Subscribe to Updates
Get the latest creative news from FooBar about art, design and business.
Author: admin
ಮಂಗಳೂರು, 25:ಮಂಗಳೂರಿನ ಮಾತಾ ಅಮೃತಾನಂದಮಯಿ ಮಠ ಬೋಳೂರು ವತಿಯಿಂದ ಮಾತಾ ಅಮೃತಾನಂದಮಯಿ ದೇವಿಯವರ ಜನ್ಮದಿನಾಚರಣೆ ‘ಅಮೃತೋತ್ಸವ 2024′ ಕಾರ್ಯಕ್ರಮ ನಗರದ ಸಂಘನಿಕೇತನದಲ್ಲಿ ಸೆ.29ರಂದು ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಡಾ| ವಸಂತ ಕುಮಾರ್ ಪೆರ್ಲ ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪ ತ್ರಿಕಾಗೋಷ್ಠಿಯಲ್ಲಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9ಗಂಟೆಯಿಂದ ಮಠದ ಮುಖ್ಯಸ್ಥೆ ಸ್ವಾಮಿನಿ ಮಂಗಳಾಮೃತ’ ಪ್ರಾಣ ಅವರ ಸಾರಥ್ಯದಲ್ಲಿ ಶ್ರೀ ಗುರುಪಾದುಕಾ ಪೂಜೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಥಾಮೃತ ಎಂಬ ವಿಶೇಷ ಹರಿಕಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಠದ ಮಾನವೀಯ ಸೇವಾ ಯೋಜನೆಗಳ ಅನ್ವಯ ವಸ್ತ್ರದಾನ ಹಾಗೂ ಅಮೃತ ಆರೋಗ್ಯ ಸೇವೆಗಳ ವಿತರಣೆ ನಡೆಯಲಿದೆ. ಮಾತಾ ಅಮೃತಾನಂದಮಯಿ ಸೇವಾ ಸಮಿತಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ನೂತನ ಸೇವಾ ಸಮಿತಿಗಳ ಪದಗ್ರಹಣ ಕಾರ್ಯಕ್ರಮ ಜರಗಲಿದೆ. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅದಾನಿ ಸಂಸ್ಥೆಗಳ ಅಧ್ಯಕ್ಷ ಕಿಶೋರ್, ಆಳ್ವ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ…
ಮಂಗಳೂರು, ಸೆ.24 : ನಗರದ ವೆಲೆನ್ಸಿಯಾ ನಿವಾಸಿ ಹಾಗೂ ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ (83) ಅವರು ಇಂದು ನಗರದ ಆಸ್ಪತ್ರೆಯಲ್ಲಿ ನಿಧನರಾದರು. ಪಿ.ಬಿ.ಡೇಸಾ ಅವರು ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ (ಪಿಯುಸಿಎಲ್) ರಾಜ್ಯಾಧ್ಯಕ್ಷರಾಗಿದ್ದರು. ಇವರು ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದವರಾಗಿದ್ದರು. ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಮೃತರು ಅಗಲಿದ್ದಾರೆ.
ಉಡುಪಿ, ಸೆ.23 : ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇರುವ ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ ಸೆ.23ರಂದು ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. , ಆಯುರ್ವೇದ ಆಸ್ಪತ್ರೆಯು ನವೀಕರಣ ಹಂತದಲ್ಲಿರುವುದರಿಂದ ಅಲ್ಲಿ ಯಾವುದೇ ರೋಗಿಗಳು ಇರಲಿಲ್ಲ. ದಿನನಿತ್ಯದ ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಬರುವ ಕುಸುಮಾ ಬೆಂಕಿಯನ್ನು ಪತ್ತೆ ಹಚ್ಚಿದರು. ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದ್ದು, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ .ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ
ಕಾಸರಗೋಡು, ಸೆ.23: ಅಮಿಬಿಕ್ ಮೆದುಳು ಜ್ವರದಿಂದ ಯುವಕನೋಬ್ಬ ಸಾವನ್ನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಸಾವನ್ನಪ್ಪಿದವರು. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತಪಾಸಣೆಗೊಳಪಡಿಸಿದಾಗ ಮಣಿಕಂಠ ಅವರಿಗೆ ಅಮಿಬಿಕ್ ಸೋಂಕು ಇರುವುದು ದೃಢಪಟ್ಟಿದೆ ಎನ್ನಲಾಗಿದೆ. ಮಣಿಕಂಠ ಅವರಿಗೆ ಮುಂಬೈಯಲ್ಲಿ ಸೋಂಕು ತಗಲಿರಬಹುದು ಎಂದು ಶಂಕಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕ ಪಡಬೇಕಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಜ್ವರದ ಬಗ್ಗೆ ಮುನ್ನಚ್ಚರಿಕೆ ವಹಿಸಬೇಕುಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಂಗಳೂರು,ಸೆ.21: ಮಂಗಳೂರು ತಾಲೂಕು ಬಿಲ್ಲವ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮುಕ್ತ ದಸರಾ ಕ್ರೀಡೋತ್ಸವ ಅ.6ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಿತೇಂದ್ರ ಜೆ. ಸುವರ್ಣ ಬುಧವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಬೆಳಿಗ್ಗೆ 9 ಗಂಟೆಗೆ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿರುವರು ಎಂದು ಅವರು ಹೇಳಿದರು. ಬೆಳಗ್ಗೆ 8.30ಕ್ಕೆ ಕ್ರೀಡಾಕೂಟದ ಪಥಸಂಚಲನ ನಡೆಯಲಿದ್ದು, ಶಿಸ್ತು ಬದ್ಧ ಮತ್ತು ಉತ್ತಮ ಸಮವಸ್ತ್ರ ತಂಡಕ್ಕೆ ವಿಶೇಷ ಬಹುಮಾನ ನೀಡಲಾಗುತ್ತದೆ. ಹೈಸ್ಕೂಲ್ ವಿಭಾಗ ಹಾಗೂ ಮಹಿಳೆ ಮತ್ತು ಪುರುಷರ ವಿಭಾಗಗಳಿದ್ದು, ಹೈಸ್ಕೂಲ್ನಲ್ಲಿ ಅಥ್ಲೆಟಿಕ್ಸ್ ಹಾಗೂ ಕಬಡ್ಡಿ ಸೇರಿದಂತೆ ಮುಕ್ತ ವಿಭಾಗದಲ್ಲೂ ಅಥ್ಲೆಟಿಕ್ಸ್ ಹಾಗೂ ಹಗ್ಗಜಗ್ಗಾಟ ನಡೆಯಲಿದೆ. ವಿಜೇತರಿಗೆ ನಗದು, ಪಾರಿತೋಷಕ, ಪ್ರಶಸ್ತಿ ಪತ್ರ ನೀಡಲಾಗುತ್ತದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಲೋಕನಾಥ…
ನವದೆಹಲಿ, ಸೆ.21: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅತಿಶಿ ಅವರು ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ನೂತನ ಸಿಎಂ ಆಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಅತಿಶಿಯವರೊಂದಿಗೆ ಆಮ್ ಆದ್ಮಿ ಪಕ್ಷದ ಐವರು ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟಿದ್ದ ಅರವಿಂದ್ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅವರು ಜೈಲಿನಿಂದ ಬಿಡುಗಡೆಯಾದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಅತಿಶಿ ಅವರನ್ನು ದೆಹಲಿಯ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲಾಗಿತ್ತು. ಇದೀಗ ಅತಿಶಿ ಅವರು ದೆಹಲಿಯ ಮೂರನೆಯ ಮಹಿಳಾ ಸಿ ಎಂ ಯಾಗಿ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬೆಂಗಳೂರು, ಸೆ.20 : ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಮುಜುರಾಯಿ ಇಲಾಖೆ ಆದೇಶಿಸಿದೆ. ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಸ್ಥಾನಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಉಪಯೋಗಿಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.
ಶ್ರೀನಗರ, ಸೆ.20 : ಬಿಎಸ್ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಸ್ 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು, 3 ಬಿಎಫ್ಎಸ್ ಯೋಧರು ಮೃತಪಟ್ಟು, 28 ಮಂದಿ ಗಾಯಗೊಂಡ ಘಟನೆ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ವಾಟರ್ಹೇಲ್ ಪ್ರದೇಶದಲ್ಲಿ ನಡೆದಿದೆ. 2ನೇ ಹಂತದ ಚುನಾವಣಾ ನಿಯೋಜನೆಗಾಗಿ ತೆರಳುತ್ತಿದ್ದ ಸಂದರ್ಭ ಬಸ್ ಅಪಘಾತಕ್ಕೀಡಾಗಿದೆ. ಬಸ್ಸಿನಲ್ಲಿ ಸುಮಾರು 35 ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಯೋಧರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿದೆ.
