Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಮೇ. 28 :ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾಗಿರುವ ಕೆ ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹುನಿರೀಕ್ಷಿತ ಸ್ಕೂಲ್ ಲೀಡರ್ ಕನ್ನಡ ಚಲನಚಿತ್ರವು ಮೇ 30ರಿಂದ ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ ಎಂದುಚಿತ್ರದ ನಿರ್ದೇಶಕ ರಜಾಕ್ ಪುತ್ತೂರು ಅವರು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಕೂಲ್ ಲೀಡರ್ ಚಿತ್ರವು ಶಾಲಾ ಚುನಾವಣೆಯನ್ನು ಆಧರಿಸಿದ ಕಥೆಯಾದುದರಿಂದ ಇಡೀ ಸಿನಿಮಾವನ್ನು ಕಟಪಾಡಿಯ ಒಂದೇ ಶಾಲೆಯಲಿ ಚಿತ್ರೀಕರಿಸಲಾಗಿದೆ.ಸುಮಾರು 25 ಶಾಲೆಯ 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚಿತ್ರದಲ್ಲಿ ಅಭಿನಯಿಸಿ ಅಭಿನಯಿಸಿದ್ದಾರೆ ಎಂದರು. ನಿರ್ಮಾಪಕರಾದ ಕೆ.ಸತ್ಯೇಂದ್ರ ಪೈ ಅವರು ಮಾತಾನಾಡಿ, ಪೆನ್ಸಿಲ್ ಬಾಕ್ಸ್ ಎಂಬ ಚಿತ್ರದ ನಿರ್ದೇಶಕರಾದ ರಝಾಕ್ ಪತ್ತೂರು ಇವರು ಸ್ಕೂಲ್ ಲೀಡರ್ ಚಿತ್ರವನ್ನು ಕಥೆ, ಚಿತ್ರ ಕಥೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ.ಚಿತ್ರದಲ್ಲಿ ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ದೀಪಕ್ ರೈ, ರಮೇಶ್ ಭಟ್ ನಟಿಸಿದ್ದಾರೆ ಎಂದು ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ನಿರ್ದೇಶಕ ರಝಾಕ್ ಪುತ್ತೂರು, ನಿರ್ಮಾಪಕ ಕೆ.ಸತ್ಯೇಂದ್ರ…
ಮಂಗಳೂರು, ಮೇ. 27 : ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಬಳಿ ನಡೆದ ಅಬ್ದುಲ್ ರಹಿಮಾನ್ ಎಂಬತನ ಹತ್ಯೆಯ ನಂತರ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ. ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 163ರಂತೆ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿದ್ದ ವರದಿಯನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಯವರು ಮೇ 27 ರಂದು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮೇ 27 ರಂದು ಸಂಜೆ 6.00 ಗಂಟೆಯಿಂದ ಮೇ 30 ರಂದು ಸಂಜೆ 6.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಮಂಗಳೂರು, ಮೇ. 27 ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಮಂಗಳೂರು ಬಂದ್‌ಗೆ ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧನದ ಸುದ್ದಿ ಹರಡುತ್ತಿದ್ದಂತೆ, ವಿವಿಧ ಸಂಘಟನೆಗಳ ಕಾರ್ಯಕರ್ತರು ಕದ್ರಿ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದರು. ಡಿಸಿಪಿ ರವಿಶಂಕರ್ ಪೊಲೀಸ್ ಠಾಣೆಗೆ ಭೇಟಿ ನೀಡಿ, ನಿಷೇಧಾಜ್ಞೆ ಜಾರಿಯಲ್ಲಿದ್ದ ಕಾರಣ, ಜನಸಮೂಹವನ್ನು ಠಾಣೆಯ ಆವರಣದಿಂದ ಚದುರಿಸಿದರು. ನಂತರ ಶರಣ್ ಪಂಪ್‌ವೆಲ್‌ನನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದರು.
ಮಂಗಳೂರು, ಮೇ. 27 : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಆಶ್ರಯದಲ್ಲಿ ಜೂ. 1ರಂದು ಭಾನುವಾರ ಅಡ್ಯಾರ್ ಗಾರ್ಡನ್‌ನಲ್ಲಿ “ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025′ ರಾಷ್ಟ್ರೀಯ ಕಲಾ ಸಮ್ಮೇಳನ ನಡೆಯಲಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ರಾಷ್ಟ್ರೀಯ ಕಲಾ ಸಮ್ಮೇಳನ ಬೆಳಗ್ಗೆ 9.30 ರಿಂದ ರಾತ್ರಿ 11ರವರೆಗೆ 9 ನಡೆಯಲಿದೆ. ಸ್ಪೀಕರ್ ಯು. ಟಿ. ಖಾದರ್ ಉದ್ಘಾ ಟಿಸುವರು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡುವರು. ಉದ್ಯಮಿ ಶಶಿಧರ ಬಿ. ಶೆಟ್ಟಿ ಅಧ್ಯಕ್ಷತೆ ವಹಿಸುವರು. ಬೆಳಗ್ಗೆ 11ಕ್ಕೆ ಡಾ ಎಂ. ಮೋಹನ ಆಳ್ವ ಅವರ ಉಪಸ್ಥಿತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ರಾಷ್ಟ್ರೀಯ ಕಲಾ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದರು. ಡಾ.ಆಳ್ವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ ಭಾರತದ 8 ಶಾಸ್ತ್ರೀಯ ಕಲೆಗಳ ಪ್ರದರ್ಶನ,…
ಉಡುಪಿ, ಮೇ. 26 : ಅಜ್ಜರಕಾಡಿನ ಮಹಿಳೆಯೊಬ್ಬರು ಚರ್ಚ್‌ನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಮೇ. 25 ರವಿವಾರ ನಡೆದಿದೆ. ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿ ನಿವಾಸಿ ಶಾಂತಿ (52) ಎಂದು ಗುರುತಿಸಲಾಗಿದೆ. ರವಿವಾರ ಶಾಂತಿ ಅವರು ಅಜ್ಜರಕಾಡಿನ ಚರ್ಚ್‌ನಲ್ಲಿ ಬೆಳಿಗ್ಗೆ ಪ್ರಾರ್ಥನೆ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತುಆಗಲೇ ಮೃತ ಹೊಂದಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ, ಮೇ 25: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಸೋಮೇಶ್ವರ ಗ್ರಾಮದ ಪಿಲಾರು ಅಂಬಿಸಾದಿ ನಿವಾಸಿ ಮನೋಜ್ ಗಟ್ಟಿ(54) ಎಂದು ಗುರುತಿಸಲಾಗಿದೆ. ಮನೋಜ್ ಅವರು ಶುಕ್ರವಾರ ರಾತ್ರಿ ಕೋಟೆಕಾರಿನ ಕೊಂಡಾಣ ಕ್ಷೇತ್ರದ ಕಡೆಯ ಬಂಡಿ ಉತ್ಸವಕ್ಕೆ ಬೈಕಲ್ಲಿ ತೆರಳಿ, ರಾತ್ರಿ ವಾಪಸ್ ಆಗುತ್ತಿದ್ದಾಗ ವೇಳೆ ಕೊಲ್ಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಂಗಳೂರು, ಮೇ 24: ಮೇ 2025:ಸ್ಟಾನ್ಲಿ ಬೂಟೀಕ್ ಮಂಗಳೂರಿನಲ್ಲಿ ತನ್ನ ಮೊದಲ ಶೋರೂಮ್ ಅನ್ನು VK ಗ್ರೂಪ್ ಜೊತೆಗೆ ಪಾಲುದಾರಿಕೆಯಲ್ಲಿ ಯೆಯ್ಯಾಡಿ ಶರ್ಬತ್‌ಕಟ್ಟೆಯಲ್ಲಿ ಭಾನುವಾರ ಪ್ರಾರಂಭಗೊಳ್ಳಲಿದೆ ಎಂದು ಸ್ಟಾನ್ಲಿ ಲೈಫ್‌ಸ್ಟೈಲ್ಸ್ನ ಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಸುನಿಲ್ ಸುರೇಶ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಸ್ಟಾನ್ಲಿ ಬೂಟೀಕ್ ಹೊಸ ಶೋರೂಮ್ ಮಂಗಳೂರಿನ ಮನೆಮಾಲೀಕರಿಗೆ ಅವಶ್ಯಕತೆಯುಳ್ಳ ಅಸಾಧಾರಣ ಶಾಪಿಂಗ್ ಅನುಭವವನ್ನು ನೀಡಲು ವಿನ್ಯಾಸಗೊಳಿಸಲಾದ ಸೋಫಾಗಳು, ರೆಕ್ಲೈನರ್‌ಗಳು, ಹಾಸಿಗೆಗಳು, ಹಾಸಿಗೆಗಳು, ಊಟದ ಟೇಬಲ್‌ಗಳು, ಆರ್ಮ್‌ಚೇರ್‌ಗಳು ಮತ್ತು ಪರಿಕರಗಳ ಸಂಗ್ರಹಿಸಲಾದ ಸಂಗ್ರಹವನ್ನು ಪ್ರದರ್ಶಿಸುತ್ತದೆ ಎಂದರು. ಸ್ಟಾನ್ಲಿ ಲೈಫ್‌ಸ್ಟೈಲ್ಸ್ ಅತ್ಯಾಧುನಿಕ ಸೌಂದರ್ಯವನ್ನು ಉನ್ನತ ಕರಕುಶಲತೆಯೊಂದಿಗೆ ಸಂಯೋಜಿಸುವ ತಲ್ಲೀನಗೊಳಿಸುವ ವಿನ್ಯಾಸ ಅನುಭವವನ್ನು ನೀಡುವ ಗುರಿಯನ್ನು ಹೊಂದಿದೆ. ಪ್ರತಿಯೊಂದು ಉತ್ಪನ್ನವು ಗುಣಮಟ್ಟ ಮತ್ತು ನಾವೀನ್ಯತೆಗೆ ಬ್ರ್ಯಾಂಡ್ನ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ, ಇದು ಉನ್ನತ ದರ್ಜೆಯ ಆಮದು ಮಾಡಿದ ನಿಜವಾದ ಚರ್ಮ ಮತ್ತು ಬೆಸ್ಪೋಕ್ ಗ್ರಾಹಕೀಕರಣ ಆಯ್ಕೆಗಳನ್ನು ಒಳಗೊಂಡಿದೆ ಮಧ್ಯಮ-ಪ್ರೀಮಿಯಂ ಮತ್ತು ಉನ್ನತ-ಮಟ್ಟದ ಪೀಠೋಪಕರಣ ವರ್ಗಗಳ ನಡುವಿನ…
ಮಂಗಳೂರು, ಮೇ 24: ಮೇ 22ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಮಾಜಿಕ ಮತ್ತು ಶಿಕ್ಷಣ ಕ್ಷೇತ್ರದ ಸಾಧಕ, ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು 2025ನೇ ಸಾಲಿನ ಆರ್ಯಭಟ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾಡು,ಹೊರನಾಡು ಮತ್ತು ವಿದೇಶಗಳಲ್ಲಿರುವ ವಿವಿಧ ಕ್ಷೇತ್ರಗಳ 74 ಮಂದಿ ಸಾಧಕರನ್ನು ಗುರುತಿಸಿ ಈ ಬಾರಿಯ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನೀಡಿದೆ. ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಬೊಂಡಾಲ ಸರಕಾರಿ ಶಾಲೆಯನ್ನು ದತ್ತು ಪಡೆದು ‘ದಿ.ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆ’ ಎಂಬ ಹೆಸರಿನಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಿದ್ದಲ್ಲದೆ ತಮ್ಮ ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಡಿರುವ ಸಮಾಜ ಸೇವೆ ಮತ್ತು ಯಕ್ಷಗಾನ ಸೇವೆಗಾಗಿ ಸಚ್ಚಿದಾನಂದ ಶೆಟ್ಟರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ.ಅಶೋಕ್ ಬಿ. ಹಿಂಚಿಗೇರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರ್ಯಭಟ…
