Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಸೆ. 14 : ಎಂಸಿಸಿ ಬ್ಯಾಂಕ್ ತನ್ನ 12 ನೇ ಎಟಿಎಂ ಅನ್ನು ಕಿನ್ನಿಗೋಳಿ ಶಾಖೆಯಲ್ಲಿ ಸೆ.13, ರ ಶನಿವಾರ ಉದ್ಘಾಟನೆಗೊಂಡಿತು. ಎಂ ಆರ್ ಪಿ ಎಲ್ ನ ಕಾರ್ಪೊರೇಟ್ ಬ್ರ್ಯಾಂಕಡಿಂಗ್ ಮತ್ತು ಕಾರ್ಪೊರೇಟ್ ಕಮ್ಯುನಿಕೇಷನ್ ಇದರ ಚೀಫ್ ಜನರಲ್ ಮ್ಯಾನೇಜರ್ ಡಾ| ರುಡಾಲ್ಫ್ ಜೋಯರ್ ನೊರೊನ್ಹಾ ಅವರು ಉದ್ಘಾಟಿಸಿದರು. ಕಿನ್ನಿಗೋಳಿಯ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ ನ ಧರ್ಮಗುರು ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂ ನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಬಳ್ಕುಂಜೆಯ ಸೇಂಟ್ ಪೌಲ್ಸ್ ಚರ್ಚ್ ನ ಧರ್ಮಗುರು ರೆವರೆಂಡ್ ಫಾದರ್ ಪೌಲ್ ಸಿಕ್ವೇರಾ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಕಿನ್ನಿಗೋಳಿ ಶಾಖೆಯ ಗ್ರಾಹಕರು ಕಳೆದ 28 ವರ್ಷಗಳಲ್ಲಿ ಶಾಖೆಯ ಬೆಳವಣಿಗೆಗೆ ಬೆಂಬಲ ನೀಡಿದ್ದಾರೆ. ಕಳೆದ ಏಳು ವರ್ಷಗಳಲ್ಲಿ ಬ್ಯಾಂಕಿನ ಗಮನಾರ್ಹ ಪ್ರಗತಿಯಾಗಿದ್ದು,…
ಮಂಗಳೂರು, ಸೆ. 13: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ಸೆ.14ರಂದು ‘ಧರ್ಮ ಜಾಗೃತಿ ಯಾತ್ರೆ’ನಡೆಯಲಿದೆ. ಅಂದು ಮಧ್ಯಾಹ್ನ 12 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಯಾತ್ರೆ ನಡೆಯಲಿದೆ ಎಂದು ಸಂಘಟಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು,ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳು ಯಾವಾಗಲೂ ಸೌಹಾರ್ದತೆಯಿಂದ, ಪರಸ್ಪರ ಸಹಬಾಳ್ವೆಯಿಂದ ಕಾರ್ಯ ನಿರ್ವಹಿಸುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳು ಪಕ್ಷಾತೀತವಾಗಿ ಹಾಗೂ ಜಾತ್ಯತೀತ ವಾಗಿ ಒಗ್ಗಟ್ಟಾಗಿ, ‘ಸಹಕಾರ ರತ್ನ’ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಧರ್ಮ ಜಾಗೃತಿ ಯಾತ್ರೆ ನಡೆಸಲಿದ್ದಾರೆ ಎಂದರು. ಈ ಯಾತ್ರೆಯಲ್ಲಿ 1500ಕ್ಕೂ ಅಧಿಕ ಸಹಕಾರಿ ಸಂಘಗಳು, 3000ಕ್ಕೂ ಅಧಿಕ ವಾಹನಗಳು ಭಾಗಿಯಾಗಲಿವೆ.ಇದೊಂದು ಧರ್ಮ ಸಂರಕ್ಷಣೆಯ ಯಾತ್ರೆಯಾಗಿದೆ. ಧಾರ್ಮಿಕ ಕ್ಷೇತ್ರಗಳ ವಿರುದ್ಧ ಅಪಪ್ರಚಾರ ಮಾಡುವ ಷಡ್ಯಂತ್ರಿಗಳ ವಿರುದ್ಧ ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಪವಿತ್ರ ಧರ್ಮಸ್ಥಳ ಕ್ಷೇತ್ರದ ಮೇಲೆ ವಿಶೇಷ ಗೌರವ, ಶ್ರದ್ಧಾ ಭಕ್ತಿಯನ್ನು ಸಹಕಾರ ಕ್ಷೇತ್ರ ಹೊಂದಿದೆ. ಹಾಗಾಗಿ,…
