Subscribe to Updates
Get the latest creative news from FooBar about art, design and business.
Author: admin
ಸುಳ್ಯ ಜು.23: ಬಸ್ ಮತ್ತು ಸ್ಕೂಟಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಸೋಮವಾರ ಸೋಣಂಗೇರಿಯ ಸುತ್ತುಕೋಟೆ ಬಳಿ ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಚಂದ್ರ ಪ್ರಭು(65) ಮೃತಪಟ್ಟವರು. ರಾಮಚಂದ್ರ ಪ್ರಭು ತನ್ನ ದ್ವಿಚಕ್ರ ವಾಹನದಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಧ್ಯೆ ಸುತ್ತುಕೋಟೆ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ರಾಮಚಂದ್ರರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮಹಾನಗರ, ಜು, 22 : ಶ್ರೀ ಮಾತಾ ಅಮೃತಾನಂದಮಯಿ ಮಠ ಮಂಗಳೂರು ಇದರ ವತಿಯಿಂದ ಗುರು ಪೂರ್ಣಿಮಾ ದಿನವಾದ 21ರಂದು ಬೆಳಗ್ಗೆ 9 ಗಂಟೆಯಿಂದ ಉರ್ವದ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಮಾತಾ ಅಮೃತಾನಂದಮಯಿ ಮಠ ಮಂಗಳೂರು ಇದರ ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ಶ್ರೀ ಗುರು ಪಾದುಕಾ ಪೂಜೆ, ದೇವೀ ಪೂಜೆ, ನಡೆಯಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಗುರು ಪೂರ್ಣಿಮಾ ದಿನದ ಮಹತ್ವದ ಕುರಿತು ಸಂದೇಶ ನೀಡಿದರು. ಕಾರ್ಯಕ್ರಮದ ಅಂಗವಾಗಿ ಸರ್ವೈ ಶ್ವರ್ಯ ಪೂಜೆ,ಅರ್ಚನೆ, ಭಜನೆ, ಆರತಿ, ಭಕ್ತರಿಂದ ಕ್ಷೀರಾಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಲಕ್ಷಣ ಅಮೀನ್, ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಅಧ್ಯಕ್ಷ ಡಾ| ವಸಂತ ಕುಮಾರ್ ಪೆರ್ಲ, ಸೇವಾ ಸಮಿತಿ ಉಪಾಧ್ಯಕ್ಷ ಸುರೇಶ್ ಅಮೀನ್, ಕಾವ್ಯದರ್ಶಿ ಡಾ| ಅಶೋಕ್ ಶೆಣೈ ಮೊದಲಾದವರು ಭಾಗವಹಿಸಿದ್ದರು.
ಮಂಗಳೂರು, ಜು. 21 : ನಗರದ ಕೊಡಿಯಾಲಬೈಲು ಸಮೀಪ ಭಗವತಿ ನಗರದಲ್ಲಿರುವ ಮಹಾಲಸಾ ದೃಶ್ಯಕಲಾ ಮಹಾ ವಿದ್ಯಾಲಯದಲ್ಲಿ ಶುಕ್ರವಾರ ವಾರ್ಷಿಕ ಕಲಾ ಪ್ರದರ್ಶನ ಜರಗಿತು.ವಾರ್ಷಿಕ ಕಲಾಪ್ರದರ್ಶನ ಹಾಗೂ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಅವರು ಇತರ ಗಣ್ಯರೊಂದಿಗೆ ಸೇರಿ ಉದ್ಘಾಟಿಸಿದರು. ಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ವಿದ್ಯಾರ್ಥಿಗಳ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳೂರಿನ ಕಾರಂಜಿ ಇನ್ಫೋಟೆಕ್ ಪೈ.ಲಿ. ನಿರ್ದೇಶಕ ವಿಕ್ರಮ್ ಕೆಮ್ಮೆ ಮತ್ತು ಸಂಸ್ಥೆಯ ಅಧ್ಯಕ್ಷ ಬಾಬು ರಾವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಲಾಯಿತು. ವಾರ್ಷಿಕ ಕಲಾ ಪ್ರದರ್ಶನದಲ್ಲಿ ಕ್ರಿಯೇಟಿವ್ ಪೈಂಟಿಂಗ್, ಕಲಂಕಾರಿ ಸಾಂಪ್ರದಾಯಿಕ ಕಲೆ, ರಿಯಲಿಸ್ಟಿಕ್ ಪೈಂಟಿಂಗ್, ಸಾಂಪ್ರದಾಯಿಕ ಕಲೆಗಳು, ತಾಂಜಾವೂರುಸಾಂಪ್ರದಾಯಿಕ ಕಲೆ, ಪಠಚಿತ್ರ, ಆಯಿಲ್ ಪೈಂಟ್, ಕೈಯಿಂದಮಾಡಲಾದ ಗ್ರಾಫಿಕ್ ಡಿಸೈನ್, ಪೆನ್ಸಿಲ್ ಆರ್ಟ್, ಚಾರ್ಕೋಲ್…
