Author: admin

ಪುತ್ತೂರು, ಜೂ. 05 : ಮರದ ದಿಮ್ಮಿಯನ್ನುವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ  ಪುತ್ತೂರಿನ ಸುಳ್ಯಪದವು ಎಂಬಲ್ಲಿ ಜೂ.5, ಸೋಮವಾರ ನಡೆದಿದೆ. ಮೃತ ವ್ಯಕ್ತಿಯನ್ನು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ಗೋಪಾಲಕೃಷ್ಣ ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದು, ಟಿಪ್ಪರ್ನ ಹಿಂದಿನ ಬಾಗಿಲನ್ನು ಸರಿಪಡಿಸುವ ವೇಳೆ ಮರದ ದಿಮ್ಮಿ ಮೈಮೇಲೆ ಬಿದ್ದಿದೆ. ಈ ಪರಿಣಾಮ ಗಂಭೀರ ಗಾಯಗೊಂಡಿದ್ದ ಗೋಪಾಲಕೃಷ್ಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.

Read More

ಉಳ್ಳಾಲ, ಜೂ. 04: ಟೊಯಿಂಗ್ ವಾಹನ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವೃದ್ದರೋರ್ವರು ಮೃತಪಟ್ಟಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ರಾ.ಹೆ.66 ರಲ್ಲಿ ಜೂ . 2, ಶುಕ್ರವಾರ ನಡೆದಿದೆ. ಟೋಯಿಂಗ್ ವಾಹನ ಉಳ್ಳಾಲ ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಾಪು ಎಂಬಲ್ಲಿ ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಪಘಾತ ಸಂಭವಿಸಿ ಮೃತಪಟ್ಟ ವ್ಯಕ್ತಿ ಅಂದಾಜು 70ರ ಹರೆಯದವರಾಗಿದ್ದು, ಅವರ ಬಳಿ ಯಾವುದೇ ಗುರುತಿನ ಚೀಟಿಗಳು ಲಭ್ಯವಾಗಿಲ್ಲ. ವಾರೀಸುದಾರರಿದ್ದಲ್ಲಿ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Read More

ಕುಲಶೇಖರ,ಮೇ.27: ಕುಲಶೇಖರ ಶ್ರೀ ವೀರನಾರಾಯಣ ಕ್ಷೇತ್ರದಲ್ಲಿ ಶ್ರೀ ವೀರನಾರಾಯಣ ದೇವರಿಗೆ 74 ವರ್ಷದ ಬಳಿಕ ಬ್ರಹ್ಮಕಲಶಾಭಿಷೇಕವು ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಬಿ. ಶ್ರೀಪಾದರು, ಮಾಣಿಲ ಶ್ರೀಗಳ ಉಪಸ್ಥಿತಿಯಲ್ಲಿ ಕ್ಷೇತ್ರದ ತಂತ್ರಿಗಳ ನೇತೃತ್ವದಲ್ಲಿ ಮೇ.24,ಬುಧವಾರ ಬೆಳಗ್ಗೆ ಜರಗಿತು. ಬುಧವಾರ ಬೆಳಗ್ಗೆ ಕವಾಟೋದ್ಘಾಟನೆ, ತೈಲಾಭಿಷೇಕ, ಹೋಮ ಕಲಶಾಭಿಷೇಕ, ತತ್ತ್ವಕಲಶಾಭಿಷೇಕ, ಪರಿಕಲಶಾಭಿಷೇಕಕ್ಕೆ ಉಡುಪಿಯ ಪೇಜಾವರ ಶ್ರೀ ಗಳ ಉಪಸ್ಥಿತಿಯಲ್ಲಿ ನಡೆಯಿತು. ಪ್ರಾತಃ 8.05ರಿಂದ ಶ್ರೀ ವೀರನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ ಪ್ರಸನ್ನ ಪೂಜೆ, ಅವಸ್ರುತೋಕ್ಷಾ ಬಲಿ, ಮಹಾ ಮಂತ್ರಾಕ್ಷತೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಬಲಿ ಹೊರಟು ಉತ್ಸವ, ರಥೋತ್ಸವ, ಪಲ್ಲ ಪೂಜೆ, ಮಹಾ ಅನ್ನಸಂತರ್ಪಣೆ, ಸಂಜೆ ರಂಗಪೂಜೆ, ಬಲಿ ಉತ್ಸವ, ರಥೋತ್ಸವ, ಪಲಕ್ಕಿ ಉತ್ಸವ, ವಸಂತ ಪೂಜೆ ನಡೆಯಿತು.ಈ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ಹೆಚ್ಚಿಗೆ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು, ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿ ಪದಾಧಿಕಾರಿಗಳಾದ ಮಯೂರ್ ಉಳ್ಳಾಲ, ಪುರುಷೋತ್ತಮ ಕುಲಾಲ್ ಬಿ.ಪ್ರೇಮಾನಂದ ಕುಲಾಲ್, ಗೀತಾ ಮನೋಜ್, ಗಿರಿಧರ ಜೆ. ಮೂಲ್ಯ, ಬಿ.…

Read More

ಮೈಸೂರು, ಮೇ. 26 : ಜಿ.ಎಚ್.ನಾಯಕ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ವಿಮರ್ಶಕರಾದ ಗೋವಿಂದರಾಯ ಹಮ್ಮಣ್ಣ ನಾಯಕ(88) ಅವರು ಶುಕ್ರವಾರ ನಿಧನ ಹೊಂದಿದ್ದಾರೆ. ಜಿ.ಎಚ್.ನಾಯಕ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಮುಂದೆ ಪ್ರಾಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಎಚ್.ನಾಯಕ ಅವರು ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರು. ಅವರು ಪತ್ನಿ ಮೀರಾ, ಪುತ್ರಿ ಕೀರ್ತಿ ಹಾಗೂ ಮೊಮ್ಮಗಳನ್ನು ಅಗಲಿದ್ದಾರೆ.

Read More

ಮಂಗಳೂರು, ಮೇ. 25 : ಸರಕಾರದ ನಿಯಮದಂತೆ ಕರಾವಳಿಯಲ್ಲಿ ಜೂ. 1ರಿಂದ ಜು. 31ರ ವರೆಗೆ ಎರಡು ತಿಂಗಳು ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ. ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧವಾಗಿರುವುದು ಹಾಗೂ ಮೀನು ಸಂತಾನೋತ್ಪತ್ತಿ ಮಾಡುವ ಹಿನ್ನೆಲೆ ಮೀನುಗಾರಿಕೆ ನಿಷೇಧಿಸಲಾಗಿದೆ.

Read More

ಉಡುಪಿ,ಮೇ.24: ಮಗಳ ಮದುವೆ ಕಾರ್ಯಕ್ಕೆಂದು ಮುಂಬೈಯಿಂದ ಬಂದು ಹೊಟೇಲಿನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೇ 21ರಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ. ಮೇ22ಕ್ಕೆ ಇವರ 2ನೇ ಮಗಳಿಗೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು, ಈ ಸಂದರ್ಭದಲ್ಲಿ ಮೇ19ರಂದು ಇಡೀ ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೇಲೊಂದರಲ್ಲಿ ತಂಗಿದ್ದರು, ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಕಾಲು ಜಾರಿ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹೈದರಾಬಾದ್, ಮೇ. 22 : ಕನ್ನಡ, ತಮಿಳು, ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು (73 ) ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಬಾಬು ಅವರು ಹೈದರಾಬಾದ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಶರತ್ ಬಾಬು ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

Read More

ಮಂಗಳೂರು, ಮೇ. 20:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದಂತೆ ದ. ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಮ.ನ.ಪಾ. ಮಾಜಿ ಮೂಡ ಅಧ್ಯಕ್ಷ ಸುರೇಶ್ ಬಲ್ಲಾಳ್, ವಿಪಕ್ಷ ನಾಯಕ ನವೀನ್ ಡಿ ಸೋಜಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಾಹುಲ್ ಹಮೀದ್ ಕೆ.ಕೆ., ಶುಭೋದಯ ಆಳ್ವಾ,ನಿರಾಜ್ ಪಾಲ್, ವಿಶ್ವಾಸ್ ಕುಮಾರ್ ದಾಸ್, ಗಣೇಶ್ ಪೂಜಾರಿ, ಸಬಿತಾ ಮಿಸ್ಕಿತ್, ಮಂಜುಳಾ ನಾಯಕ್, ಸರೀಫ್ ಚೊಕ್ಕಬೆಟ್ಟು, ಹನೀಫ್ ಬೆಂಗ್ರೆ, ಪ್ರಶಾಂತ್ ಪೂಜಾರಿ, ಯೋಗೀಶ್ ಕುಮಾರ್, ಸಮರ್ಥ್ ಭಟ್, ಭುವನ್ ಕರ್ಕೇರ, ಇಮ್ರಾನ್ ಎ ಆರ್, ಟಿ ಕೆ ಸುಧೀರ್, ಯಶವಂತ್ ಪ್ರಭು, ಹನೀಫ್ ಸೋಲಾರ್, ಯೋಗೀಶ್ ಕುಮಾರ್, ನಝೀರ್ ಬಜಾಲ್ ಮೊದಲದವರು ಉಪಸ್ಥಿತರಿದ್ದರು.

Read More

ಬೆಂಗಳೂರು, ಮೇ. 13: ವಿಧಾನಸಭಾ ಚುನಾವಣೆ ಹೋರಾಟದಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಜಯ ಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಬಿಜೆಪಿ ಆಡಳಿತ ವಿರೋಧಿ ಅಲೆಗೆ ಕೊಚ್ಚಿ ಹೋಗಿ ಹೀನಾಯ ಸೋಲು ಕಂಡಿದ್ದು, ಕೇವಲ 66 ಕ್ಷೇತ್ರಗಳಲ್ಲಷ್ಟೇ ಗೆಲ್ಲಲು ಶಕ್ತವಾಗಿದೆ. ಜೆಡಿಎಸ್ ಪಕ್ಷ ಕೇವಲ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಈ ಫಲಿತಾಂಶದಿಂದ ಬಿಜೆಪಿ-ಜೆಡಿಎಸ್ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಈ ಚುನಾವಣೆಯಲ್ಲಿ ರಾಜ್ಯದ ಮತದಾರರು ಸ್ಥಿರ ಸರಕಾರ ಬೇಕೆಂಬ ಉದ್ದೇಶದೊಂದಿಗೆ ಒಂದೇ ಪಕ್ಷದ ಆಡಳಿತಕ್ಕೆ ಬಹುಮತದ ತೀರ್ಪು ನೀಡುವ ಮೂಲಕ ರಾಜಕೀಯ ಪ್ರಜ್ಞೆ ಮೆರೆದಿದ್ದಾರೆ.

Read More