Author: admin

ಮಂಗಳೂರು ಮಾ.8: ನಗರದ ಪುರಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಇದರ 24ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಮಾ.7 ಮಂಗಳವಾರದಂದು ಜರಗಿತು.ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಇತರ ಗಣ್ಯರೊಂದಿಗೆ ಸೇರಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತಾಡಿ ಸರಕಾರಿ ಸೌಳಭ್ಯಗಳ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಲು ಜಿಲ್ಲೆಯಲ್ಲಿರುವ ಎಲ್ಲಾ ಟೈಲರ್ಗಳು ತಪ್ಪದೇ ಇ-ಶ್ರಮ್  ಕಾರ್ಡ್ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.ಆಧುನಿಕ ಜಗತ್ತಿನ ಸ್ಪರ್ಧತ್ಮಕ ರೆಡಿಮೆಡ್ ಪ್ಯಾಶನ್ ಯುಗದ ನಡುವೆಯೂ ಟೈಲರ್ಸ್ ಗಳು  ತಮ್ಮ ವೃತ್ತಿಯನ್ನು ನಡೆಸುತ್ತಾ ಬಂದಿದೆ.ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಮುಖಾಂತರ ಉತ್ತಮ ಸೇವೆಗಳು ಆಗಲಿ ಎಂದು ಶುಭಹಾರೈಸಿದರು. ಬಳಿಕ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರತ್ಕಲ್ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ ಮಾತಾಡಿ ಟೈಲರ್ ಗಳ ಬೇಡಿಕೆ ಹಾಗೂ ಅವರಿಗೆ ಸರ್ಕಾರದಿಂದ ನೆರವು ಒದಗಿಸುವ ಬಗ್ಗೆ ಮುಂದಿನ ವಿಧಾನ ಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇನೆ ಎಂದರು. ಕರ್ನಾಟಕ ಸ್ಟೇಟ್ ಟೈಲರ್ಸ್…

Read More

ಸುಳ್ಯ, ಮಾ. 07 : ಬೆಳ್ಳಾರೆ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡ ಕೆಡವುತ್ತಿರುವ ವೇಳೆ ಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನುಕಾರ್ಮಿಕ ಮಂಜುನಾಥ(23) ಎಂದು ಗುರುತಿಸಲಾಗಿದೆ. ಹಳೆ ಕಟ್ಟಡ ಕೆಡವುವ ಕಾರ್ಯ ನಡೆಯುತ್ತಿತ್ತು. ಊಟದ ವಿರಾಮದ ನಂತರ ಗೋಡೆ ಕೆಡವುತ್ತಿದ್ದಾಗ ಗೋಡೆ ಕುಸಿದು ಕಾರ್ಮಿಕ ಮಂಜುನಾಥ ಎಂಬವರ ಮೇಲೆ ಬಿದ್ದಿದೆ. ಕಲ್ಲುಗಳ ಅಡಿಗೆ ಸಿಲುಕಿದ ಅವರನ್ನು ಇತರ ಕಾರ್ಮಿಕರು ಹೊರತೆಗೆದು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ದರಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.

