Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಮೇ 16 : ಫಳ್ನೀರ್ ನ ಲುಲು ಸೆಂಟರ್‌ನಲ್ಲಿರುವ ದಾರುಲ್ ಇಲ್ಮ್ ಮದ್ರಸ ತನ್ನ 20ನೇ ವರ್ಷವನ್ನು ಆಚರಿಸುವ ಸಂದರ್ಭದಲ್ಲಿ ಅದರ ಹಳೆಯ ಕಟ್ಟಡವನ್ನು ನವೀಕರಿಸಿ, ಮೇ 17 ರಂದು ಸಂಜೆ 4.30ಕ್ಕೆ ನವೀಕೃತ ಕಟ್ಟಡದ ಉದ್ಘಾಟನೆ ನಡೆಯಲಿದೆ ಎಂದು ದಾರುಲ್ ಇಲ್ಡ್ ಸ್ಥಾಪಕ ರಫೀಉದ್ದೀನ್ ಕುದ್ರೋಳಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುದ್ರೋಳಿ ಜಾಮಿಯ ಮಸೀದಿ ಖಾಝಿ ಮುಷ್ಠಿ ಮುತಾಹ ಹುಸೈನ್ ಕಾಸಿಮಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ಸಿ.ಪಿ. ಹಬೀಬ್ ರಹ್ಮಾನ್, ಎಸ್.ಎಂ. ರಶೀದ್, ಅಬ್ದುಸ್ಸಲಾಮ್ ಪುತ್ತಿಗೆ, ಅಬ್ದುಲ್ ಖಾದರ್ ಬಾವ, ಹೈದರ್ ಪರ್ತಿಪ್ಪಾಡಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಧ್ಯಾಪಕ ಮುಹಮ್ಮದ್ ಸೈಫುದ್ದೀನ್, ಶೇಖ್ ಅಹ್ಮದ್, ಮುಹಮ್ಮದ್ ಆಸಿಫ್, ಅಬೂಬಕರ್, ಆರ್ಶ್‌ಲಾನ್ ಉಪಸ್ಥಿತರಿದ್ದರು.
ಮಂಗಳೂರು, ಮೇ. 16 :ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗೊಂದು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆ ಉಂಟಾಗಿ ನೀರು ಒಳಗಡೆ ನುಗ್ಗಿ ಹಡಗು ಮುಳುಗಿದೆ. ಆರು ಮಂದಿ ಭಾರತೀಯ ಸಿಬ್ಬಂದಿಗಳು ಹಡಗಿನಲ್ಲಿ ಪ್ರಯಾಣಿಸುತ್ತಿದ್ದರು. ತಾಂತ್ರಿಕ ಸಮಸ್ಯೆ ಉಂಟಾಗಿ ನೀರು ಒಳಗಡೆ ನುಗ್ಗಿದ ವೇಳೆ ಎಲ್ಲಾಸಿಬ್ಬಂದಿ ಹಡಗಿನಿಂದ ಸಣ್ಣ ಡಿಂಗಿ ಬೋಟಿನ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ.ಭಾರತೀಯ ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ನ ‘ವಿಕ್ರಂ’ ಶಿಪ್ ನಲ್ಲಿ ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಉಡುಪಿ, ಮೇ. 16 : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು. ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ನಾಮಫಲಕವನ್ನು ಅನಾವರಣಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಪ್ರತಿಯೊಂದು ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿರುತ್ತಾರೆ. ಅವರು ಕಾಲಕಾಲಕ್ಕೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡುವುದು ಅತೀ ಅಗತ್ಯವಾಗಿದೆ. ಅದೇ ರೀತಿ ಪ್ರಥಮ ಚಿಕಿತ್ಸೆಯ ಕುರಿತು ಕೂಡ ಪತ್ರಕರ್ತರಿಗೆ ತರಬೇತಿ ನೀಡುವುದು ಮುಖ್ಯ. ಇದಕ್ಕೆಲ್ಲ ನಮ್ಮ ಸಂಸ್ಥೆಯಿಂದ ಸಹಕಾರ ನೀಡ ಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆಯ ವತಿಯಿಂದ ಭಾರತೀಯ ಸೇನೆಗೆ ನೀಡಲಾದ 55,555ರೂ. ಮೊತ್ತದ ದೇಣಿಗೆಯ ಚೆಕ್‌ನ್ನು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಅವರ ಮೂಲಕ ಉಡುಪಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ,…
ಉಡುಪಿ, ಮೇ. 15 : ನೂತನವಾಗಿ ನಿರ್ಮಿಸಲಾದ ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಶಿರಿಬೀಡುವಿನ ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಗುರವಾರ ಉದ್ಘಾಟನೆಗೊಂಡಿತು. ಬಾರ್ಕೂರು ಮಹಾ ಸಂಸ್ಥಾನದ ಪೀಠಾಪತಿ ಶ್ರೀ ವಿದ್ಯಾವಾಚಸ್ಪತಿ ಡಾ| ವಿಶ್ವಸಂತೋಷ ಭಾರತೀ ಗುರೂಜಿ ಅವರು ರಿಬ್ಬನ್ ತುಂಡರಿಸುವ ಮೂಲಕ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಅವರು, ಮನೋಹರ್ ಎಸ್. ಶೆಟ್ಟಿ ನೇತೃತ್ವದ ಸಾಯಿರಾಧಾ ಗ್ರೂಪ್ ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿದ್ದು, ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಾ ಉತ್ತಮ ಸಂಸ್ಥೆಯಾಗಿ ಬೆಳೆದಿದೆ. ಸಾಯಿರಾಧಾ ಗ್ರೂಪ್ನ ಕಾರ್ಪೊರೇಟ್ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆಯನ್ನು ನೀಡಲಿ ಎಂದು ಶುಭಹಾರೈಸಿದರು. ಬಳಿಕ ಟಿ ಎಂ ಎ ಪೈ ಫೌಂಡೆಶನ್ ನ ಅಧ್ಯಕ್ಷರಾದ ಟಿ ಅಶೋಕ್ ಪೈ ಮಾತನಾಡಿ, ಮನೋಹರ ಶೆಟ್ಟಿಯವರು ಸಮಾಜದಲ್ಲಿ ಸಾಯಿರಾಧ ಎನ್ನುವ ಸಂಸ್ಥೆಯನ್ನು ನಿರ್ಮಿಸಿ ಹಲವಾರು ಜನರಿಗೆ ಉದ್ಯೋಗವನ್ನು ನೀಡಿದವರಾಗಿದ್ದಾರೆ. ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಾ…
ಮಂಗಳೂರು, ಮೇ. 15: ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ರಾಷ್ಟ್ರೀಯ ಸಮಿತಿಯಲ್ಲಿ ಬೇರೆ ಬೇರೆ ರಾಜ್ಯಗಳ 4 ಮಂದಿ ಸ್ಪೀಕರ್ ಮಾತ್ರ ಇರಲಿದ್ದಾರೆ. ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾದ್ದಾರೆ. ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ರಾಷ್ಟ್ರೀಯ ಸಮಿತಿಯ ಸದಸ್ಯರಾಗಿದ್ದಾರೆ.
