Author: admin

ಬೆಳ್ತಂಗಡಿ : ಏ. 23: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ  ಹರೀಶ್ ಪೂಂಜ ಅವರು ಏ. 17,ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕುತ್ಯಾರು ಶ್ರೀ ಸೋಮನಾಥ ದೇವರ ಸನ್ನಿಧಿಗೆ ತೆರಳಿ ಶ್ರೀ ದೇವರಲ್ಲಿ ಪ್ರಾರ್ಥಿಸಿದರು. ಬಳಿಕ  ಹರೀಶ್ ಪೂಂಜ ಅವರು ಸೋಮನಾಥ ದೇವರ ಸನ್ನಿಧಿಯ ವಠಾರದಲ್ಲಿ ಸೇರಿದ್ದ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರೊಂದಿಗೆ ಚೆಂಡೆ, ಕೊಂಬು, ವಾದ್ಯ, ನಾಸಿಕ್ ಬ್ಯಾಂಡ್,ವಾದ್ಯಗಳೊಂದಿಗೆ ಬೆಳ್ತಂಗಡಿ ಆಡಳಿತ ಸೌಧಕ್ಕೆ ಮೆರವಣಿಗೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮಾಜಿ ಮಂಡಲ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ, ಹಿರಿಯರಾದ ಸುಬ್ರಮಣ್ಯ ಅಗರ್ತ ಮೊದಲಾದವರು ಉಪಸ್ಥಿತರಿದ್ದರು.

Read More

ಉಡುಪಿ, ಏ. 22:ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಏ. 20 ಗುರುವಾರ ಉಡುಪಿ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಿಂದ ಉಡುಪಿ ತಾಲ್ಲೂಕು ಕಚೇರಿಯವರೆಗೆ ಬೃಹತ್ ಪಾದಾಯಾತ್ರೆ ನಡೆಯಿತು. ಚೆಂಡೆ, ವಾದ್ಯ ಘೋಷಗಳ ನಡುವೆ ಕೇಸರಿ ಬಾವುಟ ಹಿಡಿದುಕೊಂಡ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಉಡುಪಿಯ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಂದು ಯಶ್ ಪಾಲ್ ಸುವರ್ಣರಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಕುಂದಾಪುರ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ, ಸಚಿವರಾದ ಸುನಿಲ್ ಕುಮಾರ್, ಕಾಪು ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ, ಮಟ್ನಾರ್ ರತ್ನಾಕರ್ ಹೆಗ್ಡೆ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.

Read More

ಉಳ್ಳಾಲ, ಏ. 22 : ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರು ಏ.20, ಗುರುವಾರ ನಾಮ ಪತ್ರ ಸಲ್ಲಿಸಿದ್ದಾರೆ. ಸತೀಶ್ ಕುಂಪಲ ಅವರು ಕುಂಪಲದ ಶ್ರೀ ಬಾಲಕೃಷ್ಣ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮುನ್ನೂರು ದೆಕ್ಕಾಡು ಕೊರಗಜ್ಜನ ಕ್ಷೇತ್ರ, ಮಾಡೂರು ದೈವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ನಂತರ ಉಳ್ಳಾಲ ಅಬ್ಬಕ್ಕ ಸರ್ಕಲ್ನಲ್ಲಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ನಡೆಸಿದರು. ಬಳಿಕ ಉಳ್ಳಾಲದಲ್ಲಿ ನವ ಮಂಗಳೂರು ನಿರ್ಮಾತೃ ಶ್ರೀನಿವಾಸ ಮಲ್ಯ ಅವರ ಮನೆಗೆ ಭೇಟಿ ನೀಡಿದ ಬಳಿಕ ಪಂಡಿತ್‍ಹೌಸ್ನಲ್ಲಿರುವ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ಹಿರಿಯ ಮುಖಂಡರ ನೇತೃತ್ವದಲ್ಲಿ ತೊಕ್ಕೊಟ್ಟುವರೆಗೆ ಹೆಚ್ಚಿನ ಸಂಖ್ಯೆಯ ಬಿಜೆಪಿ ಕಾರ್ಯಕರ್ತರೊಂದಿಗೆ ಬೃಹತ್ ರ‍್ಯಾಲಿ ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣದವರೆಗೆ ನಡೆಯಿತು. ಸಾರ್ವಜನಿಕ ಸಭೆಯ ನಂತರ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯಲ್ಲಿ ಸತೀಶ್ ಕುಂಪಲ ಅವರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾರ್ಗದರ್ಶನದಲ್ಲಿ ಚುನಾವಣಾ„ಕಾರಿ ರಾಜು ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ…

