Author: admin

ಮಂಗಳೂರು, ,ಜೂ. 07 : ಸ್ನೇಹಾಲಯ ಸಂಸ್ಥೆಯು ಜೂ5 ರಂದು ತನ್ನ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು. ಈ ಸೌಲಭ್ಯವನ್ನು ಮಂಗಳೂರಿನ ಎಂ ಆರ್ ಪಿ ಎಲ್ ಸಂಸ್ಥೆಯ ಸಾಂಸ್ಥಿಕ ಸಾಮಾಜಿಕ ಯೋಜನೆಯಡಿ(ಸಿ ಎಸ್ ಆರ್ ಉಪಕ್ರಮದ ಅಡಿಯಲ್ಲಿ) ಪ್ರೋತ್ಸಾಹಿಸಲ್ಪಟ್ಟು ಸದರಿ ಸೌಲಭ್ಯವನ್ನು ವ್ಯಸನ ಮುಕ್ತ ಸಾಮಾಜಕ್ಕಾಗಿ ರೊಗಿಗಳ ಚೇತರಿಕೆಯ ಹಾದಿಯಲ್ಲಿ ಸಬಲೀಕರಣಗೊಳ್ಳುವ ಅಭಿವ್ಯಕ್ತಿಶೀಲ ಕಲಾ ಚಿಕಿತ್ಸೆ ಮತ್ತು ವಿವಿಧ ಗುಣಪಡಿಸುವ ಶಾರೀರಿಕ ಹಾಗು ಮಾನಸಿಕ ಚಟುವಟಿಕೆಗಳಿಗೆ ಮೀಸಲಿಡಲಾಗುವುದು. ಎಂ ಆರ್ ಪಿ ಎಲ್ನ ಸಿ ಎಸ್ ಆರ್ ವಿಭಾಗದ ಹಿರಿಯ ವ್ಯವಸ್ಥಾಪಕ ಶ್ರೀ ಕೆ. ನಾಗರಾಜ್ ರಾವ್ ಅವರು ಮುಖ್ಯ ಅತಿಥಿಯಾಗಿ ಹಾಜರಿದ್ದು, ಎಂ ಆರ್ ಪಿ ಎಲ್ – ಒಎನ್ ಜಿಸಿ ಮಂಗಳೂರಿನ ಗ್ರೂಪ್ ಜನರಲ್ ಮ್ಯಾನೇಜರ್ ಶ್ರೀ ಕೃಷ್ಣ ಹೆಗ್ಡೆ ಮಿಯಾರ್ ಅವರ ಉಪಸ್ಥಿತಿಯಲ್ಲಿ ರಿಬ್ಬನ್ ಕತ್ತರಿಸುವ ಮೂಲಕ ಹೊಸ ಸೌಲಭ್ಯವನ್ನು ಉದ್ಘಾಟಿಸಲಾಯಿತು. ವನಮಹೋತ್ಸವ ಸಾಂಕೇತಿಸಲು ಗಿಡನೆಟ್ಟು…