ಮಂಗಳೂರು, ಜು.20 :ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಿ. ಎ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಗುರುಪುರ ಸಮೀಪ ಕಲ್ಲಕಲಂಬಿ ಎಂಬಲ್ಲಿ ಜು.19 ರಂದು ನಡೆದಿದೆ. ಮೃತರನ್ನು ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ನಿ (21) ಎಂದು ಗುರುತಿಸಲಾಗಿದೆ. ಮನೆಯ ದನ ಕಟ್ಟಲು ತಂದೆಯ ಜೊತೆ ಗದ್ದೆಗೆ ಹೋದಾಗ ಈ ಘಟನೆ ನಡೆದಿದೆ. ಜೊತೆಯಲ್ಲಿದ್ದ ಮನೆಯ ಸಾಕು ನಾಯಿಗೆ ಮೊದಲು ವಿದ್ಯುತ್ ಶಾಕ್ ತಗುಲಿತ್ತು. ನಾಯಿ ಶಾಕ್ನಿಂದ ಹೊರಳಾಡುವುದನ್ನು ಗಮನಿಸಿದ ನಾಯಿಯ ರಕ್ಷಣೆಗೆ ಆಶ್ನಿ ಮುಂದಾಗಿದ್ದು. ಈ ವೇಳೆ ತುಂಡಾಗಿ ಬಿದ್ದ ತಂತಿ ತುಳಿದು ಶಾಕ್ ಗೆ ಒಳಗಾಗಿ ಆಶ್ನಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ.
ಮಂಗಳೂರು, ಜು.19 : ಯೇನಪೊಯ ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಆಚರಣೆಯ ಭಾಗವಾಗಿ ಜು. 22, 23ರಂದು ಯೇನಪೊಯ ಕಾಲೇಜು ಕ್ಯಾಂಪಸ್‌ನಲ್ಲಿ ಮೆಗಾ ಯೋಗ ಮ್ಯಾರಥಾನ್ ಕಾರ್ಯಕ್ರಮ ಆಯೋ ಜಿಸಲಾಗಿದೆ ಎಂದು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಡಾ| ಎಂ.ಎಸ್. ಮೂಸಬ್ಬತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 22ರಂದು ಬೆಳಗ್ಗೆ 8.30ಕ್ಕೆ ಪ್ರಾಭವಾಗುವ ಕಾರ್ಯಕ್ರಮವನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ। ಇಪ್ಲಿಕಾರ್ ಅಲಿ ಉದ್ಘಾಟಿಸಲಿದ್ದಾರೆ. 25 ಗಂಟೆಗಳ ಯೋಗ ಪ್ರದರ್ಶನ ಜು. 23ರಂದು ಬೆಳಗ್ಗೆ 10 ಗಂಟೆಗೆ ಸಂಪನ್ನಗೊಳ್ಳಲಿದೆ. ಯೋಗ ತರಬೇತುದಾರ ಕುಶಾಲಪ್ಪ ಗೌಡ ತರಬೇತಿ ನೀಡಲಿದ್ದು, ಜಿಲ್ಲೆಯ ವಿವಿಧ ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಪ್ರತಿ 1.30 ಗಂಟೆಯ ಅವಧಿಯ ಯೋಗ ತರಬೇತಿಯಲ್ಲಿ ಭಾಗವಹಿಲಿದ್ದಾರೆ. 25 ಗಂಟೆಯಲ್ಲಿಸುಮಾರು2,500ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಯೋಗ ತರಬೇತುದಾರ ಕುಶಾಲಪ್ಪಗೌಡ ಮಾತನಾಡಿ, ಯೋಗ ತರಬೇತಿ ಕಾರ್ಯಕ್ರಮಕ್ಕೆ ಇಂದೋರ್‌ನಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಮಾರೋಪದಲ್ಲಿ ಆಯುಷ್ ಸಚಿವಾಲಯದ…
ಮಂಗಳೂರು, ಜು.19 : ಕೊಡಿಯಾಲಬೈಲಿನ ಭಗವತಿ ನಗರದ ಮಹಾಲಸಾ ದೃಶ್ಯಕಲಾ ಮಹಾ ಮಹಾವಿದ್ಯಾಲಯದ 2023-24ನೇ ಸಾಲಿನ ವಾರ್ಷಿಕ ಕಲಾಪ್ರದರ್ಶನ ಹಾಗೂ ವಾರ್ಷಿಕೋತ್ಸವ ‘ಪ್ರತಿಬಿಂಬಗಳು’ ಎಂಬ ಶೀರ್ಷಿಕೆಯಡಿ ಜು. 19ರಿಂದ ಜು. 03 ತನಕ ಮಹಾವಿದ್ಯಾಲಯದಲ್ಲಿ ನಡೆಯಲಿದೆ ಎಂದು ಕಾಲೇಜಿನ ಚಿತ್ರಕಲಾ ವಿಭಾಗ ಮುಖ್ಯಸ್ಥ ಎನ್.ಎಸ್. ಪತ್ತಾರ್ ತಿಳಿಸಿದ್ದಾರೆ. ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎನ್.ಎಸ್. ಪತ್ತಾರ್ ಅವರು, ವಿದ್ಯಾರ್ಥಿಗಳು ರಚಿಸಿದ 400ಕ್ಕೂ ಹೆಚ್ಚು ವಿವಿಧ ಪ್ರಕಾರದ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ರೇಖಾಚಿತ್ರ, 2ಡಿ ವಿನ್ಯಾಸ, ಸ್ಥಿರಚಿತ್ರಣ, ಸೃಜನಶೀಲ ವರ್ಣಚಿತ್ರಗಳು, ನಿಸರ್ಗಚಿತ್ರ, ಮಂಡಲ ಚಿತ್ರಗಳು, ಜಾಹೀರಾತು ಕಲೆ, ಸಾಂದರ್ಭಿಕ ಚಿತ್ರಗಳು, ಡಿಜಿಟಲ್ ಕಲಾಕೃತಿಗಳು ಪ್ರದರ್ಶನದಲ್ಲಿ ಇರಲಿವೆ. ಜು. 19ರಿಂದ 21ರವರೆಗೆ ಕಲಾಪ್ರದರ್ಶನ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದೆ ಎಂದು ಹೇಳಿದರು . ಜು. 19ರಂದು ಬೆಳಗ್ಗೆ 10.30ಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಂಗಳೂರಿನ ಕಾರಂಜಿ ಇನ್ಫೋಟೆಕ್ ಪೈ.ಲಿ. ನಿರ್ದೇಶಕ ವಿಕ್ರಮ್ ಕೆಮ್ಮೆ, ಆರ್ಕಿಡ್ ಆರ್ಟ್…
ಬೆಂಗಳೂರು, ಜು. 18: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಆ.1 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್‌ಗೆ ಈಗಾಗಲೇ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜೂ.11 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಬಂಧನ ಮಾಡಲಾಗಿತ್ತು. ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ 13, ತುಮಕೂರು ಜೈಲಿನಲ್ಲಿ 4 ಆರೋಪಿಗಳು ಇದ್ದಾರೆ.
ಮಹಾನಗರ, ಜು, 17: ಶ್ರೀ ಮಾತಾ ಅಮೃತಾನಂದಮಯಿ ಮಠ ಮಂಗಳೂರು ವತಿಯಿಂದ ಗುರು ಪೂರ್ಣಿಮಾ ದಿನವಾದ 21ರಂದು ಬೆಳಗ್ಗೆ 9 ಗಂಟೆಗೆ ಉರ್ವದ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಗುರು ಪಾದುಕಾ ಪೂಜೆ, ದೇವೀ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಅಧ್ಯಕ್ಷ ಡಾ| ವಸಂತ ಕುಮಾರ್ ಪೆರ್ಲ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 21ರಂದು ಶ್ರೀ ಮಾತಾ ಅಮೃತಾನಂದಮಯಿ ಮಠ ಮಂಗಳೂರು ಇದರ ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ‘ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ಶ್ರೀ ಗುರು ಪಾದುಕಾ ಪೂಜೆ, ದೇವೀ ಪೂಜೆ, ಅರ್ಚನೆ, ಗುರು ಪೂರ್ಣಿಮಾ ದಿನದ ಮಹತ್ವದ ಕುರಿತು ಸಂದೇಶ, ಭಜನೆ, ಆರತಿ, ಭಕ್ತರಿಂದ ಕ್ಷೀರಾಭಿಷೇಕ, ಮಹಾ ಪ್ರಸಾದ ವಿತರಣೆ ನಡೆಯಲಿದೆ. ಅಂದು ಬೆಳಗ್ಗೆ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಗುರು ಹೋಮ, ಮಹಾ ಮೃತ್ಯುಂಜಯ ಹೋಮ ನಡೆಯಲಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅಮೃತಾನಂದಮಯಿ…
