Subscribe to Updates
Get the latest creative news from FooBar about art, design and business.
Author: admin
ಬೆಂಗಳೂರು: ನ. 15 : ಬಿ.ವೈ.ವಿಜಯೇಂದ್ರ ಅವರು ರಾಜ್ಯದ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬುಧವಾರ ಬೆಳಗ್ಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಬಿ.ವೈ.ವಿಜಯೇಂದ್ರ ಅವರು ರಾಜ್ಯದ 11ನೇ ರಾಜ್ಯಾಧ್ಯಕ್ಷರಾಗಿರುತ್ತಾರೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಹಿರಿಯ ನಾಯಕ ರಾಮಚಂದ್ರ ಗೌಡ, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು, ಸಂಸದರು, ಪಕ್ಷದ ರಾಜ್ಯ-ಜಿಲ್ಲಾ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಶ್ರೀಲಂಕಾ , ನ. 15 : ಶ್ರೀಲಂಕಾದ ರಾಜಧಾನಿ ಕೊಲಂಬೋದಲ್ಲಿ ಮಂಗಳವಾರ 6.2 ತೀವ್ರತೆಯ ಭೂಕಂಪ ಸಂಭವಿಸಿದೆ. ಶ್ರೀಲಂಕಾದ ಕೊಲಂಬೋದಿಂದ 1326 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ.ಇದರಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ. ಕೊಲಂಬೋದಲ್ಲಿ 14-11-2023ರಂದು 6.2 ತೀವ್ರತೆಯ ಭೂಕಂಪ 12:31:10 IST ಗಂಟೆಗೆ ಸಂಭವಿಸಿದೆ.ಭೂಕಂಪದ ಲ್ಯಾಟ್: -2.96 ಮತ್ತು ಉದ್ದ: 86.54, ಆಳ: 10 ಕಿ.ಮೀ, ಸ್ಥಳ:1326 ಕಿ.ಮೀ SE ಆಫ್ ಕೊಲಂಬೊ, ಶ್ರೀಲಂಕಾ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಎಕ್ಸ್ನಲ್ಲಿ ತಿಳಿಸಿದೆ.
ಹೆಬ್ರಿ, ನ. 14 : ದೀಪಾವಳಿ ಹಬ್ಬದ ಪ್ರಯುಕ್ತ ಗದ್ದೆ ಹಾಗೂ ಬಾವಿಗೆ ದೀಪ ಇಡಲು ಹೋದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ನ. 12ರಂದು ಸಂಜೆ ಹೆಬ್ರಿ ತಾಲೂಕು ಚಾರ ಗ್ರಾಮದ ಚಾರ ಬಸದಿ ಬಳಿ ನಡೆದಿದೆ. ಮೃತರನ್ನು ಸಚಿನ್ (35) ಎಂದು ಗುರುತಿಸಲಾಗಿದೆಆವರಣವಿಲ್ಲದ ಬಾವಿ ಬಳಿ ದೀಪ ಇಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಥುರಾ,ನ. 13 : ಉತ್ತರ ಪ್ರದೇಶದ ಮಥುರಾ ನಗರದಲ್ಲಿ ಸಂಭ್ರಮದ ಬೆಳಕಾಗುವ ಗೋಪಾಲ್ ಬಾಗ್ ಪಟಾಕಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಿಂದ ಕನಿಷ್ಠ 9 ಮಂದಿಗೆ ಸುಟ್ಟ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಗೋಪಾಲಬಾಗ್ ಪ್ರದೇಶದಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದ ಏಳು ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿರುವ ಕುರಿತು ರಾಯಾ ಪೊಲೀಸ್ ಠಾಣೆಯ ಎಸ್ಎಚ್ಒ ಅಜಯ್ ಕಿಶೋರ್ ಅವರು ಹೇಳಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಉಡುಪಿ, ನ 12 : ಬುಲೆಟ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನ.10ರಂದು ನಗರದ ಗುಂಡಿಬೈಲು ಪಾಡಿಗಾರ ಎಂಬಲ್ಲಿ ನಡೆದಿದೆ. ಮೃತರನ್ನು ಗೋವಿಂದ (50) ಎಂದು ಗುರುತಿಸಲಾಗಿದೆ. ಕಲ್ಸಂಕ ಕಡೆಯಿಂದ ಗುಂಡಿಬೈಲ್ ಕಡೆಗೆ ಹೋಗುತ್ತಿದ್ದ ಬುಲೆಟ್ ಮನೆಕಡೆಗೆ ಹೋಗಲು ರಸ್ತೆ ದಾಟುತ್ತಿದ್ದ ಗೋವಿಂದ ಅವರಿಗೆ ಢಿಕ್ಕಿ ಹೊಡೆದಿದ್ದು, ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗೋವಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬುಲೆಟ್ ಸವಾರ ದರ್ಶಿತ್ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು, ನ. 11 : ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಿಕಾರಿಪುರ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆದೇಶ ಹೊರಡಿಸಿದ್ದಾರೆ.
