Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಜು.03: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಚಲನಚಿತ್ರ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ. ಮಂಗಳೂರು ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು ಪುಣೆ, ಮುಂಬೈನಲ್ಲಿ ನಡೆದ ಪ್ರೀಮಿಯರ್ ಶೋ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು. ಧರ್ಮ ದೈವ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲೀಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲ ದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿ ಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಚಿತ್ರ ತೆರೆಕಾಣಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ಬಿಳಿಯೂರು ರಾಕೇಶ್ ಭೋಜರಾಜ ಶೆಟ್ಟಿ, ಚೇತನ್ ರೈ ಮಾಣಿ, ರಮೇಶ್ ರೈ ಕುಕ್ಕುವಳ್ಳಿ, ಅರುಣ್ ರೈ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.
ಬೆಳ್ತಂಗಡಿ, ಜೂ.28: ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ, ನಡ ಗ್ರಾಮ ಕರಣಿಕರ ಕಚೇರಿ ಸಿಬ್ಬಂದಿ ಮೃತಪಟ್ಟ ಘಟನೆ ಲಾಯಿಲದಲ್ಲಿ ಜೂ.28 ರಂದು ನಡೆದಿದೆ. ಬಳಂಜ ನಿವಾಸಿ, ನಡ ಗ್ರಾಮ ಕರಣಿಕರ ಕಚೇರಿ ಸಹಾಯಕ ಜಯರಾಜ್(50) ಮೃತಪಟ್ಟವರು. ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ತಂಗಡಿ ಕಡೆಯಿಂದ ನಡಕ್ಕೆ ತೆರಳುತ್ತಿದ್ದ ಬೈಕ್ ಮಧ್ಯೆ ಪುತ್ರಬೈಲು ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು , ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನವದೆಹಲಿ, ಜೂ.30: ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂ ಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಇಂದು ಅಧಿಕಾರ ವಹಿಸಿಕೊಂಡರು. ಸೇನೆಯ ಮುಖ್ಯಸ್ಥರಾಗಿದ್ದ ಜನರಲ್ ಮನೋ ಜ್ ಪಾಂಡೆ ಅವರು ನಿವೃತ್ತರಾದ ಹಿನ್ನಲೆ ಇದೀಗ ಸೇನೆಯ ಜನರಲ್ ದ್ವಿವೇ ದಿಯವರು ಅಧಿಕಾರ ವಹಿಸಿಕೊಂಡಿದ್ದಾರೆ ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿರುವ ಜನರಲ್ ದ್ವಿವೇದಿ ಅವರು ಸೇನೆಯ ಉಪಮುಖ್ಯಸ್ಥರಾಗಿ ಸೇ ವೆ ಸಲ್ಲಿಸುತ್ತಿದ್ದರು. ಫೆಬ್ರವರಿ 19ರಂದು ಸೇನಾ ಸಿಬ್ಬಂದಿಯ ಉಪಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು 2022-2024ರವರೆಗೆ ಉತ್ತರ ಕಮಾಂಡ್ ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಉಜಿರೆ, ಜೂ .29 : ಇಂದು ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಸಾವನ್ನಪ್ಪಿದ್ದಾರೆ. ಪ್ರಜ್ವಲ್ ನಾಯಕ್ ಅವರ ಕಾರು ವೇಗವಾಗಿ ಬಂದು ಡಿವೈಡರ್ ಮೇಲಿನ ಬೀದಿದೀಪಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಇದರಿಂದಾಗಿ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರು, ಜೂ 28: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ರೊಸಾರಿಯೋ ಬಳಿ ಬುಧವಾರ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ(46) ಹಾಗೂ ಸಕಲೇಶಪುರದ ಪಾಲ್ಯ ನಿವಾಸಿ ರಾಜು(50) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ರಿಕ್ಷಾ ಚಾಲಕರಿಬ್ಬರೂ ಆಟೋ ತೊಳಿಯುತ್ತಿರುವ ಸಮಯದಲ್ಲಿ ವಿದ್ಯುತ್ ತಂತಿಯೊಂದು ಅವರ ಮೇಲೆ ಕಡಿದು ಬಿದ್ದಿದ್ದು,ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ, ಜೂ.26: 18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್ ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಓಂ ಬಿರ್ಲಾ ಅವರು ಸತತ 2ನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ. ಇಂಡಿಯಾ ಒಕ್ಕೂಟದಿಂದ ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಪ್ರತಿ ಸ್ಪರ್ಧಿಯಾಗಿದ್ದ ಕೆ. ಸುರೇಶ್ ವಿರುದ್ಧ ಓಂ ಬಿರ್ಲಾ ಗೆಲುವು ಸಾಧಿಸಿದ್ದಾರೆ. ನೂತನ ಸ್ಪೀಕರ್ ಓಂ ಬಿರ್ಲಾ ಅವರನ್ನು ಪ್ರಧಾನ ಮಂತ್ರಿ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿನಂದಿಸಿದರು. ಇಬ್ಬರೂ ಅವರನ್ನು ಸ್ಪೀಕರ್ ಕುರ್ಚಿಗೆ ಕರೆದೊಯ್ದರು. ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಓ ಬಿರ್ಲಾ ಅವರ ಹೆಸರನ್ನು ಅನುಮೋದಿಸಿದ ಬಳಿಕ ಎನ್ ಡಿಎ ಮೈತ್ರಿಕೂಟದ ಹಲವು ಸದಸ್ಯರು ಓಂ ಬಿರ್ಲಾ ಅವರ ಹೆಸರನ್ನು ಅನುಮೋದಿಸಿದರು.ವಿರೋಧ ಪಕ್ಷದ ಸದಸ್ಯರು ಕೋಡಿಕುನ್ನಿಲ್ ಸುರೇಶ್ ಅವರ ಹೆಸರನ್ನು ಪ್ರಸ್ತಾಪಿಸಿ, ಅನುಮೋದಿಸಿದರು. ಓಂ ಬಿರ್ಲಾ ಸ್ಪೀಕರ್ ಆಗಿ ಆಯ್ಕೆಯಾಗಿರುತ್ತಾರೆ…
ಕಾಸರಗೋಡು, ಜೂ 25 : ಹಿಟಾಚಿ ಯಂತ್ರ ಮಗುಚಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಇಂದು ಬಂದಡ್ಕ ದಲ್ಲಿ ನಡೆದಿದೆ.ಬಂದಡ್ಕದ ಪ್ರೀತಂ ಲಾಲ್ ಚಂದ್ (22) ಮೃತಪಟ್ಟವರು. ಬಂದಡ್ಕ ಪಡುಪ್ಪುನಲ್ಲಿರುವ ಸಂಬಂಧಿಕರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಮನೆಯಂಗಳದಲ್ಲಿ ಹಿಟಾಚಿ ಯಂತ್ರವನ್ನು ತೊಳೆಯುತ್ತಿದ್ದಾಗ ಆಕಸ್ಮಿಕವಾಗಿ ಮಗುಚಿ ಬಿದ್ದಿದ್ದು, ಅದರಡಿ ಸಿಲುಕಿದ್ದ ಲಾಲ್ ಚಂದ್ ರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ, ಜೂ. 