Subscribe to Updates
Get the latest creative news from FooBar about art, design and business.
Author: admin
ಬೆಂಗಳೂರು, ಜು. 07 : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಪವಿತ್ರಾ ಗೌಡ ಸೇರಿ 17 ಆರೋಪಿಗಳಿಗೆ ಜು.18 ರ ವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಈ ಪ್ರಕರಣದ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಜು.4ಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಗುರುವಾರ ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಲ್ಲಿರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಕೊರ್ಟಿಗೆ ಹಾಜರುಪಡಿಸಲಾಗಿತ್ತು. ಕಾನ್ಫರೆನ್ಸ್ ವೇಳೆ ಪ್ರತಿಯೊಬ್ಬರ ಹೆಸರನ್ನೂ ಕೋರ್ಟ್ ಸಿಬ್ಬಂದಿ ಕೂಗಿದ್ದರು. ಹೆಸರು ಕೂಗುತ್ತಿದಂತೆ ಎಲ್ಲರೂ ಕೈ ಎತ್ತಿ ಹಾಜರಿ ಖಾತರಿಪಡಿಸಿದ್ದರು. ಸರಕಾರ ಪರ ವಕೀಲರು ನ್ಯಾಯಾಂಗ ಅವಧಿಯನ್ನು ಮುಂದುವರೆಸಬೇಕೆಂದು ರಿಮ್ಯಾಂಡ್ ಅರ್ಜಿ ಸಲ್ಲಿಸಿದರು. ಇದೇ ವೇಳೆ ನಟ ದರ್ಶನ್, ಪವಿತ್ರಾಗೌಡ ಪರ ವಕೀಲರು ವಾದ ಮಂಡಿಸಿದರು. ವಾದ-ಪ್ರತಿವಾದಗಳ ಆಲಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿಯನ್ನು ಮುಂದುವರೆಸಿ ಆದೇಶ ನೀಡಿದೆ.
ವಿಟ್ಲ, ಜು.6: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಇಂದು ನಡೆದಿದೆ. ಶಬರಿ ರತ್ನಾಕರ ಎಂಬವರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಮರವೊಂದು ಉರುಳಿ ಅವರ ಕಾರಿನ ಮೇಲೆ ಬಿದ್ದಿದೆ. ತಕ್ಷಣವೇ ಸ್ಥಳೀಯರು ಮರವನ್ನು ತೆರವುಗೊಳಿಸಿದರು ಎನ್ನಲಾಗಿದೆ.
ಮಂಗಳೂರು, ಜು.05: ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಅವರನ್ನು ವರ್ಗಾವಣೆಗೊಳಿಸಿ, ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರವಿಚಂದ್ರ ನಾಯಕ್ ಅವರು ಪ್ರಸ್ತುತ ಶಿವಮೊಗ್ಗ ತುಂಗಾ ಮೇಲ್ದಂಡೆಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದರು. ಮಂಗಳೂರಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ರವಿಚಂದ್ರ ನಾಯಕ್ ಅವರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ, ಮಂಗಳೂರು ಉಪವಿಭಾಗಾಧಿಕಾರಿಯಾಗಿದ್ದರು.
ಹಿರಿಯಡ್ಕ, ಜು 04 : ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಬಾಲಕನೊಬ್ಬ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜು.3ರಂದು ಅಂಜಾರು ಗ್ರಾಮದಲ್ಲಿ ನಡೆದಿದೆ. ಅಂಜಾರು ಗ್ರಾಮದ ಪ್ರೇಮಾ ಎಂಬವರ ಮಗ ಪ್ರಜ್ವಲ್(17) ಮೃತಪಟ್ಟವರು. ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಜ್ವಲ್, ವಿಪರೀತ ಮದ್ಯಪಾನ ಮಾಡುತ್ತಿದ್ದನು. ಜು.೩ ರಂದು ಮದ್ಯರಾತ್ರಿ ಮೂತ್ರ ಮಾಡಲು ಬಾತ್‌ರೂಂಗೆ ಹೋದಾಗ ಅಸ್ವಸ್ಥನಾಗಿ ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎನ್ನಲಾಗಿದೆ.. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು,ಜು.03: ಸರಕಾರದ ಆದೇಶದ ಪ್ರಕಾರ, ಯತೀಶ್ ಎನ್. ಅವರನ್ನು ದ.ಕ. ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್ ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. 2016 ರ ಕರ್ನಾಟಕ ಕೇಡರ್ ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳೂರು, ಜು.03: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಚಲನಚಿತ್ರ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ. ಮಂಗಳೂರು ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು ಪುಣೆ, ಮುಂಬೈನಲ್ಲಿ ನಡೆದ ಪ್ರೀಮಿಯರ್ ಶೋ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು. ಧರ್ಮ ದೈವ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲೀಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲ ದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿ ಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಚಿತ್ರ ತೆರೆಕಾಣಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ಬಿಳಿಯೂರು ರಾಕೇಶ್ ಭೋಜರಾಜ ಶೆಟ್ಟಿ, ಚೇತನ್ ರೈ ಮಾಣಿ, ರಮೇಶ್ ರೈ ಕುಕ್ಕುವಳ್ಳಿ, ಅರುಣ್ ರೈ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.
