Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಆ. 8 : ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಅವರ ಶಿಷ್ಯವೃಂದದ ಯಕ್ಷ ಸಿದ್ಧಿ ಸಂಭ್ರಮ- ಸಿದ್ದಿ ದಶಯಾನ ಕಾರ್ಯಕ್ರಮವನ್ನು ಆ.10 ಮತ್ತು 11ರಂದು ನಗರದ ಉರ್ವಸ್ಟೋರ್ ಡಾ|ಬಿ.ಆರ್. ಅಂಬೇಡ್ಕ ರ್ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಿದ್ಧಿ ದಶಯಾನ ಸಮಿತಿಯ ರವಿಪ್ರಸಾದ್ ಶೆಟ್ಟಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ತರಗತಿ ನಡೆಸುತ್ತಿರುವ ರಕ್ಷಿತ್ ಪಡ್ರೆ ಅವರ ಯಕ್ಷ ಶಿಕ್ಷಣ ಕಾರ್ಯಕ್ಕೆ 10 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ಮಂದಿ ಶಿಷ್ಯರು ಭಾಗವಹಿಸಲಿದ್ದಾರೆ. ದಶಮಾನೋತ್ಸವ ಅಂಗವಾಗಿ ವಿವಿಧೆಡೆಯ ಶಿಷ್ಯವೃಂದ ಒಗ್ಗೂಡಿಸಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆ. 10ರಂದು ಬೆಳಗ್ಗೆ 9ಕ್ಕೆ ಚೌಕಿಪೂಜೆ, ಪೂರ್ವರಂಗ ನಡೆಯಲಿದೆ. ಬೆಳಗ್ಗೆ 10ಕ್ಕೆ ಯಕ್ಷಗಾನ ವಿದ್ವಾಂಸ ವಾಸುದೇವ ರಂಗಾ ಭಟ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಧೀರ್ ಶೆಟ್ಟಿ ಅಧ್ಯಕ್ಷತೆ ವಹಿಸುವರು.ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಅವರ ಶಿಷ್ಯವೃಂದದ ಯಕ್ಷ ಸಿದ್ಧಿ…
ಮಂಗಳೂರು ಆ. 7 : ನಗರದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಇಎನ್‌ಟಿ, ತಲೆ ಮತ್ತು ಕುತ್ತಿಗೆ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ ‘ಐಎಓಎಚ್‌ಎನ್‌ಎಸ್ 2024 ಮಂಗಳೂರು’ ಇಂಡಿಯನ್ ಅಕಾಡೆಮಿ ಆಫ್ ಓಟೋರಿಗೋಲಾರಿಂಗೋಲಜಿ ತಲೆ ಮತ್ತು ಕುತ್ತಿಗೆ ಶಸ್ತ್ರಚಿಕಿತ್ಸೆಯ 10 ನೇ ರಾಷ್ಟ್ರೀಯ ಸಮ್ಮೇಳನವನ್ನು ಮಂಗಳೂರಿನ ಡಾ| ಟಿಎಂಎ ಪೈ ಇಂಟರ್‌ನ್ಯಾಷನಲ್ ಕನ್ವೆನ್ನನ್ ಸೆಂಟರ್‌ನಲ್ಲಿ ಆ. 8 ರಿಂದ 11 ವರೆಗೆ ಆಯೋಜಿಸಲಾಗಿದೆ ಎಂದು ಕೆಎಂಸಿ ಮಂಗಳೂರು ಇದರ ಇಎನ್‌ಟಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ| ದೇವಿಪ್ರಸಾದ್ ಹೇಳಿದರು. ಪತ್ರಿಕಾಭವನ ದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಓಟೊರಿನೊಲಾರಿಂಗೋಲಜಿ ಟುವರ್ಡ್ಸ್ ಅಕಾಡೆಮಿಕ್ ಮತ್ತು ರಿಸರ್ಚ್ ಎಕ್ಸಲೆನ್ಸ್ 2024′ ನಡೆಯುವ ಈ ವಿಷಯದಲ್ಲಿ ಸಮ್ಮೇಳನದಲ್ಲಿ ದೇಶವಿದೇಶಗಳ ಸುಮಾರು 400ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಆ. 9ರಂದು ಸಂಜೆ 7ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ನ ಪ್ರೊ ಚಾನ್ಸಿಲ ಡಾ| ಎಚ್.ಎಸ್. ಬಳ್ಳಾಲ್, ಕೆಎಂಸಿ ಡೀನ್ ಡಾ| ಉನ್ನಿಕೃಷ್ಣನ್, ಮಾಹೆ…
