Subscribe to Updates
Get the latest creative news from FooBar about art, design and business.
Author: admin
ಚಿಲಿ, ಫೆ 07: ಹೆಲಿಕಾಪ್ಟರ್ ಅಪಘಾತದಲ್ಲಿ ಚಿಲಿ ದೇಶದ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ(74) ಅವರು ನಿಧನರಾಗಿದ್ದಾರೆ. ಚಿಲಿ ದೇಶದ ದಕ್ಷಿಣ ಭಾಗದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ನಾಲ್ಕು ಮಂದಿ ಇದ್ದು, ಮೂವರು ಬದುಕುಳಿದಿದ್ದಾರೆ ಎಂದು ಸರ್ಕಾರದ ತುರ್ತು ಸಂಸ್ಥೆ ಸೆನಾಪ್ರೆಡ್ ತಿಳಿಸಿದೆ.
ಪುತ್ತೂರು, ಫೆ 06 : ನವವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ. ಮೃತರನ್ನು ಸಾಂತ್ಯ ನಿವಾಸಿ ಜಯಪ್ರಕಾಶ್ ಎಂಬವರ ಪತ್ನಿ ವೈಶಾಲಿ (26) ಎಂದು ಗುರುತಿಸಲಾಗಿದೆ. ಜಯಪ್ರಕಾಶ್ ಹಾಗೂ ವೈಶಾಲಿ ಮದುವೆ 7 ತಿಂಗಳ ಹಿಂದೆ ನಡೆದಿತ್ತು.ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ, ಫೆ 05 : ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ನೇಮಕವಾದ ಕುಂದಾಪುರದ ಬಿ. ಕಿಶೋರ್ ಕುಮಾರ್ ಅವರಿಗೆ ಶನಿವಾರ ಕುಂದಾಪುರ ಬಿಜೆಪಿ ಮಂಡಲದ ವತಿಯಿಂದ ಪಕ್ಷದ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತಾಡಿ, ಪಕ್ಷವನ್ನು ಬೂತ್ ಮಟ್ಟದಿಂದ ಇನ್ನಷ್ಟು ಬಲಪಡಿಸುವ ಜತೆಗೆ ಶಕ್ತಿ ತುಂಬುವ ಕಾರ್ಯ ಜಿಲ್ಲಾಧ್ಯಕ್ಷರಿಂದ ಆಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿ, ಇದು ಬಯಸದೇ ಬಂದ ಭಾಗ್ಯ. ಕಾರ್ಯಕರ್ತರೊಂದಿಗಿನ ನಿರಂತರ ಸಂಬಂಧ ಈ ಹಂತಕ್ಕೆ ಬೆಳೆಸಿದೆ. ಈ ಜವಾಬ್ದಾರಿ ಸಿಗುವಲ್ಲಿ ನೆರವಾದ ಎಲ್ಲ ಹಿರಿಯ, ಕಿರಿಯರೆಲ್ಲರಿಗೂ ಋಣಿ ಎಂದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ. ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ ಅಧ್ಯಕ್ಷರು,ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ,ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಠಲ ಪೂಜಾರಿ ಐರೋಡಿ, ಜಿಲ್ಲಾ…
ಫ್ರಾನ್ಸ್, ಫೆ 04 : ಜಗತ್ತಿನ ಗಮನ ಸೆಳೆದಿರುವ ಭಾರತದ ಯುಪಿಐ ತಂತ್ರಜ್ಞಾನ ಇದೀಗ ಫ್ರಾನ್ಸ್ಗೆ ಕಾಲಿಟ್ಟಿದೆ. ಇಮಾನ್ಯುಯೆಲ್ ಮ್ಯಾಕ್ರಾನ್ ರವರು ಭಾರತದಿಂದ ವಾಪಸ್ ಹೋದ ಬೆನ್ನಲ್ಲೇ ಫ್ರಾನ್ಸ್ನಲ್ಲಿ ಭಾರತದ ಯುಪಿಐ ಪಾವತಿ ಶುರುವಾಗಿದ್ದು, ಫೆ 2 ರಂದು ಪ್ಯಾರೀಸ್ನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯುಪಿಐ ಪಾವತಿಗೆ ಚಾಲನೆ ದೊರೆತಿದೆ. ಭಾರತದ ಪ್ರವಾಸಿಗರು ಇನ್ನು ಯುಪಿಐ ಬಳಸಿ ಟಿಕೆಟ್ಗಳನ್ನು ಆನ್ಲೈನ್ನಲ್ಲಿ ಖರೀದಿಸಬಹುದು ಹಾಗೂ ಐಫೆಲ್ ಟವರ್ಗೆ ಭೇಟಿ ನೀಡಲು ಟಿಕೆಟ್ಗಳನ್ನು ಬುಕ್ ಮಾಡಬಹುದು ಎಂದು ಎನ್ ಪಿಸಿಐ ತಿಳಿಸಿದೆ. ಭಾರತದ ಯುಪಿಐ ತಂತ್ರಜ್ಞಾನದ ಕುರಿತು ಫ್ರಾನ್ಸ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಯುಪಿಐ ಪಾವತಿಯನ್ನು ಜಾಗತಿಕಗೊಳಿಸುವ ದೃಷ್ಟಿ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿದೆ ಎಂದು ಬರೆದುಕೊಂಡಿದೆ.
ಕಾಸರಗೋಡು, 03 : ನಿರ್ಮಾಣ ಹಂತದ ಮನೆಯ ಮಹಡಿಯಿಂದ ಬಿದ್ದು ಆಟೋ ಚಾಲಕ ರೋರ್ವ ರು ಸಾವನ್ನಪ್ಪಿದ ಘಟನೆ ಬಂದ್ಯೋಡ್ ಸಮೀಪದ ಕುಬಣೂರಿನ ನಲ್ಲಿ ನಡೆದಿದೆ. ಮೃತರನ್ನು ಕುಬಣೂರಿನ ಪದ್ಮ ನಾಭ (45) ಎಂದು ಗುರುತಿಸಲಾಗಿದೆ. ಪದ್ಮನಾಭರವರು ಗುರುವಾರ ಸಂಜೆ ಮನೆ ಸಮೀಪದ ಸ್ನೇಹಿತ ರೋರ್ವರ ಮಹಡಿ ಗೆ ಹತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಸಾವನ್ನಪ್ಪಿದ್ದಾರೆ. ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಫೆ. 02 : ರೈಲಿನಲ್ಲಿ ರಾತ್ರಿ ವೇಳೆ ಪ್ರಯಾಣ ಮಾಡುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ರೈಲ್ವೆ ಇಲಾಖೆ ಹಲವಾರು ಜನಸ್ನೇಹಿ ಕ್ರಮಗಳನ್ನು ಕೈಗೊಂಡಿದೆ. ರಾತ್ರಿ 10 ಗಂಟೆಯ ನಂತರ ಪ್ರಯಾಣಿಕರ ಮೊಬೈಲ್ ಸೌಂಡ್ ಜಾಸ್ತಿ ಮಾಡಿದರೆ, ಅನಾವಶ್ಯಕವಾಗಿ ರೈಲಿನಲ್ಲಿ ಲೈಟ್ಸ್ ಆನ್ ಮಾಡಿದರೆ, ಜೋರಾಗಿ ಮಾತನಾಡಿದರೆ.. ಅಂಥವರ ವಿರುದ್ಧ ರೈಲ್ವೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಸುರಕ್ಷಿತ ಹಾಗೂ ನೆಮ್ಮದಿಯ ಪ್ರಯಾಣಕ್ಕೆ ನೈರುತ್ಯ ರೈಲ್ವೆ ವಲಯ ಬೆಂಗಳೂರು ವಿಭಾಗವು ಹಲವು ಕ್ರಮ ಕೈಗೊಂಡಿದೆ.