ಉಡುಪಿ, ಸೆ. 12 :ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಸೆ.10, ಬುಧವಾರ ಮಲ್ಪೆ ಲೈಟ್ಹೌಸ್ ಬಳಿ ಸಂಭವಿಸಿದೆ. ಮೃತರನ್ನು ಸಾಸ್ತಾನ ಕೋಡಿತಲೆ ನಿವಾಸಿ ಸ್ಥಳೀಯ ಮೀನುಗಾರ ರಾಮ ಖಾರ್ವಿ ಎಂದು ಗುರುತಿಸಲಾಗಿದೆ. ಮೀನುಗಾರ ರಾಮ ಖಾರ್ವಿ ಅವರು ಎಂದಿನಂತೆ ಬುಧವಾರ ಕೂಡ ಮೀನುಗಾರಿಕೆಗೆ ತೆರೆಳಿದ್ದ ಸಂದರ್ಭ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಈಜಲು ಆಗದೆ ನೀರಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ. ರಾಮ ಖಾರ್ವಿ ಅವರು ಮದ್ಯಾಹ್ನವಾದರೂ ಮನೆಗೆ ಬಾರದಿದ್ದ ಕಾರಣ ಅವರ ಮಗ ಅವರನ್ನು ಸಂಪರ್ಕ ಮಾಡಲು ಪ್ರಯತ್ನಿಸಿದರು. ಆದರೆ ಅವರೊಂದಿಗೆ ಸಂಪರ್ಕ ವಾಗದ ಕಾರಣ ಮಲ್ಪೆಗೆ ಸಂಬಂಧಿಕರೊಂದಿಗೆ ಸ್ನೇಹಿತರೊಂದಿಗೆ ಸೇರಿ ತಡರಾತ್ರಿಯವರೆಗೆ ಹುಡುಕಾಟ ಮಾಡಿದ್ದರು. ಆದರೆ ಗುರುವಾರ ಮಲ್ಪೆ ಲೈಟ್ ಹೌಸ್ ಬಳಿ ರಾಮ ಖಾರ್ವಿ ಅವರ ಮೃತದೇಹ ಪತ್ತೆಯಾಗಿದೆ. ಬಲವಾದ ಅಲೆಗಳ ರಭಸಕ್ಕೆ ಅವರ ದೋಣಿ ಉರುಳಿಬಿದ್ದು, ಸುರಕ್ಷಿತವಾಗಿ ಈಜಲು ಸಾಧ್ಯವಾಗದ ಕಾರಣ ಅವರು ನೀರಿನಲ್ಲಿ…
ಮಂಗಳೂರು, ಸೆ. 11 : ಕಲ್ಲೂರ ಪ್ರತಿಷ್ಠಾನದ ವತಿಯಿಂದ 43ನೇ ವರ್ಷದ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ ಸ್ಪರ್ಧೆ ಕದ್ರಿ ಮಂಜುನಾಥ ದೇವಸ್ಥಾನದ ಪ್ರಾಂಗಣದಲ್ಲಿ ಸೆ. 14ರಂದು ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಸೆ. 14ರಂದು ಬೆಳಗ್ಗೆ 9ರಿಂದ ಶ್ರೀಕೃಷ್ಣ ವರ್ಣ ವೈಭವ, ಮಧ್ಯಾಹ್ನ 12ರಿಂದ ಸಾಂಸ್ಕೃತಿಕ ಕಾರ್ಯಕ್ರಮ, 1 ಗಂಟೆಗೆ ಶ್ರೀ ಕೃಷ್ಣ ಜನ್ಮ ಮಹೋತ್ಸವ ನಂದ ಗೋಕುಲ ವೇದಿಕೆಯಲ್ಲಿ ಕೃಷ್ಣ ವೇಷ ಸ್ಪರ್ಧೆ ಉದ್ಘಾಟನೆಗೊಳ್ಳಲಿದೆ. ರಾತ್ರಿ 12ರ ತನಕ ಒಟ್ಟು 43 ವಿಭಾಗಗಳಲ್ಲಿ 9 ವೇದಿಕೆಗಳಲ್ಲಿ ಏಕಕಾಲದಲ್ಲಿ ಸ್ಪರ್ಧೆ ನಡೆಯಲಿದೆ. ರಾತ್ರಿ 12 ಗಂಟೆಗೆ ಅರ್ಘ್ಯ್ ಪ್ರದಾನ – ಪ್ರಸಾದ ವಿತರಣೆಯೊಂದಿಗೆ ಸಂಪನ್ನಗೊಳ್ಳಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಡಾ| ಎಂ. ಪ್ರಭಾಕರ ಜೋಶಿ, ಸಮೀರ್ ಪುರಾಣಿಕ್, ದಯಾನಂದ ಕಟೀಲ್, ಪ್ರಕಾಶ್ ನಾಯ್ಕ ಜಿ.ಕೆ. ಭಟ್ ಸೇರಾಜೆ, ಜಾನ್‌ಚಂದ್ರನ್, ಕದ್ರಿ ನವನೀತ್ ಶೆಟ್ಟಿ ಸುಧಾಕರ ರಾವ್…
