Author: admin

ಸುರತ್ಕಲ್, ಮೇ 06 : ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಾವಳಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–5’ ಮೇ 9 ಮತ್ತು 10ರಂದು ಸುರತ್ಕಲ್ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ಅವರು  ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ 45 ವರ್ಷ ಮೇಲ್ಪಟ್ಟ ನುರಿತ ಆಟಗಾರರ ತಂಡಗಳು ಭಾಗವಹಿಸಲಿವೆ. ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಭರ್ಜರಿ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ಘೋಷಿಸಲಾಗಿದ್ದು, ಪ್ರಥಮ ಬಹುಮಾನವಾಗಿ ರೂ. 1,00,005 ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ ರೂ. 50,005 ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ. ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ಆಕರ್ಷಕ ಟ್ರೋಫಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಮಹಾಬಲ…

Read More

ಮಂಗಳೂರು, ಮೇ. 04  : ಪುತ್ತೂರು ಬ್ರದರ್ಸ್ ಎಂಟರ್ಟೇನ್ಮೆಂಟ್ ರವರ ಸಸ್ಪೆನ್ಸ್ ಥ್ರಿಲ್ಲರ್ ಕನ್ನಡ ಚಲನಚಿತ್ರ ‘ಮಂಗಮಾಯ’ ಇದೇ ಮೇ 8 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಪ್ರಸಾದ್ ಕೆ.ಎಸ್.ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಾವಿದರಿಗೆ ಯಾವುದೇ ಮೇಕಪ್ ಇಲ್ಲದೆ, ಹೀರೋಯಿನ್ ಇಲ್ಲದೆ ಒಂದೇ ಲೊಕೇಶನ್ ನಲ್ಲಿ 43 ದಿನಗಳ ಕಾಲ ಒಂದೇ ಶೆಡ್ಯೂಲ್ ನಲ್ಲಿ ಚಿತ್ರೀಕರಿಸಲಾದ ಸಿನೆಮಾವಾಗಿದೆ ಎಂದರು. ಈ ಚಿತ್ರದಲ್ಲಿ ರಾಧೇಶ್ ಶೆಣೈ, ರಂಜನ್ ಶೆಟ್ಟಿ, ಪ್ರಕಾಶ್ ಶೆಣೈ, ಪ್ರಸನ್ನ ಪುತ್ತೂರು, ಮಹಮ್ಮದ್ ಹನೀಫ್, ಅಕ್ಷತ್ ಅಮಿನ್ ,ಚಂದನ್ ಕುಮಾರ್, ಬಿ.ಅರುಣ್ ಶೆಣೈ, ಚೇತನ್ ಪುತ್ತೂರು, ವಿಜಯಲಕ್ಷ್ಮಿ ಎಮ್, ಮಂಜುನಾಥ್ ಎಂ.ಎನ್, ಸಿದ್ದು ಮತ್ತಿತರರು ನಟಿಸಿದ್ದಾರೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಸನ್ನ ಪುತ್ತೂರು, ರಾಧೇಶ್ ಶೆಣೈ ಉಡುಪಿ,ಅಕ್ಷತ್ ಅಮೀನ್ ಉಪಸ್ಥಿತರಿದ್ದರು.

Read More

ನವದೆಹಲಿ, ಮೇ. 03 : ದಿಲ್ಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇಂದು ರವಿವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕಟ್ಟಡದ 2ನೇ ಮಹಡಿಯಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಬೆಂಕಿ ಕಟ್ಟಡದ ಮೂರನೇ ಮತ್ತು ನಾಲ್ಕನೇ ಮಹಡಿಗೆ ಹರಡಿತ್ತು. ಕಟ್ಟಡದ 2ನೇ ಮಹಡಿಯಲ್ಲಿ ನಸುಕಿನ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ನಂತರ 14 ಅಗ್ನಿಶಾಮಕ ದಳದ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ. ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದ್ದು, ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಕಟ್ಟಡದ ಹಲವು ಭಾಗಗಳು ಸುಟ್ಟುಹೋಗಿ, ಮೇಲಿನ ಮಹಡಿಯಿಂದ ಹೊಗೆ ಹೊರಬರುತ್ತಿತ್ತು. ಕಟ್ಟಡದಿಂದ ಹಲವರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಕಠ್ಮಂಡು, ಮೇ. 02 : ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ಏ.30ರಂದು ನಡೆದಿದೆ. ನೇಪಾಳದ ರೋಲ್ಪಾ ಜಿಲ್ಲೆಯಲ್ಲಿ ಜೀಪ್ ಗುಡ್ಡಗಾಡು ರಸ್ತೆ ಮೂಲಕವಾಗಿ ತೆರಳುತ್ತಿತ್ತು. ಜಲ್ಜಲಾ ಪ್ರದೇಶದಲ್ಲಿ ಮಳೆ ಬರುತ್ತಿದ್ದಾಗ ಕೆಸರಿನ ಪ್ರದೇಶದಿಂದ ಜಾರಿ ಸುಮಾರು 700 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಪರಿಣಾಮ ಕನಿಷ್ಠ 20 ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಗೆ ಅಡಚನೆಯುಂಟಾಗಿದೆ. ಈ ಅಪಘಾತದ ಸಮಯದಲ್ಲಿ ವಾಹನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ನಿಖರವಾಗಿ ತಿಳಿದುಬಂದಿಲ್ಲ.

