Author: admin

ದೇರಳಕಟ್ಟೆ, ಮೇ. 30 : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ತಡೆಗೋಡೆ ಕುಸಿದುಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ರ ಪುತ್ರಿ ನಯೀಮ ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದ ಪರಿಣಾಮ ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದಿದ್ದು, ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

Read More

ಬಂಟ್ವಾಳ, ಮೇ. 30 : ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಮತ್ತು ದ. ಕ. ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗದ ಡಿಐಜಿ ಹುದ್ದೆಗೆ ವರ್ಗಾಯಿಸಲಾಗಿದೆ. ಮಂಗಳೂರು ಕಮಿಷನರ್ ಆಗಿ ಗುಪ್ತಚರ ವಿಭಾಗದ ಡಿಐಜಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಲಾಗಿದೆ.

Read More

ಬಂಟ್ವಾಳ, ಮೇ. 29 : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ತನಿಖಾ ತಂಡವು ಗುರುವಾರ ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದೀಪಕ್ ಪೂಜಾರಿ(21), ಅಮ್ಮುಂಜೆ ಗ್ರಾಮದ ಪೃಥ್ವಿರಾಜ್ ಜೋಗಿ(21) ಹಾಗೂ ಅಮ್ಮುಂಜೆ ಗ್ರಾಮದ ಚಿಂತನ್ ಬೆಳ್ಚಡ(19) ಬಂಧಿತ ಆರೋಪಿಗಳು. ಆರೋಪಿಗಳ ಪತ್ತೆಗಾಗಿ 5 ಪೊಲೀಸರ ತನಿಖಾ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗಿರುತ್ತದೆ.ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಮಂಗಳೂರು, ಮೇ. 28 :ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾಗಿರುವ ಕೆ ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹುನಿರೀಕ್ಷಿತ ಸ್ಕೂಲ್ ಲೀಡರ್ ಕನ್ನಡ ಚಲನಚಿತ್ರವು ಮೇ 30ರಿಂದ ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ ಎಂದುಚಿತ್ರದ ನಿರ್ದೇಶಕ ರಜಾಕ್ ಪುತ್ತೂರು ಅವರು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಕೂಲ್ ಲೀಡರ್ ಚಿತ್ರವು ಶಾಲಾ ಚುನಾವಣೆಯನ್ನು ಆಧರಿಸಿದ ಕಥೆಯಾದುದರಿಂದ ಇಡೀ ಸಿನಿಮಾವನ್ನು ಕಟಪಾಡಿಯ ಒಂದೇ ಶಾಲೆಯಲಿ ಚಿತ್ರೀಕರಿಸಲಾಗಿದೆ.ಸುಮಾರು 25 ಶಾಲೆಯ 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚಿತ್ರದಲ್ಲಿ ಅಭಿನಯಿಸಿ ಅಭಿನಯಿಸಿದ್ದಾರೆ ಎಂದರು. ನಿರ್ಮಾಪಕರಾದ ಕೆ.ಸತ್ಯೇಂದ್ರ ಪೈ ಅವರು ಮಾತಾನಾಡಿ, ಪೆನ್ಸಿಲ್ ಬಾಕ್ಸ್ ಎಂಬ ಚಿತ್ರದ ನಿರ್ದೇಶಕರಾದ ರಝಾಕ್ ಪತ್ತೂರು ಇವರು ಸ್ಕೂಲ್ ಲೀಡರ್ ಚಿತ್ರವನ್ನು ಕಥೆ, ಚಿತ್ರ ಕಥೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ.ಚಿತ್ರದಲ್ಲಿ ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ದೀಪಕ್ ರೈ, ರಮೇಶ್ ಭಟ್ ನಟಿಸಿದ್ದಾರೆ ಎಂದು ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ನಿರ್ದೇಶಕ ರಝಾಕ್ ಪುತ್ತೂರು, ನಿರ್ಮಾಪಕ ಕೆ.ಸತ್ಯೇಂದ್ರ…

Read More

ಮಂಗಳೂರು, ಮೇ. 27 :  ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಬಳಿ ನಡೆದ ಅಬ್ದುಲ್   ರಹಿಮಾನ್ ಎಂಬತನ  ಹತ್ಯೆಯ ನಂತರ ಉಂಟಾಗಿರುವ ಉದ್ವಿಗ್ನ  ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು,  ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ. ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ  ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 163ರಂತೆ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿದ್ದ ವರದಿಯನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಯವರು ಮೇ 27 ರಂದು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮೇ 27 ರಂದು ಸಂಜೆ 6.00 ಗಂಟೆಯಿಂದ ಮೇ 30 ರಂದು ಸಂಜೆ 6.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

Read More

ಮಂಗಳೂರು, ಮೇ. 27 ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಮಂಗಳೂರು ಬಂದ್‌ಗೆ ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿಶ್ವ ಹಿಂದೂ ಪರಿಷತ್  ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧನದ ಸುದ್ದಿ ಹರಡುತ್ತಿದ್ದಂತೆ, ವಿವಿಧ ಸಂಘಟನೆಗಳ ಕಾರ್ಯಕರ್ತರು ಕದ್ರಿ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದರು. ಡಿಸಿಪಿ ರವಿಶಂಕರ್ ಪೊಲೀಸ್ ಠಾಣೆಗೆ ಭೇಟಿ ನೀಡಿ, ನಿಷೇಧಾಜ್ಞೆ ಜಾರಿಯಲ್ಲಿದ್ದ ಕಾರಣ, ಜನಸಮೂಹವನ್ನು ಠಾಣೆಯ ಆವರಣದಿಂದ ಚದುರಿಸಿದರು. ನಂತರ ಶರಣ್ ಪಂಪ್‌ವೆಲ್‌ನನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದರು.

Read More

ಮಂಗಳೂರು, ಮೇ. 27 : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಆಶ್ರಯದಲ್ಲಿ ಜೂ. 1ರಂದು ಭಾನುವಾರ ಅಡ್ಯಾರ್ ಗಾರ್ಡನ್‌ನಲ್ಲಿ “ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025′ ರಾಷ್ಟ್ರೀಯ ಕಲಾ ಸಮ್ಮೇಳನ ನಡೆಯಲಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ರಾಷ್ಟ್ರೀಯ ಕಲಾ ಸಮ್ಮೇಳನ ಬೆಳಗ್ಗೆ 9.30 ರಿಂದ ರಾತ್ರಿ 11ರವರೆಗೆ 9 ನಡೆಯಲಿದೆ. ಸ್ಪೀಕರ್ ಯು. ಟಿ. ಖಾದರ್ ಉದ್ಘಾ ಟಿಸುವರು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡುವರು. ಉದ್ಯಮಿ ಶಶಿಧರ ಬಿ. ಶೆಟ್ಟಿ ಅಧ್ಯಕ್ಷತೆ ವಹಿಸುವರು. ಬೆಳಗ್ಗೆ 11ಕ್ಕೆ ಡಾ ಎಂ. ಮೋಹನ ಆಳ್ವ ಅವರ ಉಪಸ್ಥಿತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ರಾಷ್ಟ್ರೀಯ ಕಲಾ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದರು. ಡಾ.ಆಳ್ವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ ಭಾರತದ 8 ಶಾಸ್ತ್ರೀಯ ಕಲೆಗಳ ಪ್ರದರ್ಶನ,…

Read More

ಉಡುಪಿ, ಮೇ. 26 : ಅಜ್ಜರಕಾಡಿನ ಮಹಿಳೆಯೊಬ್ಬರು ಚರ್ಚ್‌ನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಮೇ. 25 ರವಿವಾರ ನಡೆದಿದೆ. ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿ ನಿವಾಸಿ ಶಾಂತಿ (52) ಎಂದು ಗುರುತಿಸಲಾಗಿದೆ. ರವಿವಾರ ಶಾಂತಿ ಅವರು ಅಜ್ಜರಕಾಡಿನ ಚರ್ಚ್‌ನಲ್ಲಿ ಬೆಳಿಗ್ಗೆ ಪ್ರಾರ್ಥನೆ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತುಆಗಲೇ ಮೃತ ಹೊಂದಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಳ್ಳಾಲ, ಮೇ 25: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಸೋಮೇಶ್ವರ ಗ್ರಾಮದ ಪಿಲಾರು ಅಂಬಿಸಾದಿ ನಿವಾಸಿ ಮನೋಜ್ ಗಟ್ಟಿ(54) ಎಂದು ಗುರುತಿಸಲಾಗಿದೆ. ಮನೋಜ್ ಅವರು ಶುಕ್ರವಾರ ರಾತ್ರಿ ಕೋಟೆಕಾರಿನ ಕೊಂಡಾಣ ಕ್ಷೇತ್ರದ ಕಡೆಯ ಬಂಡಿ ಉತ್ಸವಕ್ಕೆ ಬೈಕಲ್ಲಿ ತೆರಳಿ, ರಾತ್ರಿ ವಾಪಸ್ ಆಗುತ್ತಿದ್ದಾಗ ವೇಳೆ ಕೊಲ್ಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ  ಸ್ಥಳೀಯರು ಅವರನ್ನು  ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More