ಕುಂದಾಪುರ, ಫೆ. 01 : ಕರ್ನಾಟಕ ಸರಕಾರದ ಮಾಂಗಲ್ಯ ಭಾಗ್ಯ ಯೋಜನೆಯಡಿಯಲ್ಲಿ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬುಧವಾರ ನಡೆಯಿತು. ಸುಬ್ರಹ್ಮಣ್ಯ ಪೂಜಾರಿ – ಅಶ್ವಿನಿ, ಅಜಿತ – ಮೂಕಾಂಬು, ವಿಠಲ – ಅನಿತ, ಅನಿಲ್ – ವಸಂತಿ, ಚಂದ್ರಶೇಖರ – ಜಲಜಾ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಈ ಸಂದರ್ಭ ವಧುವಿಗೆ 40 ಸಾವಿರ ರೂ. ಮೌಲ್ಯದ ಚಿನ್ನದ ತಾಳಿ, 2 ಚಿನ್ನದ ಗುಂಡು, ವರನಿಗೆ ಹಾರ, ಪಂಚೆ, ಶಲ್ಯ ಶರ್ಟ್ ಕೊಳ್ಳಲು 5 ಸಾವಿರ, ವಧುವಿಗೆ ಪ್ರೋತ್ಸಾಹ ಧನ(ಹೂವಿನ ಹಾರ, ಧಾರೆ ಸೀರೆ ಮತ್ತು ರವಿಕೆ ಕಣಕ್ಕಾಗಿ) ರೂ ಹತ್ತು ಸಾವಿರ ಸೇರಿದಂತೆ ಒಟ್ಟು 55 ಸಾವಿರ ಮೌಲ್ಯದ ಪ್ರೋತ್ಸಾಹಧನವನ್ನು ಪ್ರತಿ ದಂಪತಿಗಳಿಗೆ ವಿತರಿಸಲಾಯಿತು. ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಉದಯ ಶೇರುಗಾರ್, ಕೊಲ್ಲೂರು ದೇವಳದ ಆಡಳಿತಾಧಿಕಾರಿ ರಶ್ಮಿ ಎಸ್. ಆರ್, ಕೊಲ್ಲೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ವೀರೇಶ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಕಳ, ಜ. 31 : ಅನಂತಪದ್ಮನಾಭ ದೇವಸ್ಥಾನ ಪರಿಸರದ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮೃತರನ್ನು ಮೂಡುಬಿದ್ರಿ ಗಣೇಶ್ ಕಾಮತ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣಾ ಪೊಲೀಸರು ಅಗಮಿಸಿದ್ದಾರೆ.
ಶಿವಮೊಗ್ಗ, ಜ. 30 : ಆಟವಾಡಲೆಂದು ಸಿಮೆಂಟ್ ಜಿಂಕೆ ಮೇಲೆ ಏರಿದ್ದ ಮಗುವೊಂದು ಜಿಂಕೆ ಪ್ರತಿಮೆ ಮುರಿದು ಬಿದ್ದು ಮೃತಪಟ್ಟ ಘಟನೆ ಮುದ್ದಿನಕೊಪ್ಪದಲ್ಲಿರುವ ಟೀ ಪಾರ್ಕ್ನಲ್ಲಿ ನಡೆದಿದೆ. ಮೃತಪಟ್ಟ ಬಾಲಕಿ ಶಿವಮೊಗ್ಗ ದ ಹರೀಶ್ ಹಾಗೂ ಲಕ್ಷ್ಮೀ ದಂಪತಿ ಪುತ್ರಿ ಸಮೀಕ್ಷಾ(6) ಎಂದು ಗುರುತಿಸಲಾಗಿದೆ. ಭಾನುವಾರದಂದು ಟೀ ಪಾರ್ಕ್ನಲ್ಲಿ ಆಟವಾಡಲೆಂದು ಮಗು ಸಿಮೆಂಟ್ ಜಿಂಕೆ ಮೇಲೆ ಕುಳಿತುಕೊಂಡಿದ್ದು, ಭಾರ ತಾಳರಾದರೆ ಸಿಮೆಂಟ್ ಜಿಂಕೆ ಮುರಿದು ಬಿದ್ದು ಅವಘಡ ಸಂಭವಿಸಿದೆ ಎನ್ನಲಾಗಿದೆ.
ಮಂಗಳೂರು, ಜ. 29 : ಪದವಿನಂಗಡಿ ನಿವಾಸಿ ಅಶೋಕ್ ಬಂಗೇರ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ ಅಶೋಕ್ ಬಂಗೇರ ಅವರು ಮಂಗಳೂರಿನ ಪದವಿನಂಗಡಿ ಬಳಿ ಇರುವ ಕೊರಗಜ್ಜನ ಸಾನಿಧ್ಯದಲ್ಲಿ ಕೊರಗಜ್ಜನ ಸೇವೆ ಮಾಡಿಕೊಂಡು ಬರುತ್ತಿದ್ದರು. ಶುಕ್ರವಾರ ರಾತ್ರಿ ರಕ್ತೇಶ್ವರಿ ನೇಮ ಆದ ಬಳಿಕ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಹಲವು ವರ್ಷಗಳಿಂದ ಅವರು ತಮ್ಮನ್ನು ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದರು.