Author: admin

ನವದೆಹಲಿ, ಜೂ. 09 : ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಮೋದಿಯವರ ಕ್ಯಾಬಿನೆಟ್ ಸಚಿವರಾಗಿ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ ಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಜೈಶಂಕರ್ ಪ್ರಸಾದ್, ಇಂಗ್ಲೀಷ್ ನಲ್ಲಿ ಸುಬ್ರಮಣ್ಯಂ ಜೈಶಂಕರ್, ಮನೋಹರ್ ಲಾಲ್ ಕಟ್ಟರ್, ಜೆ ಡಿ ಎಸ್ ನಾಯಕ ಎಚ್ ಡಿ ಕುಮಾರ ಸ್ವಾಮಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿ ಎಸ್ ಯಡಿಯೂರಪ್ಪ, ಮುರುಳಿ ಮನೋಹರ್ ಜೋಷಿ, ಚಿತ್ರ ನಟರಾದ ರಜಿನಿಕಾಂತ್, ಉದ್ಯಮಿಗಳಾದ ಮುಖೇಶ್ ಅಂಬಾನಿ ಮೊದಲಾದವರು ಉಪಸ್ಥಿತರಿದ್ದರು.

Read More

ಬಂಟ್ವಾಳ, ಜೂ. 08: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಶನಿವಾರ ನಡೆದಿದೆ. ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (47) ಮೃತಪಟ್ಟ ವ್ಯಕ್ತಿ. ರಾಮನಾಯ್ಕ ಅವರು ಸ್ಕೂಟರ್‌ನಲ್ಲಿ ಬಿಸಿರೋಡಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ವೇಳೆ ಅತೀ ವೇಗದಲ್ಲಿ ಬಂದ ಲಾರಿ ಸ್ಕೂಟರ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದಿದ್ದು, ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಾಸ್ಕೋ, ಜೂ. 07 : ರಷ್ಯಾದ ಸೈಂಟ್ ಪೀಟರ್ಸ್ ಬರ್ಗ್  ಬಳಿ ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.ನಾಲ್ವರು ವಿದ್ಯಾರ್ಥಿಗಳಲ್ಲಿ ಒಬ್ಬ ಸಾಯುವ ಹೊತ್ತಿನಲ್ಲಿ ಮನೆಯವರಿಗೆ ವಿಡಿಯೊ ಕರೆ ಮಾಡಿದ್ದ ಎಂದು ವರದಿಯಾಗಿದೆ. ರಷ್ಯಾದ ವಿಲಿಕಿ ನವ್ಗೊರೊಡ್ನಲ್ಲಿರುವ ನವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ಹರ್ಷಲ್ ಅನಂತ್ರಾವ್ ದೆಸಾಲೆ, ಜಿಯಾ ಫಿರೋಜ್ ಪಿಂಜಾರಿ, ಜಿಶಾನ್ ಅಷ್ಪಕ್ ಪಿಂಜಾರಿ ಮತ್ತು ಮಲಿಕ್ ಗುಲಾಮ್ಗೌಸ್ ಮೊಹಮ್ಮದ್ ಯಾಕುಬ್ ಅವರು ಸೇಂಟ್ ಪೀಟರ್ಸ್ ಬರ್ಗ್ ಸಮೀಪದ ವೊಲ್ಖೊವ್ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.. ವಿದ್ಯಾರ್ಥಿನಿ ನಿಶಾ ಭೂಪೇ ಶ್ ಸೋನವಾನೆ ಎಂಬವರನ್ನು ರಕ್ಷಿಸಲಾಗಿದೆ ಮತ್ತು ಅವರಿಗೆ ಚಿಕಿತ್ಸೆ ನೀ ಡಲಾಗುತ್ತಿದೆ ಎಂ ದು ಭಾರತೀ ಯ ರಾಯಭಾರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

Read More

ಬಂಟ್ವಾಳ, ಜೂ 06 : ಮನೆಯೊಂದರ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಕಾರ್ಮಿಕರೋರ್ವರು ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ಬುಧವಾರ ನಡೆದಿದೆ. ಮೃತರನ್ನು ಅಮ್ಟಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ ( 45) ಎಂದು ಗುರುತಿಸಲಾಗಿದೆ. ಪ್ರಕಾಶ್ ಅವರು ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

Read More

ನವದೆಹಲಿ ಜೂ. 05: ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ದೆಹಲಿಯಲ್ಲಿ ಇಂದು ಎನ್‌ಡಿಎ ನಾಯಕರುಗಳು ಸಭೆ ಸೇರಿದ್ದು, ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಎನ್‌ಡಿಎ ನಾಯಕರ ಸಭೆ ಕರೆಯಲಾಗಿತ್ತು. ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸಭೆಗೆ ಬಿಹಾರ ಸಿಎಂ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲಾ ಎನ್‌ಡಿಎ ನಾಯಕರು ಸಭೆಯಲ್ಲಿ ಹಾಜರಿದ್ದರು. ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಎನ್‌ಡಿಎ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ನರೇಂದ್ರ ಮೋದಿ ಪ್ರಧಾನಿಯಾಗಲಿ. ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಧ್ಯವಾದಷ್ಟು ಬೇಗ ಸರ್ಕಾರ ರಚನೆಯಾಗಲಿ ಎಂದು ನಿತೀಶ್ ಕುಮಾರ್ ಸಲಹೆ ನೀಡಿದ್ದಾರೆ. ಎನ್‌ಡಿಎ ಸರ್ಕಾರ ರಚನೆಗೆ ಚಂದ್ರಬಾಬು ನಾಯ್ಡು ,ಎನ್‌ಡಿಎ ಒಕ್ಕೂಟದ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

Read More

ಉಡುಪಿ, ಜೂ. 04 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಗೆಲುವು ಸಾಧಿಸಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರನ್ನು ಸೋಲಿಸುವ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಅವರು ಗೆಲುವಿನ ನಗೆ ಬೀರಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ 7,27,393 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ನ ಜಯಪ್ರಕಾಶ್ ಹೆಗ್ಡೆ ಅವರು 4,70,215 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಅವರು 2,57,178 ಮತಗಳ ಮುನ್ನಡೆ ಸಾಧಿದ್ದಾರೆ. ಜತೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 11,223 ರಷ್ಟು ಮತಗಳು ನೋಟಾ ಬಂದಿವೆ.

Read More

ಮಂಗಳೂರು .ಜೂ. 4 ಬಿಜೆಪಿಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಸೋಲು ಕಂಡಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ದಲ್ಲಿ ಬಿಜೆಪಿಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭರ್ಜರಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ನ ಆರ್ ಪದ್ಮರಾಜ್ ವಿರುದ್ಧ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ.ಈಗಾಗಲೇ ಚೌಟ ಗೆಲುವಿನ ಸಂಭ್ರಮದಲ್ಲಿ ತೊಡಗಿದ್ದು, ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಿದರು.

Read More

ಕೋಟ, ಜೂ. 03 : ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್  ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರ ಕೋಟ ಅಮೃತೇಶ್ವರೀ ವೃತ್ತದ ಬಳಿ ಶನಿವಾರ ನಡೆದಿದೆ. ಮೃತರನ್ನು ಕೋಟತಟ್ಟು ಕಲ್ಮಾಡಿ ನಿವಾಸಿ ವಾಸುದೇವ ಗಾಣಿಗ (33) ಎಂದು ಗುರುತಿಸಲಾಗಿದೆ. ವಾಸುದೇವ ಅವರು ಶನಿವಾರ ತಡರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗಲು ಕುಂದಾಪುರದಿಂದ ಉಡುಪಿ ಕಡೆಗೆ ತೆರಳುವ ರಸ್ತೆಯಲ್ಲಿ ಬಂದು ಕೋಟ ಡಿವೈಡರ್‌ನಲ್ಲಿ ಬೈಕ್ ತಿರುಗಿಸುವ ವೇಳೆ ಮಂಗಳೂರಿನಿಂದ ಶಿರಸಿ ಕಡೆ ತೆರಳುತ್ತಿದ್ದ ಬಸ್ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಕೋಟ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ, ವಾಸುದೇವ ಅವರು ಅದಾಗಲೇ ಸಾವನ್ನಪ್ಪಿದ್ದರು.

