Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಜೂ. 27 : ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ 2025 ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ ಈ ಚಟುವಟಿಕೆಗಳು ನಡೆಯುತ್ತವೆ. ಕಾರ್ಯಕ್ರಮದ ಕುರಿತು ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು, ವಿದ್ಯಾರ್ಥಿಗಳು ಬ್ಯಾಂಕಿನ ಬೆಂಬಲವನ್ನು ನೆನಪಿಸಿಕೊಳ್ಳಬೇಕೆಂದರು. ವಿದ್ಯಾರ್ಥಿಗಳು ಬೆಳೆದು ಸಾಮಾಜಿಕ ಸ್ಥಾನಮಾನವನ್ನು ಸಾಧಿಸಿದಾಗ ಸಾಮಾಜಿಕವಾಗಿ ಹಿಂದುಳಿದವರ ಬಗ್ಗೆ ಸಹಾನುಭೂತಿ ಹೊಂದಬೇಕೆಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಉತ್ಸಾಹಿ ವಿದ್ಯಾರ್ಥಿಗಳೊಂದಿಗೆ ಭಾಗವಹಿಸಲು ಅವಕಾಶ ಸಿಕ್ಕಿದ್ದಕಾಗಿ ಅವರು ಸಂತೋಷ ವ್ಯಕ್ತಪಡಿಸಿ ಪೋಷಣೆಯ ಶೈಕ್ಷಣಿಕ ವಾತಾವರಣವನ್ನು ಒದಗಿಸಿದ್ದಕ್ಕಾಗಿ ಸಂಸ್ಥೆಗಳನ್ನು ಶ್ಲಾಘಿಸಿದರು. ಪಡುಕೋಣೆಯ ಸೈಂಟ್ ಆಂಟನಿ ಪ್ರಾಥಮಿಕ ಶಾಲೆ, ಗಂಗೊಳ್ಳಿಯ…
ಮಂಗಳೂರು, ಜೂ.25: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಮಂಗಳೂರು ಶಾಖೆಯ ವತಿಯಿಂದ ಅಂತಾರಾಷ್ಟ್ರೀಯ ಎಂಎಸ್‌ಎಂಇ ದಿನಾಚರಣೆ ಪ್ರಯುಕ್ತ ಜೂ.27ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಂಗಳೂರಿನ ಕರಂಗಲ್ಪಾಡಿಯ ಮಹೇಂದ್ರ ಆರ್ಕೆಡ್‌ನಲ್ಲಿರುವ ಐಸಿಎಐ ಭವನದಲ್ಲಿ ‘ಐಸಿಎಐ ಎಂಎಸ್ ಎಂಇ ಮಹೋತ್ಸವ’ ಎಂಬ ಕಾರ್ಯಕ್ರಮ ನಡೆಯಲಿದೆ ಎಂದು ಐಸಿಎಐ ಎಸ್ ಐಆರ್‌ಸಿಯ ಮಂಗಳೂರು ಶಾಖೆಯ ಅಧ್ಯಕ್ಷ ಸಿಎ ಪ್ರಶಾಂತ್ ಪೈ ಕೆ. ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಭಾರತೀಯ ಕೈಗಾರಿಕಾ ಒಕ್ಕಟದ ಅಧ್ಯಕ್ಷ ನಟರಾಜ್ ಹೆಗ್ಡೆ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿ.ನ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ಎಂ.ಎಸ್.ಎಂ ಸಚಿವಾಲಯದ ಎಂಎಸ್ ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿಯ ನಿವೃತ್ತ ಜಂಟಿ ನಿರ್ದೇಶಕ ಡಾ| ಕೆ.ಸಾಕ್ರೆಟಿಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳಲಿದ್ದಾರೆ. ತಜ್ಞರ ಅಧಿವೇಶನದಲ್ಲಿ ಎ ಸಂಕೇತ್ ನಾಯಕ್ ಬೆಂಗಳೂರು ಅವರು ಎಂಎಸ್ ಎರರಗಳು ಮತ್ತು ಸ್ಟಾರ್ಟ್‌ಪ್‌ಗಳ ಪ್ರಯೋಜನಗಳು, ಹಣಕಾಸು ಮತ್ತು ತೆರಿಗೆಯನ್ನು ಅರ್ಥಮಾಡಿಕೊಳ್ಳುವುದರ…
