Author: admin

ಬೆಂಗಳೂರು : ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ(61) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್ ಕತ್ತಿ ನಿಧನರಾಗಿದ್ದಾರೆ. ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಅಭಿವೃದ್ದಿಗೆ ಕತ್ತಿಯವರ ಕೊಡುಗೆ ಸ್ಮರಣೀಯ ಎಂದು ತಿಳಿಸಿದ್ದಾರೆ.

Read More

ಲಕ್ನೋ : ಉತ್ತರ ಪ್ರದೇಶದ ಭಾರತೀಯ ಜನತಾ ಪಾರ್ಟಿಯ ಶಾಸಕ ಅರವಿಂದ್ ಗಿರಿ (65) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಾಸಕ ಅರವಿಂದ್ ಸೆ. 06, ಮಂಗಳವಾರ ಬೆಳಗ್ಗೆ ಲಕ್ನೋಗೆ ತೆರಳುತ್ತಿದ್ದ ವೇಳೆ ಕಾರಿನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಶಾಸಕ ಅರವಿಂದ್ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಅರವಿಂದ್ ಗಿರಿ 1993 ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿ 2006 ರಲ್ಲಿ ಎಸ್ ಪಿ ಅಭ್ಯರ್ಥಿಯಾಗಿ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು.

Read More

ಉಡುಪಿ : ಮಲ್ಪೆ ಬಂದರಿನ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಹನುಮ ನಿಧಿ ಕಣ್ಣಿ ಪಾರ್ಟಿಯಲ್ಲಿ ದುಡಿಯುತ್ತಿದ್ದ ಪುರಂದರ ಎಂದು ಗುರುತಿಸಲಾಗಿದೆ. ಪುರಂದರ ಅವರು ರವಿವಾರ ರಾತ್ರಿ 10:45 ರ ಸುಮಾರಿಗೆ ಬೋಟ್ ನಿಂದ ಮೀನು ಖಾಲಿ ಮಾಡುವ ಸಂದರ್ಭ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತೊಟ್ಟಂ ಮೂಲದವರಾಗಿದ್ದ ಪುರಂದರ ಅವರು ಕಳೆದ ಸುಮಾರು 10 ವರ್ಷಗಳಿಂದ ಕಣ್ಣಿ ಪಾರ್ಟಿ ಯಲ್ಲಿ ಕೆಲಸ ಮಾಡುತಿದ್ದರು ಎನ್ನಲಾಗಿದೆ.

Read More

ಮಂಗಳೂರು: ಹಿಂದೂ ಯುವ ಸೇನೆಯ ಸಕ್ರಿಯ ಕಾರ್ಯಕರ್ತರಾಗಿದ್ದ ಜಯಂತ್ ಎಸ್.ಕುಂಪಲ (49) ಅವರು ಕುಂಪಲದ ಕೃಷ್ಣನಗರದಲ್ಲಿನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.3ರ ಶನಿವಾರ ನಡೆದಿದೆ. ಜಯಂತ್ ಅವರು ಆಟೊರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದರು. ಕುಂಪಲದ ಹನುಮಾನ್ ನಗರದಲ್ಲಿ ಹೊಸ ಮನೆ ನಿರ್ಮಿಸುತ್ತಿದ್ದರು. ಸೆ..2ರಂದು ಜಯಂತ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಅವರ ಮೊಬೈಲ್ ಫೋನ್ ನ್ನು ಕಳೆದುಕೊಂಡಿದ್ದರು.ಈ ಬಗ್ಗೆ ಶನಿವಾರ ಮಧ್ಯಾಹ್ನದವರೆಗೂ ತಮ್ಮ ಸ್ನೇಹಿತರಲ್ಲಿ ಹೇಳಿಕೊ೦ಡಿದ್ದರು ಎನ್ನಲಾಗಿದೆ. ಪತ್ನಿ ಮನೆಗೆ ಮರಳಿದಾಗ ಜಯಂತ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2,2022 ರ ಶುಕ್ರವಾರ ಕೂಳೂರು ಸಮೀಪದ ಗೋಲ್ಡ್ ಪಿಂಚ್ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ.ಎಂದು ಪ್ರಧಾನಿ ಮೋದಿಯವರು ಹೇಳಿದರು. ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ 3800 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಇದರಿಂದಾಗಿ ನಮ್ಮ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿಗೆ ಸಾಧ್ಯವಾಗಲಿದೆ.ಕಳೆದ 8 ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಜಲಜೀವನ್ ಮಿಷನ್ ಯೋಜನೆಯಡಿ ಕನಾ೯ಟದಲ್ಲಿ 30ಲಕ್ಷ ಮನೆಗಳಿಗೆ ನೇರವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಪ್ರಧಾನಮಂತ್ರಿ ಆಯುಷ್ಮಾನ್ ಯೋಜನೆಯಡಿ 30ಲಕ್ಷ ಫಲಾನುಭಿಗಳಿಗೆ ನಾಲ್ಕುಸಾವಿರ ಕೋಟಿ ರೂಪಾಯಿ ಮೊತ್ತದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯವಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More

