Subscribe to Updates
Get the latest creative news from FooBar about art, design and business.
Author: admin
ಜೈಪುರ್, ಡಿ. 15 : ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾಯವರಿಗೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗಿಯಾಗಿದ್ದರು.
ಪುತ್ತೂರು, ಡಿ 14 : ಹೈದರಾಬಾದ್ ನಲ್ಲಿ ಕೆಲಸಕ್ಕಿದ್ದ ಯುವಕ ಊರಿಗೆ ಬಂದಿದ್ದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪ್ಯ ಬಳಿ ನಡೆದಿದೆ. ಮೃತರನ್ನು ಕಲ್ಲರ್ಪೆ ನಿವಾಸಿ ಶ್ರೀಧರ್ ಆಚಾರ್ಯ ಸಂಪ್ಯ ಇವರ ಪುತ್ರ ಭರತ್ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ. ಭರತ್ ಕಲ್ಲರ್ಪೆ ಅವರು ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭರತ್ ಕಲ್ಲರ್ಪೆ ಅವರು ಹೈದರಾಬಾದ್ ನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು ಎನ್ನಲಾಗಿದೆ.
ಮಂಗಳೂರು, ಡಿ. 13: ಈಜುಕೊಳದಲ್ಲಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬರ್ಕೆ ಠಾಣಾ ವ್ಯಾಪ್ತಿಯ ಮಂಗಳ ಈಜು ಕೊಳದಲ್ಲಿ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಬಿಹಾರ ಮೂಲದ ಅಭಿಷೇಕ್(35) ಎಂದು ಗುರುತಿಸಲಾಗಿದೆ. ಅಭಿಷೇಕ್ ಅವರು ಸಂಜೆ 4.30ರ ವೇಳೆಗೆ ಟಿಕೆಟ್ ಪಡೆದುಕೊಂಡು ನೀರಿಗೆ ಇಳಿದಿದ್ದಾರೆ. ಸುಮಾರು 15 ನಿಮಿಷದ ಬಳಿಕ ನೀರಿನಲ್ಲಿ ಮುಳುಗಿದ್ದಾರೆ. . ಈ ವೇಳೆ ಈಜುಕೊಳದಲ್ಲಿ 30 ರಿಂದ 40 ಜನರು ಈಜುತ್ತಿದ್ದರು ಎನ್ನಲಾಗಿದೆ. ಹುಡುಗನೋರ್ವ ಗಮನಿಸಿ ಲೈಫ್ ಗಾರ್ಡ್ಗ ಗಳಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. 15 ಫೀಟ್ ಆಳದಲ್ಲಿ ರಾಜೇಂದ್ರ ಹಾಗು ಪುಂಡಲಿಕ್ ನೀರಿಗೆ ಜಿಗಿದು ಅಭಿಷೇಕನನ್ನು ಮೇಲೆ ತಂದು ಪ್ರಥಮ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಇರಲಿಲ್ಲ . ಬಳಿಕ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಹೊಸದಿಲ್ಲಿ, ಡಿ.12: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.ಮೋಹನ್ ಯಾದವ್ ಅವರು ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಯ ಸದಸ್ಯರಾಗಿದ್ದಾರೆ. ಇವರು 2013 ರಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮೋಹನ್ ಯಾದವ್ ಅವರು ಇದೀಗ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದ 10 ದಿನಗಳ ನಂತರ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ.
ಕುಂದಾಪುರ, ಡಿ. 11 : ಹಿರಿಯ ರಂಗಭೂಮಿ ಕಲಾವಿದ, ರೂಪಕಲಾ ಕುಂದಾಪುರ ಸಂಸ್ಥೆಯ ಮೂರು ಮುತ್ತು ಖ್ಯಾತಿಯ ನಟ ಅಶೋಕ್ ಶ್ಯಾನುಭಾಗ್ (54ವರ್ಷ) ಅಲ್ಪಕಾಲದ ಅಸೌಖ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ. ನಟ ಅಶೋಕ್ ಶ್ಯಾನುಭಾಗ್ ಅವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇನ್ನುಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಮಿಂಚಿದ್ದರು.
