Author: admin

ಕಾವೂರು, ಜ. 18: ಇಲ್ಲಿನ ಶ್ರೀ ಮಹಾ ಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಮಹೋತ್ಸವ ವು ಜ.17, ಬುಧವಾರ ಶ್ರ ದ್ಧಾಭಕ್ತಿಯಿಂದ ನೆರವೇರಿತು.ಅಂದು ಬೆಳಿಗ್ಗೆ  ರುದ್ರಾಭಿಷೇಕ, 10.30ಕ್ಕೆ ರಥ ಕಲಶ, ಮಧ್ಯಾಹ್ನ ಮಹಾಪೂಜೆ ನಡೆದು ರಥಾರೋಹಣ ನೆರವೇರಿತು.ಬಳಿಕ ಮಹಾ ಅನ್ನ ಸಂತರ್ಪಣೆ ನಡೆದುರಾತ್ರಿ ಬ್ರಹ್ಮರಥೋತ್ಸವ ಸಂಪನ್ನಗೊಂಡಿತು. ಬಳಿಕ ಉತ್ಸವ, ಶ್ರೀಭೂತ ಬಲಿ, ಶಯನ, ಕವಾಟ ಬಂಧನ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಸಂಭ್ರಮ ದಲ್ಲಿ ಪಾಲ್ಗೊಂಡರು.

Read More

ಆಂಧ್ರಪ್ರದೇಶ, ಜ. 17 : ಆಂಧ್ರಪ್ರದೇಶ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕಗೊಂಡಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಪಕ್ಷದದೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದ್ದರಿಂದ ಜನವರಿ 4 ರಂದು ಕಾಂಗ್ರೆಸ್‌ಗೆ ಸೇರಿದ್ದಾರೆ ಎಂದು ವರದಿಯಾಗಿದೆ.

Read More

ಶ್ರೀನಗರ, ಜ. 16 : ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಗುರುವಾರ ಲಘು ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಬೆಳಗಿನ ಜಾವ 3.49 ನಿಮಿಷಕ್ಕೆ ಭೂಮಿ ನಡುಗಿದ್ದು, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.6 ದಾಖಲಾಗಿದೆ. ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ. ಎಂದು ಭೂಕಂಪನಶಾಸ್ತ್ರ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಭೂಕಂಪದಿಂದ ಯಾವುದೇ ಅನಾಹುತಗಳ ಬಗ್ಗೆ ನಡೆದಿಲ್ಲ. ರಾತ್ರೋರಾತ್ರಿ ಭೂಮಿ ನಡುಗಿದ ಕಾರಣ ಜನರು ಭಯಭೀತರಾಗಿದ್ದಾರೆ ಎಂದು ವರದಿ ತಿಳಿಸಿದೆ.

Read More

ಉಡುಪಿ, ಜ. 15: ಉಡುಪಿ ಶ್ರೀಕೃಷ್ಣ ಮಠದ ವಾರ್ಷಿಕ ಜಾತ್ಸೋತ್ಸವ ಎಂದೇ ಕರೆಯುವ ಸಪ್ತೋತ್ಸವವು ಜ.15, ರವಿವಾರ ಹಗಲಿನ ರಥೋತ್ಸವ ‘ಚೂರ್ಣೋತ್ಸವ’ ದೊಂದಿಗೆ’ ಸಂಪನ್ನಗೊಂಡಿತು. ಬೆಳಗ್ಗೆ 8.30ಕ್ಕೆ ಮಹಾಪೂಜೆ ಬಳಿಕ ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣ ದೇವರನ್ನು ಬ್ರಹ್ಮರಥದಲ್ಲಿರಿಸಿ ಪರ್ಯಾಯ ಶ್ರೀಪಾದರ ಸಹಿತ ಅಷ್ಟಮಠದ ಯತಿಗಳು ಮಂಗಳಾರತಿ ಬೆಳಗಿದರು. ಬಳಿಕ ಭಕ್ತರಿಗೆ ಪ್ರಸಾದಗಳನ್ನು ವಿತರಿಸಲಾಯಿತು. ಪರ್ಯಾಯ ಶ್ರೀಗಳ ಸಹಿತ ವಿವಿಧ ಮಠಾಧೀಶರು ಬ್ರಹ್ಮರಥವನ್ನು ಎಳೆಯುವ ಮೂಲಕ ಹಗಲು ತೇರಿನ ಮೆರವಣಿಗೆ ಪ್ರಾರಂಭಗೊಂಡಿತು ನಂತರ ವಸಂತ ಮಂಟಪದಲ್ಲಿ ಓಕುಳಿ ಪೂಜೆ, ಅಷ್ಟ ಮಠದ ಸ್ವಾಮೀಜಿಯವರಿಗೆ ಪರ್ಯಾಯ ಮಠದಿಂದ ಗೌರವ ಸಮರ್ಪಣೆ, ಸೇವಾಕರ್ತೃಗಳಿಗೆ ಪ್ರಸಾದ ವಿತರಣೆ ನಡೆಯಿತು. ಬಳಿಕ ಮಧ್ವ ಸರೋವರದಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣದೇವರ ಅವಭೃತಥೋತ್ಸವ ನಡೆಯಿತು.