ಬಂಟ್ವಾಳ:ಹೆಜ್ಜೇನು ದಾಳಿ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಕಳಾಯಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ. ಸೆ.1, ಗುರುವಾರ ಸಂಜೆ ಬಾಲಕ ಮಾಝಿನ್ ಮನೆಯ ಬಳಿ ಆಟವಾಡುತ್ತಿದ್ದಾಗ ಅವನ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಈ ದಾಳಿಯಿಂದಾಗಿ ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Read More

ಮಂಗಳೂರು : ನಾಡಿನಾದ್ಯಂತ ಆ.31 ಬುಧವಾರ ನಡೆದ ಗಣೇಶ ಚತುರ್ಥಿಯಂದು ದೊಡ್ಡ ಸಂಖ್ಯೆಯಲ್ಲಿ ಭಕ್ತರು ವಿವಿಧ ದೇವಸ್ಥಾನಗಳಿಗೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಪೆಂಡಾಲಿಗೆ ತೆರಳಿ ದೇವರಿಗೆ ಕೈ ಮುಗಿದು ಪ್ರಸಾದವನ್ನು ಸ್ವೀಕರಿದರು. ದೇವಸ್ಥಾನಗಳಲ್ಲಿ ಹಾಗೂ ಸಾರ್ವಜನಿಕ ಪೆಂಡಾಲುಗಳಲ್ಲಿ 108 ಸಹಸ್ರನಾಳಿಕೇರ ಗಣಹೋಮ,ಮೂಡುಗಣಪತಿ ಸೇವೆಗಳು ಜರಗಿದವು. ವಿವಿಧ ದೇವಸ್ಥಾನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಅಪ್ಪ,ಅಷ್ಟದ್ರವ್ಯ ಪಂಚಕಜ್ಜಾಯ,ಲಡ್ಡು,ಮೋದಕ,ಕೊಟ್ಟೆ ಕಡುಬು ದೇವರಿಗೆ ಸಮರ್ಪಿಸಿದ್ದು,ಬಳಿಕ ಭಕ್ತರು ಇವುಗಳನ್ನು ಸ್ವೀಕರಿಸಿದರು.ಗಣಹೋಮಗಳು,ಮುಡಿಅಕ್ಕಿಕಡುಬು,ಮೂಡುಗಣಪತಿ ಸೇವೆಗಳು,ಅನ್ನಪ್ರಸಾದ,ರಾತ್ರಿ ಹೂವಿನ ಪೂಜೆ ನಡೆದವು.

