Subscribe to Updates
Get the latest creative news from FooBar about art, design and business.
Author: admin
ಮೂಡುಬಿದಿರೆ, ನ. 13:ಮೂಡಬಿದರೆ ವಿದ್ಯಾನಗರಿಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ‘ಗದ್ದಿಗೆ’ ಕರಾವಳಿ ಮರಾಟ ಸಮಾವೇಶ-2024 ಕಾರ್ಯಕ್ರಮ ರವಿವಾರ ನಡೆಯಿತು. ‘ಗದ್ದಿಗೆ’ ಕರಾವಳಿ ಮರಾಟ ಸಮಾವೇಶ-2024 ಉದ್ಘಾಟಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ| ಎಚ್.ಸಿ. ಮಹಾದೇವಪ್ಪ ಅವರು, ರಾಜ ಕಾರಣವನ್ನು ಬದಿಗಿರಿಸಿ ಸಂವಿಧಾನದ ತತ್ತ್ವಗಳನ್ನು ಜಾರಿ ಮಾಡುವ ಮೂಲಕ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ಸಂವಿಧಾನದ ನಿರ್ದೇಶನ ಹಾಗೂ ತತ್ವಗಳ ಅಡಿಯಲ್ಲಿ ಸುಸೂತ್ರವಾಗಿ ಕಾರ್ಯಗಳು ನಡೆದರೆ, 2ನೇ ದರ್ಜೆಯ ಪ್ರಜೆಗಳೆನಿಸಿರುವ ಆದಿವಾಸಿ ಗಳು ಮುಂದಿನ ಹತ್ತು ವರ್ಷಗಳಲ್ಲಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಗುತ್ತದೆ ಎಂದು ಅವರು ಹೇಳಿದರು. ‘ಗದ್ದಿಗೆ ಸ್ಮರಣಸಂಚಿಕೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅವರು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ನಮ್ಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸದಾ ಸಮಾಜದ ಪರಿಕಲ್ಪನೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಬಂದಿದೆ. ಕರಾವಳಿ ಮರಾಟಿ ಸಮಾವೇಶ ನಮ್ಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆವರಣದಲ್ಲಿ ಜರಗುತ್ತಿರುವುದು ಸಂತಸದ ವಿಷಯ ಎಂದರು.…
ಮಂಗಳೂರು,ನ.12 : ಶ್ರೀರಾಮ ಸೇನೆ ಮಂಗಳೂರು ವತಿಯಿಂದ 21ನೇ ವರ್ಷದ ದತ್ತಮಾಲಾ ಅಭಿಯಾನದ ಪ್ರಯುಕ್ತ 6ನೇ ವರ್ಷದ ದತ್ತ ದೀಪೋತ್ಸವ ಪಿವಿಎಸ್ ಸಮೀಪದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ನ.07,ಗುರುವಾರ ನಡೆಯಿತು. ಶ್ರೀ ಕ್ಷೇತ್ರ ಗಾಣಗಾಪುರದ ಶ್ರೀ ವಿವೇಕ ಚಿಂತಾಮಣಿ ಮಹಾರಾಜರು ದತ್ತ ದೀಪೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಸಪ್ತ ಮಾತೆಯರಿಂದ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಲಾಯಿತು. ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾವ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಮಾತನಾಡಿ, ಸಮಾಜದ ಶ್ರೇಯಸ್ಸಿಗಾಗಿ ಶ್ರೀರಾಮ ಸೇನೆ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಶ್ರೀರಾಮ ಸೇನೆಯ ಕಾರ್ಯಕರ್ತರ ಸೇವೆಯ ಮೂಲಕ ದತ್ತ ಭಕ್ತರ ತಂಡ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. 32 ಜನರಿಂದ ಆರಂಭವಾದ ದತ್ತ ದೀಪೋತ್ಸವ ಇದೀಗ 6ನೇ ವರ್ಷದಲ್ಲಿ ನೂರಾರು ಮಂದಿಯ ಪಾಲ್ಗೊಳ್ಳುವಿಕೆಯ ಮೂಲಕ ಯಶಸ್ಸು ಕಂಡಿದೆ ಎಂದರು. ಪ್ರಮುಖರಾದ ಪುರುಷೋತ್ತಮ ಪಾವಂಜೆ, ಶ್ರೀರಾಮ ಸೇನೆ ವಿಭಾಗ ಅಧ್ಯಕ್ಷ ಮಧುಸೂದನ್ ಉರ್ವಸ್ಟೋರ್, ಜಿಲ್ಲಾ ಅಧ್ಯಕ್ಷ ಅರುಣ್ ಕದ್ರಿ, ಜಿಲ್ಲಾ ಉಪಾಧ್ಯಕ್ಷ ಹರೀಶ್…