ಮಂಗಳೂರು, ಸೆ.19: ದ.ಕ. ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಶನ್ ನ ಸ್ವಂತ ಕಚೇರಿಯು ನಗರದ ಕೊಟ್ಟಾರಚೌಕಿಯ ಉದ್ಧವ್ ಸ್ಕ್ವೇರ್ ನ ಎರಡನೇ ಮಹಡಿಯಲ್ಲಿ ಸೋಮವಾರ ಉದ್ಘಾಟನೆಗೊಂಡಿತು. ಅಸೋಸಿಯೇಶನ್ ನ ಕಚೇರಿ ಉದ್ಘಾಟಿಸಿದ ಎಜೆ ಸಮೂಹ ಸಂಸ್ಥೆಗಳ ಚೇರ್ಮನ್ ಡಾ|ಎ.ಜೆ.ಶೆಟ್ಟಿ ಮಾತನಾಡಿ, ವೈನ್ ಮರ್ಚೆಂಟ್ ಅಸೋಸಿಯೇಶನ್ ಇಲ್ಲದ ಕಾಲದಲ್ಲಿ ಕೆಲಸ ಕಾರ್ಯಗಳಿಗೆ ಪರದಾಡಬೇಕಾಗಿತ್ತು. ಆದರೆ ಇಂದು ಅಸೋಸಿಯೇಶನ್ ಮೂಲಕ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತವೆ ಎಂದರು. ಕ್ವಾಲಿಟಿ ಗ್ರೂಪ್ಸ್ ಆಫ್ ಹೊಟೇಲ್ ಇದರ ಎಂ ಡಿ ಡಾ| ಎ. ಸದಾನಂದ ಶೆಟ್ಟಿ ಮಾತನಾಡಿ, ಮದ್ಯ ವ್ಯಾಪಾರ ಹಲವಾರು ಸವಾಲುಗಳನ್ನು ಒಳಗೊಂಡಿದೆ. ಮುಂದಿನ ದಿನಗಳಲ್ಲಿ ಅಸೋಸಿಯೇಶನ್ ಮೂಲಕ ಸಂಘಟಿತರಾಗಿ ಕೆಲಸ ಮಾಡೋಣ ಎಂದು ಹೇಳಿದರು. ಎಂ ಆರ್ ಜಿ ಸಮೂಹ ಸಂಸ್ಥೆಗಳ ಚೇರ್ಮನ್ ಡಾ| ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಹೊಟೇಲ್ ಮದ್ಯ ವ್ಯಾಪಾರದ ಮೂಲಕ ಬಹಳ ಮಂದಿಗೆ ಉದ್ಯೋಗ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು. ಸಾಯಿ ಪ್ಯಾಲೆಸ್ ಸಮೂಹ ಹೊಟೇಲ್ನ ವ್ಯವಸ್ಥಾಪಕ ನಿರ್ದೇಶಕ…
ಮಂಗಳೂರು, ಸೆ.19 :ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ದೇರೆಬೈಲ್ ವಾರ್ಡ್ನಿಂದ ಮನೋಜ್ ಕುಮಾರ್ ಆಯ್ಕೆಯಾದರು, ಉಪಮೇಯರ್ ಆಗಿ ಬೋಳಾರ್ ವಾರ್ಡ್ನಿಂದ ಭಾನುಮತಿ ಆಯ್ಕೆಯಾದರು. ಎಂಸಿಸಿಯ 25ನೇ ಅವಧಿಗೆ ಮೇಯರ್, ಉಪಮೇಯರ್ ಹಾಗೂ ನಾಲ್ವರು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಸೆ.19ರಂದು ಎಂಸಿಸಿಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.ಮೇಯರ್ ಸ್ಥಾನ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಬಿಜೆಪಿಯಿಂದ ಮನೋಜ್ ಕುಮಾರ್ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅರ್ಹ ಪರಿಶಿಷ್ಟ ಜಾತಿ ಸದಸ್ಯರ ಕೊರತೆಯಿಂದಾಗಿ ಅವರ ಕಡೆಯಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಇದರಿಂದ ಮನೋಜ್ ಕುಮಾರ್ ಅವರು ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಪ್ರಾದೇಶಿಕ ಆಯುಕ್ತ ರಮೇಶ್ ಪ್ರಕಟಿಸಿದರು. ಉಪಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳಾದ ಭಾನುಮತಿ ಪಿ ಎಸ್ ಮತ್ತು ವನಿತಾ ಪ್ರಸಾದ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜೀನತ್ ಶಂಶುದ್ದೀನ್ ನಾಮಪತ್ರ ಸಲ್ಲಿಸಿದ್ದಾರೆ.ವನಿತಾ ಪ್ರಸಾದ್ ನಂತರ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡರು.…