ಮಂಗಳೂರು, ಸೆ.10 : ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರು ಹಾಗೂ ದೇವಾಡಿಗ ಸಂಘ ದುಬೈ ಇವರ ಆಶ್ರಯದಲ್ಲಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ದೇವಾಡಿಗ ಸಮಾಜ ಭವನದಲ್ಲಿ ಸೆ.07,ಆದಿತ್ಯವಾರ ನಡೆಯಿತು. ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ರಾದ ಹರೀಶ್ ಶೇರಿಗಾರ್ ದುಬೈ ಅವರು ಸಮಾರಂಭದ ಉದ್ಘಾಟನೆಯನ್ನು ನೆರೆವೇರಿಸಿ ಮಾತಾಡಿದರು. ಕಾರ್ಯಕ್ರಮದಲ್ಲಿ ದೇವಾಡಿಗರ ಸಂಘದ ಅಧ್ಯಕ್ಷರಾದ ಅಶೋಕ್ ಮೊಯಿಲಿ,ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರು ಡಿ. ವೇದವ್ಯಾಸ್ ಕಾಮತ್ ಅವರು ಮಾತಾಡಿದರು. ಶ್ರೀ ಬಾಬು ದೇವಾಂಗ ಅಂಬ್ಲಮೊಗರು ಇವರ ವತಿಯಿಂದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ನಡೆಯಿತು. ಡಾ. ಕೆ.ವಿ. ದೇವಾಡಿಗ ಚಾರಿಟೇಬಲ್ ಟ್ರಸ್ಟ್ (ರಿ) ಇವರ ವತಿಯಿಂದ ಯುವ ಪ್ರತಿಭೆಗಳಿಗೆ ಬೆಳಿಗ್ಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.ಸಮಾರಂಭದಲ್ಲಿ ವಿಶ್ವ ದೇವಾಡಿಗ ಮಹಾಮಂಡಲ ಮುಂಬೈ ಇದರ ಅಧ್ಯಕ್ಷರು ಧರ್ಮಪಾಲ್ ಯು, ದೇವಾಡಿಗ, ದ. ಕ. ಜಿಲ್ಲಾ ಘಟಕ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ…
ಮಂಗಳೂರು, ಸೆ. 09 : ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಎನಿಸಿದ ಆರ್ಥೋಪೆಡಿಕ್ ರೊಬೊಟಿಕ್ ವ್ಯವಸ್ಥೆ ‘ಸ್ಕೈವಾಕರ್’ ಸರ್ಜರಿಯನ್ನು ಮಂಗಳೂರಿನ ಯೆನೆಪೋಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಿದೆ. ಈ ವ್ಯವಸ್ಥೆಯನ್ನು ಹೊಂದಿದ ದಕ್ಷಿಣ ಏಷ್ಯಾದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಯೆನೆಪೋಯ ಪಾತ್ರವಾಗಿದೆ. ಅಮೆರಿಕದ ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ ಇಂಕ್ ಸಹಭಾಗಿತ್ವದಲ್ಲಿ ಈ ಸರ್ಜರಿ ವ್ಯವಸ್ಥೆಯನ್ನು ಯೆನೆಪೋಯ ದಲ್ಲಿ ಆರಂಭಿಸಲಾಗಿದೆ.ಅದರೊಂದಿಗೆ ರೋಗಿಗಳ ಆರೈಕೆಗೆ ಜಾಗತಿಕ ದರ್ಜೆಯ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಮುಂಚೂಣಿಯಲ್ಲಿರುವ ಆಸ್ಪತ್ರೆಯು ಇನ್ನೊಂದು ಗರಿಯನ್ನು ತನ್ನ ಮುಡಿಗೆ ಏರಿಸಿಕೊಂಡಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ಮತ್ತು ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ನ ದಕ್ಷಿಣ ಏಷ್ಯಾ ವಿಭಾಗದ ಹಿರಿಯ ನಿರ್ದೇಶಕ ಮತ್ತು ಜನರಲ್ ಮ್ಯಾನೇಜರ್ ಡಾ.