Read More

ಪುತ್ತೂರು, ಮಾ. 06 : ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯ ಬಳಿ ಮಾ.೫, ಭಾನುವಾರ ರಾತ್ರಿ ನಡೆದಿದೆ. ಮೃತರನ್ನುಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಎಂದು ಗುರುತಿಸಲಾಗಿದೆ. ಪೊಲೀಸ್ ಜೀಪ್ ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದರೆ, ಬೈಕ್​ ಪುತ್ತೂರಿನಿಂದ ಆರ್ಲಪದವು ಕಡೆಗೆ ಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾರ್ಕಳ, ಮಾ. 04 : ಅನಾರೋಗ್ಯದಿಂದ ಮನನೊಂದು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ಕುಂದಾಪುರ ಕರಾವಳಿ ಶಿರೂರು ನಿವಾಸಿ ಶೀಲಾವತಿ ಶೆಡ್ಡಿ ಎಂಬವರ ಮಗಳು ಸೀಮಾ (22) ಎಂದು ಗುರುತಿಸಲಾಗಿದೆ.ಇವರು ಕಾರ್ಕಳದ ನಿಟ್ಟೆ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ನಿಟ್ಟೆ ಕಾಲೇಜಿನ ಹಾಸ್ಟೆಲ್ ನಲ್ಲಿದ್ದರು. ಸೀಮಾ ಅವರು ನರ ಹಾಗೂ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದು 4-5 ತಿಂಗಳ ಹಿಂದೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದೀಗ ಮತ್ತೆ ಅದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಮಾ. 03 : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ ಗುರುವಾರ 36.9 ಡಿ. ಸೆ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು,ಇದು ದೇಶದಲ್ಲಿಯೇ ಅತ್ಯಧಿಕ ಎಂದು ವರದಿಯಾಗಿದೆ. ಅಲ್ಲದೇ ಇದು ವಾಡಿಕೆಗಿಂತ 3 ಡಿ.ಸೆ ಹೆಚ್ಚಳವಾಗಿದೆ. ಇದೇ ವೇಳೆ 23.8 ಡಿ.ಸೆ ಕನಿಷ್ಠ ತಾಪಮಾನ ದಾಖಲಾಗಿದ್ದು, 1 ಡಿ.ಸೆ ಏರಿಕೆಯಾಗಿದೆ

Read More

ಕಾಸರಗೋಡು, ಮಾ. 02 : ರೈಲು ಬಡಿದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಬುಧವಾರ ಉಪ್ಪಳ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಮೃತ ಮಹಿಳೆಯನ್ನುಮಂಗಲ್ಪಾಡಿಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಎಂದು ಗುರುತಿಸಲಾಗಿದೆ. ಇವರು ನೀಲೇಶ್ವರ ದೇವನ್ ಆರ್ಟ್ಸ್ ನ ವಿಪಿನ್ ರವರ ಪತ್ನಿಯಾಗಿದ್ದಾರೆ. ಬುಧವಾರ ಸಂಜೆ ಕೆಲಸ ಮುಗಿಸಿ ನೀಲೇಶ್ವರ ದಲ್ಲಿರುವ ಮನೆಗೆ ತೆರಳಲು ಉಪ್ಪಳ ರೈಲು ನಿಲ್ದಾಣದ ಸಮೀಪ ಹಳಿ ದಾಟುತ್ತಿದ್ದಾಗ ರೈಲು ಬಡಿದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಂಜೇಶ್ವರ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

Read More

ಅಥೆನ್ಸ್, ಮಾ. 01 : ಎರಡು ರೈಲುಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ 32 ಮಂದಿ ಸಾವನ್ನಪ್ಪಿದ ಘಟನೆ ಗ್ರೀಸ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಈ ಘಟನೆಯಲ್ಲಿ 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಥೆನ್ಸ್ ಉತ್ತರ ನಗರ ಥೆಸಲೋನಿಕಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ ರೈಲು ಮತ್ತು ಮಧ್ಯ ಗ್ರೀಸ್ ನ ಲಾರಿಸ್ಸಾ ನಗರದಿಂದ ಬರುತ್ತಿದ್ದ ಸರಕು ಸಾಗಣೆ ರೈಲುಗಳ ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಿಂದಾಗಿ ಹಲವು ಬೋಗಿಗಳು ಹಳಿತಪ್ಪಿದ್ದು, ಈ ಪೈಕಿ 3 ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಪ್ರಯಾಣಿಕ ರೈಲಿನಲ್ಲಿದ್ದ 350 ಮಂದಿ ಪ್ರಯಾಣಿಕರ ಪೈಕಿ 32 ಮಂದಿ ಮೃತಪಟ್ಟಿದ್ದು, 85 ಮಂದಿ ಗಾಯಗೊಂಡಿದ್ದಾರೆ . ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 250 ಮಂದಿಯನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ವಲ್ಸಾದ್, ಫೆ. 28 : ಗುಜರಾತ್‌ನ ವಲ್ಸಾದ್ ಜಿಲ್ಲೆಯ ಫಾರ್ಮಾ ಕಂಪೆನಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ವಲ್ಸಾದ್ ಜಿಲ್ಲೆಯ ಸರಿಗಾಮ್ ಜಿಐಡಿಸಿ ರಾಸಾಯನಿಕ ವಲಯದಲ್ಲಿರುವ ವ್ಯಾನ್ ಪೆಟ್ರೋಕೆಮ್ ಫಾರ್ಮಾ ಕಂಪನಿಯಲ್ಲಿ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಸ್ಪೋಟದ ತೀವ್ರತೆಗೆ ಕಟ್ಟಡದ ಒಂದು ಭಾಗ ಕುಸಿದಿದೆ. ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ವಲ್ಸಾಡ್ ಎಸ್ಪಿ ವಿಜಯ್ ಸಿಂಗ್ ಗುರ್ಜರ್ ತಿಳಿಸಿದ್ದಾರೆ.

