Subscribe to Updates
Get the latest creative news from FooBar about art, design and business.
Author: admin
ಕಾಪು, ಅ. 30 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ನವದುರ್ಗಾ ಲೇಖನದ 99,999 ಪುಸ್ತಕಗಳಿಗೆ ಉಡುಪಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ವಾಗೀಶ್ವರಿ ಪೂಜೆ ನಡೆಸಿ, ಪುಸ್ತಕಗಳನ್ನು ಬಿಡಗಡೆಗೊಳಿಸಿದರು. ನಂತರ ಆಶೀರ್ವಚನ ನೀಡಿದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು,ಕಾಪು ಮಾರಿಯಮ್ಮ ದೇವಿಯ ಸನ್ನಿಧಾನದಲ್ಲಿ ಜರಗುತ್ತಿರುವ ಸಮಗ್ರ ಜೀರ್ಣೋದ್ದಾರ ಕಾರ್ಯಗಳಲ್ಲಿ ಪ್ರಪಂಚದಾದ್ಯಂತ ಇರುವ ಭಕ್ತರ ಜೋಡಣೆಯಾಗಿದೆ ಎಂದು ಸ್ವಾಮೀಜಿ ಹೇಳಿದರು. ಬಳಿಕ ಬಂಟ್ವಾಳ ಮಾಣಿಲ ಶ್ರೀಧಾಮ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿದರು. ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಬ್ರಹ್ಮಕಲಶೋತ್ಸವವನ್ನು ವೈಶಿಷ್ಟ್ಯಪೂರ್ಣವಾಗಿ ನಡೆಸಲು ಸಿದ್ಧತೆ ಆರಂಭಿಸಲಾಗಿದೆ ಎಂದರು. ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇ।ಮೂ। ಶ್ರೀನಿವಾಸ ತಂತ್ರಿ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ಗಣ್ಯರಾದ ಬಾಬು ಹೆಗ್ಡೆ, ಪದ್ಮರಾಜ್ ರಾಮಯ್ಯ, ವೀಣಾ ಬನ್ನಂಜೆ, ಉಷಾ ಆನಂದ ಸುವರ್ಣ, ಬಾಲರಾಜ್ ಕೋಡಿಕಲ್, ಮಾಲಿನಿ…
ಮಂಗಳೂರು : ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ದ.ಕ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆ ಆವರಣದ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ನಡೆದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ – 2024 ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮೇಯರ್ ಮನೋಜ್ ಕುಮಾರ್ ಅವರು, ಪಾಕೃತಿಕವಾಗಿ ಸಿಗುವಂತಹುದ್ದನ್ನು ಬಳಸಿ ನೀಡಲಾಗುವ ಔಷದವೇ ಆಯುರ್ವೇದ ಚಿಕಿತ್ಸಾ ಪದ್ಧತಿ ಯಾಗಿದೆ. ಆಯುರ್ವೇದದಿಂದ ನಿಧಾನವಾಗಿ ರೋಗ ವಾಸಿಯಾಗುತ್ತೆ ಎಂದು ಹೇಳುತ್ತಾರೆ. ಆದರೆ ಶೇ.100 ರಷ್ಟು ರೋಗ ವಾಸಿ ಮಾಡುವ ಶಕ್ತಿ ಆಯುರ್ವೇದಕ್ಕೆ ಇದೆ ಎಂದರು. ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಡಿ. ಎಸ್. ಗಟ್ಟಿ ಮಾತನಾಡಿ, ನಿತ್ಯದ ಜೀವನ ಸುಂದರವಾಗಿ ರೂಪಿಸಬೇಕಾದರೆ ಆರೋಗ್ಯ ಬಹಳ ಮುಖ್ಯವಾಗಿದೆ. ಆರೋಗ್ಯ ಹದಗೆಡುವುದ್ದಕ್ಕಿಂತ ಮೊದಲು ಮುಂಜಾಗ್ರತ ಕ್ರಮಗಳನ್ನು ಕೈಗೊಂಡರೆ ಉತ್ತಮ ಆರೋಗ್ಯ ಸಾಧ್ಯ. ಆಯುರ್ವೇದ ಚಿಕಿತ್ಸಾ ಪದ್ಧತಿ ಆರೋಗ್ಯವನ್ನು ಇನಷ್ಟು ಸುಧಾರಿಸುತ್ತದೆ ಎಂದರು. ಈ ಸಂದರ್ಭ ಡಾ. ಮಮತಾ ಕೆ.ಪಿ. ಅವರನ್ನು…