ಢಾಕಾ, ಆ.06 : ಬಾಂಗ್ಲಾದೇಶದಲ್ಲಿ ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಬೆನ್ನಲ್ಲೇ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದೀಗ ಶೇಖ್ ಹಸೀನಾ ಅವರ ರಾಜೀನಾಮೆ ಬೆನ್ನಲ್ಲೇ ಮಿಲಿಟರಿ ಆಡಳಿತ ಪ್ರಾರಂಭವಾಗಿದೆ. ಪ್ರöತಿಭಟನಾಕಾರರು ಶೇಖ್ ಹಸೀನಾ ಅವರ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಕಾರರು ಮನೆಗೆ ನುಗ್ಗಿ ಪ್ರತಿಭಟನೆ ಮಾಡುವ ಮುನ್ನವೇ ಶೇಖ್ ಹಸೀನಾ ರಾಜೀನಾಮೆ ನೀಡಿ ವಿದೇಶಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಇನ್ನು ಕೆಲ ಮಾಧ್ಯಮಗಳ ಪ್ರಕಾರ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಬಂದು ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ. ಬಾಂಗ್ಲಾದೇಶದ ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್ನ ಬೆಂಬಲಿಗರ ನಡುವೆ ಈ ಘರ್ಷಣೆ ನಡೆದಿದೆ. ಬಾಂಗ್ಲಾದೇಶದ ಢಾಕಾದಲ್ಲಿ ಸುಮಾರು 10 ಲಕ್ಷ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ಹಿಂಸಾಚಾರದಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಮಂದಿ ಸಾವನ್ನಪ್ಪಿರುತ್ತಾರೆ ಎಂದು ಹೇಳಲಾಗಿದೆ.
ಮಂಗಳೂರು, ಅ. 06 : ಜಪ್ಪು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃಸಂಘ ಹಾಗೂ ಜಾಗತಿಕ ಬಂಟರ ಸಂಘ ಒಕ್ಕೂಟದ ಸಹಭಾಗಿತ್ವದಲ್ಲಿ ಎಮ್ಮೆಕೆರೆ ರಮಾಲಕ್ಷ್ಮೀ ನಾರಾಯಣ ಕನ್ವೆನ್ನನ್ ಹಾಲ್‌ನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜು 28 ಆದಿತ್ಯವಾರ ನಡೆಯಿತು. ಈ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಸಂತ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶ್ರೀ ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿ, ಮಂಗಳೂರು ಇದರ ಅಧ್ಯಕ್ಷ ಕೆ.ಜೈರಾಜ್ ಬಿ. ರೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಮನಪಾ ವಿಪಕ್ಷ ನಾಯಕ ಟಿ.ಪ್ರವೀಣ್ ಚಂದ್ರ ಅಳ್ವ, ಉದ್ಯಮಿ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, , ಉದ್ಯಮಿ ಗಿರೀಶ್ ಶೆಟ್ಟಿ ಕಟೀಲು, ಕಂಕನಾಡಿ…
ಮಂಗಳೂರು, ಅ. 5: ಎಕ್ಕೂರಿನ ಇಂಡಿಯಾನಾ ಕನ್ವೆನ್ಯನ್ ಸೆಂಟರ್ ನ ಸಭಾಂಗಣದಲ್ಲಿ ಅಂತಾ ರಾಷ್ಟ್ರೀಯ ಲಯನ್ಸ್ ಜಿಲ್ಲೆ 317 ಡಿ ಇದರ 2024-25 ಲಯನ್ಸ್ ಜಿಲ್ಲಾ ಪದಗ್ರಹಣ ಸಮಾರಂಭ ‘ಕಾವೇರಿ’ ಕಾರ್ಯಕ್ರಮ ಶನಿವಾರ ಜರಗಿತು. ಕಾರ್ಯಕ್ರಮವನ್ನು ಲಯನ್ಸ್ ಜಿ. ಮಂಗಳೂರು 317 ಡಿ ಇದರ ಗವರ್ನರ್ ಬಿ.