Read More

ಉಡುಪಿ : ನಿಯಂತ್ರಣ ತಪ್ಪಿ ಬೈಕ್ ಚರಂಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಅಂಬಲ್ಪಾಡಿಯ ಎನ್ಎಚ್ 66 ಸರ್ವಿಸ್ ರಸ್ತೆಯಲ್ಲಿ ಸಂಭವಿಸಿದೆ. ಮೃತರನ್ನು ಕೊಡವೂರಿನ ಲಿಯಾನ್ ವಿಲ್ಸನ್ ಅಮ್ಮನ್ನ (19) ಎಂದು ಗುರುತಿಸಲಾಗಿದೆ. ಲಿಯಾನ್ ಅವರು ಎನ್ಎಚ್ 66 ಸರ್ವಿಸ್ ರಸ್ತೆಯಲ್ಲಿ ಅಂಬಲ್ಪಾಡಿ ಕಡೆಯಿಂದ ಕಿನ್ನಿಮುಲ್ಕಿ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು,ಗಾಯಗೊಂಡ ಅವರನ್ನು ಅಂಬಲಪಾಡಿಯ ಆಸ್ಪತ್ರೆಗೆ ಕರೆದೊಯ್ದು ನಂತರ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಘಟನೆಯ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಸರ್ಕಾರ ಹಾಗೂ ರಾಜ್ಯ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ ಈ ಬಾರಿಯ ಗಣೇಶ ಹಬ್ಬವನ್ನು ಸಂಭ್ರಮ ಹಾಗೂ ಸಡಗರಿದಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಸಲಹೆ ನೀಡಿದ್ದಾರೆ. ಆ.26, ಶುಕ್ರವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಯವರು ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಸಮಿತಿಗಳು ಆಯಾ ವ್ಯಾಪ್ತಿಯ ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ಗಳಲ್ಲಿ ಅನುಮತಿ ಪಡೆಯಬೇಕು, ಈ ಸಂದರ್ಭದಲ್ಲಿ ಸೌಹಾರ್ದತೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವಂತಹ ಬರಹಗಳ ಬ್ಯಾನರ್ ಅಥವಾ ಫ್ಲೆಕ್ಸ್ಗಳನ್ನು ಅಳವಡಿಸಬಾರದು, ನಗರ ಸ್ಥಳೀಯ ಸಂಸ್ಥೆಗಳು ಅಥವಾ ಪೊಲೀಸ್ ಇಲಾಖೆಯ ಅನುಮತಿ ಪಡೆದು ಶುಭ ಕೋರುವ ಬ್ಯಾನರ್ ಅಥವಾ ಫ್ಲೆಕ್ಸ್ಗಳನ್ನು ಅಳವಡಿಸಿಕೊಳ್ಳಬಹುದಾಗಿದೆ, ಇದೀಗ ಮಳೆಗಾಲವಾದ ಕಾರಣ ಮಳೆ ಹಾಗೂ ಗಾಳಿಗೆ ಹಾನಿಯಾಗದಂತಹ ಪೆಂಡಾಲ್ಗಳನ್ನು ಹಾಕಬೇಕು, ಅಲ್ಲಿ ವಿದ್ಯುತ್ ಅವಘಡಗಳಾಗದಂತೆ ಎಚ್ಚರ ವಹಿಸಬೇಕು, ವಿದ್ಯುತ್ ಸಂಪರ್ಕ ಪಡೆಯಲು…

Read More

ಕಾಸರಗೋಡು : ಕಾರು ಮತ್ತು ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಆ. 27, ಶನಿವಾರದಂದು ಚೆರ್ವತ್ತೂರು ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ತುರುತ್ತಿ ಓರ್ಕಲಂನ ಕೆ.ಪಿ. ರಜಿತ್ (31) ಎಂದು ಗುರುತಿಸಲಾಗಿದೆ. ಅಖಿಲ್ (30)  ಸಿನೋಜ್ (33) ಮತ್ತು ಜಿತ್ತು (25) ಗಾಯಗೊಂಡವರು. ಗಾಯಾಳುಗಳನ್ನು ಕಣ್ಣೂರಿನ ಅಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಸಂಜೆಯ ಹೊತ್ತಿಗೆ ರಜಿತ್ ಮತ್ತು ಸ್ನೇಹಿತರು ಪರಶ್ಯಿನಿಕಡವಿಗೆ ತೆರಳಿ ಮರಳುತ್ತಿದ್ದಾಗ ಇವರು ಸಂಚರಿಸುತ್ತಿದ್ದ ಕಾರು ಮತ್ತು ಮೀನು ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಢಿಕ್ಕಿಯ ಹೊಡೆತಕ್ಕೆ ಕಾರು ಪೂರ್ತಿ ನಜ್ಜುಗುಜ್ಜಾಗಿ ದೆ, ಈ ವೇಳೆ ರಜಿತ್ ಮೃತಪಟ್ಟರು. ಕಾರಲ್ಲಿ ಸಿಲುಕಿದ ಉಳಿದವರನ್ನು ಸ್ಥಳೀಯರು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.  ಹೊಸದುರ್ಗ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More