ಬೆಳ್ತಂಗಡಿ, ಜೂ. 24 : ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಭಾನುವಾರ ಬಾದ್ಯಾರ್ ಬಳಿ ನಡೆದಿದೆ. ಸಹಪ್ರಯಾಣಿಕ ಗಾಯಗೊಂಡಿದ್ದಾನೆ. ಮೃತರನ್ನು ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಚಾಲಕ ಎಂದು ಗುರುತಿಸಲಾಗಿದೆ. ಆಟೋ ರಿಕ್ಷಾ ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಸಂಚರಿಸುತ್ತಿದ್ದಾಗ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿವಾನಂದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆ ದ್ದರು. ಆದಾಗಲೇ ಅವರು ಮೃತಪಟ್ಟಿದ್ದರು. ಆಟೋ ರಿಕ್ಷಾದಲ್ಲಿದ್ದ ಸಹಪ್ರಯಾಣಿಕ ಶಿವರಾಜ್ ಕೂಡ ಗಾಯಗೊಂಡಿದ್ದು, ಸದ್ಯ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಂಗಳೂರು, ಜೂ.23 : ಕೊಂಕಣಿ ಕವಿ ಎಚ್. ಎಮ್. ಪೆರ್ನಾಲ್ ಅವರ ನಾಲ್ಕನೆಯ ಕವನ ಸಂಕಲನ ಜನೆಲ್ (ಕಿಟಕಿ) ಅನ್ನು ಶುಕ್ರವಾರ ಜೂನ್ 27 ರಂದು ಸಂಜೆ 4.30 ಕ್ಕೆ ಎಂ.ಸಿ.ಸಿ. ಬ್ಯಾಂಕ್ ಆಡಳಿತ ಸೌಧ ಸಭಾಂಗಣದಲ್ಲಿ ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವಜೋ ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷಾ ಸಲಹಾ ಮಂಡಳಿ ಸಂಚಾಲಕ ಕವಿ ಮೆಲ್ವಿನ್ ರೊಡ್ರಿಗಸ್ ಪುಸ್ತಕ ಪರಿಚಯ ಮಾಡಲಿದ್ದು, ವಿಶನ್ ಕೊಂಕಣಿ ಪ್ರವರ್ತಕರೂ, ಅನಿವಾಸಿ ಭಾರತೀಯ ಉದ್ಯಮಿ ಹಾಗೂ ದಾನಿ ಶ್ರೀ ಮೈಕಲ್ ಡಿ ಸೊಜಾ ಅಧ್ಯಕ್ಷತೆ ವಹಿಸಲಿರುವರು. ಅಖಿಲ ಭಾರತೀಯ ಕೊಂಕಣಿ ಪರಿಷದ್ ಪ್ರಧಾನ ಕಾರ್ಯದರ್ಶಿ ಸ್ನೇಹಾ ಸಬನೀಸ ಮತ್ತು ಕವಿತಾ ಟ್ರಸ್ಟ್ ಅಧ್ಯಕ್ಷ ಕಥೆಗಾರ ಕಿಶೂ, ಬಾರ್ಕೂರ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು. ಎಚ್.ಎಮ್. ಪೆರ್ನಾಲ್ ಸದ್ಯ ಕಿಟಾಳ್ ಅಂತರ್ಜಾಲ ಸಾಹಿತ್ಯ ಪತ್ರಿಕೆಯ ಸಂಪಾದಕ, ಆರ್ಸೊ ಕೊಂಕಣಿ ಸಾಹಿತ್ಯ ಪತ್ರಿಕೆಯ ಪ್ರಕಾಶಕ ಮತ್ತು ಮೈಕಲ್ ಡಿಸೊಜಾ ವಿಶನ್ ಕೊಂಕಣಿ ಪುಸ್ತಕ…
