Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಜು.19 : ಯೇನಪೊಯ ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಆಚರಣೆಯ ಭಾಗವಾಗಿ ಜು. 22, 23ರಂದು ಯೇನಪೊಯ ಕಾಲೇಜು ಕ್ಯಾಂಪಸ್ನಲ್ಲಿ ಮೆಗಾ ಯೋಗ ಮ್ಯಾರಥಾನ್ ಕಾರ್ಯಕ್ರಮ ಆಯೋ ಜಿಸಲಾಗಿದೆ ಎಂದು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಡಾ| ಎಂ.ಎಸ್. ಮೂಸಬ್ಬತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 22ರಂದು ಬೆಳಗ್ಗೆ 8.30ಕ್ಕೆ ಪ್ರಾಭವಾಗುವ ಕಾರ್ಯಕ್ರಮವನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ। ಇಪ್ಲಿಕಾರ್ ಅಲಿ ಉದ್ಘಾಟಿಸಲಿದ್ದಾರೆ. 25 ಗಂಟೆಗಳ ಯೋಗ ಪ್ರದರ್ಶನ ಜು. 23ರಂದು ಬೆಳಗ್ಗೆ 10 ಗಂಟೆಗೆ ಸಂಪನ್ನಗೊಳ್ಳಲಿದೆ. ಯೋಗ ತರಬೇತುದಾರ ಕುಶಾಲಪ್ಪ ಗೌಡ ತರಬೇತಿ ನೀಡಲಿದ್ದು, ಜಿಲ್ಲೆಯ ವಿವಿಧ ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಪ್ರತಿ 1.30 ಗಂಟೆಯ ಅವಧಿಯ ಯೋಗ ತರಬೇತಿಯಲ್ಲಿ ಭಾಗವಹಿಲಿದ್ದಾರೆ. 25 ಗಂಟೆಯಲ್ಲಿಸುಮಾರು2,500ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಯೋಗ ತರಬೇತುದಾರ ಕುಶಾಲಪ್ಪಗೌಡ ಮಾತನಾಡಿ, ಯೋಗ ತರಬೇತಿ ಕಾರ್ಯಕ್ರಮಕ್ಕೆ ಇಂದೋರ್ನಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಮಾರೋಪದಲ್ಲಿ ಆಯುಷ್ ಸಚಿವಾಲಯದ…
ಮಂಗಳೂರು, ಜು.19 : ಕೊಡಿಯಾಲಬೈಲಿನ ಭಗವತಿ ನಗರದ ಮಹಾಲಸಾ ದೃಶ್ಯಕಲಾ ಮಹಾ ಮಹಾವಿದ್ಯಾಲಯದ 2023-24ನೇ ಸಾಲಿನ ವಾರ್ಷಿಕ ಕಲಾಪ್ರದರ್ಶನ ಹಾಗೂ ವಾರ್ಷಿಕೋತ್ಸವ ‘ಪ್ರತಿಬಿಂಬಗಳು’ ಎಂಬ ಶೀರ್ಷಿಕೆಯಡಿ ಜು. 19ರಿಂದ ಜು. 03 ತನಕ ಮಹಾವಿದ್ಯಾಲಯದಲ್ಲಿ ನಡೆಯಲಿದೆ ಎಂದು ಕಾಲೇಜಿನ ಚಿತ್ರಕಲಾ ವಿಭಾಗ ಮುಖ್ಯಸ್ಥ ಎನ್.ಎಸ್. ಪತ್ತಾರ್ ತಿಳಿಸಿದ್ದಾರೆ. ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎನ್.ಎಸ್. ಪತ್ತಾರ್ ಅವರು, ವಿದ್ಯಾರ್ಥಿಗಳು ರಚಿಸಿದ 400ಕ್ಕೂ ಹೆಚ್ಚು ವಿವಿಧ ಪ್ರಕಾರದ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ರೇಖಾಚಿತ್ರ, 2ಡಿ ವಿನ್ಯಾಸ, ಸ್ಥಿರಚಿತ್ರಣ, ಸೃಜನಶೀಲ ವರ್ಣಚಿತ್ರಗಳು, ನಿಸರ್ಗಚಿತ್ರ, ಮಂಡಲ ಚಿತ್ರಗಳು, ಜಾಹೀರಾತು ಕಲೆ, ಸಾಂದರ್ಭಿಕ ಚಿತ್ರಗಳು, ಡಿಜಿಟಲ್ ಕಲಾಕೃತಿಗಳು ಪ್ರದರ್ಶನದಲ್ಲಿ ಇರಲಿವೆ. ಜು. 19ರಿಂದ 21ರವರೆಗೆ ಕಲಾಪ್ರದರ್ಶನ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದೆ ಎಂದು ಹೇಳಿದರು . ಜು. 19ರಂದು ಬೆಳಗ್ಗೆ 10.30ಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಂಗಳೂರಿನ ಕಾರಂಜಿ ಇನ್ಫೋಟೆಕ್ ಪೈ.ಲಿ. ನಿರ್ದೇಶಕ ವಿಕ್ರಮ್ ಕೆಮ್ಮೆ, ಆರ್ಕಿಡ್ ಆರ್ಟ್…
ಬೆಂಗಳೂರು, ಜು. 18: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಆ.1 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ಗೆ ಈಗಾಗಲೇ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜೂ.11 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಬಂಧನ ಮಾಡಲಾಗಿತ್ತು. ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ 13, ತುಮಕೂರು ಜೈಲಿನಲ್ಲಿ 4 ಆರೋಪಿಗಳು ಇದ್ದಾರೆ.
