Subscribe to Updates
Get the latest creative news from FooBar about art, design and business.
Author: admin
ಬೆಳಗಾವಿ, ಆ. 21: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಹಲವು ಪ್ರಯತ್ನಗಳ ನಂತರವೂ ಸಫಲತೆ ಸಿಗದ ಹಿನ್ನೆಲೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ ನಡೆದಿದೆ. ಮೃತರನ್ನು ಬೆಳಗಾವಿ ಸಮೀಪದ ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ ಅಪ್ಪಾಸೊ ಶಿವಾಜಿ ಪಾನಡೆ (24) ಎಂದು ಗುರುತಿಸಲಾಗಿದೆ. ಶಿವಾಜಿ ಪಾನಡೆ ಅವರು ಬಾಲ್ಯದಿಂದಲೂ ಸೇನೆಗೆ ಸೇರುವ ಕನಸನ್ನು ಕಂಡಿದ್ದನು. ಅದಕ್ಕಾಗಿ ಹಲವು ಬಾರಿ ಮಾಡಿದ ಪ್ರಯತ್ನಗಳು ಕೈಗೂಡಿರಲಿಲ್ಲ. ಕನಸು ನನಸಾಗದ ಕೊರಗಿನಲ್ಲಿ ಶಿವಾಜಿ ಅವರು ತನ್ನ ಮನೆಯಲ್ಲಿನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾನೆ ಎನ್ನಲಾಗಿದೆ. ನಿಪ್ಪಾಣಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬಂಟ್ವಾಳ, ಆ. 19: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ನಿವಾಸಿ, ಬಾಯಾರು ಮುಳಿಗದ್ದೆ ಹೆದ್ದಾರಿ ಎ.ಯು.ಪಿ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪಿ.ಎನ್.ಗೋವಿಂದ ಭಟ್ (89) ಅವರು ಆ, 16 ಬುಧವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. 21-08-1934ರಲ್ಲಿ ಜನಿಸಿದ ಇವರು, ಶಿಕ್ಷಕ ವೃತ್ತಿಯಿಂದ ನಿವೃತ್ತಿಯಾದ ಬಳಿಕ ಅದೇ ಶಾಲೆಯ ಮಿತ್ರ ಮಂಡಳಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.ಕರೋಪಾಡಿ ವ್ಯವಸಾಯಿಕ ಸಹಕಾರಿ ಬ್ಯಾಂಕಿನಲ್ಲಿ ಎರಡು ಬಾರಿ ನಿರ್ದೇಶಕರಾಗಿ ನಿರ್ವಹಿಸಿದ್ದಾರೆ.
ಬಿಹಾರ, ಆ. 18: ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.ಮೃತರನ್ನು ಬಿಮಲ್ ಯಾದವ್ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಮುಂಜಾನೆ ಬಿಮಲ್ ಯಾದವ್ ಅವರ ಮನೆಯ ಬಾಗಿಲು ತಟ್ಟಿದ್ದು,ಬಾಗಿಲು ತೆಗೆದಾಕ್ಷಣ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪ್ರದೇಶದ ಸಂಸದರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಶಿಮ್ಲಾ, ಆ. 17:ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತಿರುವ ಮಳೆಯಿಂದಾಗಿ 71 ಮಂದಿ ಸಾವನ್ನಪ್ಪಿದ್ದಾರೆ. 2,500 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈಗಿಂತ ಆಗಸ್ಟ್ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ 71 ಮಂದಿ ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಮಳೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ತಿರುವನಂತಪುರ, ಆ. 16 : ತಾಯಿ ಹಾಲು ಕುಡಿದು ಮಲಗಿದ್ದ 3 ತಿಂಗಳ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಎದೆ ಹಾಲು ಮಗುವಿನ ಶ್ವಾಸನಾಳಕ್ಕೆ ಸೇರಿ ಮಗು ಮೃತಪಟ್ಟಿದೆ ಎನ್ನಲಾಗಿದೆ. ಪಳ್ಳಿಚಲ್ ಮೂಲದ ಜಯಕೃಷ್ಣನ್ ಮತ್ತು ಜಾನಿಮೋಲ್ ದಂಪತಿಯ ಏಕೈಕ ಪುತ್ರ ಜಿತೇಶ್ ಮೃತ ಮಗುವಾಗಿದೆ. ಭಾನುವಾರ ರಾತ್ರಿ ಮಗುವಿಗೆ ಹಾಲುಣಿಸಿ ಮಲಗಿಸಿದ್ದರು. ಆದರೆ ಸೋಮವಾರ ಬೆಳಗ್ಗೆಯಾದರೂ ಮಗು ಎದ್ದಿಲ್ಲ ಇದನ್ನು ಕಂಡು ಪೋಷಕರು ಸೋಮವಾರ ಬೆಳಗ್ಗೆ ಮಗುವನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ವೈದ್ಯರು ಪರೀಕ್ಷೆ ನಡೆಸಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಅಂತೆಯೇ ಪೋಷಕರು ಎಸ್ಐಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ.