Read More

ಮಂಗಳೂರು,ಜೂ.2 : ಶ್ಯಾಮಲಾ ಎಜುಕೇಶನ್ ಟ್ರಸ್ಟ್ ನ ‘ಶಾಮ್ ಇನ್ ಸ್ಟಿಟ್ಯೂಟ್’ ಕಂಕನಾಡಿಯ ಮಂಗಳೂರು ಗೇಟ್ ಕಾಂಪ್ಲೆಕ್ಸ್ ಸಮೀಪದ ಕಟ್ಟಡದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್  ಅವರು ಸಂಸ್ಥೆ ಯನ್ನು ಉದ್ಘಾಟಿಸಿ ಮಾತಾಡಿ,  ಶಾಮ್ ಇನ್ ಸ್ಟಿಟ್ಯೂಟ್ ಸಂಸ್ಥೆಯ ಮೂಲಕ ಕರಾವಳಿ ಜನತೆಗೆ ಉತ್ತಮ ಅವಕಾಶಗಳು, ಉದ್ಯೋಗ ಆಧಾರಿತ ಕೊರ್ಸ್ ಗಳು ಲಭ್ಯವಾಗಲಿವೆ. ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಅಗತ್ಯವಿರುವ ಮೌಲ್ಯಗಳನ್ನು ಸಂಸ್ಥೆ ಕಲಿಸಲಿ ಎಂದು ಹೇಳಿದರು. ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಮಾತನಾಡಿ, ಮಂಗಳೂರು ನಗರದಲ್ಲಿ ಉದ್ಯೋಗ ಮತ್ತು ಮಾರುಕಟ್ಟೆ ಸಂಬಂಧಿತವಾದ ಎಲ್ಲಾ ಕೋರ್ಸ್ಗಳು ಆರಂಭವಾಗಿರುವುದು ಖುಷಿಯ ವಿಚಾರ. ಮಂಗಳೂರಿಗೆ ಇಂತಹ ಇನ್ಸ್ಟಿಟ್ಯೂಟ್ನ ಅವಶ್ಯಕತೆ ಇದೆ ಎಂದರು. ಶ್ಯಾಮಲಾ ಎಜ್ಯುಕೇಶ್ ಟ್ರಸ್ಟ್ನ ಚೇರ್‌ಮೆನ್ ಮತ್ತು ಮ್ಯಾನೇಜಿಂಗ್ ಡೆರೆಕ್ಟರ್ ಸಂದೇಶ್ ಸುವರ್ಣ ಅವರು ಮಾತನಾಡಿ, ಎಸೆಸೆಲ್ಸಿ, ಪಿಯುಸಿ ಮತ್ತು ಪದವಿ ಉತ್ತೀರ್ಣ ಮತ್ತು ಅನುತೀರ್ಣರಾದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುತ್ತಿದ್ದೇವೆ. ಜೊತೆಗೆ ಸಿಇಟಿ, ನೀಟ್ ತರಬೇತಿಯನ್ನು ಕೂಡ ನೀಡಲಾಗುವುದು ಎಂದರು. ಈ…

Read More

ಮಂಗಳೂರು, ಜೂ.1: ಶಾಲಾ ಕಟ್ಟಡ ಕಾಮಗಾರಿಯ ವೇಳೆ ಕಾರ್ಮಿಕರೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟ ಬಗ್ಗೆ ಮೂಡುಬಿದಿರೆಯಲ್ಲಿ ನಡೆದಿದೆ ಮೃತರನ್ನು ಸುರೇಶ್ ಎಂದು ಗುರುತಿಸಲಾಗಿದೆ ಗುರುವಾರ ಸುರೇಶ್ ಮೂಡುಬಿದಿರೆಯ ಪ್ರಾಂತ್ಯ ಗ್ರಾಮದ ಹನುಮಾನ್ ದೇವಸ್ಥಾನದ ಬಳಿಯ ಸರಕಾರಿ ಶಾಲೆಯ ಶಾಲಾ ಕಟ್ಟಡದ ಕೆಲಸ ಮಾಡುತ್ತಿದ್ದರು. ಈ ವೇಳೆ ಹಲಗೆ ಜಾರಿ ಸುರೇಶ್ ಬಿದ್ದು, ಗಂಭೀರ ಗಾಯಗೊಂಡು ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More