Subscribe to Updates
Get the latest creative news from FooBar about art, design and business.
Author: admin
ಕೇದಾರನಾಥ, ಜೂ. 15 : ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ್ ಪ್ರದೇಶದ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿದ್ದ 7 ಮಂದಿ ಸಾವಪ್ಪಿನದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೆಲಿಕಾಪ್ಟರ್‌ನಲ್ಲಿ ಪೈಲಟ್ ಸೇರಿದಂತೆ 7 ಜನರಿದ್ದರು ಎನ್ನಲಾಗಿದೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್ ಆರ್ಯನ್ ಏವಿಯೇಷನ್‌ನದು ಎಂದು ಹೇಳಲಾಗುತ್ತಿದೆ. ಪೈಲೆಟ್, 23 ತಿಂಗಳ ಮಗು ಸೇರಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಟ್ಟ ಹವಾಮಾನವೇ ಹೆಲಿಕಾಪ್ಟರ್ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.ಗೌರಿಕುಂಡ್ ಮೇಲೆ ಹುಲ್ಲು ಕಡಿಯುತ್ತಿದ್ದ ನೇಪಾಳಿ ಮೂಲದ ಮಹಿಳೆಯರು ಹೆಲಿಕಾಪ್ಟರ್ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಲಿಕಾಪ್ಟರ್ ಪತನವಾಗಿರುವುದನ್ನು ಹೆಲಿಕಾಪ್ಟರ್ ನೋಡಲ್ ಅಧಿಕಾರಿ ರಾಹುಲ್ ಚೌಬೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ದೃಢಪಡಿಸಿದ್ದಾರೆ. ಸಾವಪ್ಪಿದವರೆಲ್ಲರೂ ಮಹಾರಾಷ್ಟ್ರದ ಜೈಸ್ವಾಲ್ ಕುಟುಂಬಕ್ಕೆ ಸೇರಿದವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯ ಬೆನ್ನಲ್ಲೇ ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ತಲುಪಿದ್ದು, ಕಾರ್ಯಾಚರಣೆ ನಡೆಸುತ್ತಿದೆ. ಕೆಟ್ಟ ಹವಾಮಾನದಿಂದಾಗಿ, ರಕ್ಷಣಾ ಕಾರ್ಯವು ತೊಂದರೆಗಳನ್ನು…
ಅಹಮದಾಬಾದ್,ಜೂ. 14 : ಗುಜರಾತ್ನ ಅಹಮದಾಬಾದ್‌ನಿಂದ ಇಂಗ್ಲೆಂಡ್ (ಗ್ಯಾಟ್ವಿಕ್)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಜೂ. 12, ಗುರುವಾರ ಮಧ್ಯಾಹ್ನ ಟೇಕ್ ಆಫ್ ಆದ ತಕ್ಷಣ ಪತನಗೊಂಡಿದೆ.ಅಹಮ್ಮದಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. 241 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂದು ವರದಿಯಾಗಿದೆ. ಪತನಗೊಂಡಿರುವ ಈ ವಿಮಾನದಲ್ಲಿ12 ಸಿಬ್ಬಂದಿ ಸೇರಿದಂತೆ 242 ಜನರು ಇದ್ದರು. ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಇದ್ದ ಡಾಕ್ಟರ್ ಹಾಸ್ಟೆಲ್ನ ಒಳಗೆ ನುಗ್ಗಿದೆ. ಇದರಿಂದ ವಿಮಾನದಲ್ಲಿರುವ ಪ್ರಯಾಣಿಕರು ಸೇರಿದಂತೆ ವೈದ್ಯಕೀಯ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ವಿಮಾನ ಪತನದ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತಿದೆ.