ಮಹಾನಗರ, ಜು, 17: ಶ್ರೀ ಮಾತಾ ಅಮೃತಾನಂದಮಯಿ ಮಠ ಮಂಗಳೂರು ವತಿಯಿಂದ ಗುರು ಪೂರ್ಣಿಮಾ ದಿನವಾದ 21ರಂದು ಬೆಳಗ್ಗೆ 9 ಗಂಟೆಗೆ ಉರ್ವದ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಗುರು ಪಾದುಕಾ ಪೂಜೆ, ದೇವೀ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಅಧ್ಯಕ್ಷ ಡಾ| ವಸಂತ ಕುಮಾರ್ ಪೆರ್ಲ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 21ರಂದು ಶ್ರೀ ಮಾತಾ ಅಮೃತಾನಂದಮಯಿ ಮಠ ಮಂಗಳೂರು ಇದರ ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ‘ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ಶ್ರೀ ಗುರು ಪಾದುಕಾ ಪೂಜೆ, ದೇವೀ ಪೂಜೆ, ಅರ್ಚನೆ, ಗುರು ಪೂರ್ಣಿಮಾ ದಿನದ ಮಹತ್ವದ ಕುರಿತು ಸಂದೇಶ, ಭಜನೆ, ಆರತಿ, ಭಕ್ತರಿಂದ ಕ್ಷೀರಾಭಿಷೇಕ, ಮಹಾ ಪ್ರಸಾದ ವಿತರಣೆ ನಡೆಯಲಿದೆ. ಅಂದು ಬೆಳಗ್ಗೆ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಗುರು ಹೋಮ, ಮಹಾ ಮೃತ್ಯುಂಜಯ ಹೋಮ ನಡೆಯಲಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅಮೃತಾನಂದಮಯಿ…
ಮಂಗಳೂರು,ಜು.16 :‘ಸಾಂಕೇತ್’ ಕನ್ನಡ ಸಿನೆಮಾ ಜು.26ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ಸೋಮವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿನೆಮಾದ ನಿರ್ದೇಶಕಿ ಜೋತ್ಸ್ನಾ ಕೆ.ರಾಜ್ ಹೇಳಿದರು.ಸಾಂಕೇತ್ ಸಿನೆಮಾವು ಒಬ್ಬ ವ್ಯಕ್ತಿಯ ಮದುವೆ-ಮಕ್ಕಳ ವಿಷಯದ ತೊಳಲಾಟವನ್ನು ಬಿಂಬಿಸುವ ವಿಭಿನ್ನ ಕಥೆಯನ್ನೊಳಗೊಂಡಿದೆ ಎಂದು ಸಿನೆಮಾದ ನಿರ್ದೇಶಕಿ ಜೋತ್ಸ್ನಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಟಿ ಚೈತ್ರಾ ಶೆಟ್ಟಿ ಮಾತನಾಡಿ, ಸ್ವತಃ ಸಂಪಾದನೆ, ಧ್ವನಿ ವಿನ್ಯಾಸ ಹಾಗೂ ನಿರ್ದೇಶನವನ್ನು ಜೋತ್ಸ್ನಾ ನಿಭಾಯಿಸಿದ್ದಾರೆ. ಎಕ್ಕಿ ರಾವ್, ಮೋಹಣ್ ಶೇಣಿ, ರಾಹುಲ್ ಅಮೀನ್, ರೂಪಶ್ರೀ ವರ್ಕಾಡಿ, ನಿರೀಕ್ಷಾ ಶೆಟ್ಟಿ ಸದಾಶಿವ ಅಮೀನ್, ರಜೀತ್ ಕದ್ರಿ, ನಿರೀಕ್ಷಾ ರಾಣಿ, ಮೇಘನಾ ರಕ್ಷಿತಾ ಮುಂತಾದವರು ಅಭಿನಯಿಸಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ವಿಕ್ಕಿ ರಾವ್, ರಾಹುಲ್ ಅಮೀನ್, ಸನತ್ ಕುಮಾರ್, ಪ್ರಕಾಶ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು, ಜು.15 : ಪ್ರಸಾದ್ ನೇತ್ರಾಲಯ ಸಮೂಹ ಆಸ್ಪತ್ರೆ ವತಿಯಿಂದ ಮಂಗಳೂರಿನ ಪಂಪ್ವೆಲ್ ಸಮೀಪದ ಉಜೋಡಿಯಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ನೂತನ ರೊಬಾಟಿಕ್ ಕಣ್ಣಿನ ಪೊರೆ ಚಿಕಿತ್ಸಾ ವ್ಯವಸ್ಥೆಗೆ ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ್ ಯಸ್ಸೇನಾಯಕ್ ಅವರು ಭಾನುವಾರ ಚಾಲನೆ ನೀಡಿದರು. ಬಳಿಕ ಮಾತಾಡಿದ ಸಚಿವ ಶ್ರೀಪಾದ್ ಯಸ್ಸೇನಾಯಕ್ ಅವರು ಪ್ರಸಾದ್ ನೇತ್ರಾಲಯದಲ್ಲಿ ರೊಬಾಟಿಕ್ ತಂತ್ರಜ್ಞಾನ ಅಳವಡಿಕೆಯಿಂದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಕರಾವಳಿಯ ಜನರಿಗೆ ಇದರ ಮೂಲಕ ದೃಷ್ಟಿ ದೋಷ ಚಿಕಿತ್ಸೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು. ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಮಾತಾಡಿ, ಕರಾವಳಿಯಲ್ಲಿ ಯಾವುದೇ ಹೊಸತನ ಅಳವಡಿಕೆಯಾದರೂ ಸಂತೋಷದ ವಿಚಾರ, ಖಾಸಗಿ ಸಂಸ್ಥೆಗಳು ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ವಿಷಯ ನಿಜಕ್ಕೂ ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಮಾತಾಡಿ, ಕರಾವಳಿಯ ಜನತೆಗೆ ವಿಶೇಷ ಸೇವೆ ನೀಡುತ್ತಿರುವ ಪ್ರಸಾದ್ ನೇತ್ರಾಲಯದ ಕಾರ್ಯ…
ಬಜಾಲ್, ಜು. 14 : ಕಂಕನಾಡಿ ವಲಯ ಬಂಟರ ಸಂಘದ ಆಶ್ರಯದಲ್ಲಿ 15ನೇ ವಾರ್ಷಿಕ ಮಹಾಸಭೆ ಹಾಗೂ ಬಂಟ ಸಮ್ಮಿಲನ ಕಾರ್ಯಕ್ರಮವು ರವಿವಾರ ಜು. 14ರಂದು ಬಜಾಲ್ ಸಂತ ಜೋಸೆಫ್ ಹೈಸ್ಕೂಲ್ನಲ್ಲಿ ನಡೆಯಿತು. ಕಾರ್ಯಕ್ರಮವನ್ನುಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಖಜಾಂಜಿ ಸಿಎ ರಾಮ್ ಮೋಹನ್ ರೈ ಅವರು ಇತರ ಗಣ್ಯರೊಂದಿಗೆ ಸೇರಿ ಉದ್ಘಾಟಿಸಿದರು. ವಿಮರ್ಶಕ ತಮ್ಮಣ್ಣ ಶೆಟ್ಟಿ ಅವರು ದಿಕ್ಕೂಚಿ ಭಾಷಣವನ್ನುಮಾಡಿದರು. ಸಿಎ ರಾಮ್ ಮೋಹನ್ ರೈ, ಮ.ನ.ಪಾ. ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಅವರುಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾಡಿದರು. ಸಂಘದ ಅಧ್ಯಕ್ಷ ಬಿ. ನಾಗೇಶ್ ಶೆಟ್ಟಿ ಬಜಾಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭ ದಲ್ಲಿಸಾಧಕರ ಸಮ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಹಸಿರುದಳದ ಸಂಯೋಜಕ ನಾಗರಾಜ್ ಬಜಾಲ್ ಅವರನ್ನು ಸಮ್ಮಾನಿಸಲಾಯಿತು. ಕಾರ್ಯಕ್ರಮದ್ದಲ್ಲಿ ಸಿಎ ರಾಮ್ ಮೋಹನ್ ರೈ, ಮಂಗಳೂರು ಇಂಟ ನ್ಯಾಶನಲ್ ಬಂಟ್ಸ್ ವೆಲ್ವೇರ್ ಟ್ರಸ್ಟಿನ ಸಂಘಟನ ಕಾರ್ಯದರ್ಶಿ ದೇವಿಚರಣ್ ಶೆಟ್ಟಿ, ಮನಪಾ ವಿಪಕ್ಷ…
