದಾರೆ. ಅಮೃತ ವಿದ್ಯಾಲಯಂನಲ್ಲಿ ಅಂದು ಸಂಜೆ 5ರಿಂದ 8.30ರ ತನಕ ಜರಗುವ ಆಧ್ಯಾತ್ಮಿಕ ಕಾರ್ಯಕ್ರಮ ‘ಅಮೃತ ವೈಭವ’ದಲ್ಲಿ ಭಾಗವಹಿಸಲಿದ್ದಾರೆ. ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ, ದಕ್ಷಿಣ ಕನ್ನಡ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ, ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಎಸ್.ಎಲ್. ಶೇಟ್ ಜುವೆಲರ್ ಮತ್ತು ಡೈಮಂಡ್ ಹೌಸ್ ನ ಪಾಲುದಾರ ಪ್ರಶಾಂತ್ ಶೇಟ್ ಭಾಗವಹಿಸಲಿದ್ದಾರೆ. ಸ್ವಾಮೀಜಿಯವರ ಸಾರಥ್ಯದಲ್ಲಿ ಧ್ಯಾನ…
ಮಂಗಳೂರು, ಡಿ. 10 : ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ನಡೆಸುತ್ತಿರುವ ಚಳವಳಿಯ ಭಾಗವಾಗಿ ಹಾಗೂ ಈ ಕುರಿತು ಎಲ್ಲ ಜಿಲ್ಲೆಗಳ ವಕೀಲರಿಗೆ ಅರಿವು ಮೂಡಿಸಲು ಡಿಸೆಂಬರ್ 13ರಿಂದ 15ರವರೆಗೆ ನಗರದಲ್ಲಿ ರಾಜ್ಯ ಮಟ್ಟದ ವಕೀಲರ ಕ್ರಿಕೆಟ್ ಹಾಗೂ ಥ್ರೋ ಬಾಲ್ ಟೂರ್ನಿ ಹಮ್ಮಿಕೊಳ್ಳಲಾಗಿದೆ ಎಂದು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರಿಗೆ ಹೈಕೋರ್ಟ್ ಪೀಠ ಬಂದಲ್ಲಿ ಇಲ್ಲಿನ ಜನರಿಗೆ ಅನುಕೂಲವಾಗಲಿದೆ. ಕ್ರಿಕೆಟ್ ಮತ್ತು ಥೋ ಬಾಲ್ ಟೂರ್ನಿ ಆಯೋಜಿಸಿ, ರಾಜ್ಯದ ಎಲ್ಲ ಜಿಲ್ಲೆಗಳ ವಕೀಲರನ್ನು ನಗರಕ್ಕೆ ಆಹ್ವಾನಿಸಿ ಮತ್ತೊಮ್ಮೆ ಹಕ್ಕೊತ್ತಾಯ ಸಲ್ಲಿಸಲಾಗುವುದು ಎಂದರು. ಕ್ರಿಕೆಟ್ನಲ್ಲಿ 36 ತಂಡಗಳು, ಥೋ ಬಾಲ್ನಲ್ಲಿ 10 ತಂಡಗಳು ಭಾಗವಹಿಸಲಿವೆ. ನೆಹರೂ ಮೈದಾನ ಮತ್ತು ಪಣಂಬೂರು ಎನ್ಎಂಪಿಎ ಕ್ರೀಡಾಂಗಣದಲ್ಲಿ ಟೂರ್ನಿ ನಡೆಯಲಿದೆ. ಡಿಸೆಂಬರ್ 13ರಂದು ಬೆಳಿಗ್ಗೆ 8 ಗಂಟೆಗೆ ವಕೀಲ ಟಿ.ಎನ್. ಪೂಜಾರಿ ಟೂರ್ನಿಗೆ ಚಾಲನೆ ನೀಡುವರು. ಡಿ.14ರಂದು ಸಂಜೆ 5.30ಕ್ಕೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಸ್ಪೀಕರ್ ಯು.ಟಿ.ಖಾದರ್, ಸಂಸದ…
ಮಂಗಳೂರು, ಡಿ.09 : ಡಿ. 21ರಿಂದ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕರಾವಳಿ ಉತ್ಸವ ಆಯೋಜಿಸಲು ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಡಿ. 21ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಸ್ಕೃತಿ, ಭಾಷೆ, ವೈವಿಧ್ಯಮಯ ಆಚರಣೆಗಳನ್ನು ಪ್ರದರ್ಶಿಸಬೇಕು. ವಿವಿಧ ಅಕಾಡೆಮಿಗಳೊಂದಿಗೆ ಸೇರಿ ಕಾರ್ಯಕ್ರಮ ನಡೆಸಲು ತಿರ್ಮಾನಿಸಲಾಗಿದೆ ಎಂದು ಅವರು ಹೇಳಿದರು. ಡಿಸೆಂಬರ್ 28 ಹಾಗೂ 29ರಂದು ಪಣಂಬೂರು/ತಣ್ಣೀರುಬಾವಿ ಬೀಚ್ನಲ್ಲಿ ಬೀಚ್ ಉತ್ಸವ ನಡೆಯಲಿದೆ. ಜನವರಿ 4 ಮತ್ತು 5 ರಂದು ಕದ್ರಿಪಾರ್ಕ್ ನಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿ, ಯುವ ಸಮೂಹದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ “ಯುವ ಉತ್ಸವ” ನಡೆಯಲಿದೆ. ಜನವರಿ 17 ಮತ್ತು 18 ರಂದು ಆಕರ್ಷಕ ಗಾಳಿಪಟ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ವೈವಿಧ್ಯಮಯ ತಿಂಡಿ-ತಿನಿಸುಗಳ ಆಹಾರ ಮೇಳವನ್ನು ಕರಾವಳಿ ಉತ್ಸವ ಮೈದಾನದಲ್ಲಿ…