24 : ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯಲ್ಲಿ, ಲೊಂಬಾರ್ಡ್ ಹೋಮ್ ಕೇರ್ ಸರ್ವಿಸ್ ಮತ್ತು ನೇತ್ರಚಿಕಿತ್ಸಾ ವಿಭಾಗದ ಸೌಲಭ್ಯಗಳನ್ನು ಜೂ 21ರಂದು ಶುಕ್ರವಾರ ಆಸ್ಪತ್ರೆ ಆವರಣದಲ್ಲಿ ಉದ್ಘಾಟನೆಗೊಂಡಿತು. ನೂತನ ಸೇವೆಗಳನ್ನು ಉದ್ಘಾಟಿಸಿದ ಸಿಎಸ್ಎ ಕರ್ನಾಟಕ ದಕ್ಷಿಣ ಧರ್ಮ ಪ್ರಾಂತ್ಯದ ಬಿಷಪ್ ಅತಿ ವಂ.ಹೇಮಚಂದ್ರ ಕುಮಾರ್ ಆಶೀವರ್ಚನ ನೀಡಿ, ನಮಗೆ ದೊರೆತ ವಿದ್ಯೆ ಸೇರಿದಂತೆ ಎಲ್ಲ ರೀತಿಯ ಸ್ಥಾನಮಾನಗಳು ದೇವರು ಕೊಟ್ಟ ಕೊಡುಗೆಯಾಗಿದೆ. ಅದನ್ನು ಸೇವೆಯ ಮೂಲಕ ಸಮಾಜಕ್ಕೆ ನೀಡುವ ಕಾರ್ಯ ಮಾಡಬೇಕು. ಈ ಮೂಲಕ ದೇವರನ್ನು ಸ್ಮರಿಸಬೇಕು. ದೀಪ ಬೆಳಗಿಸಿ ಬುಟ್ಟಿಯ ಕೆಳಗೆ ಇಟ್ಟರೆ ಪ್ರಯೋಜನವಿಲ್ಲ. ಕ್ರಿಶ್ಚಿಯನ್ ಸಮುದಾಯವು ತಮ್ಮನ್ನು ತಾವು ಬೆಳಗಿಸುವ ಮತ್ತು ಜಗತ್ತನ್ನು ಬೆಳಗಿಸುವ ಮೇಣದಬತ್ತಿಗಳಂತೆ ಬಹಳ ಹಿಂದಿನಿಂದಲೂ ಸೇವೆಯಲ್ಲಿ ತೊಡಗಿಸಿಕೊಂಡಿದೆ.ಇಲ್ಲಿ ಹೋಮ್ ಕೇರ್ ಹಾಗೂ ನೇತ್ರ ವಿಭಾಗದ ಸೇವೆಗಳನ್ನು ಆರಂಭಿಸಿರುವುದು ಅತ್ಯುತ್ತಮವಾಗಿದೆ. ಈ ಆಸ್ಪತ್ರೆ ಇನ್ನಷ್ಟು ವಿಸ್ತಾರವಾಗಲಿ ಎಂದು ಹೇಳಿದರು. ಸಿ ಎಸ್ ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಹೇಮಚಂದ್ರ ಕುಮಾರ್,…
ಕಾರ್ಕಳ, ಜೂ. 23 : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿ ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ರಸ್ತೆಯಲ್ಲಿ ನಡೆದಿದೆ. ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ (14) ಮೃತ ವಿದ್ಯಾರ್ಥಿನಿ. ಪ್ರಣಮ್ಯ ಶೆಟ್ಟಿ ಹೆದ್ದಾರಿ ಬದಿಯಲ್ಲಿ ಸಂಜೆಯ ವೇಳೆಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಪಾದಚಾರಿ ಪ್ರಣಮ್ಯ ಶೆಟ್ಟಿ ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಜೂ.22 : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪ ಎದುರಿಸುತ್ತಿರೋ ನಟ ದರ್ಶನ್ ಇದೀಗ ಜೈಲು ಸೇರಿದ್ದಾರೆ. ಆರೋಪಿ ದರ್ಶನ್, ವಿನಯ್, ಪ್ರದೋಶ್ ಹಾಗೂ ಧನರಾಜ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. . ದರ್ಶನ್ ಸೇರಿದಂತೆ ನಾಲ್ವರಿಗೆ 13 ದಿನ ಅಂದರೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಇದರೊಂದಿಗೆ ದರ್ಶನ್ 2ನೇ ಬಾರಿ ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲು ಸೇರಿದ್ದಾರೆ. 13 ವರ್ಷಗಳ ಬಳಿಕ ದರ್ಶನ್ ಮತ್ತೊಮ್ಮೆ 13 ದಿನ ಜೈಲು ಸೇರಿದಂತಾಗಿದೆ. ನ್ಯಾಯಾಂಗ ಬಂಧನದ ಆದೇಶ ಬಂದ ಕೂಡಲೆ ದರ್ಶನ್, ವಿನಯ್, ಪ್ರದೂಶ್, ಧನರಾಜ್ರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಕೈದಿ ನಂಬರ್ 6106.ಪರಪ್ಪನ ಅಗ್ರಹಾರದ ಜೈಲಿನ ಮೂರನೇ ಬ್ಯಾರಕ್ನಲ್ಲಿ ದರ್ಶನ್ರನ್ನ ಇರಿಸಲಾಗಿದೆ ರೇಣುಕಾ ಸ್ವಾಮಿ ಹತ್ಯೆ ಕೇಸ್ಗೆ ಸಂಬಂಧಿಸಿದ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳಿಗೆ ಜೂನ್…