ಬೆಂಗಳೂರು, ಡಿ. 09 : ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಶುಕ್ರವಾರ ನಿಧನರಾಗಿದ್ದಾರೆ. ಬಹುಭಾಷಾ ನಟಿಯಾಗಿದ್ದ ಲೀಲಾವತಿಯವರು ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ತುಳು ಚಿತ್ರಗಳಲ್ಲಿ ನಟಿಸಿದ್ದರು. ನಟಿ ಲೀಲಾವತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಿರಿಯ ನಟ ದ್ವಾರಕೀಶ್ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹೈದರಾಬಾದ್, ಡಿ. 08 : ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಗುರುವಾರ ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ರೇವಂತ್ ರೆಡ್ಡಿ ಸೇರಿದಂತೆ ವಿವಿಧ ಸಚಿವರು ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಂಗಳೂರು : ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಆಡಳಿತ ಕಚೇರಿಯ ಸ್ವಂತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಮಂಗಳೂರಿನ ಪಂಪೈಲ್ ನಲ್ಲಿರುವ ಲೋಟಸ್ ಗ್ಯಾಲಕ್ಸಿಯಲ್ಲಿ ಜರಗಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸ್ವಂತ ಕಟ್ಟಡದ ಆಡಳಿತ ಕಚೇರಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಳಿಕ ಮಾತಾಡಿ ಸಹಕಾರಿ ರಂಗದಿಂದ ಸಮಾಜದ ಸಬಲೀಕರಣ ಸಾಧ್ಯ. ಸಹಕಾರಿ ಎನ್ನುವುದು ಬಹಳ ಶ್ರೇಷ್ಠವಾದುದು. ಸಿಬ್ಬಂದಿ ವರ್ಗದವರ ಸಮರ್ಪಣಾ ಭಾವದ ಕರ್ತವ್ಯ ಸಂಸ್ಥೆಯ ಬೆಳವಣಿಗೆಗೆ ಕಾರಣವಾಗುತ್ತದೆ. ಸಂಸ್ಥೆಯಿಂದ ಉದ್ಯೋಗ ಸೃಷ್ಟಿಯಾಗುತ್ತಿರುವುದು ಸಂತಸದ ವಿಚಾರ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹೇಳಿದರು. ಸಾದ್ವೀ ಶ್ರೀ ಮಾತಾನಂದಮಯೀರವರು ಆಶೀರ್ವಚನ ನೀಡಿ ಜನಹಿತ ಕಾರ್ಯಗಳು ಶ್ರೀಗಳ ಮಾರ್ಗದರ್ಶನದಿಂದ ನಡೆದಿದೆ. ಕಡಿಮೆ ಅವಧಿಯಲ್ಲಿ ಸಂಸ್ಥೆ ಶ್ರೇಯೋಭಿವೃದ್ಧಿಯನ್ನು ಕಂಡಿದೆ ಎಂದರು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ರವರು ‘ಸಹಕಾರಿ ಸಿರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಸಹಕಾರಿ…
ಬೆಳಗಾವಿ, ಡಿ, 07 : ಟಿಪ್ಪರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಜೀವ ದಹನವಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ. ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಅಪಘಾತದಲ್ಲಿ ಮೃತಪಟ್ಟವರು. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್ಗೆ ಕಾರು ಡಿಕ್ಕಿಯಾಗಿದೆ. ಇದರ ಪರಿಣಾಮ ಟಿಪ್ಪರ್ನ ಡಿಸೇಲ್ ಟ್ಯಾಂಕ್ ಒಡೆದು ಕಾರು ಮತ್ತು ಟಿಪ್ಪರ್ ಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡಿದ್ದಾರೆ. ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿಯವರು ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿದ್ದಾರೆ. ಕಾಕತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಟಿಪ್ಪರ್ ಡ್ರೈವರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಕಾರವಾರ, ಡಿ. 06 : ಎಂಜಿನ್ ಸಮಸ್ಯೆಯಿಂದ ಅರಬ್ಬಿ ಸಮುದ್ರದಲ್ಲಿ ದಾರಿ ತಪ್ಪಿದ ಬೋಟನ್ನು ಸುರಕ್ಷಿತವಾಗಿ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ಕಾರವಾರದ ವಾಣಿಜ್ಯ ಬಂದರಿಗೆ ಕರೆತಂದಿರುವ ಘಟನೆ ಮಂಗಳವಾರ ಕಾರವಾರದಲ್ಲಿ ನಡೆದಿದೆ. ಗೋವಾ ಮೂಲದ ಕ್ರಿಸ್ಟೋ ರೇ ಹೆಸರಿನ ಮೀನುಗಾರಿಕಾ ಬೋಟ್ ಇದಾಗಿದೆ, ಈ ಬೋಟ್ ನಲ್ಲಿದ್ದ 26 ಜನ ಮೀನುಗಾರರಿದ್ದು, ಅವರನ್ನೆಲ್ಲಾ ರಕ್ಷಣೆ ಮಾಡಲಾಗಿದೆ. ಈ ಮೀನುಗಾರಿಕಾ ಬೋಟ್ ಗೋವಾದ ಪಣಜಿ ಮೂಲಕ ಅಂಕೋಲ ತಾಲೂಕಿನ ಬೇಲಿಕೇರಿ ಬಂದರು ಬಳಿ ಮೀನುಗಾರಿಕೆ ನಡೆಸುತಿತ್ತು.ಈ ಸಂದರ್ಭ ಎಂಜಿನ್ ಸಮಸ್ಯೆಯಾಗಿ 30 ನಾಟಿಕಲ್ ಮೈಲು ದೂರದವರೆಗೆ ಬೋಟ್ ತೇಲಿ ಹೋಗಿದೆ. ತೇಲಿ ಹೋದ ಬಳಿಕ ಬಾಹ್ಯ ಸಂಪರ್ಕ ಕಡಿದುಕೊಂಡಿತ್ತು. ಈ ಹಿನ್ನೆಲೆ 4 ದಿನಗಳ ಕಾಲ ಮೀನುಗಾರರು ಸಮುದ್ರದಲ್ಲೇ ಕಾಲ ಕಳೆದ ಮೀನುಗಾರರನ್ನು ಕೋಸ್ಟ್ಗಾರ್ಡ್ ಸಿಬ್ಬಂದಿ ಬೋಟಿನ ಲೋಕೇಶನ್ ಪತ್ತೆಹಚ್ಚಿ ಮೀನುಗಾರರನ್ನು ಸಂಪರ್ಕಿಸಿ, ಸ್ಥಳೀಯ ಮೀನುಗಾರರ ನೆರವಿನಿಂದ ಬೋಟ್ ನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.