ಮುಂಬೈ,ಡಿ. 07 :ನೂತನವಾಗಿ ಚುನಾಯಿತ ಸದನದ ವಿಶೇಷ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಮಹಾರಾಷ್ಟ್ರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಹಿರಿಯ ಶಾಸಕ ಕಾಳಿದಾಸ್ ಕೊಲಂಬ್ಕರ್ ಡಿ.06, ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. 9 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರಿಗೆ ದಕ್ಷಿಣ ಮುಂಬೈನ ರಾಜಭವನದಲ್ಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಪ್ರಮಾಣ ವಚನ ಬೋಧಿಸಿದರು. ಕೊಲಂಬ್ಕರ್ ಅವರು ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮುಂಬೈನ ವಡಾಲಾ ಕ್ಷೇತ್ರದಿಂದ ಗೆದ್ದಿದ್ದಾರೆ. ಹಂಗಾಮಿ ಸ್ಪೀಕರ್ ಆಗಿರುವ ಅವರು, ಹೊಸದಾಗಿ ಚುನಾಯಿತರಾದ 288 ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದು, ವಿಧಾನಸಭೆ ಕಲಾಪ ನಡೆಸಲಿದ್ದಾರೆ.
ಮಂಗಳೂರು, ಡಿ. 06: ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ ಜಿಲ್ಲಾ ಸಮ್ಮೇಳನ ನಡೆಯಿತು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರು, ಸಮಾಜವನ್ನು ಕಟ್ಟುವುದರಲ್ಲಿ ಪತ್ರಕರ್ತರ ಪಾತ್ರ ಬಲು ದೊಡ್ದದು. ಸಮಾಜ ಸುಧಾರಣೆಗೆ ದೊಡ್ಡ ಕೊಡುಗೆ ನೀಡಿದ ಕೀರ್ತಿ ಮಾಧ್ಯಮ ಕ್ಷೇತ್ರಕ್ಕಿದೆ. ಮಾಧ್ಯಮದ ಮೂಲಕ ಜನಸಾಮನ್ಯರಿಗೆ ಸಾಮಾಜಿಕ ನ್ಯಾಯ ದೊರಕಿಸುವ ಪ್ರಯತ್ನ ನಿರಂತರ ನಡೆಯಬೇಕು ಎಂದರು. ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಶಿವಸುಬ್ರಮಣ್ಯ ಕೆ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿದರು.ಶಾಸಕ ಡಿ. ವೇದವ್ಯಾಸ ಕಾಮತ್, ಪುಸ್ತಕ ಪ್ರದರ್ಶನ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯನ್ನು ನೆರವೇರಿಸಿದರು. ಅದಾನಿ ಗ್ರೂಪ್ನ ಅಧ್ಯಕ್ಷ ಕಿಶೋರ್ ಕುಮಾರ್ ಆಳ್ವ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ,, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ…
ಧರ್ಮಸ್ಥಳ, ಡಿ.03 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಅಂಗವಾಗಿ 92ನೇ ಸಾಹಿತ್ಯ ಸಮ್ಮೇಳನ ಡಿ.30, ಶನಿವಾರ ನಡೆಯಿತು. ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನವನ್ನು ಶತಾವಧಾನಿ ಆರ್. ಗಣೇಶ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿ, ಯಾವುದೇ ಭಾಷೆಗೆ ವಿಚಾರಗಳನ್ನು ಭಾವನೆಗಳನ್ನು ಮತ್ತು ವ್ಯವಹಾರವನ್ನು ಸ್ಪಷ್ಟವಾಗಿ ಅಭಿವ್ಯಕ್ತಿಗೊಳಿಸುವ ಶಕ್ತಿ, ಸಾಮರ್ಥ್ಯ ಮತ್ತು ಪ್ರಭುತ್ವ ಇರಬೇಕು. ಈ ದಿಸೆಯಲ್ಲಿ ಪ್ರಾದೇಶಿಕ ವೈವಿಧ್ಯತೆಯ ಸೊಗಡು ಇದ್ದರೂ ಕನ್ನಡ ಸಮೃದ್ಧ ಭಾಷೆಯಾಗಿದೆ. ಪದಸಂಪತ್ತಿಗೆ ಕೊರತೆ ಇಲ್ಲ. ಯಾವುದೇ ಏರಿಳಿತ, ಅಡೆ-ತಡೆ ಎದುರಿಸುವ ಸಾಮರ್ಥ್ಯ ಕನ್ನಡಕ್ಕಿದೆ ಎಂದು ಅವರು ಹೇಳಿದರು. ಎರಡು ಸಾವಿರ ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆ ಮತ್ತು ಸಾಹಿತ್ಯ ಕನ್ನಡಿಗರ ಶ್ರೀಮಂತ ಸಂಸ್ಕೃತಿಯ ಸಂಕೇತವಾಗಿದೆ. ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಧರ್ಮದ ನಡುವೆ ಅವಿನಾಭಾವ ಸಂಬಂಧ ಇದ್ದು, ಸಾಹಿತ್ಯ ಸಮಾಜದ ಪ್ರತಿಬಿಂಬವಾಗಿದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಡಾ. ಪ್ರಮೀಳಾ ಮಾಧವ್, ಡಾ.…
ಉಳ್ಳಾಲ, ಡಿ. 03 : ಸಹ್ಯಾದ್ರಿ ಕೋ ಆಪರೇಟಿವ್ ಸೊಸೈಟಿಯು ತೊಕ್ಕೊಟ್ಟು ಭಟ್ಟಗರದ ಶಕ್ತಿ ಕಾಂಪ್ಲೆಕ್ಸ್ ಮೊದಲ ಮಹಡಿಯಲ್ಲಿ ನ, 25, ಸೋಮವಾರ ಉದ್ಘಾಟನೆಗೊಂಡಿತು. ಸಹ್ಯಾದ್ರಿ ಕೋ ಆಪರೇಟಿವ್ ಸೊಸೈಟಿಯನ್ನು ಉದ್ಘಾಟಿಸಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು, ಸಹಕಾರ ರತ್ನ ಡಾ| ಎಂ.ಎನ್.ರಾಜೇಂದ್ರಕುಮಾರ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ವಿಸ್ತಾರಗೊಳ್ಳುತ್ತಿದೆ. ಈಗ ಸಹ್ಯಾದ್ರಿ ಕೋ ಆಪರೇಟಿವ್ ಸೊಸೈಟಿ ಸಹಕಾರಿ ಕ್ಷೇತ್ರಕ್ಕೆ ಸೇರ್ಪಡೆ ಯಾಗುವ ಮೂಲಕ ಸ. ಕ್ಷೇತ್ರಕ್ಕೆ ಇನ್ನಷ್ಟು ಬಲ ಬರಲಿದೆ ಎಂದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಗಣಕ ಯಂತ್ರಕ್ಕೆ ಚಾಲನೆ ನೀಡಿ ನಂತರ ಮಾತನಾಡಿ, ರಾಜೇಂದ್ರ ಕುಮಾರ್ ಅವರ ಮೂಲಕ ಉದ್ಘಾಟನೆಗೊಂಡಿರುವ ಈ ಸಂಸ್ಥೆ ಪ್ರಗತಿ ಕಾಣಲಿ, ಮುಖ್ಯವಾಗಿ ಠೇವಣಿದಾರ ಮತ್ತು ಸಾಲಗಾರರಿಗೆ ನೋವು ಆಗದ ರೀತಿಯಲ್ಲಿ ನೋಡಿಕೊಳ್ಳುವುದೇ ಸಹಕಾರಿ ಸಂಸ್ಥೆಯ ಗುಣವಾಗಿದೆ ಎಂದರು. ಕಟೀಲು ದೇವಸ್ಥಾನದ ಆನುವಂಶಿಕ ಮೊತ್ತೇಸರರು ಮತ್ತು ಮತ್ತು ಪ್ರಧಾನ ಅರ್ಚಕರಾಗಿರುವ ವೇ ಬ್ರಹ್ಮಶ್ರೀ ಪದ್ಮನಾಭ…
ಹೈದರಾಬಾದ್, ಡಿ.02 : ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಶಿವಣ್ಣ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಮೂಲದ ಸಕಲೇಶಪುರದವರಾದ ನಟಿ ಶೋಭಿತಾ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು,ಮದುವೆಯ ಬಳಿಕ ಹೈದರಾಬಾದ್ನಲ್ಲಿ ವಾಸಿಸುತ್ತಿದ್ದರು. ಶನಿವಾರ ರಾತ್ರಿ ಶೋಭಿತಾ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ‘ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳ್ಲಾ’ ಮುಂತಾದ ಸಿನಿಮಾಗಳಲ್ಲಿ ನಟಿ ಶೋಭಿತಾ ಅವರು ನಟಿಸಿದ್ದಾರೆ. ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದರು.