Author: admin

ಮಂಗಳೂರು,ನ.11 : ಎಂಸಿಸಿ ಬ್ಯಾಂಕ್ ತನ್ನ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮವನ್ನು “ಸೈಬರ್ ಸೇಫ್ ಬ್ಯಾಂಕ್” ಎಂಬ ಶೀರ್ಷಿಕೆಯೊಂದಿಗೆ ನವೆಂಬರ್ 8, ಶನಿವಾರ ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಸಿತು. ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣದಲ್ಲಿ, ಬ್ಯಾಂಕಿನ ನ್ಯೂನತೆಗಳನ್ನು ಗುರುತಿಸುವಲ್ಲಿ ಮತ್ತು ಸಿಬ್ಬಂದಿಯನ್ನು ಹೆಚ್ಚಿನ ದಕ್ಷತೆಯತ್ತ ಮಾರ್ಗದರ್ಶನ ಮಾಡುವಲ್ಲಿ ನಾಯಕತ್ವ ವಹಿಸಿದ್ದಕ್ಕಾಗಿ ಆಡಳಿತ ಕಛೇರಿಯ ಎಲ್ಲಾ ವಿಭಾಗದ ಮುಖ್ಯಸ್ಥರ ಪ್ರಯತ್ನಗಳನ್ನು ಶ್ಲಾಘಿಸಿದರು.ಸಿಬ್ಬಂದಿ ಸದಸ್ಯರು ತಮ್ಮ ಗುರಿಗಳನ್ನು ಸಾಧಿಸಲು ವೃತ್ತಿಪರತೆ ಮತ್ತು ಬದ್ಧತೆಯೊಂದಿಗೆ ಕೆಲಸ ಮಾಡಬೇಕು. ಶಾಖಾ ವ್ಯವಸ್ಥಾಪಕರು ಮತ್ತು ಹಿರಿಯ ಅಧಿಕಾರಿಗಳು ತಮ್ಮ ಶಾಖೆಯ ಸಿಬ್ಬಂದಿಗೆ ಬ್ಯಾಂಕಿನ ಪ್ರಗತಿಗೆ ಅನುಗುಣವಾಗಿ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಬ್ಯಾಂಕಿನ ಉತ್ಪನ್ನಗಳು ಮತ್ತು ಸೇವೆಗಳ ಬಗ್ಗೆ ಸಂಪೂರ್ಣವಾಗಿ ತರಬೇತಿ ನೀಡಬೇಕು.ಸ್ಥಳೀಯ ಸಮುದಾಯದೊಂದಿಗೆ ವಿಶ್ವಾಸವನ್ನು ಬಲಪಡಿಸಲು ಮತ್ತು ಆಳವಾದ ಸಂಪರ್ಕವನ್ನು ನಿರ್ಮಿಸಲು ಬ್ಯಾಂಕಿನ ಸಾರ್ವಜನಿಕ ಸಂಪರ್ಕ ಪ್ರಯತ್ನಗಳನ್ನು…

Read More

ಮಂಗಳೂರು,ನ.11: ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮಡಿಕಲ್ ಕಾಲೇಜು ಮತ್ತು ಗ್ಲೋಬಲ್ ಹೋಮಿಯೋಪಥಿಕ್ ಫೌಂಡೇಷನ್ ವತಿಯಿಂದ ಅಂತಾರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ‘ಎಕ್ಸ್ ಫ್ಲೋರಾ-2025’ ಕಾರ್ಯಕ್ರಮ ನ. 14ರಿಂದ 16ರ ವರೆಗೆ ಕಂಕನಾಡಿಯ ಫಾದರ್ ಮುಲ್ಲರ್  ಕನ್ನೆನ್ನನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ ಎಂದು ಸೋಮವಾರ ಫಾದರ್ ಮುಲ್ಲರ್ ಸೇವಾ ಸಂಸ್ಥೆ ನಿರ್ದೇಶಕರಾದ ರೆವರೆಂಡ್ ಫಾದರ್ ಫೌಸ್ಕಿನ್ ಲ್ಯೂಕಾಸ್ ಲೋಬೋ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ನ. 14ರಂದು ಮಧ್ಯಾಹ್ನ 12ಕ್ಕೆ ಉದ್ಘಾಟನೆ ನಡೆಯಲಿದ್ದು ರಾಜ್ಯದ ಆಯುಷ್ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಕಮಲ ಬಾಯಿ ಬಿ.. ದಕ್ಷಿಣ ಆಫ್ರಿಕಾದ ದರ್ಬನ್ ತಾಂತ್ರಿಕ ವಿಶ್ವವಿದ್ಯಾನಿಲಯದ ಹೋಮಿಯೋಪಥಿ ವಿಭಾಗ ಮುಖ್ಯಸ್ಥೆ ಡಾ| ಹ್ಯಾಶ್ಲಿ ರೋಸ್, ಯುಕೆ ಫಂಕ್ಷನಲ್ ಶಿಫ್ಟ್ ಕನ್ಸಲ್ಟಿಂಗ್ ನ ನಿರ್ದೇಶಕ ಡಾ| ಕೀಮ್ ಅಂಟೊನಿ ಭಾಗವಹಿಸಲಿದ್ದಾರೆ. ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ವಂ| ಫಾವುಸ್ತಿನ್ ಲೂಕಸ್ ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಕಮಲಾ ಬಾಯಿ ಬಿ. (KAS), ಮುಖ್ಯ ಆಡಳಿತಾಧಿಕಾರಿ, ಆಯುಷ್…

