Subscribe to Updates
Get the latest creative news from FooBar about art, design and business.
Author: admin
ಉರ್ವ, ಏ.22 : ಉರ್ವ ಬೋಳೂರು ಶ್ರೀ ಕೊರಗಜ್ಜನ ಕ್ಷೇತ್ರ ದಲ್ಲಿ 20ನೇ ವಾರ್ಷಿಕ ನೇಮೋತ್ಸವವು ತಾ. 16 -04-2026 ನೇ ಗುರುವಾರದಿಂದ 19-04-2026 ರವಿವಾರದ ತನಕ ವಿಜ್ರಂಭಣೆಯಿಂದ ಜರಗಿತು. ಏ. 16,ಗುರುವಾರ ಸಂಜೆ 6.00ಕ್ಕೆಉರ್ವ ಬೋಳೂರು ಕೊರಗಜ್ಜ ಕ್ಷೇತ್ರದ ಪ್ರಧಾನ ದೈವ ಸಾರಲ ಪಟ್ಟದ ಕೊರಗಜ್ಜನಿಗೆ ನೂತನ ಬಂಗಾರದ ಮುಟ್ಟಾಲೆ ಸಮರ್ಪ ಣಾ ಕಾರ್ಯಕ್ರಮ ನಡೆಯಿತು. ನೂತನ ಬಂಗಾರದ ಮುಟ್ಟಾಲೆಯನ್ನು ಸಾವಿರ ಸೀಮೆಯ ಒಡೆಯ ಕದ್ರಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂಜೆಯನ್ನು ನೆರವೇರಿಸಿ ವಿಜೃಂಭಣೆಯ ಮೆರವಣಿಗೆಯು ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣಗುರು ವೃತದಿಂದ ಪ್ರಾರಂಭವಾಗಿ ಉರ್ವ ಶ್ರೀ ಮಾಲಯಮ್ಮ ವೃತದಿಂದ ಶ್ರೀ ಮಾರಿಯಮ್ಮ ದೇವಸ್ಥಾನದ ಬಳಿಯಿಂದ ಎಡಕ್ಕೆ ತಿರುಗಿ ಉರ್ವ ಕ್ಯಾಶು ಫ್ಯಾಕ್ಟಾರಿಯಿಂದಾಗಿ ಕ್ಷೇತ್ರಕ್ಕೆ ಒಪ್ಪಿಸಲಾಯಿತು. ಏ. 17ರಂದು ಶುಕ್ರವಾರ ಪ್ರಾರ್ಥನೆ, ಪುಣ್ಯಹ, ಗಣಹೋಮ, ನವಕ ಕಲಶ, ಪರ್ವ ಪೂಜೆ, ತೋರಣ ಮುಹೂರ್ತ ವೇ। ಮೂ। ಶ್ರೀ. ಕೆ. ಪುರುಷೋತ್ತಮ ಭಟ್ (ಶ್ರೀ ವೆಂಕಟರಮಣ ದೇವಸ್ಥಾನ, ಬೊಕ್ಕಪಟ್ಟ ಮಂಗಳೂರು) ಇವರ…
ಮೈಸೂರು, ಏ. 21 : ಮೈಸೂರಿನ ಬೋಗಾದಿಯ ಧ್ಯಾನ ಸಾಧನದಲ್ಲಿ ಎಪ್ರಿಲ್ 17, ಶುಕ್ರವಾರ ನಡೆದ 16ನೇ ಪ್ರೊವಿನ್ಶಿಯಲ್ ಚಾಪ್ಟರ್ (ಮಹಾಧಿವೇಶನ) ನಲ್ಲಿ ಡಿಸ್ಕಾಲ್ಸ್ಡ್ ಕಾರ್ಮೆಲೈಟ್ಸ್ ಸಭೆಯ ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ವಂದನೀಯ ರೆ| ಡಾ. ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ ಅವರು ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂದನೀಯ ರೆ| ಸಿಲ್ವೆಸ್ಟರ್ ಡಿ’ಸೋಜಾ, ಒಸಿಡಿ ಅವರ ಉತ್ತರಾಧಿಕಾರಿಯಾಗಿ ಇವರು ಅಧಿಕಾರ ವಹಿಸಿಕೊಂಡಿದ್ದಾರೆ. ರೆ| ಜಾನ್ ಫ್ರಾನ್ಸಿಸ್ ಸಿಕ್ವೇರಾ ಅವರು ಮಂಗಳೂರು ಧರ್ಮಪ್ರಾಂತ್ಯದ ಅಗ್ರಾರ್ ಧರ್ಮ ಪ್ರಾಂತ್ಯದವರು. ಪ್ರಖ್ಯಾತ ಶಿಕ್ಷಣತಜ್ಞ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಾಗಿರುವ ಇವರು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (ಎಂ.ಎ) ಪಡೆದಿದ್ದಾರೆ. ಆಸ್ಟ್ರಿಯಾದ ವಿಯೆನ್ನಾ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಎರಡನೇ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಅಲ್ಲಿಯೇ ಜರ್ಮನ್ ಭಾಷಾಶಾಸ್ತ್ರದಲ್ಲೂ (German Linguistics) ಅಧ್ಯಯನ ನಡೆಸಿದ್ದಾರೆ. ರೋಮ್ನ ಪಾಂಟಿಫಿಕಲ್ ಯೂನಿವರ್ಸಿಟಿ ಆಫ್ ಸೇಂಟ್ ಥಾಮಸ್ ಅಕ್ವಿನಾಸ್ (ಆಂಜೆಲಿಕಮ್)…