ಮಂಗಳೂರು, ಆ. 15 : ನಗರದ ನೆಹರೂ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಳ್ತಂಗಡಿ, ಆ .14 : ಸ್ಕೂಟರೊಂದು ವಿದ್ಯುತ್ ಕಂಬವೊಂದಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ಸಮೀಪದ ವರಂಗದ ಮಾತಿಬೆಟ್ಟು ಎಂಬಲ್ಲಿ ಆ.13, ಆದಿತ್ಯವಾರ ನಡೆದಿದೆ. ಮೃತರನ್ನು ಸೂರಿಮಣ್ಣು ನಿವಾಸಿ ಪ್ರಭಾಚಂದ್ರ ಆಚಾರ್ಯ ಎಂದು ಗುರುತಿಸಲಾಗಿದೆ. ಪ್ರಭಾಚಂದ್ರ ಆಚಾರ್ಯ ಇವರು ಸ್ಕೂಟರಿನಲ್ಲಿ ಮುನಿಯಾಲು ಕಡೆಯಿಂದ ವರಂಗ ಕಡೆಗೆ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕೂಟರ್ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಪ್ರಭಾಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ, ಆ. 13 ಬಿಸಿರೋಡಿನಲ್ಲಿರುವ ಪೆಟ್ರೋಲ್ ಬಂಕ್ ಯೊಂದರ ಮ್ಯಾನೇಜರ್ ಹೃದಯಘಾತದಿಂದ ಶನಿವಾರ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಿಸಿರೋಡಿನ ಪೆಲತ್ತಿಮಾರ್ ನಿವಾಸಿ ಸಂಜೀವ ಅವರ ಪುತ್ರ ಪುರುಷೋತ್ತಮ ಪೂಜಾರಿ (45) ಮೃತಪಟ್ಟ ವ್ಯಕ್ತಿ. ಶನಿವಾರ ಮಧ್ಯ ರಾತ್ರಿ ಇವರಿಗೆ ಹೃದಯ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಉಡುಪಿ, ಆ. 12 : ಜಿಲ್ಲಾಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ. ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾ ನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪುಂಜಾಲಕಟ್ಟೆ, ಆ. 11 : ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅಂಗನವಾಡಿ ಸಹಾಯಕಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬಡಗ ಕಜೆಕಾರು ಗ್ರಾಮದ ಕೆದಿಮೇಲು ಎಂಬಲ್ಲಿಆ.6ರಂದು ನಡೆದಿದೆ. ಮೃತರನ್ನು ಅಂಗನವಾಡಿ ಸಹಾಯಕಿ ಕನೆಜಾಲು ನಿವಾಸಿ ವಸಂತಿ ಕೆದಿಮೇಲು (43) ಎಂದು ಗುರುತಿಸಲಾಗಿದೆ. ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಂಗನವಾಡಿ ಸಹಾಯಕಿ ವಸಂತಿ ನಾಯ್ಕ್ ಅವರು ಕುಸಿದು ಬಿದ್ದು ಅಸೌಖ್ಯಕ್ಕೀಡಾಗಿದ್ದರು. ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.