Read More

ಮಂಗಳೂರು, ನ. 10 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೆ ಸಾಲಿನ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಮುಖ್ಯಸ್ಥರಾದ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ದ.ಕ ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಭಾನುವಾರ ಚುನಾವಣೆ ನಡೆಸಲಾಯಿತು. ಪುಷ್ಪರಾಜ್ 187 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಗಳಿಸಿದರು. ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಆಯ್ಕೆಯಾಗಿದ್ದಾರೆ. ಶ್ರೀನಿವಾಸ ನಾಯಕ್ 204 ಮತ ಪಡೆದರೆ, ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಅನ್ಸಾರ್ ಇನೋಳಿ 124 ಮತಗಳನ್ನು ಪಡೆದರು. ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮುಹಮ್ಮದ್ ಆರೀಫ್, ವಿಲ್ಫ್ರೆಡ್ ಡಿ ಸೋಜ ಮತ್ತು ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಸತೀಶ್ ಇರಾ, ಸಿದ್ದೀಕ್ ನೀರಾಜೆ, ಸುರೇಶ್ ಪಳ್ಳಿ ಗೆಲುವು ಸಾಧಿಸಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಶೋಕ್…

Read More

ಮಂಗಳೂರು, ನ. 10 : ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್  ಸೊಸೈಟಿಯ ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವ ಸಮಾರೋಪ ಸಮಾರಂಭ ಭಾನುವಾರ ನಗರದ ಕೊಟ್ಟಾರ ಚೌಕಿ ಆಡಳಿತ ಕಚೇರಿ ಬಳಿ ನಡೆಯಿತು. ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ  ರಾಜೇಂದ್ರ ಕುಮಾರ್ ಅವರು  ಸೊಸೈಟಿಯ ನವೀಕೃತ ವಿಶ್ವಸೌಧ ಕಟ್ಟಡವನ್ನು ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕುಗಳು ಜನರಿಗೆ ಸಾಲ ನೀಡಲು ಹಿಂಜರಿಯುತ್ತಿವೆ. ಆದರೆ ಸಹಕಾರಿ ಸಂಸ್ಥೆಗಳು ಜನರ ಮನೆ ಬಾಗಿಲಿಗೆ ಹೋಗಿ ಉತ್ತಮ ಸೇವೆ ನೀಡುತ್ತಿದೆ. ಹಾಗೆನೇ ಶುಭ ಕಾರ್ಯಗಳು ಸೇರಿದಂತೆ ಅಗತ್ಯ ಸಂದರ್ಭಗಳಲ್ಲಿ ತ್ವರಿತವಾಗಿ ಸಾಲ ನೀಡುತ್ತಾ ಬೆಳೆಯುತ್ತಿವೆ. ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ರಾಜ್ಯಾದ್ಯಂತ ಶಾಖೆಗಳನ್ನು ವಿಸ್ತರಿಸಿ ಇನ್ನಷ್ಟು ಜನರಿಗೆ ಉದ್ದಿಮೆ ಆರಂಭಿಸಲು ನೆರವಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಲಿ  ಎಂದರು. ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಪಾಲ್ಕೆ ಬಾಬುರಾಯ…