Read More

ಬಂಟ್ವಾಳ ಏ. 21 : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಏ. 15,ಶನಿವಾರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥನೆಗೈದು ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರೊಂದಿಗೆ ಪಾದಯಾತ್ರೆಯ ಮೂಲಕ ಸಾಗಿ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಾದಯಾತ್ರೆಯ ಸಂದರ್ಭದಲ್ಲಿ ಕಾರ್ಯಕರ್ತರು ಬಿಜೆಪಿ ಪಕ್ಷದ ಧ್ವಜ ಹಿಡಿದು ಪಕ್ಷದ ಜತೆಗೆ ರಾಜೇಶ್ ನಾಯ್ಕ್ ಅವರಿಗೆ ಜೈಕಾರ ಕೂಗಿದರು. ಪೊಳಲಿ ಕ್ಷೇತ್ರದಲ್ಲಿ ಪೂಜೆ ಸಲ್ಲಿಸುವ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಕೆ.ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ…

Read More

ಮೂಡುಬಿದಿರೆ, ಏ 21 : ಮೂಲ್ಕಿ- ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಥುನ್ ರೈ ಅವರು ಪಕ್ಷದ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಏ. 17 ,ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಸ್ವರಾಜ್ಯ ಮೈದಾನದಲ್ಲಿ ಮಹಮ್ಮಾಯಿ ದೇವರ ದರ್ಶನ ಪಡೆದ ಮಿಥುನ್ ರೈ ಅವರು ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪಿನಲ್ಲಿ ಸಾಗಿ ಬಂದರು. ಬಳಿಕ ಚುನಾವಣೆ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಎಂಎಲ್ಸಿ ಹರೀಶ್ ಕುಮಾರ್, ಶಾಸಕ ಯು.ಟಿ ಖಾದರ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್, ಶಾಲೆಟ್ ಪಿಂಟೊ, ದೇವಿಪ್ರಸಾದ್ ಶೆಟ್ಟಿ, ಮಮತ ಗಟ್ಟಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೆರ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕಾನ್ ಬಂಟ್ವಾಳ್, ಸುಪ್ರಿಯಾ ಡಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Read More

ಬಂಟ್ವಾಳ, ಏ. 21 : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಏ.20,ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವುದಕ್ಕೂ ಮುನ್ನಾ ಬಿ. ರಮಾನಾಥ ರೈಯವರು ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ,ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮೊಡಂಕಾಪು ಚರ್ಚ್ ಗೆ  ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಿತ್ತಬೈಲು ಮೊಯ್ದಿನ್ ಜುಮಾ ಮಸೀದಿ, ಕೆಳಗಿನಪೇಟೆ ಮಸೀದಿಯಲ್ಲೂ ಪ್ರಾರ್ಥಿಸಿದರು. ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಹೊರಟ ಹೆಚ್ಚಿನ ಸಂಖ್ಯೆಯ ಜನರ ಉತ್ಸಾಹಭರಿತ ಪಾದಯಾತ್ರೆ ಬಿ.ಸಿ.ರೋಡ್ ಬಸ್ ನಿಲ್ದಾಣದ ವರೆಗೆ ಸಾಗಿತು. ನಂತರ ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಪಕ್ಷದ ಪ್ರಮುಖರೊಂದಿಗೆ ತೆರಳಿದ ರೈಗಳು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಜೇಶ್ವರ ಶಾಸಕ…

Read More

ಸುರತ್ಕಲ್ ಏ. 21: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರು ಏ.20, ಗುರುವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಕಾವೂರು ಮೈದಾನದಲ್ಲಿ ಬಹಿರಂಗ ಸಮಾವೇಶ ನಡೆಸಿ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ರೋಡ್ ಶೋ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ರೋಡ್ ಶೋ ನಲ್ಲಿ ಮಿಥುನ್ ರೈ, ಸುಧೀರ್ ಕುಮಾರ್ ಮುರಳಿ, ಗಿರೀಶ್ ಆಳ್ವ, ಶಾಹುಲ್ ಹಮೀದ್, ನೀರೇಶ್ ಪಾಲ್, ಮಾಜಿ ಮೇಯರ್ ಕವಿತಾ ಸನಿಲ್, ಉಮೇಶ್ ದಂಡೆಕೇರಿ, ಕೆ. ಅಭಯಚಂದ್ರ ಜೈನ್, ಯು. ಪಿ ಇಬ್ರಾಹಿಂ, ಶಶಿಕಲಾ ಪದ್ಮನಾಭ, ಜೇಸನ್ ಸುರತ್ಕಲ್, ಚಂದ್ರಹಾಸ್ ಪೂಜಾರಿ, ಶ್ರೀನಿವಾಸ್ ಸಾಲಿಯಾನ್, ಮಂಗಳೂರು ಉತ್ತರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ ಮತ್ತಿತರರು ಉಪಸ್ಥಿತರಿದ್ದರು.