ಕಲಬುರ್ಗಿ, ನ. 10: ಆಟೋ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಆಟೋದಲ್ಲಿದ್ದ 3 ತಿಂಗಳ ಮಗು ಸೇರಿ ಒಂದೇ ಕುಟುಂಬದ ಒಟ್ಟು 6 ಮಂದಿ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ವಾಡಿಯ ಹಲಕರ್ಟಾ ಎಂಬಲ್ಲಿ ನಡೆದಿದೆ. ಮೃತರನ್ನು ನಾಜ್ಮಿನ್ ಬೇಗಂ(28), ಬೀಬಿ ಫಾತಿಮಾ(12), ಅಬೂಬಕರ್(4), ಬೀಬಿ ಮರಿಯಮ್(3 ತಿಂಗಳು), ಮೊಹಮ್ಮದ್ ಪಾಷಾ(20) ಹಾಗೂ ಆಟೋ ಚಾಲಕ ಬಾಬಾ(35) ಎಂದು ಗುರುತಿಸಲಾಗಿದೆ. ಇವರ ಜೊತೆಗಿದ್ದ ಬಾಲಕ ಮುಹಮ್ಮದ್ ಹುಸೇನ್(10) ಗಂಭೀರವಾಗಿ ಗಾಯಗೊಂಡಿದ್ದು ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಲಾಗಿದೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುಗ್ರಾಮ ನ. 09 : ಸ್ಲೀಪರ್ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವದಹನವಾದ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುರುಗ್ರಾಮದ ಸಿಗ್ನೇಚರ್ ಟವರ್ ನ ಮೇಲ್ಸೇತುವೆ ಬಳಿ ಬುಧವಾರ ನಡೆದಿದೆ. ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಬುಧವಾರ ರಾತ್ರಿ ಗುರುಗ್ರಾಮ್ ತಲುಪುತ್ತಿದ್ದಂತೆ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ನಲ್ಲಿದ್ದ ಕೆಲ ಪ್ರಯಾಣಿಕರು ಬಸ್ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ನಿದ್ರಾವಸ್ಥೆಯಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ದುರಂತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉಡುಪಿ, ನ. 08 :ಟೆಂಪೂ ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಅಲೆವೂರು ಮಣಿಪಾಲ ರಸ್ತೆಯ ವಿಠ್ಠಲ ಸಭಾಭವನದ ಬಳಿ ನಡೆದಿದೆ.ಮೃತರನ್ನು ಮಹಮದ್ ತನ್ಸಿಲ್ ( 28) ಎಂದು ಗುರುತಿಸಲಾಗಿದೆ. ಅಲೆವೂರು ಕಡೆಯಿಂದ ಮಂಚಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ಗೆ ಎದುರಿನಿಂದ ಬಂದ ಟೆಂಪೋ ಢಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ತನ್ಸಿಲ್ ಸ್ಥಳದಲ್ಲಿಯೇ ಮೃತಪಟ್ಟರೆಂದು ಎಂದು ವರದಿಯಾಗಿದೆ. ಮಣಿಪಾಲ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ,ನ. 7 : ಬಾಲಕಿಯೊಬ್ಬಳು ವಸತಿ ಸಮುಚ್ಚಯದ ಟೆರೇಸ್‌ನಿಂದ ಬಿದ್ದು ಸಾವನ್ನಪ್ಪಿದ ಘಟನೆ ಹೆರ್ಗಾ ಗ್ರಾಮದ ಸರಳೇಬೆಟ್ಟುವಿನಲ್ಲಿ ನ.5ರಂದು ನಡೆದಿದೆ. ಮೃತಳನ್ನು ಪ್ರಜ್ಞಾ (13) ಎಂದು ಗುರುತಿಸಲಾಗಿದೆ. ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದ ಪ್ರಜ್ಞಾಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾತಾದರೂ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ . ಮಣಿಪಾಲ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.