Read More

ಶಿವಮೊಗ್ಗ, ಫೆ 27 : ಶಿವಮೊಗ್ಗ ತಾಲೂಕಿನ ಸೋಗಾನೆಯಲ್ಲಿ 449ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಲೋಕಾರ್ಪಣೆಗೊಳಿಸಿದರು. ಬಳಿಕ ಪ್ರಧಾನಿ ಮೋದಿಯವರು ಮಾತಾಡಿ ಇಂದು ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ದೊರೆತಿದೆ ಈ ಮೂಲಕ ಶಿವಮೊಗ್ಗದ ಜನರ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತ್ತರು ಈ ಸಂದರ್ಭದಲ್ಲಿ ವೇದಿಕೆಯಲ್ಲಿದ್ದರು.

Read More

ಹೆಬ್ರಿ, ಫೆ. 26 : ದಿನನಿತ್ಯ ಕುಡಿದು ಬಂದು ತಂದೆಯೊಂದಿಗೆ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆ ಕೊಲೆ ಮಾಡಿದ ಘಟನೆ ವರಂಗ ಗ್ರಾಮದ ಮೂಡುಬೆಟ್ಟುವಿನಲ್ಲಿ ನಡೆದಿದೆ. ಸತೀಶ್‌ ಪೂಜಾರಿ(40) ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಕುಟ್ಟಿ ಪೂಜಾರಿ ಎಂದು ಗುರುತಿಸಲಾಗಿದೆ. ಸತೀಶ್‌ ಪೂಜಾರಿ ದಿನನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದರು. ಶುಕ್ರವಾರ ರಾತ್ರಿಯು ಸತೀಶ್‌ ಪೂಜಾರಿ ವಿಪರೀತ ಕುಡಿದು ಬಂದು ತಂದೆ ಕುಟ್ಟಿ ಪೂಜಾರಿ ಮಲಗಿದ್ದ ಕೋಣೆಯ ಬಾಗಿಲಿಗೆ ಕಾಲಿನಿಂದ ಒದ್ದು ಕುಟ್ಟಿ ಪೂಜಾರಿಯವರನ್ನು ಮನೆಯ ಹೊರಗೆ ಅಂಗಳಕ್ಕೆ ಎಳೆದು ತಂದಾಗ ಕೋಪಗೊಂಡ ಕುಟ್ಟಿ ಪೂಜಾರಿಯು ಅಡುಗೆ ಕೋಣೆಯಲ್ಲಿದ್ದ ಒಲೆ ಬೆಂಕಿ ಊದುವ ಕಬ್ಬಿಣದ ಕೊಳವೆಯಿಂದ ಸತೀಶ ಪೂಜಾರಿ ಅವರ ಮೇಲೆ ಹಲ್ಲೆ ಮಾಡಿದ್ದರಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More