Subscribe to Updates
Get the latest creative news from FooBar about art, design and business.
Author: admin
ಪುತ್ತೂರು, ಜ. 09: ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವು ಕನ್ನಡ್ಕದಲ್ಲಿ ರವಿವಾರ ನಡೆದಿದೆ ಮೃತರನ್ನು ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಕನ್ನಡ್ಕ ನಿವಾಸಿ, ದೀಕ್ಷಾ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ದೀಕ್ಷಾ ಮನೆಯ ರೂಮಲ್ಲಿ ಫ್ಯಾನ್ ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಈಶ್ವರಮಂಗಲ ಹೊರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ, ಜ. 08 : ಸ್ಕೂಟಿಗೆ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಪಲಿಮಾರು ಬಳಿ ರವಿವಾರ ರಾತ್ರಿ ನಡೆದಿದೆ. ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ಭಾನುವಾರ ರಾತ್ರಿ ತೆರಳುತ್ತಿದ್ದಾಗ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು (17) ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಾಸರಗೋಡು, ಜ. 06 : ಯುವತಿಯೋರ್ವಳು ರೈಲಿ ನಿಂದ ಬಿದ್ದು ಸಾವನ್ನಪ್ಪಿದ ಘಟನೆ ಪಳ್ಳಿಕೆರೆಯಲ್ಲಿ ಶನಿವಾರ ನಡೆದಿದೆ. ಮೃತರನ್ನುಕಲ್ಪಟ್ಟ ಕಾವುಮಂದದ ಐಶ್ವರ್ಯ ಜೋಸೆಫ್ (30) ಎಂದು ಗುರುತಿಸಲಾಗಿದೆ. ಪಳ್ಳಿಕೆರೆ ಮಾಸ್ತಿ ಗುಡ್ಡೆ ಯ ರೈಲ್ವೆ ಹಳಿ ಸಮೀಪ ಮೃತ ದೇಹಪತ್ತೆ ಯಾಗಿದೆ. ರಾತ್ರಿ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕೋಜಿಕ್ಕೊಡ್ ನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಳು. ಉದ್ಯೋಗ ದ ನಿಮಿತ್ತ ನೇತ್ರಾವತಿ ರೈಲಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮಂಗಳೂರು, ಜ. 5 : ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ, ದ. ಕ. ಜಿಲ್ಲೆಯಲ್ಲಿ ಪ್ರತೀ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ. .ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಇಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು https://www.cowin.gov.in/ ಮೂಲಕ ನೋಂದಾಯಿಸುವಂತೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಲಸಿಕೆಯನ್ನು ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ ಎರಡನೇಯ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದವರು ಹಾಗೂ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು,ಮತ್ತು ಆರೋಗ್ಯ ಕಾರ್ಯಕರ್ತರು ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯಬಹುದಾಗಿದೆ.
ಕುಂದಾಪುರ, ಜ. 04 : ಚಿರತೆ ದಾಳಿ ನಡೆಸಿ 2 ಹಸುಗಳನ್ನು ಕೊಂದು ಹಾಕಿರುವ ಘಟನೆ ತೆಕ್ಕಟ್ಟೆ ಮೊಳಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊರನಾಡಿಯಲ್ಲಿ ನಡೆದಿದೆ. ಲಚ್ಚಿ ಕುಲಾಲ್ ಹಾಗೂ ಗುಲಾಬಿ ಕುಲಾಲ್ ಎಂಬುವವರು ತಮ್ಮ ಹಸುಗಳನ್ನು ಮೇಯಲು ಬಿಟ್ಟಿದ್ದರು. ಈ ಹಸುಗಳ ಮೇಲೆ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮೊಳಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಎಂ. ದಿನೇಶ್ ಹೆಗ್ಡೆ ಮೊಳಹಳ್ಳಿ, ಮಾಜಿ ಅಧ್ಯಕ್ಷ ಉದಯ ಕುಲಾಲ್, ಪಶು ವೈದ್ಯ ಡಾ| ಜಯಣ್ಣ, ಅರಣ್ಯ ಇಲಾಖೆಯ ಸಂತೋಷ್ ಭೇಟಿ ನೀಡಿದ್ದಾರೆ.