ಮುಕೇಶ್ ಪಾರ್ಮರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎವೊಲ್ಯೂಷನ್ ಮೀಡಿಯಲ್-ಪೈವೊಟ್ ನೀ ಸಿಸ್ಟಮ್ ಜೊತೆಗೆ ಕೆಲಸ ಮಾಡುವಂತೆ ವಿನ್ಯಾಸಗೊಂಡ ಜಗತ್ತಿನ ಏಕೈಕ ರೊಬೊಟಿಕ್ ಸರ್ಜರಿ ತಂತ್ರಜ್ಞಾನ ಸ್ಕೈವಾಕರ್ ಆರ್ಥೋಪೆಡಿಕ್ ರೊಬೊಟಿಕ್ ಸಿಸ್ಟಮ್ ಆಗಿದೆ. ಇವೆರಡೂ ಸೇರಿಕೊಂಡು ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ…
ಮಂಗಳೂರು, ಸೆ. 09 : ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಮಂಗಳೂರಿನ ಸುರತ್ಕಲ್ ಎನ್ ಐ ಟಿ ಕೆ ಬೀಚ್ ರಸ್ತೆಯಲ್ಲಿರುವ ರೋಹನ್ ಮರೀನಾ ಒನ್, ಒಟ್ಟು 8.2 ಎಕರೆ ವಿಸ್ತರಿಸಿದ್ದು ಮತ್ತು ಕಡಲ ತೀರದಲ್ಲಿ ಐಷಾರಾಮಿ ಜೀವನಶೈಲಿಯನ್ನು ನೀಡಬಲ್ಲ 433 ಅಲ್ಟ್ರಾ-ಲಕ್ಷುರಿ ಅಪಾರ್ಟ್ಮೆಂಟ್ ಗಳನ್ನು ಹೊಂದಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರು ಒಸಿಯನ್ ಪರ್ಲ್ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಭಾರತದ ರಿಯಲ್ ಎಸ್ಟೇಟ್ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು ಪ್ರತಿಯೊಂದು ಅಪಾರ್ಟ್‌ಮೆಂಟ್ ಕಾಣಿಸುವಂತೆ ಇರುವ ಉತ್ಕೃಷ್ಟ ವಸತಿ ಯೋಜನೆಯಾಗಿದೆ. ಈ ಯೋಜನೆಯಲ್ಲಿ, 39 ಮಹಡಿಗಳಿರುವ “ದಿ ರಿಟ್ರೀಟ್” ಮತ್ತು 47 ಮಹಡಿಗಳಿರುವ “ದಿ ರಿಸಾರ್ಟ್” ಎಂಬ ಎರಡು ಟವರ್ ಗಳಿದ್ದು,…
ಮಂಗಳೂರು,ಅ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾತೆ ಮೇರಿ ಅಮ್ಮನ ಜನ್ಮದಿನ, ಮೊಂತಿ ಫೆಸ್ತ್( ತೆನೆ ಹಬ್ಬ)ನ್ನು ಕ್ಯಾಥೋಲಿಕ್ ಕ್ರೈಸ್ತ ಬಾಂಧವರು ಸೋಮವಾರ ಭಕ್ತಿ ಭಾವದಿಂದ ಆಚರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಚ್ ಗಳಲ್ಲಿ ಭತ್ತದ ತೆನೆಯನ್ನು ಪವಿತ್ರೀಕರಣ ಮಾಡಿ ವಿತರಿಸಲಾಯಿತು. ಮೇರಿ ಮಾತೆಗೆ ಪುಷ್ಪಾರ್ಚನೆ, ದಿವ್ಯ ಬಲಿಪೂಜೆ ನಡೆಯಿತು. ಮಂಗಳೂರಿನ ಮಿಲಾಗ್ರಿಸ್, ರೊಸಾರಿಯೋ, ಬೆಂದೂರ್‌ವೆಲ್, ಉರ್ವ ಲೇಡಿಹಿಲ್, ಕೂಳೂರು, ಅಶೋಕ ನಗರ, ಕುಲಶೇಖರ ಸೇರಿದಂತೆ ಪ್ರಮುಖ ಚರ್ಚ್‌ಗಳಲ್ಲಿ ಹಬ್ಬದ ಅಂಗವಾಗಿ ನಡೆದ ಬಲಿಪೂಜೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತರು ಭಾಗವಹಿಸಿದ್ದರು.
ಬೆಂಗಳೂರು, ಸೆ.8 : ಎಲ್ಟು ಮುತ್ತಾ ಸಿನಿಮಾವನ್ನು ನಿರ್ಮಾಣ ಮಾಡಿದ್ದ ಹೈ5 ಸ್ಟುಡಿಯೋಸ್ ನ ನಿರ್ಮಾಪಕ ಸತ್ಯ ಶ್ರೀನಿವಾಸನ್ ಇದೀಗ ಅಲೆಯ ವೈಖರಿ ಎಂಬ ಪಾಪ್ ಸಾಂಗ್ ಅನ್ನು ತಯಾರಿಸಿದ್ದಾರೆ. ಈ ಪಾಪ್ ಸಾಂಗ್ ಗೆ ಅಜಿತ್ ಕೇಶವ್ ಸಾಹಿತ್ಯ ಬರೆದಿದ್ದು, ಚಿನ್ಮಯಿ ಆತ್ರೇಯಾ ಧ್ವನಿಯಾಗಿದ್ದಾರೆ. ಈ ಹಾಡಿಗೆ ಸಾಗರ್ ಗುರುರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಹೈಫೈ ಸ್ಟುಡಿಯೋದಿಂದ ಹಾಡನ್ನ ರಿಲೀಸ್ ಮಾಡಲಾಗಿದೆ. ಮಣಿಕಾಂತ್ ಕದ್ರಿ ಅಲೆಯ ವೈಖರಿ ಕೇಳಿ ಖುಷಿಯಾಗಿದ್ದಾರೆ. ಅಜಿತ್ ಕೇಶವ ಒಂದೊಳ್ಳೆ ಕಾನ್ಸೆಪ್ಟ್ ಮಾಡಿದ್ದಾರೆ.ರವಿಶಂಕರ್ ಹಾಗೂ ಸಂಗೀತಾ ಗುರುರಾಜ್ ಶುಭ ಹಾರೈಸಿದ್ದಾರೆ. ಹಾಗೇ ಈ ಹಾಡನ್ನ ತುಂಬಾನೇ ಇಷ್ಟಪಟ್ಟು ನಿರ್ಮಿಸಿದ್ದೇನೆ ಎಂದು ನಿರ್ಮಾಪಕ ಸತ್ಯ ಶ್ರೀನಿವಾಸನ್ ಅವರು ತಿಳಿಸಿದ್ದಾರೆ.
ಮಂಗಳೂರು, ಸೆ.8: ಪಿಲಿನಲಿಕೆ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ಸಾರಥ್ಯ ಹಾಗೂ ನಮ್ಮ ಟಿವಿ ಸಹಯೋಗದಲ್ಲಿ 10ನೆ ಆವೃತ್ತಿಯ ಪಿಲಿನಲಿಕೆ ಕಾರ್ಯಕ್ರಮ ಅ. 1ರಂದು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ ಎಂದು ಪ್ರತಿಷ್ಟಾನದ ಅಧ್ಯಕ್ಷ ಮಿಥುನ್ ರೈ ಅವರು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಿಲಿನಲಿಕೆ ಪಂಥ ಕಾರ್ಯಕ್ರಮವನ್ನು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ನಸೀರ್ ಹುಸೇನ್ ಸೇರಿದಂತೆ ಸಂಸದರು, ಶಾಸಕರು ಆಗಮಿಸಲಿದ್ದಾರೆ. ಪಿಲಿನಲಿಕೆ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ, ಜಾಕೀಶ್ರಾಫ್, ಸ್ಯಾಂಡಲ್ವುಡ್ ನಟರಾದ ರಿಷಬ್ ಶೆಟ್ಟಿ, ರಾಜ್ ಬಿ. ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ಸಿನಿಮಾ, ಕ್ರೀಡಾ ಕ್ಷೇತ್ರದ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ ಎಂದವರು ಹೇಳಿದರು. 10ನೆ ವರ್ಷದ ಪಿಲಿನಲಿಕೆ ಸ್ಪರ್ಧೆಯ ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 10 ಲಕ್ಷ ರೂ. ದ್ವಿತೀಯ ಬಹುಮಾನವಾಗಿ 5 ಲಕ್ಷ ರೂ. ಹಾಗೂ ತೃತೀಯ…












