Subscribe to Updates
Get the latest creative news from FooBar about art, design and business.
Author: admin
ಬೆಳ್ತಂಗಡಿ,ಜು. 10 : ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ ಹೊಡೆದು ಸ್ಥಳದಲ್ಲೇ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ಕುಪ್ಪೆಟ್ಟಿಯಲ್ಲಿ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ.ಬೆಳ್ತಂಗಡಿ ಊರುವಲು ಗ್ರಾಮದ ಕುಪ್ಪೆಟ್ಟಿ ರಸ್ತೆ ಮಜ್ಜೆ ಎಂಬಲ್ಲಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಸರಗೋಡು, ಜು. 09 : ಆಟೊ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದುಆಟೋ ಚಾಲಕ ಸಾವನಪ್ಪಿದ ಘಟನೆ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಮುದೆ ಬಳಿ ನಡೆದಿದೆ. ಮೃತರನ್ನು ಚೇವಾರ್ ಮಿತ್ತಡ್ಕದ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಎಂದು ಗುರುತಿಸಲಾಗಿದೆ. ಚೇವಾರ್ ನಲ್ಲಿ ಕಿಶೋರ್ ಆಟೋರಿಕ್ಷಾ ಬಾಡಿಗೆ ನಡೆಸುತ್ತಿದ್ದು, ರವಿವಾರ ಬಾಡಿಗೆಗೆ ತೆರಳಿ ಮರಳುತ್ತಿದ್ದಾಗ ರಸ್ತೆ ಬದಿ ಇಡಲಾಗಿದ್ದ ಇಂಟರ್ ಲಾಕ್ ಗೆ ಬಡಿದು ರಿಕ್ಷಾ ಮಗುಚಿ ಬಿದ್ದಿದೆ. ರಿಕ್ಷಾದಡಿ ಸಿಲುಕಿದ್ದ ಕಿಶೋರ್ ನನ್ನು ನಾಗರಿಕರು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಮಂಗಳೂರು ಜು. 08 : ಚಿಕ್ಕಬಳ್ಳಾಪುರದ ಉಪವಿಭಾಗಾಧಿಕಾರಿಯಾಗಿದ್ದ ಡಾ.ಜಿ.ಸಂತೋಷ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ದಂಡಾಧಿಕಾರಿ ಹುದ್ದೆಗೆ ನಿಯುಕ್ತಿಗೊಳಿಸಿ ಸರಕಾರ ಶುಕ್ರವಾರ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದ ಎಚ್.ಕೃಷ್ಣಮೂರ್ತಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಹುದ್ದೆ ಖಾಲಿಯಾಗಿತ್ತು. ಹೀಗಾಗಿ ಡಾ. ಸಂತೋಷ ಕುಮಾರ್ ಅವರನ್ನು ಖಾಲಿ ಇದ್ದ ಹುದ್ದೆಗೆ ನೇಮಕ ಮಾಡಲಾಗಿದೆ.
ಕಾರ್ಕಳ, ಜು. ೦7: ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಪ್ರವೀಣ್ ಆಚಾರ್ಯ ಅವರು ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆ ಪಕ್ಕದಲ್ಲಿದ್ದ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು,ಮರದಡಿಯಲ್ಲಿ ಸಿಲುಕಿಕೊಂಡಿದ್ದ ಅವರನ್ನುತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪುತ್ತೂರು, ಜು. 06: ಕಾರು ಅಪಘಾತ ಸಂಭವಿಸಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಗುರುವಾರ ನಡೆದಿದೆ. ಮೃತರನ್ನು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಬಿಬಿಎಂ ವಿದ್ಯಾರ್ಥಿನಿ, ಪುತ್ತೂರು ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರಿ ಖತೀಜತ್ ಹನಾ (19) ಎಂದು ಗುರಿತಿಸಲಾಗಿದೆ. ಖತೀಜತ್ ಹನಾ ಇವರು ಪುತ್ತೂರಿನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಹೋಗುತ್ತಿದ್ದ ವೇಳೆ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ಪಲ್ಟಿಯಾಗಿದೆ ಈ ವೇಳೆ ಗಂಭೀರ ಗಾಯಗೊಂಡ ಖತೀಜತ್ ಹನಾ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತದರೂ ಅದಾಗಲೇ ಆಕೆ ಮೃತಪಟ್ಟಿದ್ದಾರೆ ಎನ್ನಲಾಗಿದೆ .ಇವರ ಜೊತೆಗಿದ್ದ ಈಕೆಯ ತಾಯಿ ಮತ್ತು ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಬಂಟ್ವಾಳ ಸಂಚಾರ ಠಾಣಾಧಿಕಾರಿ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿದ್ದಾರೆ.