Read More

ಮಂಗಳೂರು,ಮೇ. 01 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 38ನೇ ಬೆಂದೂರ್‌ವೆಲ್ ವಾರ್ಡಿನ ಬೆಂದೂರು ಟ್ರೀಟ್‌ಮೆಂಟ್ ಪ್ಲಾಂಟ್ ರಸ್ತೆ ಅಭಿವೃದ್ಧಿ ಕಾಮಗಾರಿಯು ರೂ.1.88 ಕೋಟಿ ವೆಚ್ಚದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು ಈ ಸಂದರ್ಭದಲ್ಲಿ ಜೆಸೆಲ್ ಡಿಸೋಜ, ರಮೇಶ್ ಹೆಗ್ಡೆ, ಪ್ರವೀಣ್ ನಿಡ್ಡೇಲ್, ನವೀನ್ ಡಿಸೋಜ, ಪ್ರವೀಣ್ ಶೇಟ್ ಬೆಂದೂರ್ ವೆಲ್, ದಯಾನಂದ ಶೆಟ್ಟಿ, ನವೀನ್ ಶೆಣೈ, ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Read More

ಮಂಗಳೂರು, ಏ.30 : ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ ಅವರು ತಿಳಿಸಿದ್ದಾರೆ. ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ವಕೀಲರಾದ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಈ ಸಂದರ್ಭದಲ್ಲಿ ಉಪ ಚುನಾವಣಾಧಿಕಾರಿ, ವಕೀಲರಾದ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.

Read More

ಮಂಗಳೂರು, ಏ. 29  : “ವಾದಿರಾಜ ವಾಲಗ ಮಂಡಳಿ” ಕನ್ನಡ ಸಿನೆಮಾ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಪ್ರಸ್ತುತ ಚಿತ್ರವು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸಂಕಲನ, ಹಿನ್ನೆಲೆ ಸಂಗೀತ ಹಾಗೂ ಡಬ್ಬಿಂಗ್ ಕೆಲಸಗಳು ಸಾಗುತ್ತಿವೆ ಎಂದು ಚಿತ್ರದ ನಿರ್ಮಾಪಕರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು,ಎಮ್.ಎನ್.ಆರ್. ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿದೆ. ಕಥೆ, ಚಿತ್ರಕತೆ ಹಾಗೂ ಸಂಭಾಷಣೆಯ ಜೊತೆಗೆ ನಿರ್ದೇಶನದ ಹೊಣೆಗಾರಿಕೆಯನ್ನು ಶಶಿರಾಜ್ ಕಾವೂರು ಅವರು ನಿರ್ವಹಿಸಿದ್ದಾರೆ. ಸುಮಾರು 50 ದಿನಗಳ ಕಾಲ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂದರು. ಚಿತ್ರವು ಹಾಸ್ಯ, ಭಾವನೆ ಹಾಗೂ ಸಾಮಾಜಿಕ ಅಂಶಗಳ ನ್ನೊಳಗೊಂಡಿದೆ. ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಹೇಳಿದರು. ನವೀನ್ ಡಿ. ಪಡೀಲ್, ಪ್ರಕಾಶ್ ತೂಮಿನಾಡು, ಮೈಮ್ ರಾಮದಾಸ್, ದೀಪಕ್ ರೈ ಪಾಣಾಜೆ ,ಶೋಭರಾಜ್ ಪಾವೂರು, ಚೇತನ್ ರೈ.ಮಾಣಿ, ಪುಷ್ಪರಾಜ್ ಬೊಳ್ಳಾರ್, ಗೋಪಿನಾಥ್ ಭಟ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.…