ಮಂಗಳೂರು,ಜೂ, 13 : ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಭಾರತದ ಲೆಕ್ಕಪರಿಶೋಧಕರ ಸಂಸ್ಥೆ ಮಂಗಳೂರು ಶಾಖೆ ವತಿಯಿಂದ ಬೋರ್ಡ್ ಆಫ್ ಸ್ಟಡೀಸ್, ಐಸಿಎಐ ಮುಂದಾಳತ್ವದಲ್ಲಿ ‘ವಿಮರ್ಶ್’ ಎಂಬ ಶೀರ್ಷಿಕೆಯಡಿಯಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ ಶುಕ್ರವಾರ ಜರಗಿತು. ಮೆಗಾ ಸಮ್ಮೇಳನವನ್ನು ಯುನಿಕೋರ್ಟ್ ಐಎನ್‌ಸಿ, ಸಂಸ್ಥಾಪಕ ಮತ್ತು ಮುಖ್ಯ ತಾಂತ್ರಿಕ ಅಧಿಕಾರಿ ಪ್ರಶಾಂತ್ ಶೆಣೈ ಕಟ್ಟಾಡಿ ಅವರು ಉದ್ಘಾಟಿಸಿದರು. ನಂತರ ಸಿಎ ವಿದ್ಯಾರ್ಥಿಗಳಿಗೆ ಪ್ರೆಸೆಂಟೇಶನ್ ನೀಡಿದರು. ಸಮ್ಮೇಳನದ ನಿರ್ದೆಶಕರು, ಐಸಿಎಐ ಸೆಂಟ್ರಲ್ ಕೌನ್ಸಿಲ್ ಮೆಂಬರ್ ಸಿಎ. ಮದುಕರ್ ನಾರಾಯಣ ಹಿರೆಗಂಗಾ ಮತ್ತು ಎಸ್‌ಐಸಿಎಎಸ್ ಅಧ್ಯಕ್ಷ ಬಂಟ್ವಾಳ ನಿತಿನ್ ಬಾಳಿಗ ಅವರು ಮಾತಾಡಿದರು. ಈ ಸಮ್ಮೇಳನದಲ್ಲಿ ಐಸಿಎಐ ಬೋರ್ಡ್ ಆಫ್ ಸ್ಟಡೀಸ್ ಸದಸ್ಯರು ಮತ್ತು ವಿದ್ಯಾರ್ಥಿಗಳ ನಡುವೆ ಸಂವಾದ ನಡೆಯಿತು. ಹಾಗೇನೆ ವಿದ್ಯಾರ್ಥಿಗಳು, ಮಾರ್ಗದರ್ಶಕರು ಮತ್ತು ಉದ್ಯಮ ತಜ್ಞರ ಪರಸ್ಪರ ಸಂವಾದ ಕಾರ್ಯಕ್ರಮ ನಡೆಯಿತು.ವಿವಿಧ ತಜ್ಞರಿಂದ ಅಧಿವೇಶನಗಳು, ಗುಂಪು ಚರ್ಚೆಗಳು ನಡೆದವು. ಐಸಿಎಐ ಮಂಗಳೂರು ಶಾಖೆಯ ಅಧ್ಯಕ್ಷ ಪ್ರಶಾಂತ್ ಪೈ ಕೆ. ಅವರು ಪ್ರಾಸ್ತಾವಿಕವಾಗಿ…
ಮಂಗಳೂರು, ಜೂ. 13: ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಘಟಕಕ್ಕೆ ಚಾಲನೆ ನೀಡಿದರು. ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಅನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಗೃಹ ಸಚಿವ ಡಾ.ಪರಮೇಶ್ವರ್ , ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ಎಸ್ಎಎಫ್ ಅಗತ್ಯವಿದೆ. ಈ ಕಾರ್ಯಪಡೆಗೆ ಅನೇಕರು ಟೀಕೆ ಮಾಡಬಹುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಇದ್ರೆ ರಾಜ್ಯದಲ್ಲಿ ಶಾಂತಿ ಇರುತ್ತೆ. ಈ ಕಾರ್ಯಪಡೆ ಕೆಲಸಕ್ಕೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ಯಾರೂ ಇದೇ ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಲ್ಲ. ಇದನ್ನೇ ದೊಡ್ಡದು ಮಾಡಿ ವಿಭಜನೆ ಮಾಡುವುದು ಸರಿಯಲ್ಲ. ಅಗತ್ಯವಿದ್ದರೆ ಇಡೀ ರಾಜ್ಯದಲ್ಲಿ ಈ ಕಾರ್ಯಪಡೆ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದರು. ಕೋಮು ಸಂಘರ್ಷ ನಿಗ್ರಹಕ್ಕೆ ಮಾಡಿರುವ ಪೊಲೀಸ್ ವಿಶೇಷ ಕಾರ್ಯಪಡೆ ದಕ್ಷಿಣ ಕನ್ನಡ, ಉಡುಪಿ ಮತ್ತು…
ಬೆಂಗಳೂರು, ಜೂ. 12 :ರಿಷಬ್ ಶೆಟ್ಟಿ ನಿರ್ದೇಶನದ ಚಿತ್ರ ʻಕಾಂತಾರ ಚಾಪ್ಟರ್-1ʼ ಸಹ ಕಲಾವಿದ ವಿಜು ವಿ.ಕೆ ಹೃದಯಾಘಾತದಿಂದ ಆಗುಂಬೆಯಲ್ಲಿ ಸಾವನ್ನಪ್ಪಿದ್ದಾರೆ. ದೈವದ ನೇಮೋತ್ಸವದ ಚಿತ್ರೀಕರಣಕ್ಕಾಗಿ ಕಾಂತಾರ ಚಿತ್ರತಂಡ ಬ್ಯಾಕ್ ವಾಟರ್‌ನಲ್ಲಿ ಸೆಟ್ ಹಾಕಲಾಗಿತ್ತು.ಇದೇ ಚಿತ್ರೀಕರಣದಲ್ಲಿ ಕೇರಳದ ನಟ ಬಿಜು ವಿಕೆ ಭಾಗಿಯಾಗಬೇಕಿತ್ತು. ಚಿತ್ರೀಕರಣಕ್ಕೂ ಮುನ್ನ ಬಿಜು ವಿಕೆ ಅವರು ಮೃತಪಟ್ಟಿದ್ದಾರೆ. ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿಕೆ ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಯಡೂರಿನ ಹೋಂ ಸ್ಟೇ ಯಲ್ಲಿ ತಂಗಿದ್ದರು. ಬುಧವಾರ ರಾತ್ರಿ ಏಕಾಏಕಿ ವಿಜು ಅವರಿಗೆ ಎದೆ ನೋವು ಕಾಣಿಸಿಕೊಂಡಿ ದ್ದು, ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವ ವೇಳೆ ದಾರಿ ಮಧ್ಯೆ ಅವರು ಸಾವನ್ನಪ್ಪಿದ್ದಾರೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಜೂ. 11 :ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಂಗಳೂರಿನ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಮಗಾರಿಯೊಂದರ ಬಿಲ್ ಮಂಜೂರು ಮಾಡುವ ವಿಷಯಕ್ಕೆ ನವಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷರ ಕಚೇರಿಗೆ ಮೊಹಿಯುದ್ದೀನ್ ಬಾವಾ ಇಬ್ಬರು ಸಹಚರರೊಂದಿಗೆ ಜೂನ್ 9 ರಂದು ರಾತ್ರಿ ನುಗ್ಗಿ, 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಉಪಾಧ್ಯಕ್ಷರು ಕಚೇರಿಯಿಂದ ಹೊರ ಹೋಗಲು ಅವಕಾಶ ನೀಡದೇ, ಅವರನ್ನು ತಡೆದು ನಿಲ್ಲಿಸಿದ್ದಾರೆ. ನಂತರ ಅವರು ಹೊರಗೆ ಬಂದಾಗಲೂ ಹಿಂಬಾಲಿಸುತ್ತಾ ಬೆದರಿಕೆ ಹಾಕಿದ್ದಾರೆ. ಬೇರೆ ಕರ್ತವ್ಯದ ಸಲುವಾಗಿ ಕಾರಿನಲ್ಲಿ ಹೋಗುತ್ತಿರುವಾಗ ಕಾರನ್ನು ತಡೆದು ನಿಲ್ಲಿಸಿ ವಾಗ್ವಾದ ಮಾಡಿದ್ದಾರೆ ಎಂದು ಎನ್‌ಎಂಪಿಟಿ ಕಾರ್ಯದರ್ಶಿಯವರು ಮಂಗಳವಾರ ಪಣಂಬೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಪಣಂಬೂರು ಠಾಣೆಯಲ್ಲಿ ಮೊಹಿಯುದ್ದೀನ ಬಾವ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 224, ಸೆಕ್ಷನ್ 221 ಮತ್ತು 132, ಸೆಕ್ಷನ್ 126…
ಮಂಗಳೂರು,ಜೂ,11 : ಭಾರತದ ಲೆಕ್ಕಪರಿಶೋಧಕರ ಸಂಸ್ಥೆ ಮಂಗಳೂರು ಶಾಖೆ ವತಿಯಿಂದ ಬೋರ್ಡ್ ಆಫ್ ಸ್ಟಡೀಸ್, ಐಸಿಎಐ ಮುಂದಾಳತ್ವದಲ್ಲಿ ‘ವಿಮರ್ಶ್’ ಜ್ಞಾನದ ಪಯಣವು ಸಮಸ್ಥಿತ ಬುದ್ಧಿಮತ್ತೆಯನ್ನು ಪ್ರಜ್ವಲಿಸುತ್ತದೆ ಎಂಬ ಶೀರ್ಷಿಕೆಯಡಿಯಲ್ಲಿ ಜೂ ನ್ 13 ಮತ್ತು 14ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಿಎ ವಿದ್ಯಾಥಿಗಳ ಮೆಗಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ಶಾಖೆಯ ಅಧ್ಯಕ್ಷ ಪ್ರಶಾಂತ್ ಪೈ ಕೆ. ಅವರು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಯುನಿಕೋರ್ಟ್ ಐಎನ್‌ಸಿ, ಸಂಸ್ಥಾಪಕ ಮತ್ತು ಮುಖ್ಯ ತಾಂತ್ರಿಕ ಅಧಿಕಾರಿ ಪ್ರಶಾಂತ್ ಶೆಣೈ ಕಟ್ಟಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಬಳಿಕ ಐಸಿಎಐ ಬೋರ್ಡ್ ಆಫ್ ಸ್ಟಡೀಸ್ ಸದಸ್ಯರು ಮತ್ತು ವಿದ್ಯಾರ್ಥಿಗಳ ನಡುವೆ ಸಂವಾದ ನಡೆಯಲಿದೆ. ಐಸಿಎಐ ಮಂಗಳೂರು ಶಾಖೆಯ ಮತ್ತು ಎಸ್ ಐಸಿಎಎಸ್ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ. ದ್ವಿತೀಯ ದಿನ ನಿಕಟಪೂರ್ವ ಅಧ್ಯಕ್ಷ ಗೌತಮ್ ಪೈ ಅವರು ಸಮಾರೋಪ ಭಾಷಣಗೈದು ಬಹುಮಾನ ಪ್ರದಾನಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದೇಶದ ಸುಮಾರು 1,000ಕ್ಕೂ ಹೆಚ್ಚು…