ನೈಜೀರಿಯಾ, ಜು 14 : ತರಗತಿ ನಡೆಯುತ್ತಿರುವಾಗ 2 ಅಂತಸ್ತಿನ ಶಾಲೆಯೊಂದು ಕುಸಿದು 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ ದಾರುಣ ಘಟನೆ ಉತ್ತರ-ಮಧ್ಯ ನೈಜೀರಿಯಾದಲ್ಲಿ ನಡೆದಿದೆ. ಅವಶೇಷಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗಾಗಿ ಶೋಧ ನಡೆಯುತ್ತಿದೆ. ಪರಿಹಾರ ಮತ್ತು ರಕ್ಷಣಾ ತಂಡಗಳನ್ನು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಪ್ರಸ್ಥಭೂಮಿ ರಾಜ್ಯದ ಬುಸಾ ಬುಜಿ ಸಮುದಾಯದ ಸೇಂಟ್ಸ್ ಅಕಾಡೆಮಿ ಕಾಲೇಜಿಗೆ ವಿದ್ಯಾರ್ಥಿಗಳು ಎಂದಿನಂತೆ ತರಗತಿಗಳಿಗೆ ಬಂದಿದ್ದರು. ಶಾಲೆ ಆರಂಭವಾದ ಕೆಲ ಸಮಯದಲ್ಲೇ ಶಾಲಾ ಕಟ್ಟಡ ಕುಸಿದಿದೆ ಎನ್ನಲಾಗಿದೆ. ಒಟ್ಟು 154 ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು ಈ ಪೈಕಿ 132 ಮಂದಿಯನ್ನು ರಕ್ಷಿಸಲಾಗಿದೆ. 22 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪ್ರಸ್ಥಭೂಮಿ ಪೊಲೀಸ್ ವಕ್ತಾರ ಆಲ್ಫ್ರೆಡ್ ಅಲಾಬೊ ತಿಳಿಸಿದ್ದಾರೆ.
ಉಪ್ಪಿನಂಗಡಿ, ಜು. 13: ಬೈಕ್ ಮತ್ತುಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಕೋಡಿಕ್ಕಲ್ ನಿವಾಸಿ ಪ್ರಣಮ್ ಕೋಟ್ಯಾನ್ (23) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಪ್ರಣಮ್ ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಪ್ರಣಮ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇವರು ಮೆಡಿಕಲ್ ರೆಪ್ ಆಗಿದ್ದರು .
ಬೆಂಗಳೂರು, ಜು 12: ಕನ್ನಡ ನಿರೂಪಕಿ ಅಪರ್ಣಾ ವಸ್ತಾರೆ ಅವರು ಜು. 11 ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿ ದ್ದಾರೆ. ಹಲವು ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಅಪರ್ಣ ಅವರು ಬಳಲುತ್ತಿದ್ದರು. ಗುರುವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ನಿರೂಪಕಿಯಾಗಿದ್ದ ಅಪರ್ಣಾ ಅವರು ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ನಟಿ ಅಪರ್ಣಾ ಮುಕ್ತ-ಮುಕ್ತ, ಮೂಡಲ ಮನೆ ಸೇರಿ ಹಲವು ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದರು.












