Author: admin

ಸುಳ್ಯ, ಸೆ. 04 : ಹುಂಡೈ 25ನೇ ವಾರ್ಷಿಕೋತ್ಸವ ಶುಭ ಸಂದರ್ಭದಲ್ಲಿ ಸುಳ್ಯ ಓಡಬಾಯಲ್ಲಿ ಅದ್ವೈತ್ ಹುಂಡೈ ಶೋರೂಂ ಉದ್ಘಾಟನೆಗೊಂಡಿತು. ಅದ್ವೈತ್ ಹುಂಡೈ ಆಡಳಿತ ನಿರ್ದೇಶಕರಾದ ಡಾ.ಎಸ್ ವಿ ಎಸ್ ಸುಬ್ರಹ್ಮಣ್ಯ ಗುಪ್ತಾ ಅವರು ಹುಂಡೈ ಶೋರೂಂ ನ್ನು ಉದ್ಘಾಟಿಸಿದರು. ಹುಂಡೈ ಸಿನೀಯರ್ ಆರ್ ಎಸ್ ಓ ವ್ಯವಸ್ಥಾಪಕ ಶರತ್ತ್ ತುಳಸಿಗರೆ ಅವರು ಸಭಾ ಕಾರ್ಯವನ್ನು ಉದ್ದೇಶಿಸಿ ಮಾತನಾಡಿದರು. ಹುಂಡೈ ಶೋರೂಂ ಕಟ್ಟಡ ಮಾಲಕರಾದ ಶಶಿಕಲಾ ಶುಭಕರ ರಾವ್ ಕುಂಭಕ್ಕೊಡು,ರಾಜೇಶ್ ಪುತ್ತೂರು, ಸೇಲ್ಸ್ ಹೆಡ್ಡ್ ಶಿವಪ್ರಸಾದ್ ಎ.ಎಸ್, ಅದ್ವೈತ್ ಹುಂಡೈ ನ ಸರ್ವಿಸ್&ಪಾರ್ಟ್ಸ್ ವಿಭಾಗದ ನಿರ್ದೇಶಕ ರಾಧಾಕೃಷ್ಣ ಗೌಡ,ಸೇಲ್ಸ್ & ಮಾರ್ಕೆಟಿಂಗ್ ವಿಭಾಗದ ನಿರ್ದೇಶಕ ಅಜಯ್ ಸಿಂಗ್, ಕರ್ನಾಟಕ ಸೇವಾ ಭಾರತಿ ಕಾರ್ಯದರ್ಶಿ ಕೆ.ಚೆನ್ನಯ್ಯ ಸ್ವಾಮಿ, ಸರ್ವಿಸ್ ವಿಭಾಗದ ಕ್ಲಸ್ಟರ್ ಹೆಡ್ಡ್ ಶಶಿಕಾಂತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Read More

ಜೋಹಾನ್ಸ್‌ಬರ್ಗ್‌ , ಸೆ. 3 : ಐದಂಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ ಕನಿಷ್ಠ 63 ಮಂದಿ ಮೃತಪಟ್ಟ ಘಟನೆ ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ಗುರುವಾರ ನಡೆದಿದೆ. ಸುಮಾರು 200 ಜನರು ಕಟ್ಟಡದಲ್ಲಿ ವಾಸವಿದ್ದರು ಎನ್ನಲಾಗಿದೆ. ಮಧ್ಯ ಜೋಹಾನ್ಸ್‌ಬರ್ಗ್‌ ನ ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 63 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆಯೆಂದು ತುರ್ತು ನಿರ್ವಾಹಣಾ ಅಧಿಕಾರಿಗಳು ಹೇಳಿದ್ದಾರೆ.