Read More

ಮಂಗಳೂರು, ಏ. 21 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವೇದವ್ಯಾಸ್ ಕಾಮತ್ ಅವರು ಏ. 17 ,ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಗಣ್ಯರ ಸಮ್ಮುಖದಲ್ಲಿ ನಾಮಪತ್ರನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ವೇದವ್ಯಾಸ್ ಕಾಮತ್ ಅವರು ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಕಾರ್ ಸ್ಟ್ರೀಟ್ ನ ವೆಂಕಟರಮಣ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ವೇದವ್ಯಾಸ್ ಕಾಮತ್ ಅವರು ಹೆಚ್ಚಿನ ಸಂಖ್ಯೆಯ ಬೆಂಬಲಿಗರೊಂದಿಗೆ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಮೆರವಣಿಗೆಯಲ್ಲಿ ಆಗಮಿಸಿದರು. ಮೆರವಣಿಗೆಯಲ್ಲಿ ಮೇಯರ್ ಜಯಾನಂದ ಅಂಚನ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ರವಿಶಂಕರ್ ಮಿಜಾರ್, ಸುಧೀರ್ ಶೆಟ್ಟಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Read More

ಮಂಗಳೂರು, ಏ. 21 : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಡಾ.ಭರತ್ ವೈ ಶೆಟ್ಟಿ ಅವರು ಏ. 18, ಮಂಗಳವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪಕ್ಷದ ಪ್ರತಿನಿಧಿಗಳು ಮತ್ತು ಬೆಂಬಲಿಗರ ಸಮ್ಮುಖದಲ್ಲಿ ಡಾ. ಭರತ್ ಶೆಟ್ಟಿ ಅವರು ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ  ದೇವಸ್ಥಾನದಿಂದ ಕಾವೂರು ಮೈದಾನದವರೆಗೆ  ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರ ಪಾದೆಯಾತ್ರೆಯ ಜತೆ ಸಾಗಿ ಬಂದು  ಸುಮಾರು 2.20ಕ್ಕೆ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ಮೇಯರ್ ಜಯಾನಂದ ಅಂಚನ್, ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ತಿಲಕ್ರಾಜ್ ಕೃಷ್ಣಾಪುರ, ಜಿಲ್ಲಾ ಉಪಾಧ್ಯಕ್ಷ ಗಣೇಶ್ ಹೊಸಬೆಟ್ಟು, ಭರತ್ ಶೆಟ್ಟಿ ಅವರ ಪತ್ನಿ ಡಾ| ಅಸಾವರಿ ವೈ. ಶೆಟ್ಟಿ, ಜಿಲ್ಲಾ ಮಾಧ್ಯಮ ಪ್ರಮುಖ್ ರಾಜೀವ್ ಕಾಂಚನ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಮತ್ತಿತರರು ಉಪಸ್ಥಿತರಿದ್ದರು.

Read More

ಮಂಗಳೂರು, ಏ 21 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಜೆ.ಆರ್.ಲೋಬೊ ಅವರು ಏ.21, ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಜೆ.ಆರ್.ಲೋಬೊ ಅವರು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪಕ್ಷದ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಮಂಗಳೂರು ನಗರದ ವಿವಿಧ ದೇವಾಲಯಗಳು, ಚರ್ಚ್ ಗಳು,ಮಸೀದಿಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕುದ್ರೋಳಿ ದೇವಸ್ಥಾನದಿಂದ ಮಂಗಳೂರು ಮಹಾನಗರ ಪಾಲಿಕೆ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಭಾಸ್ಕರ್ ಮೊಯ್ಲಿ,ಶಶಿಧರ್ ಹೆಗ್ಡೆ,ವಿಶ್ವಾಸ್ ದಾಸ್, ಅಬ್ದುಲ್ ಸಲಿಂ, ಪ್ರಕಾಶ್ ಸಾಲ್ಯಾನ್, ಪ್ರವೀಣ್ ಆಳ್ವ, ಕೇಶವ ಮರೋಳಿ  ಮತ್ತಿತರರು ಉಪಸ್ಥಿತರಿದ್ದರು.

Read More