ಉಳ್ಳಾಲ,ಮೇ.14 :: ಉಳ್ಳಾಲ ದರ್ಗಾ ಉರೂಸ್ ಸಮಾರಂಭಕ್ಕೆ ರಾಜ್ಯ ಸರ್ಕಾರವು ವಿಧಾನಸಭಾ ಸ್ಪೀಕರ್ ಅವರ ಬೇಡಿಕೆಯನ್ನು ಪುರಸ್ಕರಿಸಿ ಮೂರು ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಅವರು ಖುತ್ ಬುಝಮಾನ್ ಹಝತ್ ಅಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ತಂಬಳ್ ಅವರ ಹೆಸರಿನಲ್ಲಿ ನಡೆಯುವ ಉರೂಸ್ ಕಾರ್ಯಕ್ರಮ ಪ್ರಯುಕ್ತ ಮೇ.10, ಶನಿವಾರ ಭೇಟಿ ನೀಡಿ ದರ್ಗಾ ಝಿಯಾರತ್ ನಡೆಸಿದ ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಲಕ್ಷಾಂತರ ಜನರು ಉಳ್ಳಾಲ ದರ್ಗಾ ಉರೂಸ್ ನಲ್ಲಿ ಗೆ ಆಗಮಿಸುತ್ತಾರೆ. ಇಲ್ಲಿನ ಉರೂಸ್ ನ ಕೊನೆಯ ದಿನ ಭಕ್ತಾದಿಗಳಿಗೆ ನೀಡಲಾಗುವ ಅನ್ನದಾನ ವ್ಯವಸ್ಥೆಗೆ 50 ಕುರಿಗಳನ್ನು ನಾನು ದಾನ ನೀಡುತ್ತೇನೆ ಎಂದು ಅವರು ಹೇಳಿದರು. ಸಂಸ್ಥೆಗೆ ಹಣ ಕೊಡುವುದು ಮುಖ್ಯ ಅಲ್ಲ. ಸಂಸ್ಥೆಯು ಸಾಮಾಜಿಕ, ಶೈಕ್ಷಣಿಕವಾಗಿ ಎಷ್ಟು ಜನರನ್ನು ಪರಿವರ್ತನೆ ಮಾಡುತ್ತದೆ ಎಂಬುದು ಮುಖ್ಯ ಆಗಿರುತ್ತದೆ. ಈ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ದರ್ಗಾ ಸಮಿತಿ ನೀಡಬೇಕು…
ಮಂಗಳೂರು,ಮೇ.14 : ಆಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮ್ಚೆ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ನಿರ್ಮಿಸಿರುವ, ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದ ಲೈಟ್ ಹೌಸ್ ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿಯಲ್ಲಿ ನಡೆಸಲಾಗಿದ್ದು, ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ. ಲೈಟ್ ಹೌಸ್ ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದೆ. ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ ಎಂದರು. ಶೋಭರಾಜ್ ಪಾವೂರು, ಪ್ರಕಾಶ್ ತೂಮಿನಾಡು, ಮಾನಸಿ ಸುಧೀರ್, ದೀಪಕ್ ರೈ ಪಾಣಾಜೆ, ಪೃಥ್ವಿ ಅಂಬರ್, ರಾಹುಲ್ ಅಮೀನ್, ಶೈಲಶ್ರೀ ಮುಲ್ಕಿ ಶೀತಲ್ ನಾಯಕ್, ಅಚಲ್ ಜಿ ಬಂಗೇರ, ಅಪೂರ್ವ ಮಾಳ, ಚಂದ್ರಕಲಾ ರಾವ್, ತಿಮ್ಮಪ್ಪ ಕುಲಾಲ್, ನಮಿತಾ ಕಿರಣ್…
ಉಡುಪಿ, ಮೇ. 13 : ನಾಯಿ ಅಡ್ಡ ಬಂದು ಬೈಕ್ ರಸ್ತೆ ಬದಿಯ ಮೈಲಿಗಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಮೃತರನ್ನು ತೆಂಕ ಎರ್ಮಾಳು ನಿವಾಸಿ ಅಬ್ದುಲ್ ಅಜೀಜ್ ಅವರ ಪುತ್ರ ಶೇಖ್ ಅಬ್ದುಲ್ ಸೈಫಾನ್ ಎಂದು ಗುರುತಿಸಲಾಗಿದೆ. ತಂದೆ ಮತ್ತು ಮಗ ಪಡುಬಿದ್ರಿಯಲ್ಲಿ ಪುಸ್ತಕಗಳನ್ನು ಖರೀದಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಇದ್ದಕ್ಕಿದ್ದಂತೆ ನಾಯಿಯೊಂದು ರಸ್ತೆಗೆ ಅಡ್ಡ ಬಂದ ಕಾರಣ ಬೈಕ್ ನಿಯಂತ್ರಣ ತಪ್ಪಿ ಹೆದ್ದಾರಿಯ ಬದಿಯಲ್ಲಿದ್ದ ಮೈಲಿಗಲ್ಲಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಬಿದ್ದ ಪರಿಣಾಮ ಸೈಫಾನ್ ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು, ಮೇ. 