Read More

ಜೈಪುರ, ಸೆ 02 : ಹಿಟ್ಟಿನ ಗಿರಣಿಯಲ್ಲಿ ವಿದ್ಯುತ್ ಸ್ಪರ್ಶಗೊಂಡು ಒಂದೇ ಕುಟುಂಬದ 4 ಮಂದಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಹಿಟ್ಟಿನ ಗಿರಣಿ ಅರ್ಜುನ ಸಿಂಗ್ ಎಂಬವರಿಗೆ ಸೇರಿದ್ದು, ಘಟನೆ ನಡೆದ ಸಮಯದಲ್ಲಿ ಅರ್ಜುನ ಸಿಂಗ್ ಅವರು ಕೆಲಸದ ನಿಮಿತ್ತ ದೆಹಲಿಯಲ್ಲಿದ್ದರು. ಅವರ ಪತ್ನಿ ಹಿಟ್ಟಿನ ಗಿರಣಿ ಯಂತ್ರವನ್ನು ನಿರ್ವಹಿಸುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದಿದೆ. ತಾಯಿಯನ್ನು ರಕ್ಷಿಸಲು ಇಬ್ಬರು ಪುತ್ರರು ಧಾವಿಸಿದ್ದು, ಅವರಿಗೂ ವಿದ್ಯುತ್ ತಗುಲಿದೆ. ಅರ್ಜುನವರ ಮಾವ ಮೂವರನ್ನು ವಿದ್ಯುತ್ ಶಾಕ್ ನಲ್ಲಿ ನೋಡಿದಾಗ ಅವರನ್ನು ರಕ್ಷಣೆ ಮಾಡಲು ಹೋಗಿದ್ದು, ಅವರು ಕೂಡ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Read More

ಗುಜರಾತ್, ಸೆ. 01 : ಕಕ್ರಾಪರ್ ನ  3ನೇ  ಹಂತದ ಪರಮಾಣು ವಿದ್ಯುತ್ ಸ್ಥಾವರ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಆರಂಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ ನಲ್ಲಿರುವ ಕಕ್ರಾಪರ್ ನಲ್ಲಿ ಈಗಾಗಲೇ ಎರಡು ಸ್ಥಾವರಗಳು 220 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯನ್ನು ಸಾಮರ್ಥ್ಯ ಹೊಂದಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ‘ಭಾರತ ಮತ್ತೊಂದು ಸಾಧನೆ ಮಾಡಿದೆ. 700 MW ಸಾಮರ್ಥ್ಯದ ಗುಜರಾತ್ನ ಮೊದಲ ಅತಿದೊಡ್ಡ ಸ್ವದೇಶಿ ನಿರ್ಮಿತ ಕಕ್ರಾಪರ್ ಪರಮಾಣು ವಿದ್ಯುತ್ ಸ್ಥಾವರದ ಘಟಕ-3 ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿದೆ. ಅದಕ್ಕಾಗಿ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಅಭಿನಂದನೆಗಳು ಎಂದು ಮೆಚ್ಚಿಗೆ ಸೂಚಿಸಿದ್ದಾರೆ.