Read More

ಗೋವಾ, ಏ. 28 : ಎಂಸಿಸಿ ಬ್ಯಾಂಕ್ ವತಿಯಿಂದ ಏಪ್ರಿಲ್ 25 ಮತ್ತು 26ರಂದು ಗೋವಾದ ಕೋರ್ಟ್ ಯಾರ್ಡ್ ಬೈ ಮೆರಿಟ್ಟ್ ನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಉತ್ತೇಜಿಸುವುದು ಈ ಸಂವಾದದ ಮುಖ್ಯ ಉದ್ದೇಶವಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರು ಅಧ್ಯಕ್ಷತೆ ವಹಿಸಿದ್ದರು. ಅನಿಲ್ ಲೋಬೋ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಬ್ಯಾಂಕಿನ ನಿರಂತರ ಬೆಳವಣಿಗೆಗೆ ಬಲವಾದ ನಾಯಕತ್ವ, ನಿಷ್ಠಾವಂತ ಸಿಬ್ಬಂದಿ ಮತ್ತು ಗ್ರಾಹಕರ ವಿಶ್ವಾಸವೇ ಕಾರಣವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೇಗವಾಗಿ ನಡೆಯುತ್ತಿರುವ ಬದಲಾವಣೆಗಳ ಹಿನ್ನೆಲೆಯಲ್ಲಿ ನವೀನತೆ, ಡಿಜಿಟಲ್ ಪರಿವರ್ತನೆ ಮತ್ತು ಉತ್ತಮ ಗ್ರಾಹಕ ಸೇವೆಯನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಹೇಳಿದರು. ವಂದನೀಯ ಫಾದರ್…

Read More

ಬೆಂಗಳೂರು, ಏ. 27 : ನಗರದ ನಂದಿನಿ ಲೇಔಟ್‌ನಲ್ಲಿ ರಾಜಕುಮಾರ್ ಸ್ಮಾರಕದ ಸಮೀಪದಲ್ಲಿರುವ ಬ್ಲೂ ಲೀಫ್ ಎಲ್‌ಇಡಿ ಗೋಡೌನ್‌ನಲ್ಲಿ ಮಧ್ಯರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಬ್ಯಾನರ್‌ಗಳು ಮತ್ತು ಎಲ್‌ಇಡಿ ಸ್ಕ್ರೀನ್‌ಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಈ ಗೋಡೌನ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿ ದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿಯ ತೀವ್ರತೆ ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಲೇಡಿಸ್ ಪಿಜಿ ಕಟ್ಟಡ ಹಾಗೂ ಸುತ್ತಮುತ್ತಲಿನ ಮನೆಗಳಿಗೂ ವ್ಯಾಪಿಸಿದೆ. ಈ ಘಟನೆಯಿಂದ ಕಟ್ಟಡಗಳಿಗೆ ಹಾನಿ ಸಂಭವಿಸಿದೆ. ಪಿಜಿಯಲ್ಲಿ ವಾಸವಿದ್ದ ಸುಮಾರು 50 ಮಹಿಳೆಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

Read More

ಮಂಗಳೂರು, ಏ. 26 : : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 39ನೇ ಫಳ್ನೀರ್ ವಾರ್ಡಿನ ಗೋರಿಗುಡ್ಡ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಯು ರೂ. 88 ಲಕ್ಷ ವೆಚ್ಚದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ವೆಲೆನ್ಸಿಯಾ ವೃತ್ತದಿಂದ ಗೋರಿಗುಡ್ಡಕ್ಕೆ ಹೋಗುವ ಈ ಭಾಗವು ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಈ ಕಾಮಗಾರಿಗಾಗಿ ಸ್ಥಳೀಯರು ಹಲವು ಬಾರಿ ಬೇಡಿಕೆಯಿಟ್ಟಿದ್ದರು. ಅದರಂತೆ ಅನುದಾನವನ್ನು ಹೊಂದಿಸಿಕೊಂಡು ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಅಜಿತ್ ಡಿಸಿಲ್ವ, ರಮೇಶ್ ಹೆಗ್ಡೆ, ಭರತ್ ಕುಮಾರ್, ರಾಮ್ ಪ್ರಸಾದ್, ಪ್ರವೀಣ್ ನಿಡ್ಡೇಲ್, ನವೀನ್ ಶೆಣೈ, ಗಣೇಶ್, ರೋಹಿದಾಸ್, ರತನ್,ಸಂದೀಪ್,ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Read More