ಬೆಂಗಳೂರು,ಮೇ.23 : ‘ಮಾರ್ಕೋ’ ಚಿತ್ರದ ನಿರ್ಮಾಪಕ ಶರೀಫ್ ಮೊಹಮ್ಮದ್ (ಕ್ಯೂಬ್ಸ್ ಎಂಟರ್‌ಟೈನ್‌ಮೆಂಟ್ಸ್) ಮತ್ತೊಂದು ಅದ್ದೂರಿ ಚಿತ್ರಕ್ಕೆ ಕೈ ಹಾಕಿದ್ದಾರೆ. ಆಕ್ಷನ್ ಥ್ರಿಲ್ಲರ್ ‘ಕಾಟ್ಟಾಲನ್’ ಚಿತ್ರದಲ್ಲಿ ಆಂಟೋನಿ ವರ್ಗೀಸ್ (ಪೆಪೆ) ನಾಯಕರಾಗಿದ್ದು, ಪಾಲ್ ಜಾರ್ಜ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಪ್ಯಾನ್-ಇಂಡಿಯನ್ ಮಟ್ಟದಲ್ಲಿ ತಯಾರಾಗುತ್ತಿದೆ. ಈ ಚಿತ್ರದ ಇನ್ನೊಂದು ಮುಖ್ಯ ಅಂಶವೆಂದರೆ, ‘ಕಾಂತಾರ 2’ ಚಿತ್ರಕ್ಕೆ ಸಂಗೀತ ನೀಡಿದ್ದ ಜನಪ್ರಿಯ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಶರೀಫ್ ಮೊಹಮ್ಮದ್ ಅವರ ಹೊಸ ಸಹಯೋಗ. ಅಜನೀಶ್ ಅವರ ಉತ್ತಮ ಸಂಗೀತವು ‘ಕಾಟ್ಟಾಲನ್’ ಚಿತ್ರದ ಪ್ರಭಾವವನ್ನು ಮತ್ತಷ್ಟು ಹೆಚ್ಚಿಸಲಿದೆ. ಚಿತ್ರದ ಮೊದಲ ನೋಟದ ಪೋಸ್ಟರ್ ಈಗಾಗಲೇ ಬಿಡುಗಡೆಗೊಂಡಿದೆ. ಪೋಸ್ಟರ್ ನಲ್ಲಿ ಮಳೆಯಲ್ಲಿ ಒದ್ದೆಯಾಗಿ, ಬಿದ್ದಿರುವ ಶವಗಳು ಮತ್ತು ಆನೆಯ ದಂತಗಳ ನಡುವೆ ನಿಂತಿರುವ ಪೆಪೆ ಕಾಣಬಹುದು.’ಜೈಲರ್’, ‘ಲಿಯೋ’, ‘ಜವಾನ್’ ಮತ್ತು ‘ಕೂಲಿ’ ಚಿತ್ರಗಳ ಫಾಂಟ್‌ಗಳನ್ನು ವಿನ್ಯಾಸಗೊಳಿಸಿದ ಐಡೆಂಟ್ ಲ್ಯಾಬ್ಸ್, ‘ಕಾಟ್ಟಾಲನ್’ ಚಿತ್ರದ ಶೀರ್ಷಿಕೆಯ ವಿನ್ಯಾಸವನ್ನು ಮಾಡಿದ್ದಾರೆ. ಕೊಡಲಿಗಳು ಮತ್ತು ದಂತಗಳನ್ನು ಬಳಸಿ ರಚಿಸಲಾದ ಈ ಶೀರ್ಷಿಕೆ,…
ಮಂಗಳೂರು, ಮೇ 22 : ಶ್ರೀ ಕಲ್ಲುರ್ಟಿ ದೈವಸ್ಥಾನ ಚೆಂಡೆ ಮತ್ತು ಪುಳಿಂಚ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ಯಕ್ಷಗಾನದ ನವರಸ ನಾಯಕ ದಿವಂಗತ ಪುಳಿಂಚ ರಾಮಯ್ಯ ಶೆಟ್ಟಿಯವರ ಸರಣಾರ್ಥ ಪಂಚಮ ತ್ರೈವಾರ್ಷಿಕ ಪುಳಿಂಚ ಪ್ರಶಸ್ತಿ ಪ್ರದಾನ ಸಮಾರಂಭ ಮೇ 24ರಂದು ಬಂಟ್ವಾಳ ತಾಲೂಕು ಬಾಳ್ತಿಲದ ಶ್ರೀ ಕಲ್ಲುರ್ಟಿ ದೈವಸ್ಥಾನ ಚೆಂಡೆಯಲ್ಲಿ ಜರಗಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶ್ರೀಧರ್ ಶೆಟ್ಟಿ ಪುಳಿಂಚ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು , ಸಮಾರಂಭದಲ್ಲಿ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದರಾದ ಬೋಳಾರ ಸುಬ್ಬಯ್ಯ ಶೆಟ್ಟಿ ಸಂಜಯ ಕುಮಾರ್ ಶೆಟ್ಟಿಗೋಣಿಬೀಡು ಮತ್ತು ಮಿಜಾರು ತಿಮ್ಮಪ್ಪ ಅವರು 2023-25ನೇ ಸಾಲಿನ ಪುಳಿಂಚ ಪ್ರಶಸ್ತಿಯನ್ನು ಸ್ವೀಕರಿಸುವರು. ಖ್ಯಾತ ಹಾಸ್ಯಗಾರ ದಿ| ಬಂಟ್ವಾಳ ಜಯರಾಮ ಆಚಾರ್ಯರಿಗೆ ಮರಣೋತ್ತರ ಪ್ರಶಸ್ತಿಯನ್ನು ನೀಡಲಾಗುವುದು ಎಂದರು. ಪುತ್ತೂರು ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ…