ಎಂ. ಭಾರತಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿ ಸೇವೆಯಲ್ಲಿ ತೊಡಗಿಸುವುದು ಶ್ರೇಷ್ಠತೆಯಾಗಿದ್ದು, ಇದರಿಂದ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು. ನಂತರ ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ಫೌಂಡೇಶನ್ ಇದರ ಮಾಜಿ ಟ್ರಸ್ಟಿ ಹಾಗೂ ಅಂತಾರಾಷ್ಟ್ರೀಯ ಲಯನ್ಸ್ ಇದರ ಮಾಜಿ ನಿರ್ದೇಶಕಿ ಅರುಣಾ ಅಬೆಲ್ ಒಸ್ವಾಲ್ ಮಾತನಾಡಿ ನೂತನ ಗವರ್ನರ್ ಬಿ.ಎಂ. ಭಾರತಿ ಅವರು ಓರ್ವ ಮಹಿಳೆಯಾಗಿ ಮಹತ್ವದ ಜವಾಬ್ದಾರಿ ನಿಭಾಯಿವುದು ಸುಲಭದ ಕೆಲಸವಲ್ಲ. ಆದರೆ ಎಲ್ಲರ ಸಹಕಾರದಿಂದ ಸಾಧನೆ ಮಾಡಲು ಸಾಧ್ಯವಿದೆ ಎಂದರು. ಅಂತಾರಾಷ್ಟ್ರೀಯ ಲಯನ್ಸ್ ಇದರ ಮಾಜಿ ನಿರ್ದೇಶಕ ಮತ್ತು ಪ್ರಸ್ತುತ ಎಲ್‌ಸಿಐಎಫ್ನ ಕ್ಷೇತ್ರ ನಾಯಕ ವಂಶಿಧರ್ ಬಾಬು, ಮಲ್ಟಿಪಲ್ 317 ಇದರ ಅಧ್ಯಕ್ಷ…
ಮಧ್ಯಪ್ರದೇಶ , ಆ.05 : ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ. ಶಹಪುರ್ ನಗರದ ಹರ್ದುಲ್ ಬಾಬಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿದ ಪರಿಣಾಮ 9 ಮಕ್ಕಳು ಮೃತಪಟ್ಟಿದ್ದು, ಹಲವು ಮಕ್ಕಳು ಗಾಯಗೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ಸ್ಥಳೀಯರೊಂದಿಗೆ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನೂ ನಡೆಸಿ ಕೆಲ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಗಾಯಾಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟ ಮಕ್ಕಳು 10-15 ವರ್ಷದೊಳಗಿನವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು,ಜು.04 :ದಕ್ಷಿಣ ಕನ್ನಡ ಜಿಲ್ಲೆಯಲ್ಲಿನಿರೀಕ್ಷೆಗೂ ಮೀರಿ ಸುರಿದ ಭಾರೀ ಮಳೆಯಿಂದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರವೂ ಸೇರಿದಂತೆ ಅಪಾರ ಪ್ರಮಾಣದ ಹಾನಿಯಾಗಿದ್ದು ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ 300 ಕೋಟಿ ರೂಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸರ್ಕಾರವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವಾರು ಮನೆಗಳು ಕುಸಿದಿದ್ದು, ಮನೆಗಳ ಮೇಲೆ ಬೃಹತ್ ಮರ ಉರುಳಿದ್ದು, ಮನೆಯೊಳಗೆ ಪ್ರವಾಹದ ನೀರು ನುಗ್ಗಿದ್ದು, ಗುಡ್ಡ ಕುಸಿತ, ರಸ್ತೆ, ಚರಂಡಿ, ತಡೆಗೋಡೆ, ರಾಜ ಕಾಲುವೆಗಳಿಗೆ ಹಾನಿ, ಹೀಗೆ ಹತ್ತು ಹಲವು ರೀತಿಯಲ್ಲಿ ಜನಸಾಮಾನ್ಯರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೊಳಗಾಗಿ ಮೇಲ್ನೋಟಕ್ಕೆ ಸುಮಾರು 300 ಕೋಟಿಗೂ ಅಧಿಕ ನಷ್ಟವಾಗಿದ್ದು ಕಂಡು ಬರುತ್ತಿದೆ ಎಂದು ಹೇಳಿದರು. ರಾಜ್ಯದ ಮುಖ್ಯಮಂತ್ರಿಗಳು ನಿನ್ನೆಯಷ್ಟೇ, ಇಂತಹ ದುರಂತದಲ್ಲಿ ಪೂರ್ಣ ಮನೆ ಹಾನಿಯಾಗಿದ್ದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಯಮದ ಪ್ರಕಾರ 1.20 ಲಕ್ಷ ಮಾತ್ರ,…