ದಿಸ್ಪುರ, ಜ. 03 : ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿರುವ ಘಟನೆ ಅಸ್ಸಾಂನ ದೇರ್ಗಾಂವ್ನಲ್ಲಿ ಬುಧವಾರ ನಡೆದಿದೆ. ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ 45 ಮಂದಿ ಪ್ರವಾಸಿಗರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ದೇರ್ಗಾಂವ್ನಲ್ಲಿ ಈ ಪ್ರವಾಸಿ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟೋಕಿಯೊ, ಜ. 02 : ಜಪಾನ್ನಲ್ಲಿ ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ 12 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸೋಮವಾರದ 7.6 ಮತ್ತು 6 ತೀವ್ರತೆಯ ಎರಡು ಪ್ರಬಲ ಭೂಕಂಪಗಳೂ ಸಂಭವಿಸಿದ್ದು, ಭೂಕಂಪನದಿಂದ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಜಪಾನ್ನಲ್ಲಿ ಭೂಕಂಪದಿಂದಾಗಿ ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ.
ಬಂಟ್ವಾಳ, ಜ. 01 : ಬೈಕ್ ಅಪಘಾತದಲ್ಲಿ ರಂಗಭೂಮಿ ಕಲಾವಿದ ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರದೊಟ್ಟು ನಿವಾಸಿ ಗೌತಮ್ (26) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಪಿಂಗಾರ ಕಲಾವಿದರ ತಂಡದ ಕಲಾವಿದರಾಗಿದ್ದ ಗೌತಮ್ ಅವರು ಡಿ.30ರಂದು ಬೆಳಗ್ಗೆ3 ಗಂಟೆ ಸುಮಾರಿಗೆ ಬೆಳುವಾಯಿಯಲ್ಲಿ ನಾಟಕ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ಅವರ ಮನೆ ಸಮೀಪದ ಮರಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ತಲೆಗೆ ಗಾಯವಾಗಿದೆ. ಈ ಘಟನೆ ಬೆಳಗ್ಗೆಯಷ್ಟೆ ಬೆಳಕಿಗೆ ಬಂದಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿ ತಾರೂ, ಅವರು ಅದಾಗಲೇ ಸಾವನ್ನಪ್ಪಿದ್ದರು ಎನ್ನಲಾಗಿದೆ.
ಮಹಾರಾಷ್ಟ್ರ ಡಿ.31 : ಗ್ಲೌಸ್ ತಯಾರಿಸುವ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ ಸಂಭವಿಸಿ ಆರು ಕಾರ್ಮಿಕರು ಮೃತಪಟ್ಟ ಘಟನೆ ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ನಡೆದಿದೆ. ಭಾನುವಾರ ಬೆಳಗ್ಗೆ 2 ಗಂಟೆ ಸುಮಾರಿಗೆ ಅಗ್ನಿ ದುರಂತ ಸಂಭವಿಸಿದ್ದು, ಕಾರ್ಖಾನೆಯ ಒಳಗಿದ್ದ ಆರು ಜನ ಸಜೀವ ದಹನಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಕಿಯು ಇಡೀ ಕಾರ್ಖಾನೆಗೆ ವ್ಯಾಪಿಸಿದ ಕಾರಣ ಬೆಂಕಿ ನಂದಿಸುವಷ್ಟರಲ್ಲಿಯೇ ಆರು ಕಾರ್ಮಿಕರು ಮೃತಪಟ್ಟಿದ್ದರು ಎನ್ನಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಂಪೂರ್ಣವಾಗಿ ಅಗ್ನಿ ನಂದಿಸಿದ ಬಳಿಕವೇ ಎಷ್ಟು ಜನ ಮೃತಪಟ್ಟಿದ್ದಾರೆ ಎಂಬುದು ಗೊತ್ತಾಗಲಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಬೆಂಗಳೂರು, ಡಿ. 30 : ಕರ್ನಾಟಕದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಹೆಚ್ಚಗುತ್ತಿದ್ದು, ಈ ನಿಟ್ಟಿನಲ್ಲಿ ಜ.2 ರಿಂದ ರಾಜ್ಯದಲ್ಲಿ ಮತ್ತೆ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವು ಸಂಭವಿಸುತ್ತಿದ್ದು, ಇದರಿಂದ ಆರೋಗ್ಯ ಇಲಾಖೆ ವ್ಯಾಕ್ಸಿನ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮತ್ತೆ ವ್ಯಾಕ್ಸಿನ್ ಡ್ರೈವ್ ಆರಂಭವಾಗಲಿದೆ.