ಬೆಳ್ತಂಗಡಿ, ಜೂ.28: ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ, ನಡ ಗ್ರಾಮ ಕರಣಿಕರ ಕಚೇರಿ ಸಿಬ್ಬಂದಿ ಮೃತಪಟ್ಟ ಘಟನೆ ಲಾಯಿಲದಲ್ಲಿ ಜೂ.28 ರಂದು ನಡೆದಿದೆ. ಬಳಂಜ ನಿವಾಸಿ, ನಡ ಗ್ರಾಮ ಕರಣಿಕರ ಕಚೇರಿ ಸಹಾಯಕ ಜಯರಾಜ್(50) ಮೃತಪಟ್ಟವರು. ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ತಂಗಡಿ ಕಡೆಯಿಂದ ನಡಕ್ಕೆ ತೆರಳುತ್ತಿದ್ದ ಬೈಕ್ ಮಧ್ಯೆ ಪುತ್ರಬೈಲು ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು , ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನವದೆಹಲಿ, ಜೂ.30: ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂ ಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಇಂದು ಅಧಿಕಾರ ವಹಿಸಿಕೊಂಡರು. ಸೇನೆಯ ಮುಖ್ಯಸ್ಥರಾಗಿದ್ದ ಜನರಲ್ ಮನೋ ಜ್ ಪಾಂಡೆ ಅವರು ನಿವೃತ್ತರಾದ ಹಿನ್ನಲೆ ಇದೀಗ ಸೇನೆಯ ಜನರಲ್ ದ್ವಿವೇ ದಿಯವರು ಅಧಿಕಾರ ವಹಿಸಿಕೊಂಡಿದ್ದಾರೆ ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿರುವ ಜನರಲ್ ದ್ವಿವೇದಿ ಅವರು ಸೇನೆಯ ಉಪಮುಖ್ಯಸ್ಥರಾಗಿ ಸೇ ವೆ ಸಲ್ಲಿಸುತ್ತಿದ್ದರು. ಫೆಬ್ರವರಿ 19ರಂದು ಸೇನಾ ಸಿಬ್ಬಂದಿಯ ಉಪಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು 2022-2024ರವರೆಗೆ ಉತ್ತರ ಕಮಾಂಡ್ ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಉಜಿರೆ, ಜೂ .29 : ಇಂದು ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಸಾವನ್ನಪ್ಪಿದ್ದಾರೆ. ಪ್ರಜ್ವಲ್ ನಾಯಕ್ ಅವರ ಕಾರು ವೇಗವಾಗಿ ಬಂದು ಡಿವೈಡರ್ ಮೇಲಿನ ಬೀದಿದೀಪಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಇದರಿಂದಾಗಿ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರು, ಜೂ 28: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ರೊಸಾರಿಯೋ ಬಳಿ ಬುಧವಾರ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ(46) ಹಾಗೂ ಸಕಲೇಶಪುರದ ಪಾಲ್ಯ ನಿವಾಸಿ ರಾಜು(50) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ರಿಕ್ಷಾ ಚಾಲಕರಿಬ್ಬರೂ ಆಟೋ ತೊಳಿಯುತ್ತಿರುವ ಸಮಯದಲ್ಲಿ ವಿದ್ಯುತ್ ತಂತಿಯೊಂದು ಅವರ ಮೇಲೆ ಕಡಿದು ಬಿದ್ದಿದ್ದು,ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