Read More

ಉಡುಪಿ, ಜೂ. 06 : ಉಡುಪಿ ಜೂನ್ 05: ಮಗುವನ್ನು ಮಲಗಿಸಲು ಹಾಕಿದ್ದ ಜೋಳಿಗೆ ಮಗುವಿನ ಕುತ್ತಿಗೆಗೆ ಸಿಲುಕಿದ ಪರಿಣಾಮ 1 ವರ್ಷದ ಮಗು ಮೃತಪಟ್ಟಘಟನೆ ಉಡುಪಿಯ ನಿಟ್ಟೂರಿನಲ್ಲಿ ಜೂನ್ 4ರಂದು ನಡೆದಿದೆ. ಮೃತಪಟ್ಟ ಮಗುವನ್ನು ಪುತ್ತೂರು ಗ್ರಾಮದ ಬಾಡಿಗೆ ಮನೆ ನಿವಾಸಿ ಅಯ್ಯಪ್ಪ ಎಂಬವರ ಹೆಣ್ಣು ಮಗು ಕಾಳಮ್ಮ(1) ಎಂದು ಗುರುತಿಸಲಾಗಿದೆ. ಉಡುಪಿಯಲ್ಲಿ ನಿಟ್ಟೂರಿನಲ್ಲಿ 3 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಅಯ್ಯಪ್ಪ ಅವರು ಗಂಗಾಧರ ಎಂಬವರ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದು, ಅವರ ಪತ್ನಿ ಮಗುವನ್ನು ಜೋಳಿಗೆಯಲ್ಲಿ ಹಾಕಿ ಬೆಳಗ್ಗೆ ಕೆಲಸಕ್ಕೆ ಹೋದವರು 11.30ಕ್ಕೆ ಬಂದು ನೋಡಿದಾಗ ಮಗುವಿನ ಕುತ್ತಿಗೆಗೆ ಜೋಳಿಗೆ ಕಟ್ಟಿದ ಸೀರೆಯು ಸುತ್ತಿಕೊಂಡು ನೇತಾಡುವ ಸ್ಥಿತಿಯಲ್ಲಿ ಕಂಡು ಬಂದಿದೆ. ತಕ್ಷಣ.ಮಗುವನ್ನು ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯಾಧಿಕಾರಿಗಳು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜೂ. 0 5: 2025ರ ಜುಲೈ 03ರಂದು ಸೈಂಟ್ ಅಲೋಶಿಯಸ್ (ಮಾನ್ಯ ವಿಶ್ವವಿದ್ಯಾನಿಲಯ), ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ಒಡಂಬಡಿಕೆಯನ್ನು ಅಧಿಕೃತವಾಗಿ ಸಹಿ ಹಾಕಲಾಯಿತು. ಈ ಸಹಿ ಸಮಾರಂಭದಲ್ಲಿ ಎಐಎಮ್ ಐಟಿ ಕೇಂದ್ರದ ನಿರ್ದೇಶಕರಾದ ಡಾ. ಫಾ. ಕಿರಣ್ ಕೋಟ, ಐ ಬಿ ಎಮ್ ನ ಸಾಫ್ಟ್‌ವೇರ್ ಸೇವೆಗಳ ರಾಷ್ಟ್ರೀಯ ನಿರ್ವಾಹಕರು ಶ್ರೀ ಜಗದೀಶ್ ಭಟ್, ಐ ಬಿ ಎಮ್ ನ ಪ್ರಾದೇಶಿಕ ನಿರ್ವಾಹಕರು ಶ್ರೀ ಮಧುಸೂಧನ್, ಟೆಕ್‌ಪಾಥ್ನ ಪ್ರಾದೇಶಿಕ ನಿರ್ವಾಹಕ ಶ್ರೀ ಜಿತೇಶ್ ಹಾಗೂ ಎಐಎಮ್ ಐಟಿ ನ ಡೀನ್‌ಗಳಾದ ಡಾ. ರಜನಿ ಸುರೇಶ್ ಮತ್ತು ಡಾ. ಹೆಮಲತಾ ಎನ್. ಭಾಗವಹಿಸಿದ್ದರು. ಈ ಒಡಂಬಡಿಕೆಯು ವಿದ್ಯಾರ್ಥಿಗಳು ಹಾಗೂ ಬೋಧಕರು ಐ ಬಿ ಎಮ್ ನ ಶ್ರೇಷ್ಠ ಸಾಫ್ಟ್‌ವೇರ್ಗಳ ಬಳಕೆಯ ಮೂಲಕ ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ವೃದ್ಧಿಸಿಕೊಳ್ಳಬಹುದು. ಐ ಬಿ ಎಮ್ ಸಾಫ್ಟ್‌ವೇರ್‌ಗಳನ್ನು ಆಧಾರವಾಗಿಟ್ಟುಕೊಂಡು ನವೀನ ಪಠ್ಯಕ್ರಮಗಳನ್ನೂ ಉದ್ಯಮ ಸಂಬಂಧಿತ ವಿಭಿನ್ನ ತಂತ್ರಜ್ಞಾನಗಳನ್ನೂ…

Read More

ಬೆಂಗಳೂರು, ಜೂ. 04 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದುರಂತದ ಕುರಿತು ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತಾಡಿ, ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು .ಸರ್ಕಾರ ಇದಕ್ಕೆ ಬಹಳ ದುಃಖ ವ್ಯಕ್ತಪಡಿಸುತ್ತದೆ ಎಂದು ಹೇಳಿದರು. ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಇದನ್ನು ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3…

Read More

ದಕ್ಷಿಣ ಕನ್ನಡ, ಜೂ.03 : ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಮತ್ತು ಅಬ್ದುಲ್ ರಹಿಮಾನ್ ಕೊಲೆಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36 ಜನರನ್ನು ಗಡಿಪಾರು ಮಾಡಲು ನಿರ್ಧರಿಸಲಾಗಿದ್ದು, ಅವರಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೂಡ ಸೇರಿದ್ದಾರೆ. ಈ ಕ್ರಮವು ಕೋಮು ಸೌಹಾರ್ದತೆಯನ್ನು ಕಾಪಾಡುವ ಗುರಿಯನ್ನು ಹೊಂದಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸುಹಾಸ್ ಶೆಟ್ಟಿ ಹಾಗೂ ಅಬ್ದುಲ್ ರಹಿಮಾನ್ ಕೊಲೆ ಬಳಿಕ ಕೋಮು ದ್ವೇಷ ಹರಡುವವರ ವಿರುದ್ಧ ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಇದರ ಹಿಂದಿರುವ ಮತೀಯ ಸಂಘಟನೆಗಳ ಕೋಮು ದ್ವೇಷ ತಡೆಗಟ್ಟುವ ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ಪ್ರಯತ್ನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ, ಮುಸ್ಲಿಂ ಎನ್ನದೆ ಕೋಮು ಪ್ರಚೋದಕ ಕೃತ್ಯದಲ್ಲಿ ತೊಡಗಿರುವವರನ್ನು ಜಿಲ್ಲೆಯಿಂದಲೇ ಹೊರಗಟ್ಟಲು ಪೊಲೀಸರು ಹೊರಟಿದ್ದಾರೆ. ಹಸೈನಾರ್- ಬಂಟ್ವಾಳ ನಗರ ಠಾಣೆ, ಪವನ್ ಕುಮಾರ್ -ಬಂಟ್ವಾಳ ಗ್ರಾಮಾಂತರ ಠಾಣೆ, ಚರಣ್ ರಾಜ್- ಬಂಟ್ವಾಳ ಗ್ರಾಮಾಂತರ, ಗಣೇಶ ಪೂಜಾರಿ- ವಿಟ್ಲ ಪೊಲೀಸ್ ಠಾಣೆ,…