Read More

ಮಂಗಳೂರು, ನ.09: ಮೆಸ್ಕಾಂ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ಕಚೇರಿಯು ನಗರದ ಬಿಜೈಯ ಮೆಸ್ಕಾಂ ಕಾರ್ಪೊರೇಟ್ ಕಚೇರಿ ಮೆಸ್ಕಾಂ ಭವನದಲ್ಲಿ ನ.07,ಶುಕ್ರವಾರ ಉದ್ಘಾಟನೆಗೊಂಡಿತು. ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯ ಕುಮಾರ್ ಆರ್. ಅವರು ನೂತನ ಕಚೇರಿಯನ್ನು ಉದ್ಘಾಟಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜಯರಾಜ್, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಮಾಜಿ ಶಾಸಕ ಜೆ.ಅರ್. ಲೋಬೋ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್, ರಾಜ್ಯ ಪರಿಸರ ಪ್ರವಾಸೋದ್ಯಮ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೊ, ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್, ಆರ್ಥಿಕ ಸಲಹೆಗಾರ ದೇವರಾಜ್, ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್, ನಮಿತಾ ಹರೀಶ್ ಕುಮಾರ್, ಅಪೇಕ್ಷಾ ಸುಶೀತ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಉಪಸ್ಥಿತರಿದ್ದರು.…

Read More

ಬಂಟ್ವಾಳ, ನ. 08 : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಕನಕ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ಬೂಡ ಅಧ್ಯಕ್ಷರಾದ ಬೇಬಿ ಕುಂದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯಾವುದೇ ಜಯಂತಿ, ಆಚರಣೆಗಳು ನಾಲ್ಕು ಗೋಡೆಗಳ ಮಧ್ಯೆ ನಡೆಯದೆ ಯುವ ಸಮುದಾಯಕ್ಕೆ ದಾರ್ಶನಿಕ ಪುರುಷರ ಜೀವನ ಚರಿತ್ರೆಯ ದರ್ಶನವಾಗುವ ನಿಟ್ಟಿನಲ್ಲಿ ಸಾರ್ವಜನಿಕವಾಗಿ ಕಾರ್ಯಕ್ರಮಗಳು ನಡೆಯಬೇಕು ಎಂದರು. ಕಾರ್ಯಕ್ರಮದಲ್ಲಿ vಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಉಪ ತಹಶಿಲ್ದಾರ್ ನವೀನ್ ಬೆಂಜನಪದವು ಕನಕ ಜಯಂತಿ ಆಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ ವಂದಿಸಿದರು.

Read More

ಮಂಗಳೂರು, ನ. 07 : ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್  ಸೊಸೈಟಿ ಲಿ.ನ ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವ ಸಮಾರೋಪ ಸಮಾರಂಭ ನ.9ರಂದು ನಗರದ ಕೊಟ್ಟಾರ ಚೌಕಿ ಆಡಳಿತ ಕಚೇರಿ ಬಳಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮದಲ್ಲಿ ಕಟಪಾಡಿ ಪಡುಕುತ್ಯಾರು ಶ್ರೀ ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಜಗದ್ಗುರು ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹಾಗೂ ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ ಶ್ರೀ ವಿಶ್ವಕರ್ಮ ಪೀಠದ ಜಗದ್ಗುರು ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ದೀಪ ಪ್ರಜ್ವಲನೆ ನಡೆಸಿ, ಆಶೀರ್ವಚನ ನೀಡುವರು ಎಂದರು. ನವೀಕೃತ ವಿಶ್ವಸೌಧ ಕಟ್ಟಡವನ್ನು ಎಸ್ಪಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ  ರಾಜೇಂದ್ರ ಕುಮಾರ್ ಅವರು  ಉದ್ಘಾಟಿಸ ಲಿರುವರು.ನವೀಕೃತ ಆಡಳಿತ ಕಚೇರಿಯನ್ನು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ಮಾಡಲಿದ್ದಾರೆ. ಶಿಲ್ಪಿ ಡಾ. ಅರುಣ್ ಯೋಗಿರಾಜ್ ಅವರು…

