Author: admin

ಸ್ಯಾನ್ ಡಿಯಾಗೋ, ಆ. 26 ; ಅಮೆರಿಕದ ನೌಕಾಪಡೆಯ ಮೆರೈನ್ ಕಾರ್ಪ್ಸ್ ಎಫ್/ಎ-18 ಹಾರ್ನೆಟ್ ಫೈಟರ್ ಜೆಟ್ ಪತನಗೊಂಡು ಒಬ್ಬ ಪೈಲೆಟ್ ಸಾವನ್ನಪ್ಪಿದ ಘಟನೆ ಸ್ಯಾನ್ ಡಿಯಾಗೋ ದಲ್ಲಿ ನಡೆದಿದೆ. ಅಪಘಾತದ ಸ್ಥಳವು ಮೆರೆನ್ ಕಾರ್ಪ್ ಏರ್ ಸ್ಟೇಷನ್ ಮಿರಾಮರ್ ಬಳಿ ಇದೆ. ಗುರುವಾರ ಮಧ್ಯರಾತ್ರಿ ಫೈಟರ್ ಜೆಟ್ ಪತನಗೊಂಡಿದೆ.ಅಪಘಾತದ ನಂತರ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ತಂಡ ಖಚಿತಪಡಿಸಿದೆ. ಫೈಟರ್ ಜೆಟ್ ಪತನದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

Read More

ಕಾರ್ಕಳ, ಆ.24: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಜನೀಶ್ (18) ಎಂದು ಗುರುತಿಸಲಾಗಿದೆ. ರಜನೀಶ ಅವರು ಕಳೆದ ಹಲವು ಸಮಯದಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, ಉಡುಪಿಯ ಆಸ್ವತ್ರೆಯೊಂದಕ್ಕೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿದ್ದರು. ಆ.. 20 ಭಾನುವರ ಏಕಾಎಕಿ ವಾಂತಿ ಜ್ವರ ಉಲ್ಬಣಗೊಂಡಿದ್ದು ಉಡುಪಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Read More

ಐಜ್ವಾಲ್, ಆ 23 : ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿರುವ ಘಟನೆ ಮಿಜೋರಾಂನಲ್ಲಿ ನಡೆದಿದೆ. ಬುಧವಾರ ಐಜ್ವಾಲ್ ಸಮೀಪದ ಸಾಯಿರಾಂಗ್ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದೆ. ಇದರ ಪರಿಣಾಮ 17 ಮಂದಿ ಸಾವನ್ನಪ್ಪಿ ಹಲವರು ಮಂದಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ನೀಡುವುದಾಗಿ ಘೋಷಿಸಿದ್ದಾರೆ.

Read More

ಕಾಸರಗೋಡು, ಆ. 22 : ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ಇಬ್ಬರು ನೌಕರರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆ. 20, ರವಿವಾರ ನೀಲೇಶ್ವರ ದ ತೈಕಡಪ್ಪುರದಲ್ಲಿ ನಡೆದಿದೆ. ಮೃತರನ್ನು ರಾಜೇಶ್ (35) ಮತ್ತು ರಕ್ಷಣಾ ಬೋಟ್ ನ ನೌಕರ ಸನೀಶ್ ( 32) ಎಂದು ಗುರುತಿಸಲಾಗಿದೆ. ಮೀನು ಹಿಡಿಯುತ್ತಿದ್ದ ವೇಳೆ ರಾಜೇಶ್ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದು , ಅವರನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ ಸನೀಶ್ ಕೂಡಾ ನೀರುಪಾಲಾಗಿದ್ದಾರೆ. ಕರಾವಳಿ ಪೊಲೀಸರು, ಸ್ಥಳೀಯರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

Read More

ಬೆಳಗಾವಿ, ಆ. 21: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಹಲವು ಪ್ರಯತ್ನಗಳ ನಂತರವೂ ಸಫಲತೆ ಸಿಗದ ಹಿನ್ನೆಲೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ ನಡೆದಿದೆ. ಮೃತರನ್ನು ಬೆಳಗಾವಿ ಸಮೀಪದ ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ ಅಪ್ಪಾಸೊ ಶಿವಾಜಿ ಪಾನಡೆ (24) ಎಂದು ಗುರುತಿಸಲಾಗಿದೆ. ಶಿವಾಜಿ ಪಾನಡೆ ಅವರು ಬಾಲ್ಯದಿಂದಲೂ ಸೇನೆಗೆ ಸೇರುವ ಕನಸನ್ನು ಕಂಡಿದ್ದನು. ಅದಕ್ಕಾಗಿ ಹಲವು ಬಾರಿ ಮಾಡಿದ ಪ್ರಯತ್ನಗಳು ಕೈಗೂಡಿರಲಿಲ್ಲ. ಕನಸು ನನಸಾಗದ ಕೊರಗಿನಲ್ಲಿ ಶಿವಾಜಿ ಅವರು ತನ್ನ ಮನೆಯಲ್ಲಿನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾನೆ ಎನ್ನಲಾಗಿದೆ. ನಿಪ್ಪಾಣಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಬಂಟ್ವಾಳ, ಆ. 19: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ನಿವಾಸಿ, ಬಾಯಾರು ಮುಳಿಗದ್ದೆ ಹೆದ್ದಾರಿ ಎ.ಯು.ಪಿ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪಿ.ಎನ್.ಗೋವಿಂದ ಭಟ್ (89) ಅವರು ಆ, 16 ಬುಧವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. 21-08-1934ರಲ್ಲಿ ಜನಿಸಿದ ಇವರು, ಶಿಕ್ಷಕ ವೃತ್ತಿಯಿಂದ ನಿವೃತ್ತಿಯಾದ ಬಳಿಕ ಅದೇ ಶಾಲೆಯ ಮಿತ್ರ ಮಂಡಳಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.ಕರೋಪಾಡಿ ವ್ಯವಸಾಯಿಕ ಸಹಕಾರಿ ಬ್ಯಾಂಕಿನಲ್ಲಿ ಎರಡು ಬಾರಿ ನಿರ್ದೇಶಕರಾಗಿ ನಿರ್ವಹಿಸಿದ್ದಾರೆ.

Read More

ಬಿಹಾರ, ಆ. 18: ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.ಮೃತರನ್ನು ಬಿಮಲ್ ಯಾದವ್ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಮುಂಜಾನೆ ಬಿಮಲ್ ಯಾದವ್ ಅವರ ಮನೆಯ ಬಾಗಿಲು ತಟ್ಟಿದ್ದು,ಬಾಗಿಲು ತೆಗೆದಾಕ್ಷಣ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪ್ರದೇಶದ ಸಂಸದರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

Read More

ಶಿಮ್ಲಾ, ಆ. 17:ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತಿರುವ ಮಳೆಯಿಂದಾಗಿ 71 ಮಂದಿ ಸಾವನ್ನಪ್ಪಿದ್ದಾರೆ. 2,500 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈಗಿಂತ ಆಗಸ್ಟ್ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ 71 ಮಂದಿ ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಮಳೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Read More

ತಿರುವನಂತಪುರ, ಆ. 16 : ತಾಯಿ ಹಾಲು ಕುಡಿದು ಮಲಗಿದ್ದ 3 ತಿಂಗಳ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಎದೆ ಹಾಲು ಮಗುವಿನ ಶ್ವಾಸನಾಳಕ್ಕೆ ಸೇರಿ ಮಗು ಮೃತಪಟ್ಟಿದೆ ಎನ್ನಲಾಗಿದೆ. ಪಳ್ಳಿಚಲ್ ಮೂಲದ ಜಯಕೃಷ್ಣನ್ ಮತ್ತು ಜಾನಿಮೋಲ್ ದಂಪತಿಯ ಏಕೈಕ ಪುತ್ರ ಜಿತೇಶ್ ಮೃತ ಮಗುವಾಗಿದೆ. ಭಾನುವಾರ ರಾತ್ರಿ ಮಗುವಿಗೆ ಹಾಲುಣಿಸಿ ಮಲಗಿಸಿದ್ದರು. ಆದರೆ ಸೋಮವಾರ ಬೆಳಗ್ಗೆಯಾದರೂ ಮಗು ಎದ್ದಿಲ್ಲ ಇದನ್ನು ಕಂಡು ಪೋಷಕರು ಸೋಮವಾರ ಬೆಳಗ್ಗೆ ಮಗುವನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ವೈದ್ಯರು ಪರೀಕ್ಷೆ ನಡೆಸಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಅಂತೆಯೇ ಪೋಷಕರು ಎಸ್ಐಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ.

Read More

ಮಂಗಳೂರು, ಆ. 15 : ನಗರದ ನೆಹರೂ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ,  ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Read More