ಉಡುಪಿ, ಜು 06 : ಭಾರೀ ಮಳೆಗೆ ಕಮಲಶಿಲೆ ದೇವಳದ ಪಕ್ಕದಲ್ಲಿ ಉಕ್ಕಿ ಹರಿಯುತ್ತಿರುವ ಕುಬ್ಜಾ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ. ಮೃತರನ್ನು ಕಮಲಶಿಲೆ ಸಮೀಪದ ತಪ್ಪಲು ನಿವಾಸಿ ಶೇಷಾದ್ರಿ ಐತಾಳ್ (75) ಎಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ವರುಣನ ಅಬ್ಬರಕ್ಕೆ ಮೂರನೇ ಸಾವು ಸಂಭವಿಸಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ.
ಸುರತ್ಕಲ್, ಜು. 5 : ವಿದ್ಯುತ್ ತಂತಿ ತುಳಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ. ಮೃತ ಪಟ್ಟ ಯುವಕನನ್ನು ಸ್ಥಳೀಯ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಭಾರಿ ಗಾಳಿ ಮಳೆಗೆ ವಿದ್ಯುತ್ ತಂತಿ ಕಡಿದು ಬಿದಿದ್ದು, ಈ ಬಗ್ಗೆ ಅರಿವಿಲ್ಲದೇ ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭಾರಿ ಗಾಳಿ ಮಳೆಗೆ ವಿವಿಧೆಡೆ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಕಾಸರಗೋಡು, ಜೂ. 04 : ಭಾರೀ ಗಾಳಿ ಮಳೆಗೆ ಮೈಮೇಲೆ ಮರ ಬಿದ್ದು ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಪುತ್ತಿಗೆ ಸಮೀಪದ ಅಂಗಡಿಮೊಗರು ಎಂಬಲ್ಲಿ ಸೋಮವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಬಿ. ಎಂ ಯೂಸಫ್- ಫಾತಿಮ್ಮತ್ ಸೈನಬಾ ದಂಪತಿಯ ಪುತ್ರಿ ಆಯಿಷತ್ ಮಿನ್ಹಾ (11) ಎಂದು ಗುರುತಿಸಲಾಗಿದೆ. ಸಂಜೆ ನಾಲ್ಕು ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಆಯಿಷತ್ ಆಟವಾಡುತ್ತಿದ್ದಾಗ ಘಟನೆ ನಡೆದಿದ್ದು, ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ವೈದ್ಯರು ಆಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಉಳ್ಳಾಲ, ಜು. 03 : ಆಂಬ್ಯುಲೆನ್ಸ್ ವಾಹನ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ತಲಪಾಡಿ ಮರೋಳಿ ಬಾರ್ ಎದುರುಗಡೆ ಸಂಭವಿಸಿದೆ. ಮೃತರನ್ನು ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ ಫ್ರಾನ್ಸಿಸ್ ಡಿಸೋಜ (62) ಎಂದು ಗುರುತಿಸಲಾಗಿದೆ. ಮನೆಯಿಂದ ತಲಪಾಡಿಗೆ ಬಂದಿದ್ದ ಫ್ರಾನ್ಸಿಸ್, ಮರೋಳಿ ಬಾರ್ ಎದುರುಗಡೆಯಿಂದ ವಾಪಸ್ಸು ಮನೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ಸಂದರ್ಭ ಕೇರಳದಿಂದ ಮಂಗಳೂರು ಕಡೆಗೆ ವೇಗದಲ್ಲಿ ಬರುತ್ತಿದ್ದ ಖಾಲಿ ಆಂಬ್ಯುಲೆನ್ಸ್ ಫ್ರಾನ್ಸಿಸ್ ಅವರಿಗೆ ಢಿಕ್ಕಿ ಹೊಡೆದ ದ ಪರಿಣಾಮ ಫ್ರಾನ್ಸಿಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ, ಜು,01 : ವಸತಿ ಸಮುಚ್ಚಯವೊಂದರ ಮನೆಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ಟೆಕ್ನಿಷಿಯನ್ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಜೂ. 30, ಶುಕ್ರವಾರ ನಡೆದಿದೆ. ಮೃತರನ್ನು ಆಚಾರಿಪಲ್ಕೆ ನಿವಾಸಿ ಯತೀಶ್ (32) ಎಂದು ಗುರುತಿಸಲಾಗಿದೆ. ಟೆಕ್ನಿಷಿಯನ್ ಮೂರನೇ ಮಹಡಿಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದು, ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಅಂಬ್ಯುಲೆನ್ಸ್ ಮೂಲಕ ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯದರೂ ಯಾವುದೇ ಪ್ರಯೋಜನವಾಗಿಲ್ಲ. ತಲೆಗೆ ಗಂಭೀರವಾದ ಏಟು ಬಿದ್ದಿರುವುದರಿಂದ ಯತೀಶ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.