ಟೋಕಿಯೊ, ಏ. 20 : ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸೋಮವಾರ ಸಂಭವಿಸಿದೆ ಎಂದು ಜಪಾನ್ ನ ಹವಾಮಾನ ಸಂಸ್ಥೆ (ಜೆಎಂಎ) ಮಾಹಿತಿ ನೀಡಿದೆ. 3 ಮೀಟರ್ ಎತ್ತರದ ಅಲೆಗಳ ಸುನಾಮಿ ಮುನ್ನೆಚ್ಚರಿಕೆ ನೀಡಿದೆ. ಉತ್ತರ ಇವಾಟೆ ಪ್ರಾಂತ್ಯದ ಪೆಸಿಫಿಕ್ ಸಮುದ್ರದಲ್ಲಿ ಸಂಜೆ 4:53 ಕ್ಕೆ ಭೂಕಂಪ ಸಂಭವಿಸಿದೆ. ನೂರಾರು ಕಿಲೋಮೀಟರ್ ದೂರದಲ್ಲಿರುವ ಟೋಕಿಯೊದವರೆಗಿನ ದೊಡ್ಡ ಕಟ್ಟಡಗಳು ಕಂಪಿಸುವಷ್ಟು ಭೂಕಂಪ ಪ್ರಬಲವಾಗಿತ್ತು ಎನ್ನಲಾಗಿದೆ. ಆರಂಭಿಕ ಸುನಾಮಿ ಅಲೆಗಳು ಉತ್ತರ ಕರಾವಳಿಯನ್ನು ತಕ್ಷಣವೇ ತಲುಪಬಹುದು. ಈ ಸುನಾಮಿ ಅಲೆಗಳಿಂದ ಹಾನಿಯಾಗುವ ಸಾಧ್ಯತೆಯಿದೆ. ಜನರು ಈ ಕೂಡಲೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಹವಾಮಾನ ಸಂಸ್ಥೆ ತಿಳಿಸಿದೆ.
ಪುತ್ತೂರು, ಏ. 19 : ಡಿವೈಡರ್‌ಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪುತ್ತೂರು ಹೊರವಲಯದ ಪಡೀಲ್‌ನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಬೆಳ್ಳಿಪ್ಪಾಡಿ ಗ್ರಾಮದ ಕೊಡಿನೀರು ಬಳಿ ನಿವಾಸಿ ಧನರಾಜ್ ಎಂದು ಗುರುತಿಸಲಾಗಿದೆ ಪುತ್ತೂರು ಕಡೆಯಿಂದ ಬೆಳ್ಳಿಪ್ಪಾಡಿಯ ತನ್ನ ಮನೆಯ ಕಡೆಗೆ ಧನರಾಜ್ ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಪಡೀಲು ಎಂಬಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಡಿವೈಡರ್‌ಗೆ ಅಪ್ಪಳಿಸಿ ಅಲ್ಲೇ ಇದ್ದ ಲೈಟ್ ಕಂಬಕ್ಕೆ ಬಡಿದು ಇನ್ನೊಂದು ಬದಿಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕಿನ ಸವಾರ ಮತ್ತು ಸಹಸವಾರನಿಗೆ ಗಾಯಗಳಾಗಿದ್ದು ಇಬ್ಬರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು,ಏ. 18 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 52 ನೇ ಕಣ್ಣೂರು ವಾರ್ಡಿನ ಪೇರ್ಲ ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ರಸ್ತೆ ಕಾಮಗಾರಿಯು ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿಯತನಕ ಇಲ್ಲಿರುವ ದೇವಸ್ಥಾನದವರೆಗೆ ನಾಲ್ಕು ಚಕ್ರದ ವಾಹನಗಳು ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿಯಿದ್ದ ಕಾರಣ ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ನಂತರದ ದಿನಗಳಲ್ಲಿ ಇಲ್ಲಿಗೊಂದು ಸುಸಜ್ಜಿತ ರಸ್ತೆ ನಿರ್ಮಾಣ ಮಾಡಲೇಬೇಕೆಂಬ ನಮ್ಮೆಲ್ಲರ ಆಶಯಕ್ಕೆ ಆಸರೆಯಾಗಿ ನಿಂತವರು ಇಲ್ಲಿನ ಜಾಗದ ಮಾಲೀಕರಾದ ಅಶೋಕ್ ರವರು. ಸ್ಥಳೀಯರ ಸಹಿತ ನಾವೆಲ್ಲರೂ ಮನವಿ ಮಾಡಿದ್ದರಿಂದಾಗಿ ಅವರು ಉಚಿತವಾಗಿ ಜಾಗ ಬಿಟ್ಟು ಕೊಟ್ಟ ಕಾರಣ ಇಂದು ಇಲ್ಲಿ ರಸ್ತೆ ನಿರ್ಮಾಣ ಸಾಧ್ಯವಾಗುತ್ತಿದೆ. ಅವರಿಗೆ ಸರ್ವರ ಪರವಾಗಿ ವಿಶೇಷ ಧನ್ಯವಾದಗಳು ಎಂದರು. ಈ ಸಂದರ್ಭದಲ್ಲಿ ನಿಕಟಪೂರ್ವ ಮನಪಾ ಸದಸ್ಯರಾದ ಚಂದ್ರಾವತಿ ವಿಶ್ವನಾಥ್, ಬಿಜೆಪಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ವಿಶ್ವನಾಥ್, ಕೇಶವ, ಗಣೇಶ್ ಶೆಟ್ಟಿ, ವಸಂತ ಶೆಟ್ಟಿ,…