ಮಂಗಳೂರು, ಜೂ. 10 : ಕೇರಳದ ಕೋಯಿಕ್ಕೋಡ್ ಬೇಪೂರ್ ಸಮೀಪ ಸಿಂಗಾಪುರದ ಕಂಟೈನರ್ ಹಡಗು ಎಂ.ವಿ ವಾನ್ ಹೈ 503 ರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹಡಗು ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಡಗಿನಲ್ಲಿದ್ದ 18 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ ಗಾಯಗೊಂಡ 6 ಮಂದಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 12 ಮಂದಿಗೆ ನಗರದ ಹೋಟೆಲ್‌ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಲ್ವರು ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ. ಕಾಣೆಯಾದ ಸಿಬ್ಬಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ನವದೆಹಲಿ, ಜೂ. 10 : ಇಲ್ಲಿನ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಅಪಾಯದಿಂದ ಪಾರಾಗಲು ಬಾಲ್ಕನಿಯಿಂದ ಹಾರಿದ ಇಬ್ಬರು ಮಕ್ಕಳು ಹಾಗೂ ತಂದೆ ಸಾವನ್ನಪ್ಪಿದ್ದಾರೆ.10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಹಾಗೂ ತಂದೆ ಯಾದವ್ (35) ಮೃತಪಟ್ಟವರು. ಅಪಾರ್ಟ್‌ಮೆಂಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗಲು ಯಾದವ್ ತನ್ನ ಇಬ್ಬರು ಮಕ್ಕಳೊಂದಿಗೆ ಅಪಾರ್ಟ್‌ಮೆಂಟ್ನ 9ನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಇಬ್ಬರು ಮಕ್ಕಳು ಆಸ್ಪತ್ರೆಗೆ ಸಾಗಿಸುವ ಮೊದಲೇ ಮೃತಪಟ್ಟಿದ್ದರು. ಯಾದವ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಯಾದವ್ ಅವರ ಪತ್ನಿ ಹಾಗೂ ಹಿರಿಯ ಮಗನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಪಾರ್ಟ್‌ಮೆಂಟ್‌ನಲ್ಲಿದ್ದ ಎಲ್ಲಾ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕುಂದಾಪುರ, ಜೂ. 09 : ತ್ರಾಸಿ-ಮರವಂತೆ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆಯ ರಭಸಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಐದು ಮಂದಿಯನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ಜೂನ್ 7ರ ಸಂಜೆ ಸಂಭವಿಸಿದೆ.ಬೆಂಗಳೂರಿನ ನಾಲ್ಕು ಮಂದಿ ಮತ್ತು ಗೋವಾದ ಓರ್ವ ಮಹಿಳೆ ರಕ್ಷಿಸಲ್ಪಟ್ಟವರು. ಲೈಫ್ ಗಾರ್ಡ್ ಸಿಬ್ಬಂದಿ ಪೃಥ್ವಿರಾಜ್ ಉಪ್ಪುಂದ, ಪ್ರಮೋದ್ ರಾಜ್ ಉಪ್ಪುಂದ ಹಾಗೂ ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, 24×7 ಆಂಬ್ಯುಲೆನ್ಸ್ ಸಿಬ್ಬಂದಿ ಇಬ್ರಾಹಿಂ ಗಂಗೊಳ್ಳಿ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಘಟನೆಯ ಬಳಿಕ ಗಂಗೊಳ್ಳಿ ಪೊಲೀಸ್ ನಿರೀಕ್ಷಕ ಮತ್ತು ಸಿಬ್ಬಂದಿ, ಒನ್-ಟು ಸಿಬ್ಬಂದಿ ಮತ್ತು ಹೈವೇ ಪೆಟ್ರೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು. ಪ್ರವಾಸಿಗರ ಸುರಕ್ಷತೆಗಾಗಿ ಮತ್ತು ಮುನ್ನೆಚ್ಚರಿಕೆ ವಹಿಸಲು ಸೈರನ್ ಮೊಳಗಿಸಿ ಎಚ್ಚರಿಸಲಾಯಿತು.