Read More

ಕುಂದಾಪುರ, ಸೆ. 01 : ಹತ್ತನೇ ತರಗತಿ ಓದುತ್ತಿದ್ದ, ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಕೋಣೆ ಎಂಬಲ್ಲಿ ನಡೆದಿದೆ. ಮೃತರನ್ನು ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕರಾಗಿರುವ ಪಡುಕೋಣೆ ನಿವಾಸಿಗಳಾದ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು(16) ಎಂದು ಗುರುತಿಸಲಾಗಿದೆ. ಸಿಂಧು ಕುಂದಾಪುರದ ವಡೇರಹೋಬಳಿ ಎಂಬಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು ಸಮೀಪದ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದಳು. ಈಕೆ ಗುರುವಾರ ಅನಾರೋಗ್ಯದ ಕಾರಣ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸುಳ್ಯ, ಆ. 31 : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ ಘಟನೆ ಅಡ್ಕಾರಿನಲ್ಲಿ ನಡೆದಿದೆ. ಮೃತರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರಿಗೆ ಢಿಕ್ಕಿಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರಲ್ಲಿ ವೆಂಕಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು, ಆ. 30 : ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಗಂಧಕ ಇರುವುದನ್ನು ಚಂದ್ರನ ಅಂಗಳದಲ್ಲಿ ಸಂಚರಿಸುತ್ತಿರುವ ಚಂದ್ರಯಾನ-3 ರೋವರ್(ಪ್ರಜ್ಞಾನ್) ನಲ್ಲಿರುವ ಲೇಸರ್ ಇಂಡ್ಯೂಸ್ ಬ್ರೇಕ್ಡೌನ್ ಸ್ಪೆಕ್ಟ್ರೋಸ್ಕೋಪ್ ಉಪಕರಣವು ಪತ್ತೆ ಮಾಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮಂಗಳವಾರ ತಿಳಿಸಿದೆ. ನಿರೀಕ್ಷಿಸಿದಂತೆ, ಪ್ರಗ್ಯಾನ್ ರೋವರ್, ಅಲ್ಯೂಮಿನಿಯಂ, ಕ್ಯಾಲ್ಸಿಯಂ, ಕಬ್ಬಿಣ, ಕ್ರೋಮಿಯಂ, ಟೈಟಾನಿಯಂ, ಮ್ಯಾಂಗನೀಸ್, ಸಿಲಿಕಾನ್ ಮತ್ತು ಆಮ್ಲಜನಕವನ್ನು ಪತ್ತೆ ಮಾಡಿದೆ ಎಂದು ಇಸ್ರೋ ಹೇಳಿದೆ. ಲಿಬ್ (ಲೇಸರ್ ಇಂಡ್ಯೂಸ್ ಬ್ರೇಕ್‌ಡೌನ್ ಸ್ಪೆಕ್ರೋಸ್ಕೋಪ್) ಉಪಕರಣವನ್ನು ಬೆಂಗಳೂರಿನ ಎಲೆಕ್ಟ್- ಆಪ್ಟಿಕ್ಸ್ ಸಿಸ್ಟಮ್ ಪ್ರಯೋಗಾಲಯ ಅಭಿವೃದ್ಧಿಪಡಿಸಿತ್ತು.

Read More

ಉಳ್ಳಾಲ, ಆ. 29: ಸ್ನೇಹಿತರ ಜತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದ ಯುವಕನೋರ್ವ ನೀರುಪಾಲಾಗಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ಮೃತರನ್ನು ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ದಿ. ಸುಬ್ರಾಯ ಆಚಾರ್ಯ-ಉಮಾವತಿ ದಂಪತಿ ಪುತ್ರ ಹರಿಪ್ರಸಾದ್ ಆಚಾರ್ಯ(36) ಎಂದು ಗುರುತಿಸಲಾಗಿದೆ. ತಲಪಾಡಿಯಲ್ಲಿರುವ ಖಾಸಗಿ ಜಾಗದಲ್ಲಿರುವ ಕೊಳಕ್ಕೆ ಸ್ನಾನಕ್ಕೆಂದು ಬಂದಿದ್ದ ನಾಲ್ವರ ಪೈಕಿ ಹರಿಪ್ರಸಾದ್ ನೀರಿನಡಿಯ ಕೆಸರಿನಲ್ಲಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More

ಬೈಂದೂರು, ಆ. 28 : ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ನೀರು ಪಾಲಾದ ಘಟನೆ ರವಿವಾರ ಅಳ್ವೆಗದ್ದೆಯಲ್ಲಿ ನಡೆದಿದೆ. ಮೃತರನ್ನು ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಎಂದು ಗುರುತಿಸಲಾಗಿದೆ. ಕೆಲ ದಿನಗಳಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಕೈರಂಪಣಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಕಡಲ ಸಮುದ್ರ ಪಾಲಾಗಿದ್ದಾರೆ ಎನ್ನಲಾಗಿದೆ.

Read More

ಮಂಗಳೂರು, ಆ. 27 : ಟಿಪ್ಪರ್ ಮತ್ತು ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಅಡ್ಯಾರ್ನಲ್ಲಿ ನಡೆದಿದೆ. ಮೃತರನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ. ಶರಫುದ್ದೀನ್ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

Read More