ಮಂಗಳೂರು, ಜೂ. 22: ಕಲ್ಕೂರ ಪ್ರತಿಷ್ಠಾನ ಮಂಗಳೂರು ವತಿಯಿಂದ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಯೋಗ ದಲ್ಲಿ ಮಾವು -ಹಲಸು ಮೇಳ ನಗರದ ಕದ್ರಿ ಕಂಬಳ ಮಲ್ಲಿಕಾ ಬಡಾವಣೆಯ ಮಂಜು ಪ್ರಾಸಾದದ ಆವರಣದಲ್ಲಿ ಶನಿವಾರ ಮತ್ತು ಭಾನುವಾರ ನಡೆಯಿತು. ಶ್ರೀ ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಜೀ ಅವರು ಆಶೀರ್ವಚನ ನೀಡಿದರು. ಮಾವು -ಹಲಸು ಮೇಳ ಉದ್ಘಾಟಿಸಿದ ಆರೂರು ಲಕ್ಷ್ಮೀ’ ರಾವ್ ಮಾತನಾಡಿ, ಪ್ರಕೃತಿಯಲ್ಲಿ ಸಿಗುವ ಮಾವು ಮತ್ತು ಹಲಸು ಆರೋಗ್ಯಕರ ಹಣ್ಣುಗಳಾಗಿದ್ದು, ನಮ್ಮ ಆಹಾರ ಪದ್ಧತಿಯನ್ನು ನೆನಪಿಸಲು ಇಂತಹ ಮೇಳಗಳು ಪೂರಕ ಎಂದರು. ಶರವು ದೇವಸ್ಥಾನದ ಶಿಲೆ ಶಿಲೆ ಮೊತ್ತೇಸರ ರಾಘವೇಂದ್ರ ಶಾಸ್ತ್ರಿ , ಶಾರದಾ ಸಮೂಹ ಸಂಸ್ಥೆಗಳ ಪ್ರೊ| ಎಂ.ಬಿ. ಪುರಾಣಿಕ್, ಶಾಸಕ ಡಿ. ವೇದವ್ಯಾಸ ಕಾಮತ್ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸ್ವದೇಶಿ ಗೋವುಗಳ ಹಾಗೂ ಪ್ರಾದೇಶಿಕ ಸಸ್ಯಗಳ ತಳಿ ಸಂರಕ್ಷಕ ಡಾ| ಮನೋಹರ ಉಪಾಧ್ಯಾಯ ಅವರು ಆಹಾರ ಪದ್ಧತಿ ಬಗ್ಗೆ ಉಪನ್ಯಾಸ…
ಮಂಗಳೂರು, ಜೂ. 21 : ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಎಲ್ಲರಿಗೂ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಭಾರತವು ವಿಶ್ವದ ಆರೋಗ್ಯದ ರಾಯಭಾರಿಯಾಗಿದ್ದು ಪ್ರತಿಯೊಬ್ಬ ವ್ಯಕ್ತಿಯ ದೈಹಿಕ ಚೈತನ್ಯ ಹಾಗೂ ಮಾನಸಿಕ ಶಾಂತಿಗೆ ಯೋಗ ಅತ್ಯಗತ್ಯವಾಗಿದೆ. ಸನಾತನ ಸಂಸ್ಕೃತಿಯಲ್ಲಿ ಯೋಗಕ್ಕೆ ಶ್ರೇಷ್ಠ ಸ್ಥಾನವಿದೆ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದ ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಪೂರ್ಣಿಮಾ, ಕ್ಯಾ.ಗಣೇಶ್ ಕಾರ್ಣಿಕ್, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಅಶ್ವಿತ್ ಕೊಟ್ಟಾರಿ, ಸಂಜಯ್ ಪ್ರಭು, ನಿಕಟಪೂರ್ವ ಪಾಲಿಕೆ ಸದಸ್ಯರುಗಳು, ಸೇರಿದಂತೆ ಪಕ್ಷದ ಪ್ರಮುಖರು, ಮಂಡಲದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಗಳೂರು, ಜೂ.20: ಹನಿಜೆನಿಕ್ಸ್ ಬೀ ಫಾರ್ಮ್ಸ್ ಮತ್ತು ರೋಟರಿ ಇಂಟರ್ ನ್ಯಾಷನಲ್ ಮಂಗಳೂರು ವತಿಯಿಂದ ಜೂ.21 , 22ರಂದು ನಗರದ ಬೆಂದೂರ್‌ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’ವನ್ನು ಆಯೋಜಿಸಲಾಗಿದೆ ಎಂದು ಸಂಯೋಜಕ ಅಶ್ವಿನ್ ಸಿಕ್ವೇರಾ ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.21ರ ಪೂರ್ವಾಹ್ನ 10 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ. ರಾತ್ರಿ 8 ಗಂಟೆಯವರೆಗೆ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿದ್ದು ರಾಜ್ಯದ ವಿವಿಧ ಜಿಲ್ಲೆಗಳು ಕೃಷಿಕರು ಭಾಗವಹಿಸಲಿದ್ದಾರೆ. ಸ್ಥಳೀಯ ಕೃಷಿ, ಆಹಾರ ಪರಂಪರೆ ಮತ್ತು ಉದ್ಯಮಶೀಲನತೆಯನ್ನು ಉತ್ತೇಜಿಸಲು ಈ ಪೆಲಕಾಯಿ ಪರ್ಬದ ಆಯೋಜನೆಯಾಗಿದೆ ಎಂದು ತಿಳಿಸಿದರು. ರಾಮನಗರದಿಂದ ನಾಲ್ಕು ಮಂದಿ ರೈತರು ಮಾವು, ಚಿಕ್ಕಬಳ್ಳಾಪುರ ಮತ್ತು ಸ್ಥಳೀಯ ರೈತರು ಹಲಸು, ಮಡಿಕೇರಿಯಿಂದ ಬೆಣ್ಣೆ ಹಣ್ಣು ಹಾಗೂ ಕಿತ್ತಳೆ, ಬೆಂಗಳೂರಿನಿಂದ ವಿವಿಧ ಹಣ್ಣುಗಳ ಮೌಲ್ಯವರ್ಧಿತ ಉತ್ಪನ್ನಗಳು ಸೇರಿದಂತೆ ಸ್ಥಳೀಯವಾಗಿ, ಹಲಸಿನ ಹಣ್ಣಿನಿಂದ ತಯಾರಿಸಿದ ವಿವಿಧ ಖಾದ್ಯಗಳು ಪರ್ಬದಲ್ಲಿರಲಿವೆ. ಹಲಸಿನ ಪ್ರಿಯರಿಗೆ ಇದೊಂದು ಹಬ್ಬವಾಗಲಿದೆ ಎಂದರು.…
ಟೆಲ್ ಅವಿವ್/ಟೆಹ್ರಾನ್, ಜೂ.19. : ಆಪರೇಷನ್ ʻರೈಸಿಂಗ್ ಲಯನ್ʼ ಬಳಿಕ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ದಾಳಿಯಲ್ಲಿ ಇರಾನಿನ ಉನ್ನತ ಅಧಿಕಾರಿಗಳು ಮತ್ತು ಅಣ್ವಸ್ತ್ರ ವಿಜ್ಞಾನಿಗಳು ಸೇರಿದಂತೆ ಈವರೆಗೆ 14 ಹಿರಿಯ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇರಾನ್ ಕೂಡ ಇಸ್ರೇಲ್ ಮೇಲೆ ಭೀಕರ ದಾಳಿ ನಡೆಸಿದೆ. ಇರಾನ್ ಮಿಸೈಲ್ ದಾಳಿಗೆ ಇಸ್ರೇಲ್ ಕೂಡ ಮಿಸೈಲ್ಗಳ ಸುರಿಮಳೆಯನ್ನೇ ಸುರಿಸಿದೆ. ಅಣ್ವಸ್ತ್ರ , ಮಿಲಿಟರಿ ನೆಲೆಗಳ ಬಳಿಕ ಇರಾನ್ನ ಮೂಲ ಸೌಕರ್ಯಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ಮಾಡಲು ಶುರು ಮಾಡಿದೆ. ಇರಾನ್‌ನಲ್ಲಿ ಒಟ್ಟು 170ಕ್ಕೂ ಹೆಚ್ಚು ಸ್ಥಳಗಳು 720 ಮಿಲಿಟರಿ ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡಿದೆ. ಈ ದಾಳಿಯಲ್ಲಿ ಇರಾನಿನ ಈವರೆಗೆ 14 ಹಿರಿಯ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಇರಾನ್ ಕೂಡ ಇಸ್ರೇಲ್ ಮೇಲೆ 200 ಖಂಡಾಂತರ ಕ್ಷಿಪಣಿಗಳು ಹಾಗೂ 100 ಡ್ರೋನ್‌ಗಳಿಂದ ದಾಳಿ ನಡೆಸಿದೆ. ಟೆಲ್ ಅವಿವ್, ಜೆರುಸಲೆಮ್ ಸೇರಿದಂತೆ ಮಿಲಿಟರಿ ಮತ್ತು ಸಾರ್ವಜನಿಕ ಸ್ಥಳಗಳ ಮೇಲೆ ದಾಳಿ…