ಬೆಳ್ತಂಗಡಿ, ಆ. 04 : ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಶುಕ್ರವಾರ ನಡೆದಿದೆ.ಮೃತರನ್ನು ಸುಮಾಲಿನಿ ಜೈನ್ (63) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಮಹಿಳೆ ಬಿದ್ದಿದ್ದರು,ಬಾವಿಗೆ ಬಿದ್ದಿರುವುದನ್ನು ಅವರ ಗಂಡ ಗಮನಿಸಿದ್ದು, ತಕ್ಷಣ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಜಲೀಲ್ ಹಾಗೂ ಅಲ್ಫಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಮಹಿಳೆಯನ್ನು ಮೇಲಕ್ಕೆತ್ತಿ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಿದರೂ ಆ ವೇಳೆಗೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಆ.2 : ಅಂತಾರಾಷ್ಟ್ರೀಯ ಲಯನ್ಸ್ ಜಿಲ್ಲೆ 317-ಡಿ’ ಯ 2024-25ರ ಸಾಲಿನ ಸಂಪುಟ ಪದಗ್ರಹಣ ಸಮಾರಂಭ ‘ಕಾವೇರಿ’ ಆಗಸ್ಟ್.3ರಂದು ಸಂಜೆ 3 ಗಂಟೆಗೆ ಎಕ್ಕೂರಿನ ಇಂಡಿಯಾನಾ ಕನ್ವೆನ್ಯನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಲಯನ್ಸ್ ಜಿಲ್ಲೆ ಮಂಗಳೂರು 317-ಡಿಯ ಗವರ್ನರ್ ಬಿ.ಎಂ.ಭಾರತಿ ತಿಳಿಸಿದರು. ಗುರುವಾರ ಪತ್ರಿಕಾಭವನ ದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಂತಾರಾಷ್ಟ್ರೀಯ ಎಲ್.ಸಿ.ಐ.ಎಫ್.ನ ಟ್ರಸ್ಟಿ ಅರುಣಾ ಅಬೆ ಒಸ್ವಾಲ್ ಭಾಗವಹಿಸಲಿದ್ದಾರೆ. ಎಲ್.ಸಿ.ಐ.ಎಫ್. ಕ್ಷೇತ್ರ ನಾಯಕ ವಂಶಿದ್ ಬಾಬು ಕೆ., ಅಂತಾರಾಷ್ಟ್ರೀಯ ಮಾಜಿ ನಿರ್ದೇಶಕ ವಿ.ವಿ. ಕೃಷ್ಣ ರೆಡ್ಡಿ, ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಡಾ|ಎನ್. ಕೃಷ್ಣ ಗೌಡ, ನಿಕಟಪೂರ್ವ ರಾಜ್ಯಪಾಲ ಡಾ| ಮೆಲ್ವಿನ್ ಡಿ’ಸೋಜಾ, ಪ್ರಥಮ ಉಪಗವರ್ನರ್ಕುಡ್ಲಿ ಅರವಿಂದ್ ಶೆಣೈ, ದ್ವಿತೀಯ ಉಪಗವರ್ನರ್ ಎಚ್.ಎಂ. ತಾರಾನಾಥ್ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸೇವಾ ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ವೆಬ್ಲಾಕ್‌ನಲ್ಲಿ ಹೊರರೋಗಿಗಳ ಸಂಬಂಧಿಕರಿಗೆ ಪ್ರತಿದಿನ ಉಚಿತ ಊಟದ ವ್ಯವಸ್ಥೆ ನೀಡುತ್ತಿರುವ ಎಂ-ಫ್ರೆಂಡ್ಸ್ ಸಂಸ್ಥೆಗೆ 25 ಲಕ್ಷ ರೂ. ಮೌಲ್ಯದ…
ಬೆಂಗಳೂರು,ಆ 01 : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ಆ. 14 ರವರೆಗೆ ವಿಸ್ತರಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಆರೋಪಿಗಳು, ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲಾಗಿತ್ತು.ಕೊಲೆ ಆರೋಪಿ ನಟ ದರ್ಶನ್ ಸೇರಿ ಒಟ್ಟು 17 ಮಂದಿಗೆ ಮತ್ತೆ 14 ದಿನಗಳ ಕಾಲ ಆಗಸ್ಟ್ 14 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.












