Author: admin

ಮಂಗಳೂರು,ಅ. 25: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆಗೊಂಡ ನವದುರ್ಗೆಯರು, ಗಣಪತಿ ಮತ್ತು ಶ್ರೀ ಶಾರದಾ ದೇವಿ ವಿಗ್ರಹಗಳ ವೈಭವದ ಮಂಗಳೂರು ದಸರಾ ಮೆರವಣಿಗೆ ಶುಕ್ರವಾರ ನಗರದಲ್ಲಿ ನಡೆಯಿತು. ದಸರಾ ಮಹೋತ್ಸವದ ವೈಭವದ ಶೋಭಾಯಾತ್ರೆಯಲ್ಲಿ ಐವತ್ತಕ್ಕೂ ಅಧಿಕ ಟ್ಯಾಬ್ಲೋಗಳು, ಹುಲಿ ವೇಷದ ಟ್ರಕ್‌ಗಳು, ಸಾಲು ಸಾಲು ಬಣ್ಣದ ಕೊಡೆಗಳು, ಕೇರಳದ ಚೆಂಡೆ, ನಾಸಿಕ್ ಬ್ಯಾಂಡ್, ಭಜನಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಮೆರವಣಿಗೆಯು ಶ್ರೀಕ್ಷೇತ್ರದಿಂದ ಸುಮಾರು 9 ಕಿ.ಮೀ. ದೂರ ಸಂಚರಿಸಿ ಬುಧವಾರ ಮುಂಜಾನೆ ವೇಳೆಗೆ ಶ್ರೀಕ್ಷೇತ್ರಕ್ಕೆ ಮರಳಲಿತು. ಬಳಿಕ ಮೃಣ್ಮಯ ಮೂರ್ತಿಗಳು ದೇವಾಲಯದ ಕಲ್ಯಾಣಿಯಲ್ಲಿ ಜಲಸ್ತಂಭನಗೊಂಡು ಮಂಗಳೂರು ದಸರಾ ಸಂಪನ್ನಗೊಂಡಿತು.

Read More

ಭಟ್ಕಳ, ಅ 24 : ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಯುವಕನೋರ್ವ ಬಲಿಯಾಗಿದ್ದಾನೆ. ಮೃತರನ್ನು ತಲಗೋಡ್ ನಿವಾಸಿ ಪ್ರಜ್ವಲ್ ಖಾರ್ವಿ (24) ಎಂದು ಗುರುತಿಸಲಾಗಿದೆ. ಭಟ್ಕಳದ ಬಂದರಿನಲ್ಲಿ ಮೀನುಗಾರಿಕೆ ವೃತ್ತಿ ಮಾಡುತ್ತಿದ್ದ ಪ್ರಜ್ವಲ್ ಕಳೆದ ಮೂರು ನಾಲ್ಕು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಜ್ವಲ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More

ಉಡುಪಿ, ಅ.23: ನದಿಗೆ ಸ್ನಾನಕ್ಕೆ ಹೋದ ಇಬ್ಬರು ನೀರು ಪಾಲಾದ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ಎಂಬಲ್ಲಿ ನಡೆದಿದೆ. ಮೃತರನ್ನು ಕರ್ಜೆ ನಿವಾಸಿ ಉಮೇಶ್ ಶೆಟ್ಟಿ (48) ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಚಾರ ಹುರ್ತುರ್ಕೆ ನಿವಾಸಿ ಪ್ರಸ್ತುತ್ ಹೆಗ್ಡೆ (21) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ 3 ಗಂಟೆಗೆ ಸ್ನಾನಕ್ಕೆ ಹೋದವರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು, ಅ. 22 : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ಜುಲೈ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.