Read More

ಕೊಣಾಜೆ, ಜ. 14 : ನರಿಂಗಾನ ಕಂಬಳೋತ್ಸವ ವು ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಶನಿವಾರ ಉದ್ಘಾಟನೆಗೊಂಡಿತು. ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರು ಕಂಬಳವನ್ನು ದೀಪ ಬೆಳಗಿಸಿ ಉದ್ಘಾಟಿಸಿ ನಂತರ ಮಾತನಾಡಿ, ಕಂಬಳ ಕ್ರೀಡೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನರಿಂಗಾನದ ವಿಸ್ತಾರವಾದ ಜಾಗದಲ್ಲಿ ಸರ್ಕಾರಿ ಕಂಬಳ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ, ತುಳುನಾಡಿನ ಕೃಷಿ ಹಾಗೂ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಕಂಬಳ ಈ ನಾಡಿನ ಹೆಮ್ಮೆಯ ಕಲೆಯಾಗಿ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆಯುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಕಂಬಳ ಸಮಿತಿ ಅಧ್ಯಕ್ಷರು ಹಾಗೂ ವಿಧಾನಸಭೆ ಅಧ್ಯಕ್ಷರಾದ ಯು.ಟಿ.ಖಾದರ್, ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ವೆಂಕಪ್ಪ ಕಾಜವ ಮಿತ್ತಕೋಡಿ, ಮುಖಂಡರಾದ ಗುಣಪಾಲ್ ಕಡಂಬ, ಧಾರ್ಮಿಕ ಕ್ಷೇತ್ರದ ಮುಂದಾಳುಗಳಾದ ಪ್ರಮೋದ್ ರೈ, ಗುಣಕರ ಆಳ್ವ, ಕುರ್ನಾಡು ಗುತ್ತುವಿನ ಸುಧಾಕರ ಶೆಟ್ಟಿ, ಅರ್ಚಕರಾದ ರಾಘವೇಂದ್ರ ಆಚಾರ್, ಕಿನ್ಯ ಗುತ್ತು ನಾರಾಯಣ ಶೆಟ್ಟಿ, , ಮನಮೋಹನ ಕೊಂಡೆ ಮೊದಲಾದವರು ಉಪಸ್ಥಿತರಿದ್ದರು.