ನವದೆಹಲಿ,ನ.11: ರವಿವಾರ ದೇಶದ ಉನ್ನತ ಕಾನೂನು ಹುದ್ದೆಯಿಂದ ನಿವೃತ್ತರಾದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಇಂದು ಸೋಮವಾರ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 64 ವರ್ಷದ ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಆರು ತಿಂಗಳ ಅವಧಿಗೆ ಸೇವೆ ಸಲ್ಲಿಸಲಿದ್ದಾರೆ. ಅವರು ಮುಂದಿನ ವರ್ಷ ಮೇ 13 ರಂದು ನಿವೃತ್ತರಾಗಲಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಇತರ ಸಚಿವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಬಂಟ್ವಾಳ, ನ.07 : ನಿಲ್ಲಿಸಿದ್ದ ವಾಹನ ಹಿಮ್ಮುಖವಾಗಿ ಚಲಿಸಿ ಹಿಂಬದಿ ಆಟವಾಡುತ್ತಿದ್ದ ಮಗು ವಾಹನದಡಿ ಸಿಲುಕಿ ಮೃತಪಟ್ಟ ಘಟನೆ ಲೊರೆಟ್ಟೊಪದವಿನಲ್ಲಿ ಬುಧವಾರ ನಡೆದಿದೆ. ಫರಂಗಿಪೇಟೆ ಸಮೀಪದ ಪತ್ತನಬೈಲ್ ನಿವಾಸಿಯಾಗಿದ್ದ ಉನೈಸ್ ಮತ್ತು ಆಶೂರಾ ದಂಪತಿ ಪುತ್ರಿ ಮೂರುವರೆ ವರ್ಷದ ಆಶೀಕಾ ಮೃತ ಮಗು. ಆಶೀಕಾ ಬಂಟ್ವಾಳದ ಲೊರೊಟ್ಟೋ ಪದವು ಸಮೀಪದ ಟಿಪ್ಪುನಗರದ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ನಿಲ್ಲಿಸಿದ್ದ ಟೆಂಪೋ ವಾಹನ ರಿವರ್ಸ್ ಬಂದು ಮಗುವಿನ ಮೇಲೆ ವಾಹನ ಹಾದು ಹೋಗಿದೆ. ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದರೂ ಮಗು ಅದಾಗಲೇ ಮೃತಪಟ್ಟಿದೆ ಎಂದು ವರದಿಯಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ, ನ.05 : ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಲೀಕ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ.
ಕಾಪು, ನ.04 : ಬೈಕ್ ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕೊಪ್ಪಲಂಗಡಿ ಬಸ್ ನಿಲ್ದಾಣದ ಸಮೀಪ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್ ವೃತ್ತಿಯ ಹರೀಶ್ ಕುಮಾರ್ (45) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ನ ಹಿಂಬದಿಗೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಗಾಯಾಳು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ನ. 03: ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಪತ್ರಕರ್ತರ ಕುಟುಂಬದವರಿಗೆ ದೀಪಾವಳಿ ಸ್ನೇಹ ಮಿಲನ ಕಾರ್ಯಕ್ರಮದ ರವಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು,ನಾಡಿನಾದ್ಯಂತ ಸಂಭ್ರಮದಿಂದ ಆಚರಿಸುವ ದೀಪಾವಳಿ ಹಬ್ಬ ಜನತೆಯನ್ನು ಒಂದಾಗಿಸಿ ಬಾಂಧವ್ಯ ಬೆಸೆಯುವ ಹಬ್ಬವಾಗಿದೆ ಎಂದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಕಾರ್ಯಕ್ರಮದ ಅತಿಥಿಗಳಾಗಿದ್ದರು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರ ಸ್ಕೃತ ಹಿರಿಯ ಪತ್ರಕರ್ತರಾದ ಪುಷ್ಪರಾಜ್ ಬಿ.ಎನ್. ಮತ್ತು ರಾಜೇಶ್ ರಾವ್ ಅವರನ್ನು ಸನ್ಮಾನಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.
ಮಂಗಳೂರು, ನ. 2: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ವತಿಯಿಂದ ಅತ್ತಾವರದ ಐಎಂಎ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ, ಪುಸ್ತಕ ಬಿಡುಗಡೆ ಮತ್ತು ಚೊಚ್ಚಲ ಐಎಂಎ ಮಂಗಳೂರು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ ನಡೆಯಿತು. ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಡಾ। ಶಾಂತಾರಾಮ ಶೆಟ್ಟಿ ಅವರು ಕನ್ನಡಧ್ವಜಾರೋಹಣ ಮಾಡಿದರು. ಇದೇ ವೇಳೆ ಅವರು ಬರೆದ ವೈದ್ಯ ವೃತ್ತಿಯ ನೀತಿ ಮತ್ತು ತತ್ವ’, ‘ಎಲುಬು ರೋಗಿಗಳು ಹಾಗೂ ಯೋಗ’, ‘ಮೇಲಾಹಳ್ಳಿ ನನ್ನೂರು ಚೆನ್ನೂರು-ನನ್ನ ಮನೆ-ಪಟೇಲರ ದೊಡ್ಡ ಮನೆ’, ‘ಕ್ಯಾನ್ಸರ್ ಗಾಡ್ಸ್ ಗಿಫ್ಟ್ ಟು ಮಿ ಪುಸ್ತಕಗಳನ್ನು ಡಾ| ಜಿ.ಶಂಕರ್ ಅವರು ಬಿಡುಗಡೆಗೊಳಿಸಿದರು. ಸಮಾರಂಭ ದಲ್ಲಿ ಮಾತನಾಡಿದ ಉಡುಪಿಯ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಡಾ| ಜಿ. ಶಂಕರ್ ಅವರು, ವೈದ್ಯರು ಚಿಕಿತ್ಸೆ ನೀಡುವುದರ ಜತೆಗೆ ಸಾಹಿತ್ಯ ಚಟುವಟಿಕೆ ಮೂಲಕ ಕನ್ನಡವನ್ನು ಬೆಳೆಸುತ್ತಿರುವುದು ಶ್ಲಾಘನಾರ್ಹವಾದ ಕಾರ್ಯವಾಗಿದೆ. ವೈದ್ಯರು ಕನ್ನಡ ಮಾತನಾಡಿದರೆ ಜನರಿಗೂ ಒಂದಷ್ಟು ಧೈರ್ಯ ಹೆಚ್ಚಾಗುತ್ತದೆ. ಇಂತಹ ಕನ್ನಡ…
ಮಂಗಳೂರು, ನ.1: ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನ.1 ರಂದು ನಡೆಯಿತು. ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತಾಡಿದ ದ.ಕ. ಜಿಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯವನ್ನು ಸಮೃದ್ಧ ಕರ್ನಾಟಕ ಮಾಡುವುದೇ ಸರಕಾರದ ಗುರಿಯಾಗಿದ್ದು, ಅನೇಕ ಜನಪರ, ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು. ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಿಲಾಯಿತು. ಕಾರ್ಯಕ್ರಮದಲ್ಲಿ ಸಂಸದ ಕ್ಯಾಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಮೇಯ ಮನೋಜ್ ಕೋಡಿಕ್ಕಲ್, ದ.ಕ. ಜಿಲ್ಲಾಧಿಕಾರಿ ಮುತ್ತೈ ಮುಗಿಲನ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಎ.ಸಿ. ವಿನಯರಾಜ್, ನವೀನ್ ಡಿಸೋಜ, ಪ್ರವೀಣ್ ಕುಮಾರ್ ಆಳ್ವ, ಶಾಹುಲ್ ಹಮೀದ್, ಕಸಾದ ದ.ಕ. ಜಿಲ್ಲಾಧ್ಯಕ್ಷ ಎಂ.ಪಿ.ಶ್ರೀನಾಥ್, ಸದಾಶಿವ ಉಳ್ಳಾಲ್, ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕರ್ನಾಟಕ ಬ್ಯಾರಿ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್.,…
ಬಳ್ಳಾರಿ, ಅ.31 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ಗೆ ಇಂದು 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಬೆನ್ನು ನೋವಿನಿಂದ ಬಳುತ್ತಿದ್ದ ದರ್ಶನ್ಗೆ ಚಿಕಿತ್ಸೆಗಾಗಿ 6 ವಾರಗಳ ಕಾಲ ಬೇಲ್ ಸಿಕ್ಕಿದೆ. ಈ ಹಿನ್ನೆಲೆ ಕುಂಟುತ್ತಲೇ ದರ್ಶನ್ ಹೈ ಸೆಕ್ಯೂರಿಟಿ ಸೆಲ್ನಿಂದ ಹೊರಬಂದಿದ್ದಾರೆ. 5 ತಿಂಗಳುಗಳ ಕಾನೂನು ಸಮರ ನಂತರ ಇಂದು ದರ್ಶನ್ ಬಿಡುಗಡೆಯಾಗಿದ್ದಾರೆ. ಈ ವೇಳೆ, ದರ್ಶನ್ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ದರ್ಶನ್ ಫ್ಯಾನ್ಸ್ ಜೈಲಿನ ಬಳಿ ಜಮಾಯಿಸಿದ್ದರು.