ಮಂಗಳೂರು,ಜು.16 :‘ಸಾಂಕೇತ್’ ಕನ್ನಡ ಸಿನೆಮಾ ಜು.26ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ಸೋಮವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿನೆಮಾದ ನಿರ್ದೇಶಕಿ ಜೋತ್ಸ್ನಾ ಕೆ.ರಾಜ್ ಹೇಳಿದರು.ಸಾಂಕೇತ್ ಸಿನೆಮಾವು ಒಬ್ಬ ವ್ಯಕ್ತಿಯ ಮದುವೆ-ಮಕ್ಕಳ ವಿಷಯದ ತೊಳಲಾಟವನ್ನು ಬಿಂಬಿಸುವ ವಿಭಿನ್ನ ಕಥೆಯನ್ನೊಳಗೊಂಡಿದೆ ಎಂದು ಸಿನೆಮಾದ ನಿರ್ದೇಶಕಿ ಜೋತ್ಸ್ನಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಟಿ ಚೈತ್ರಾ ಶೆಟ್ಟಿ ಮಾತನಾಡಿ, ಸ್ವತಃ ಸಂಪಾದನೆ, ಧ್ವನಿ ವಿನ್ಯಾಸ ಹಾಗೂ ನಿರ್ದೇಶನವನ್ನು ಜೋತ್ಸ್ನಾ ನಿಭಾಯಿಸಿದ್ದಾರೆ. ಎಕ್ಕಿ ರಾವ್, ಮೋಹಣ್ ಶೇಣಿ, ರಾಹುಲ್ ಅಮೀನ್, ರೂಪಶ್ರೀ ವರ್ಕಾಡಿ, ನಿರೀಕ್ಷಾ ಶೆಟ್ಟಿ ಸದಾಶಿವ ಅಮೀನ್, ರಜೀತ್ ಕದ್ರಿ, ನಿರೀಕ್ಷಾ ರಾಣಿ, ಮೇಘನಾ ರಕ್ಷಿತಾ ಮುಂತಾದವರು ಅಭಿನಯಿಸಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ವಿಕ್ಕಿ ರಾವ್, ರಾಹುಲ್ ಅಮೀನ್, ಸನತ್ ಕುಮಾರ್, ಪ್ರಕಾಶ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು, ಜು.15 : ಪ್ರಸಾದ್ ನೇತ್ರಾಲಯ ಸಮೂಹ ಆಸ್ಪತ್ರೆ ವತಿಯಿಂದ ಮಂಗಳೂರಿನ ಪಂಪ್‌ವೆಲ್ ಸಮೀಪದ ಉಜೋಡಿಯಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ನೂತನ ರೊಬಾಟಿಕ್ ಕಣ್ಣಿನ ಪೊರೆ ಚಿಕಿತ್ಸಾ ವ್ಯವಸ್ಥೆಗೆ ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ್ ಯಸ್ಸೇನಾಯಕ್ ಅವರು ಭಾನುವಾರ ಚಾಲನೆ ನೀಡಿದರು. ಬಳಿಕ ಮಾತಾಡಿದ ಸಚಿವ ಶ್ರೀಪಾದ್ ಯಸ್ಸೇನಾಯಕ್ ಅವರು ಪ್ರಸಾದ್ ನೇತ್ರಾಲಯದಲ್ಲಿ ರೊಬಾಟಿಕ್ ತಂತ್ರಜ್ಞಾನ ಅಳವಡಿಕೆಯಿಂದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಕರಾವಳಿಯ ಜನರಿಗೆ ಇದರ ಮೂಲಕ ದೃಷ್ಟಿ ದೋಷ ಚಿಕಿತ್ಸೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು. ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಮಾತಾಡಿ, ಕರಾವಳಿಯಲ್ಲಿ ಯಾವುದೇ ಹೊಸತನ ಅಳವಡಿಕೆಯಾದರೂ ಸಂತೋಷದ ವಿಚಾರ, ಖಾಸಗಿ ಸಂಸ್ಥೆಗಳು ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ವಿಷಯ ನಿಜಕ್ಕೂ ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಮಾತಾಡಿ, ಕರಾವಳಿಯ ಜನತೆಗೆ ವಿಶೇಷ ಸೇವೆ ನೀಡುತ್ತಿರುವ ಪ್ರಸಾದ್ ನೇತ್ರಾಲಯದ ಕಾರ್ಯ…