Read More

ಹೆನಾನ್, ಜ .13 : ಚೀನಾದ ಹೆನಾನ್ ಪ್ರಾಂತ್ಯದ ಪಿಂಗ್ಡಿಂಗ್ಶಾನ್ ನಗರದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟಗೊಂಡು ಕನಿಷ್ಠ 8 ಜನರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಪಿಂ ಗ್ಡಿಂ ಗ್ಶಾನ್ ಟಿಯಾನನ್ ಕಲ್ಲಿದ್ದಲು ಗಣಿ ಕಂಪನಿಯಲ್ಲಿ ಶುಕ್ರವಾರ ಮಧ್ಯಾಹ್ನ 2:55ಕ್ಕೆ ಘಟನೆ ನಡೆದಿದೆ. ಈ ವೇಳೆ ಒಟ್ಟು 425 ಮಂದಿ ಇದ್ದರು. ಅವರಲ್ಲಿ 380 ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಉಳಿದ 45 ಮಂದಿ ನಾಪತ್ತೆಯಾಗಿದ್ದಾರೆ ಎಂದು ತುರ್ತು ನಿರ್ವಹಣಾ ಏಜೆನ್ಸಿಯನ್ನು ಉಲ್ಲೇಖಿಸಿ ಕ್ಸಿನ್ಹುವಾ ವರದಿ ಮಾಡಿದೆ.

Read More

ಶಿವಮೊಗ್ಗ, ಜ. 12 : ಕರ್ನಾಟಕ ಕಾಂಗ್ರೆಸ್ ಸರ್ಕಾರದ 5ನೇ ಉಚಿತ ಗ್ಯಾರಂಟಿ ಯೋಜನೆಯಾದ ಯುವ ನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತಾಡಿ, ಚುನಾವಣೆಗಾಗಿ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿಲ್ಲ. ನಿರುದ್ಯೋಗಿ ಯುವಕರಿಗೆ ನೆರವಾಗಬೇಕೆಂಬ ಉದ್ದೇಶದಿಂದಷ್ಟೇ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರು, ಪಕ್ಷದ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದು, ಬೇರೆ ಬೆರೆ ಜಿಲ್ಲೆಗಳಿಂದ ಲಕ್ಷಾಂತರ ಜನ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

Read More

ಮಂಗಳೂರು ಜ. 11 : ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಬುಧವಾರ ಜಿಲ್ಲಾ ಕಾರಾ ಗೃಹದಲ್ಲಿ ಆಯೋಜಿಸಲಾಗಿದ್ದ ಬಂಧಿನಿವಾಸಿಗಳ ‘ಮನಪರಿವರ್ತನೆಗಾಗಿ ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜೈಲಿನಲ್ಲಿ ಖೈದಿಗಳೇ ವಿವಿಧ ರೀತಿಯ ಗಿಡ ಮರಗಳನ್ನು ಬೆಳೆಸಿ ಪೋಷಿಸಿಕೊಂಡು ಬಂದಿರುವುದು ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಕಾರಾಗೃಹ ಭದ್ರತಾ ಅಧಿಕಾರಿಗಳಾದ ಭರತ್ ನಾಯಕ್ ಮತ್ತಿತ್ತರರು ಉಪಸ್ಥಿತರಿದ್ದರು.

Read More

ಕಾಸರಗೋಡು, ಜ. 10 : ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ (48) ಇಂದು ಮಾವುಂಗಾಲ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಿನೋದ್ ಕುಮಾರ್  ಅವರು ಮನೆಯಲ್ಲಿ ಕುಸಿದು ಬಿದ್ದಿದ್ದು,ಅವರನ್ನು ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ. ಪುಲ್ಲೂರು ನಿವಾಸಿಯಾಗಿದ್ದ ವಿನೋದ್ ಕುಮಾರ್  ಅವರು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಅವರು, ಬಳಿಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Read More

ಜಪಾನ್, ಜ. 10 : ಮಧ್ಯ ಜಪಾನ್ ನ ನಿಗಟಾ ಪ್ರಾಂತ್ಯದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ  ಎಂದು  ವರದಿಯಾಗಿದೆ. ಭೂಕಂಪನದ ತೀವ್ರತೆ  ರಿಕ್ಟರ್ ಮಾಪಕದಲ್ಲಿ 6.0 ದಾಖಲಾಗಿದ್ದು, 200 ಮಂದಿ ಸಾವನಪ್ಪಿದ್ದಾರೆ ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಒಟ್ಟಾರೆ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More