Read More

ವಿಟ್ಲ, ಅ. 21 : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಮೃತ ಪಟ್ಟ ಯುವಕ. ಅವಿವಾಹಿತನಾಗಿದ್ದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಕೃತ್ಯಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More

ಬಂಟ್ವಾಳ,ಅ. 20 : ಪ್ರೇಮ ವೈಫಲ್ಯ ದಿಂದ ಮನನೊಂದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಚಿನ್ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಈತನನ್ನು ಹುಡುಕಲು ಶುರು ಮಾಡಿದ್ದರು. ಪೋನ್ ಮಾಡಿದಾಗ ಪೋನ್ ರಿಂಗು ಕೇಳುತ್ತಿದ್ದ ಜಾಗಕ್ಕೆ ಹೋಗಿ ನೋಡಿದಾಗ ಆತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದಾನೆ ಎನ್ನಲಾಗಿದೆ. ನಗರ ಠಾಣಾ ಇನ್ಸ್ ಪೆಕ್ಟರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಪುತ್ತೂರು, ಅ. 19 : ಮಂಗಳೂರುನಿಂದ ಸುಳ್ಯದ ಕಡೆಗೆ ಪಾಮ್ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರೊಂದು ಪಲ್ಟಿಯಾಗಿ ಪಾಮ್ ಆಯಿಲ್ ಸೋರಿಕೆಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆ ಉರ್ಲಂಡಿ ಬಳಿ ಬುಧವಾರ ನಡೆದಿದೆ. ರಾತ್ರಿ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು ಟ್ಯಾಂಕರ್ ಉರುಳಿಬಿದ್ದ ತಕ್ಷಣ ಸ್ಥಳೀಯರು ಆಗಮಿಸಿ, ಇತರರಿಗೆ ಎಚ್ಚರಿಸಿ ರಸ್ತೆಯಲ್ಲಿ ಆಯಿಲ್ ಚೆಲ್ಲಿರುವುದರಿಂದ ಮುಂದಾಗಬಹುದಾದ ಅನಾಹುತ ತಪ್ಪಿಸಿದರು. ಟ್ಯಾಂಕರ್ ವಿದ್ಯುತ್ ಕಂಬ, ತಂತಿಗಳಿಗೆ ತಾಗಿದ್ದರೂ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಕಾರೊಂದಕ್ಕೆ ಅಪಘಾತವಾಗುವುದನ್ನು ತಪ್ಪಿಸುವ ಯತ್ನದಲ್ಲಿ ಟ್ಯಾಂಕರ್ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಗ್ನಿ ಶಾಮಕ ದಳದವರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮುನ್ನೆಚ್ಚರಿಕಾ ಕ್ರಮಕೈಗೊಂಡಿದ್ದಾರೆ.

Read More

ಉಳ್ಳಾಲ, ಅ. 18:ರಿಕ್ಷಾ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೇವಂತಿ ಗುಡ್ಡೆಯಲ್ಲಿ ನಡೆದಿದೆ. ಮೃತರನ್ನು ಕೆರೆಬೈಲು ಸೇವಂತಿಗುಡ್ಡೆ ನಿವಾಸಿ ಸಮೀರ್ (45) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟು ರಿಕ್ಷಾ ಪಾರ್ಕ್ ನಲ್ಲಿ ರಿಕ್ಷಾ ಚಾಲಕನಾಗಿ ದುಡಿಯುತ್ತಿದ್ದರು. ಮಂಗಳವಾರ ಬೆಳಿಗ್ಗೆ ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Read More

ಕಾರ್ಕಳ, ಅ. 17 : ಸಾಫ್ಟ್‌ ವೇರ್  ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಲೊಟ್ಟೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹೊಸದಿಲ್ಲಿ,ಅ.16: ದೆಹಲಿಯಲ್ಲಿ ಭಾನುವಾರ ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಭಾನುವಾರ ಸಂಜೆ 4.09ಕ್ಕೆ ಭೂಮಿ ಕಂಪಿಸಿದೆ. ಈ ವೇಳೆ ಜನ ಗಾಬರಿಯಿಂದ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ ಎಂದು ವರದಿಯಾಗಿದೆ. ಹರಿಯಾಣದ ಫರಿದಾಬಾದ್ನಲ್ಲಿ 9 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.

Read More