12 : ವಿವಾಹ ಸಮಾರಂಭದ ವೇಳೆ ದೇವಾಲಯದ ಕೆರೆಯಲ್ಲಿ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿದ ಘಟನೆ ನಂದಿಕೂರಿನಲ್ಲಿ ಮೇ 11ರಂದು ನಡೆದಿದೆ. ಮೃತಮಗುವನ್ನು ಕಾಪು ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ ಮತ್ತು ಸೌಮ್ಯ ಅವರ ಪುತ್ರ ವಾಸುದೇವ (4) ಎಂದು ಗುರುತಿಸಲಾಗಿದೆ. ಸತ್ಯನಾರಾಯಣ ಅವರ ಕುಟುಂಬವು ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿವಾಹಕ್ಕೆ ಹಾಜರಾಗಿತ್ತು. ಮಧ್ಯಾಹ್ನ ಮಗುವಿಗೆ ಊಟ ಮಾಡಿಸಿದ ನಂತರ ಸೌಮ್ಯ ಅವರು ಕೈ ತೊಳೆಯಲು ಹೊರಗೆ ಹೋಗಿ ಹಿಂತಿರುಗಿದಾಗ, ವಾಸುದೇವ ಕಾಣೆಯಾಗಿದ್ದ. ತಕ್ಷಣ ಸಭಾಂಗಣದಲ್ಲಿದ್ದ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಹುಡುಕಾಟ ನಡೆಸಿದಾಗ ವಾಸುದೇವನ ದೇಹವು ಪಕ್ಕದಲ್ಲಿದ್ದ ದೇವಾಲಯದ ಕೆರೆಯಲ್ಲಿ ತೇಲುತ್ತಿರುವುದು ಕಂಡುಬಂದಿತು.ಮಗುವನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು,ಮೇ.12 : ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಸಾಲಿನ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದ ಸಭಾ ಭವನದಲ್ಲಿ ಮೇ 11ರಂದು ಆದಿತ್ಯವಾರ ನಡೆಯಿತು. ನೂತನ ಕೇಂದ್ರೀಯ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಸರ್ವಾನುಮತದಿಂದ ಆಯ್ಕೆಯಾದರು. ಕೇಂದ್ರೀಯ ಆದ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರು ಚುನಾವಣೆಯ ಮೊದಲು ನೂತನ ಪೋಪ್ ಲಿಯೋ 14ರವರ ಚುನಾವಣೆಯನ್ನು ಸ್ಮರಿಸಿ ಅದೇ ರೀತಿ ಪ್ರಾರ್ಥನೆಯ ಮೂಲಕ ಚುನಾವಣೆಯನ್ನು ನಡೆಸಲು ಮಾರ್ಗದರ್ಶನ ನೀಡೀದರು. ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ, ಪ್ರಥಮ ಉಪಾಧ್ಯಕ್ಷ ಲೋರೆನ್ಸ್ ಡಿಸೋಜ ಸುರತ್ಕಲ್, ದ್ವಿತೀಯ ಉಪಾಧ್ಯಕ್ಷ ಲಿಯೋ ರೊಡ್ರಿಗಸ್ ಮಡಂತ್ಯಾರ್, ಪ್ರಧಾನ ಕಾರ್ಯದರ್ಶಿ ವಿಲ್ಮಾ ಮೊಂತೇರೊ ದೇರೆಬೈಲ್, ಸಹ ಕಾರ್ಯದರ್ಶಿ ಆಲ್ವಿನ್ ರೊಡ್ರಿಗಸ್ ಮೂಡಬಿದಿರೆ ಅಲಂಗಾರ್, ಖಜಾಂಚಿ ಫ್ರಾನ್ಸಿಸ್ ಮೊಂತೇರೊ ಮರಿಯಾಶ್ರಮ್ ತಲಪಾಡಿ, ಸಹ ಖಜಾಂಚಿ ಲವೀನಾ ಗ್ರೆಟ್ಟಾ ಡಿಸೋಜ ರಾಣಿಪುರ ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾದರು. ಮಾಜಿ ಅಧ್ಯಕ್ಷ ಲ್ಯಾನ್ಸಿ ಡಿಕುನ್ಹಾ ಚುನಾವಣಾಧಿಕಾರಿಯಾಗಿ ಮತ್ತು…