Read More

ಬಂಟ್ವಾಳ,ಜೂ.02.: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಮೇ. 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್‌ನಲ್ಲಿ ಶೃದ್ದಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪ ದ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಮಂಗಳೂರು, ಜೂ. 01 :: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮ ಕಾರ್ಯಕ್ರಮ ಇಂದು ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ಕಟೀಲು ದುರ್ಗಾಪರಮೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಪ್ರಾಸ್ತಾವಿಕ ಮಾತನ್ನಾಡಿದ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅವರು, ಈ ಕಾರ್ಯಕ್ರಮ ಇಷ್ಟೊಂದು ಯಶಸ್ವಿಯಾಗಿ ನಡೆಯಬೇಕಾದರೆ ಕೇಂದ್ರೀಯ ಸಮಿತಿಯ ಪ್ರತೀ ಪದಾಧಿಕಾರಿಗಳು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಶ್ರಮವಿದೆ. ಪಟ್ಲ ಫೌಂಡೇಶನ್ ದಾನಿಗಳ ನೆರವಿನಿಂದ ಈ ಕಾರ್ಯಕ್ರಮ ನಡೆಯುತ್ತಿದೆ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಗೌರವಾಧ್ಯಕ್ಷ ಹೇರಂಭ ಇಂಡಸ್ಟ್ರಿಸ್ ಸಿಎಂಡಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಮಾತಾಡಿ, ನಾನು ಯಕ್ಷಧ್ರುವ ಪಟ್ಲ ಫೌಂಡೇಶನ್ ಎಲ್ಲಾ ಪದಾಧಿಕಾರಿಗಳು, ದೇಶ ವಿದೇಶದಲ್ಲಿರುವ ಘಟಕದ ಪದಾಧಿಕಾರಿಗಳಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ. ಪಾರ್ತಿಸುಬ್ಬರಿಂದ ಆರಂಭವಾದ ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ಮುಂದುವರಿಯುತ್ತಿದೆ. ಹಲವಾರು ಜನ ಯಕ್ಷಾಭಿಮಾನಿಗಳು, ದಾನಿಗಳು…

Read More

ಬೆಂಗಳೂರು,ಮೇ. 31 : ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು.ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ. ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.ವಿದ್ಯಾರ್ಥಿಗಳಲ್ಲಿ ಕೊರೊನಾ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು…

Read More

ಮಂಗಳೂರು, ಮೇ. 30 :ಮಂಗಳೂರು ನೂತನ ಪೊಲೀಸ್ ಕಮಿಷನರ್ ರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲೆಯ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಮಂಗಳೂರು ಕಮಿಷನರ್ ಆಗಿ ಗುಪ್ತಚರ ವಿಭಾಗದ ಡಿಐಜಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗದ ಡಿಐಜಿ ಹುದ್ದೆಗೆ ವರ್ಗಾಯಿಸಲಾಗಿದೆ. ದಕ್ಷಿಣ ಕ‌ನ್ನಡ ಜಿಲ್ಲಾ ಎಸ್ ಪಿ ಯತೀಶ್ ಎನ್ ಅವರನ್ನು ವರ್ಗಾವಣೆ ಮಾಡಿ ಅವರ ಹುದ್ದೆಗೆ ಉಡುಪಿ ಜಿಲ್ಲಾ ಎಸ್ ಪಿ ಅರುಣ್ ಕೆ ಅವರನ್ನು ನೇಮಿಸಲಾಗಿದೆ. ಗುಪ್ತಚರ ವಿಭಾಗದ ಎಸ್ ಪಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಎಸ್ ಪಿ ಯಾಗಿ ನೇಮಕ ಮಾಡಲಾಗಿದೆ.

Read More

ದೇರಳಕಟ್ಟೆ, ಮೇ. 30 : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ತಡೆಗೋಡೆ ಕುಸಿದುಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ರ ಪುತ್ರಿ ನಯೀಮ ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದ ಪರಿಣಾಮ ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದಿದ್ದು, ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

Read More