ಯಾದಗಿರಿ, ಏ. 17 : ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಸಮೀಪ ಕಾರು ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿದೆ.ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಆರು ಮಂದಿ ಸಜೀವ ದಹನಗೊಂಡಿದ್ದಾರೆ . ವರದಿಯ ಪ್ರಕಾರ, ಕಾರು ಯಾದಗಿರಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದು, ಬಸ್ ಬೆಂಗಳೂರು ಕಡೆಯಿಂದ ಕಲಬುರಗಿ ಕಡೆಗೆ ಬರುತ್ತಿದ್ದಸಂದರ್ಭ ದೇವಾಪುರ ಎಂಬಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಹಾಗೂ ಬಸ್ಸಿಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಎಂದು ವರದಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಘಟನೆಯ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಸುರಪುರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು,ಏ. 16 : ನಗರದ ಪದವು ಕುಲಶೇಖರದಲ್ಲಿ ಹಿಂದು ಯುವಸೇನೆ ಸಂಚಾಲಿತ ಧಾರ್ಮಿಕ ಶ್ರದ್ಧಾಕೇಂದ್ರವಾದ ಶ್ರೀ ಶನೈಶ್ವರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಏಪ್ರಿಲ್ 18 ರಿಂದ 24 ರವರೆಗೆ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ದೇವಾಲಯದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ವೇದಮೂರ್ತಿ ಎಂ.ಗಿರಿಧರ ಭಟ್ ಮತ್ತು ವೇದಮೂರ್ತಿ ಡಾ. ಸತ್ಯಕೃಷ್ಣ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ಏಪ್ರಿಲ್ 18 ರಂದು ಶನಿವಾರ ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಗಳು ಆರಂಭವಾಗಲಿದೆ. 108 ಕಾಯಿ ಗಣಯಾಗ, ರುದ್ರಯಾಗ ಹಾಗೂ ಏಪ್ರಿಲ್ 22 ರವರೆಗೆ ಲಕ್ಷ್ಮೀನಾರಾಯಣ ಪ್ರಧಾನ ಹೋಮ ನಡೆಯಲಿದ್ದು, ಏಪ್ರಿಲ್ 23 ರಂದು ಗಣಪತಿ, ದುರ್ಗಾ, ನವಗ್ರಹ ಸಹಿತ ಶ್ರೀ ಶನೈಶ್ವರ ದೇವರ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ನೆರವೇರಲಿದೆ. ಎಪ್ರಿಲ್ 24 ರಂದು ಚಂಡಿಕಾಯಾಗ ಮತ್ತು ಸಮಗ್ರ…
ಮಂಗಳೂರು,ಏ. 15 : ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಆಚರಿಸಿತು. ಬೆಂದೂರು ಕಾನ್ಫರೆನ್ಸ್‌ಗೆ ಸೇರಿದ ಪ್ರೀತಾ ಲೋಬೊ ಅವರಿಗೆ ಆಧ್ಯಾತ್ಮಿಕ ಸಲಹೆಗಾರರಾದ ರೆ. ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಆಧ್ಯಾತ್ಮಿಕ ಸಲಹೆಗಾರ ರೆ. ಫ್ರಾನ್ಸಿಸ್ ಡಿಸೋಜಾ ಮತ್ತು ಬೆಂದೂರು ಚರ್ಚ್ನ ಧರ್ಮಗುರು ರೆ. ವಾಲ್ಟರ್ ಡಿಸೋಜಾ ಉಪಸ್ಥಿತರಿದ್ದರು. ನಿರ್ಗಮಿತ ಅಧ್ಯಕ್ಷರಾದ ಬ್ರದರ್ ಜ್ಯೊ ಕುವೆಲ್ಲೊ ಅವರು ತಮ್ಮ ಆರು ವರ್ಷಗಳ ಅಧಿಕಾರಾವಧಿಯಲ್ಲಿ ಬೆಂಬಲ ಮತ್ತು ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಅಲ್ಲದೆ, ನೂತನ ಅಧ್ಯಕ್ಷರಿಗೆ ಯಶಸ್ಸನ್ನು ಹಾರೈಸಿದ ಅವರು, ತಮ್ಮ ಸಂಪೂರ್ಣ ಬೆಂಬಲದ ಭರವಸೆ ನೀಡಿದರು. ನೂತನ ಅಧ್ಯಕ್ಷರು ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದ ಅರ್ಪಿಸಿದರು ಮತ್ತು ಎಲ್ಲಾ ಸದಸ್ಯರ ಸಹಕಾರ ಹಾಗೂ ಬೆಂಬಲವನ್ನು…
ಮಂಗಳೂರು,ಏ. 14 : ಮಂಗಳೂರಿನ ಪುರಭವನದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ರವಿವಾರ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ ಸವಣೂರು ಅವರು ದೀಪ ಬೆಳಗಿಸಿ ಹಾಗೂ ಕಳಸದಲ್ಲಿದ್ದ ತೆಂಗಿನ ಸಿರಿಯನ್ನು ಅರಳಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದ್ದರೂ, ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಸಕ್ತಿ ತೋರುತ್ತಿಲ್ಲ. ಸಮುದಾಯದ ವಿದ್ಯಾರ್ಥಿಗಳು ಇಂತಹ ಸ್ಪರ್ಧಾತ್ಮಕ ಪರೀಕ್ಷೆಯ ಕಡೆಗೆ ಆಸಕ್ತಿ ವಹಿಸುವುದು ಮುಖ್ಯ ಎಂದು ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರಾದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಸವಣೂರು ಹೇಳಿದರು. ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾವೇಶದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಡಾ. ಕೊಡಾಣ್ ನಾಗಪ್ಪ ಆಳ್ವ ಮತ್ತು ಶ್ರೀಮತಿ…
ಬಂಟ್ವಾಳ, ಎ.14 : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಶನಿವಾರ ಸಂಜೆ ಮಹಾರಥೋತ್ಸವ ನೆರವೇರಿತು. ರಥೋತ್ಸವದ ದಿನ ಬೆಳಗ್ಗೆ ದೇವರಿಗೆ ಪ್ರಾರ್ಥನೆ ನೆರವೇರಿತು. ಮಹಾಪೂಜೆ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ ವಿಶೇಷ ಪೂಜೆ ನಡೆದು ಸಂಜೆ ರಥದಲ್ಲಿ ದೇವರಿಗೆ ಪೂಜೆ ಬಳಿಕ ಗುತ್ತಿನವರು ಹಾಗೂ ಭಕ್ತರು ತೆಂಗಿನಕಾಯಿ ಒಡೆದು, ರಥ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಚೆಂಡಿನ ಗದ್ದೆಗೆ ಎಳೆಯಲಾಯಿತು. ಬಳಿಕ ಸುಡುಮದ್ದು ಪದರ್ಶನ ನಡೆಯಿತು. ಮಹಾರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇಗುಲದ ಪ್ರಧಾನ ಅರ್ಚಕ ಮಾಧವ ಭಟ್, ಹಿರಿಯ ಪ್ರಧಾನ ಅರ್ಚಕರಾದ ಕೆ. ರಾಮ್ ಭಟ್, ಪರಮೇಶ್ವರ ಭಟ್, ಅರ್ಚಕರಾದ ಪದ್ಮನಾಭ ಭಟ್, ಆದರ್ಶ ಭಟ್, ಅನಂತ ಪದ್ಮನಾಭ ಭಟ್, ದೇಗುಲದ ಆಡಳಿತ ಮೊಕ್ತಸರ ಡಾ| ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊತ್ತೇಸರ ಚೇರಾ ಸೂರ್ಯನಾರಾಯಣ ರಾವ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪಾಡಿ, ವಿವಿಧ ಗುತ್ತಿನವರು, ಕಾರ್ಯನಿರ್ವಹಣಾಧಿಕಾರಿ ಕೆ.…