ಮಂಗಳೂರು, ಜೂ.18 : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ, ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ, ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಅಧಿಕಾರಿಯಾಗಿದ್ದಾರೆ. ದರ್ಶನ್ ಎಚ್.ವಿ ಅವರನ್ನು ದ.ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೆ ಮುಗಿಲನ್ ಅವರ ನೋಂದಣಿ ಮತ್ತು ಮುದ್ರಾಂಕದ ಐಜಿ ಅವರನ್ನು ನೇಮಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ-ಆಡಳಿತ ನಿರ್ದೇಶಕರ ಸ್ವರೂಪ ಟಿ.ಕೆ ಉಡುಪಿ ಡಿಸಿ ಆಗಿ ನೇಮಿಸಲಾಗಿದೆ.
ಮಂಗಳೂರು, ಜೂ. 18 : ಆಧ್ಯಾತ್ಮಿಕ ನಾಯಕರೂ ಧಾರ್ಮಿಕ ವಿದ್ವಾಂಸರೂ ಆಗಿದ್ದ ಖಾಝಿ ಅಸ್ಸಯ್ಯಿದ್ ಉಮರುಲ್ ಫಾರೂಕ್ ಆಲ್ ಬುಖಾರಿ ಪೊಸೋಟ್ ತಂಳ್ ಅವರ ಹತ್ತನೇ ಉರೂಸ್ ಹಾಗೂ ಅವರು ಸ್ಥಾಪಿಸಿದ ಮಂಜೇಶ್ವರ ಹೊಸಂಗಡಿ ಮಳ್‌ಹರ್ ವಿದ್ಯಾಸಂಸ್ಥೆಯ ರಜತ ಮಹೋತ್ಸವವು ಜೂ. 19ರಿಂದ 22ರವರೆಗೆ ನಡೆಯಲಿದೆ ಎಂದು ವಿದ್ಯಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಯ್ಯಿದ್ ಜಲಾಲುದ್ದೀನ್ ಬುಖಾರಿ ತಂಙಳ್ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಜೂ. 19 ಗುರುವಾರ ಸಂಜೆ 4.30ಕ್ಕೆ ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಅಧ್ಯಕ್ಷ ಸಯ್ಯಿದ್ ಆಟಕೋಯ ತಂಳ್ ಕುಂಬೋಲ್ ಉದ್ಘಾಟಿಸಲಿದ್ದು, ಕರ್ನಾಟಕ ಸುನ್ನೀ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ ಖಾಝಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಮಂಜೇಶ್ವರ ಶಾಸಕ ಎಂ.ಕೆ.ಎಂ. ಆಶ್ರಫ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ಹೇಳಿದರು. ಅಂದು ರಾತ್ರಿ 8ಕ್ಕೆ ಸಂಸ್ಥೆಯ ಮುಖ್ಯಸ್ಥ ಸಯ್ಯದ್ ಶಹೀರ್ ಅಲ್…