Read More

ಬೆಂಗಳೂರು, ನ. 06 : ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದುಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕರಾವಳಿ ಮೂಲದ ಹರೀಶ್ ರಾಯ್ ಅವರು ಕನ್ನಡ ಚಿತ್ರರಂಗದಲ್ಲಿ ಖಳನಟರಾಗಿ ಹೊರಹೊಮ್ಮಿದ್ದರು. ‘ಓಂ’, ‘ಜೋಡಿ ಹಕ್ಕಿ’, ‘ತಾಯವ್ವ’, ‘ನಲ್ಲ’, ‘ಜಾಫರ್ ಅಲಿಯಾಸ್ ಮುರ್ಗಿ ಜಾಫರ್’, ‘ಭೂಗತ’, ‘ರಾಜ್ ಬಹದ್ದೂರ್’, ‘ಸಂಜು ವೆಡ್ಸ್ ಗೀತಾ’, ‘ಕೆಜಿಎಫ್ ಚಾಪ್ಟರ್ 1 ಮತ್ತು 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅಭಿನಯಿಸಿದ್ದರು. ಹರೀಶ್ ರಾಯ್ ಅವರು ತಮಿಳು ಚಿತ್ರರಂಗದಲ್ಲಿಯೂ ಅಭಿನಯಿಸಿದ್ದರು. ಕೆಲವು ವರ್ಷಗಳ ಹಿಂದೆ ಒಂದು ಪ್ರಕರಣದ ಹಿನ್ನೆಲೆ ಜೈಲು ಪಾಲಾಗಿದ್ದ ಸಂದರ್ಭದಲ್ಲೂ, ತಮ್ಮ ಜೀವನದ ಕಷ್ಟದ ದಿನಗಳನ್ನು ಅವರು ಸ್ವತಃ ಸ್ಮರಿಸಿಕೊಂಡು ಭಾವುಕರಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

Read More

ಬಂಟ್ವಾಳ,ನ. 05 : ವೀರಕಂಭ ಗ್ರಾಮ ಪಂಚಾಯತ್ ನ 2025 – 26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಅಧ್ಯಕ್ಷೆ ಲಲಿತ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಜರಗಿತು. ಗ್ರಾಮ ಸಭೆ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿನಯ ಕುಮಾರಿ ಭಾಗವಹಿಸಿದ್ದರು. ಇಲಾಖೆವಾರು ಮುಖ್ಯಸ್ಥರುಗಳಾದ ಅರೋಗ್ಯ ಇಲಾಖೆ, ಕೃಷಿ ಇಲಾಖೆ, ಮೆಸ್ಕಾಂ ಇಲಾಖೆ, ಶಿಕ್ಷಣ ಇಲಾಖೆ,, ಶಿಶು ಅಭಿವೃದ್ಧಿ ಇಲಾಖೆ,ಕಂದಾಯ ಇಲಾಖೆಯವರು ತಮ್ಮ ತಮ್ಮ ಇಲಾಖೆಯ ಇಲಾಖಾ ಮಾಹಿತಿ ನೀಡಿದರು. ಈ ವೇಳೆ ಗ್ರಾಮಸ್ಥರಿಂದ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಪಂಚಾಯತ್ ಸದಸ್ಯರುಗಳಾದ ದಿನೇಶ್ ಪೂಜಾರಿ,, ನಿಶಾಂತ್ ರೈ, ಸಂದೀಪ್ ಪೂಜಾರಿ, ಜಯಪ್ರಸಾದ್, ಮೀನಾಕ್ಷಿ, ಅಬ್ದುಲ್ ರೆಹಿಮಾನ್,,ಜಯಂತಿ, ಉಮಾವತಿ, ಶೀಲಾ ನಿರ್ಮಲ ವೇಗಸ್ ಮೊದಲಾದವರು ಉಪಸ್ಥಿತರಿದ್ದರು. ವೀರಕಂಭ ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಗ್ರಾಮ ಪಂಚಾಯತ್…

Read More

ಕುಂದಾಪುರ, ನ. 04 : ಅಯ್ಯಪ್ಪ ಸ್ವಾಮಿ ಶಿಬಿರದಿಂದ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅಯ್ಯಪ್ಪ ವೃತಧಾರಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಢಿಕ್ಕಿಯಾಗಿ ಓರ್ವ ಮಾಲಾಧಾರಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು ಇನ್ನೋರ್ವ ಮಾಲಾಧಾರಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಸಮೀಪದ ಕಣ್ಣುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಮಾಲಾಧಾರಿಯಾಗಿದ್ದ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ. ನವಂಬರ್ 2 ರಂದು ಮುಂಜಾನೆ 5.30ರ ಹೊತ್ತಿಗೆ ಸುಮಾರು 15 ಜನ ಅಯ್ಯಪ್ಪ ಮಾಲಾಧಾರಿಗಳು ಕೋಟೇಶ್ವರ ಮಾರ್ಗವಾಗಿ ಮಂದಾರ್ತಿ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದಾಗ ಕಣ್ಣುಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನವು ಸುರೇಂದ್ರ ಅವರಿಗೆ  ಢಿಕ್ಕಿಯಾಗಿ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ರು ಗಾಯಗೊಂಡಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More