ಮಂಗಳೂರು, ಮೇ 24: ಮೇ 2025:ಸ್ಟಾನ್ಲಿ ಬೂಟೀಕ್ ಮಂಗಳೂರಿನಲ್ಲಿ ತನ್ನ ಮೊದಲ ಶೋರೂಮ್ ಅನ್ನು VK ಗ್ರೂಪ್ ಜೊತೆಗೆ ಪಾಲುದಾರಿಕೆಯಲ್ಲಿ ಯೆಯ್ಯಾಡಿ ಶರ್ಬತ್‌ಕಟ್ಟೆಯಲ್ಲಿ ಭಾನುವಾರ ಪ್ರಾರಂಭಗೊಳ್ಳಲಿದೆ ಎಂದು ಸ್ಟಾನ್ಲಿ ಲೈಫ್‌ಸ್ಟೈಲ್ಸ್ನ ಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಸುನಿಲ್ ಸುರೇಶ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಸ್ಟಾನ್ಲಿ ಬೂಟೀಕ್ ಹೊಸ ಶೋರೂಮ್ ಮಂಗಳೂರಿನ ಮನೆಮಾಲೀಕರಿಗೆ ಅವಶ್ಯಕತೆಯುಳ್ಳ ಅಸಾಧಾರಣ ಶಾಪಿಂಗ್ ಅನುಭವವನ್ನು ನೀಡಲು ವಿನ್ಯಾಸಗೊಳಿಸಲಾದ ಸೋಫಾಗಳು, ರೆಕ್ಲೈನರ್‌ಗಳು, ಹಾಸಿಗೆಗಳು, ಹಾಸಿಗೆಗಳು, ಊಟದ ಟೇಬಲ್‌ಗಳು, ಆರ್ಮ್‌ಚೇರ್‌ಗಳು ಮತ್ತು ಪರಿಕರಗಳ ಸಂಗ್ರಹಿಸಲಾದ ಸಂಗ್ರಹವನ್ನು ಪ್ರದರ್ಶಿಸುತ್ತದೆ ಎಂದರು. ಸ್ಟಾನ್ಲಿ ಲೈಫ್‌ಸ್ಟೈಲ್ಸ್ ಅತ್ಯಾಧುನಿಕ ಸೌಂದರ್ಯವನ್ನು ಉನ್ನತ ಕರಕುಶಲತೆಯೊಂದಿಗೆ ಸಂಯೋಜಿಸುವ ತಲ್ಲೀನಗೊಳಿಸುವ ವಿನ್ಯಾಸ ಅನುಭವವನ್ನು ನೀಡುವ ಗುರಿಯನ್ನು ಹೊಂದಿದೆ. ಪ್ರತಿಯೊಂದು ಉತ್ಪನ್ನವು ಗುಣಮಟ್ಟ ಮತ್ತು ನಾವೀನ್ಯತೆಗೆ ಬ್ರ್ಯಾಂಡ್ನ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ, ಇದು ಉನ್ನತ ದರ್ಜೆಯ ಆಮದು ಮಾಡಿದ ನಿಜವಾದ ಚರ್ಮ ಮತ್ತು ಬೆಸ್ಪೋಕ್ ಗ್ರಾಹಕೀಕರಣ ಆಯ್ಕೆಗಳನ್ನು ಒಳಗೊಂಡಿದೆ ಮಧ್ಯಮ-ಪ್ರೀಮಿಯಂ ಮತ್ತು ಉನ್ನತ-ಮಟ್ಟದ ಪೀಠೋಪಕರಣ ವರ್ಗಗಳ ನಡುವಿನ…

Read More