ಉಡುಪಿ, ಅ.28 : ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಉಡುಪಿ ಸಾಯಿ ರಾಧಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮನೋಹರ್ ಎಸ್ ಶೆಟ್ಟಿ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರುಣ್ ಕುಮಾರ್ ಬಿ ಕೆ, ಹಾಗೂ ನೂತನವಾಗಿ ಆಯ್ಕೆಯಾದ ವ್ಯವಸ್ಥಾಪನಾ ಸಮಿತಿ ಸದಸ್ಯರ ಸಮ್ಮುಖದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಮುಖ್ಯ ಅರ್ಚಕ ನಾರಾಯಣ ತಂತ್ರಿ, ರವಿಕುಮಾರ್ ಮಂದಾರ, ಶಶಿಧರ ಸುವರ್ಣ ಉಳಿಯಗೋಳಿ, ಅಶ್ವಿನಿ ಬಂಗೇರ ಕಾಪು, ಸದಾನಂದ ಎ ಸುವರ್ಣ ಪೊಲಿಪು, ಶಾಂತಲತಾ ಎಸ್ ಶೆಟ್ಟಿ ಮಲ್ಲಾರು, ನಾಗರಾಜ್ ಎಸ್ ಮೂಳೂರು, ಶ್ರೀಕಾಂತ್ ಕಾಪು ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಮಂಗಳೂರು,ಅ.27 : ಮಿನಿ ಬಸ್ ಮಗುಚಿ ಬಿದ್ದು 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಂತೂರಿನಲ್ಲಿ ಶನಿವಾರ ಸಂಜೆ ನಡೆದಿದೆ. ಮಿನಿ ಬಸ್ ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ಮಂಗಳೂರು ಕಡೆಗೆ ಬರುತ್ತಿದ್ದ ಸಂದರ್ಭ ಬಸ್ನ ಎದುರಿನಲ್ಲಿದ್ದ ಬೈಕ್ ಸವಾರ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ದಿಬ್ಬವೊಂದರ ಮೇಲೆ ಚಲಿಸಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಮತ್ತು 10ಮಂದಿಗೆ ಅಲ್ಪಸ್ವಲ್ಪ ಗಾಯವಾಗಿದೆ. ಎಲ್ಲರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಕಾರ್ಕಳ, ಅ.26 : ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಶನಿವಾರ ನಡೆದಿದೆ.ಮೃತ ವ್ಯಕ್ತಿಯನ್ನು ಆಸೈ ತಂಬಿ(21) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ವೇಗವಾಗಿ ಹೋಗುತ್ತಿದ್ದ ಗೂಡ್ಸ್ ವಾಹನ ರಸ್ತೆ ಬಲಭಾಗಕ್ಕೆ ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವಾಹನದ ಚಾಲಕನಿಗೆ ಮುಂಜಾನೆ ನಿದ್ದೆಗಣ್ಣಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ರಂಗಭೂಮಿ ಕಲಾವಿದನಿಗೆ ತನ್ನ ವೃತ್ತಿಯಲ್ಲಿ ನಿಷ್ಠೆ ಇದ್ದರೆ ಜೀವನ ನಿರ್ವಹಣೆಗೆ ಯಾವುದೇ ಕೊರತೆ ಉಂಟಾಗದು. ಕಲಾವಿದನಲ್ಲಿ ಸಮಾಜ ಪ್ರಜ್ಞೆ ಅಗತ್ಯ . ಹಾಸ್ಯ ಕಲಾವಿದರು ಕೂಡಾ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬಹುದು ಎಂಬುದನ್ನು ತುಳು ನಾಟಕಗಳು ತೋರಿಸಿಕೊಟ್ಟಿವೆ ಎಂದು ನಟ ಅರವಿಂದ ಬೋಳಾರ್ ಹೇಳಿದರು. ಮಂಗಳೂರು ಪ್ರೆಸ್ಕ್ಲಬ್ ವತಿಯಿಂದ ಬುಧವಾರ ಪತ್ರಿಕಾ ಭವನದಲ್ಲಿ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು , ಬಡತನದ ಕಾರಣ ಹೆಚ್ಚು ಶಿಕ್ಷಣ ಪಡೆಯಲು ಸಾಧ್ಯವಾಗಲಿಲ್ಲ. ಆದರೆ ಶಾರದಾ ಮಾತೆ ನನ್ನ ಕೈ ಬಿಡಲಿಲ್ಲ. ಹೊಟ್ಟೆಪಾಡಿಗೆ ಹಲವು ಕೆಲಸ ಮಾಡಿದೆ. ಸ್ಥಳೀಯ ದೇವಾಲಯಗಳಲ್ಲಿ ನಡೆಯುವ ನಾಟಕಗಳಲ್ಲಿ ಹಾಸ್ಯ ಪಾತ್ರ ಮಾಡುತ್ತಿದ್ದೆ. ಬಳಿಕ ಹಾಸ್ಯ ಪಾತ್ರ ನನ್ನ ಜೀವನದಲ್ಲಿ ಹಾಸುಹೊಕ್ಕಾಯಿತು. ದೇವದಾಸ್ ಕಾಪಿಕಾಡ್ ಅವರ ತಂಡಕ್ಕೆ ಸೇರ್ಪಡೆಯಾದ ಬಳಿಕ ಸಾಕಷ್ಟು ಜನಪ್ರಿಯತೆ ಪಡೆದೆ. ವಿಜಯಕುಮಾರ್ ಕೊಡಿಯಾಲ್ಬೈಲ್ ಅವರಿಂದ ತುಳು ಸಿನಿಮಾ ಪ್ರವೇಶಿಸಿ ಅಲ್ಲಿಯೂ ಒಳ್ಳೆಯ ಅವಕಾಶ ಪಡೆದೆ ಎಂದು…
ಉಳ್ಳಾಲ,ಅ.24 :ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ (11) ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಎಂದು ಗುರುತಿಸಲಾಗಿದೆ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗದಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.
ಮಂಗಳೂರು,ಅ.23 : ಆಲ್ ಇಂಡಿಯಾ ಮೆನ್ಸ್ ಆ್ಯಂಡ್ ವುಮೆನ್ಸ್ ಸ್ಪೋರ್ಟ್ಸ್ ಚಾರಿಟೆಬಲ್ ಟ್ರಸ್ಟ್ ಪ್ರಾರಂಭಗೊಂಡಿದ್ದು, ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನ ನೀಡುವ ಗುರಿಯನ್ನು ಈ ಟ್ರಸ್ಟ್ ಹೊಂದಿದೆ ಎಂದು ಟ್ರಸ್ಟ್ನ ಚೇರ್ಮ್ಯಾನ್ ಲಂಚುಲಲ್ ಕೆ.ಎಸ್. ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಸ್ಟ್ ವತಿಯಿಂದ ಜನವರಿಯಲ್ಲಿ ಅಸ್ತ್ರ ಸ್ಟಾರ್ ಟಿ 12 ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗುತ್ತಿದೆ.ತಂಡದಲ್ಲಿ 9 ಮಂದಿ ಮಹಿಳೆಯರ ಜತೆಗೆ ಇಬ್ಬರು ಸ್ಟಾರ್ ಪುರುಷ ಕ್ರಿಕೆಟಿಗರು ಭಾಗವಹಿಸಲಿದ್ದಾರೆ. ಉತ್ಸವಕ್ಕಾಗಿ 12 ತಂಡಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದರು. ಅಥ್ಲೆಟಿಕ್ಸ್, ಕ್ರಿಕೆಟ್ ಸೇರಿದಂತೆ ದೇಶದ ಗ್ರಾಮೀಣ ಭಾಗಗಳಿಂದ ಆಯ್ದ ಕ್ರೀಡಾ ಪ್ರತಿಭೆಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸುವ ಉದ್ದೇಶ ವನ್ನು ಟ್ರಸ್ಟ್ ಹೊಂದಿದೆ. ಕ್ರೀಡಾಪಟುಗಳಿಗೆ ಅಗತ್ಯ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.ವರ್ಷಕ್ಕೆ ಕನಿಷ್ಠ 20 ಕ್ರೀಡಾ ಪಟುಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸುವ ಉದ್ದೇಶ ದೊಂದಿಗೆ ಈ ಟ್ರಸ್ಟ್ ಕಾರ್ಯ ನಿರ್ವಹಿಸಲಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಸಂದೀಪ್ ಪುರಂದರ ಶೆಟ್ಟಿ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ…
ಮಂಗಳೂರು, ಅ. 22 : ರಾಜ್ಯದಲ್ಲಿ ಸುಮಾರು 3ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ನ.10ರಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ 2024 ಆಯೋಜಿಸಲಾಗಿದೆ ಎಂದು ಸೋಮವಾರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಾವೇಶ ಸಮಿತಿ ಅಧ್ಯಕ್ಷ ಜಮ್ಮು ಕಾಶ್ಮೀರ ಸರಕಾರದ ಪ್ರಧಾನ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್ ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾವೇಶ ಸಮಿತಿ ಅಧ್ಯಕ್ಷ ಎಚ್.ರಾಜೇಶ್ ಪ್ರಸಾದ್ ಅವರು, 22 ವರ್ಷಗಳ ಬಳಿಕ ಶಿಕ್ಷಣ, ಸಂಘಟನೆ ಹಾಗೂ ಸ್ವಾಭಿಮಾನದ ಧೈಯದೊಂದಿಗೆ ಸಮಾವೇಶ ಆಯೋಜಿಸಲಾಗುತ್ತಿದೆ. ಮೂಲತಃ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ ಗುಡ್ಡಗಾಡಿನಲ್ಲಿ ವಾಸಿಸುತ್ತಿರುವ ಮರಾಟಿ ಸಮುದಾಯದ ಸುಮಾರು ಶೇ.80ರಷ್ಟು ಮಂದಿ ಇಂದಿಗೂ ಆರ್ಥಿಕವಾಗಿ ಹಿಂದುಳಿದಿದ್ದು, ಅನೇಕ ಸಮಸ್ಯೆ ಹಾಗೂ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಸಮಾವೇಶದಲ್ಲಿ ಚರ್ಚಿಸಲಾಗುವುದು. ಸಮಾವೇಶದಲ್ಲಿ ಸುಮಾರು 15ರಿಂದ 20 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸಮಾವೇಶವನ್ನು…
ಬಂಟ್ವಾಳ, ಅ.21 : ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ, ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.