Author: admin

ಮಂಗಳೂರು, ಏ. 04: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಬಂಟ್ಸ್ ಹಾಸ್ಟೆಲ್ ನಲ್ಲಿರುವ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ಸ್ವೀಕರಿಸಿದರು. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ, ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಉಪಸ್ಥಿತರಿದ್ದರು.

Read More

ಮಂಗಳೂರು, ಏ 04 : ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಅವರು ಬುಧವಾರ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಿತು ನಂತರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಎಂಎಲ್ ಸಿ ಐವನ್ ಡಿಸೋಜ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿ, ಕಾರ್ಪೊರೇಟರ್ ಗಳು ಉಪಸ್ಥಿತರಿದ್ದರು.

Read More

ಉಡುಪಿ, ಏ 03:ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಅವರಿಂದ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಡಾ.ಅಂಶುಮಂತ್ ಗೌಡ, ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ಜಾರ್ಜ್ ಮತ್ತಿತರರು ಉಪಸ್ಥಿತರಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು, ಕಳೆದ 20 ತಿಂಗಳಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಎರಡೂ ಜಿಲ್ಲೆಗಳು ವಿಭಿನ್ನ ಸಮಸ್ಯೆಗಳನ್ನು ಹೊಂದಿವೆ. ಚಿಕ್ಕಮಗಳೂರಿನಲ್ಲಿ ಕಾಫಿ, ಅಡಿಕೆ ಮತ್ತಿತರ ಸಮಸ್ಯೆಗಳು ಎದುರಾಗುತ್ತಿವೆ. ಕರಾವಳಿ…

Read More

ಉಡುಪಿ, ಏ 03: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಯವರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಕೋಟ ಶ್ರೀನಿವಾಸ್ ಪೂಜಾರಿಯವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಟಿ ರವಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಸುವರ್ಣ, ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಉಪಸ್ಥಿತರಿದ್ದರು.

Read More

ಕೋಟ, ಮಾ.31 : ಕೃಷಿಕರೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಕ್ಕುಂಜೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಕ್ಕುಂಜೆ ಗ್ರಾಮದ ಕೃಷಿಕ ಸಂಜೀವ(75) ಎಂದು ಗುರುತಿಸಲಾಗಿದೆ ಬೆನ್ನು ನೋವಿನಿಂದ ಬಳಲುತಿದ್ದ ಕೃಷಿಕ ಸಂಜೀವ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.28 ಗುರುವಾರ ರಾತ್ರಿ ವೇಳೆ ಮನೆಯ ಟೆರೆಸಿನ ಕಬ್ಬಿಣದ ಶೀಟ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾಪು, ಮಾ. 30 : ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟರ್ಸ್ನಲ್ಲಿ ನೇಣಿಗೆ ಶರಣಾದ ಘಟನೆ ಶನಿವಾರ ನಡೆದಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಜ್ಯೋತಿ (29) ಎಂದು ಗುರುತಿಸಲಾಗಿದೆ. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

Read More

ಉಳ್ಳಾಲ, ಮಾ. 25: ಬೈಕ್ ಅಪಘಾತ ಸಂಭವಿಸಿ ಸಹಸವಾರೆ ವಿವಾಹಿತ ಮಹಿಳೆ ಸಾವನ್ನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲದ ನಾಟೆಕಲ್ ಸಮೀಪ ರವಿವಾರ ನಡೆದಿದೆ. ಬೋಂದೇಲ್ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಸಾವನ್ನಪ್ಪಿದವರು. ಸವಾರ ಯತೀಶ್ ದೇವಾಡಿಗ ಗಂಭೀರವಾಗಿ ಗಾಯಗೊಂಡಿದ್ದು, ಉಳ್ಳಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಇಬ್ಬರು ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ತೆರಳಿ ಬೈಕ್ನಲ್ಲಿ ವಾಪಸ್ಸಾಗುವ ಸಂದರ್ಭ ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಈ ಘಟನೆ ನಡೆದಿದೆ. ಶ್ರೀನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಯತೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾಸರಗೋಡು,ಮಾ 22 : ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶುಕ್ರವಾರ ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ನಡೆದಿದೆ. ಮೃತರನ್ನು ಅಂಗಡಿ ಪದವಿನ ಪ್ರಜ್ವಲ್ (19) ಎಂದು ಗುರುತಿಸಲಾಗಿದೆ. ಬೈಕ್ ವರ್ಕ್ಸ್ ಶೋಪ್ ನಲ್ಲಿ ದುಡಿಯುತ್ತಿದ್ದ ಪ್ರಜ್ವಲ್ ಗೆ ಶಾಕ್ ತಗಲಿದ್ದು , ಸ್ಥಳೀಯರು ವಿದ್ಯುತ್ ಕಂಬದಿಂದ ವಿದ್ಯುತ್ ವಯರನ್ನು ವಿಚ್ಚೇಧಿಸಿ ಪ್ರಜ್ವಲ್ ನನ್ನು ತಕ್ಷಣ ಉಪ್ಪಳದ ಆಸ್ಪತ್ರೆಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More

ಬಂಟ್ವಾಳ, ಮಾ 21: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ  ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಎಂದು ಗುರುತಿಸಲಾಗಿದೆ. ಶಹಿಮಾ ಅವರು 3 ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮದಲ್ಲಿದ್ದರು. ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

Read More

ಬಿಹಾರ, ಮಾ.18: ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ7 ಮಂದಿ ಮೃತಪಟ್ಟ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ  ಭಾನುವಾರ ನಡೆದಿದೆ. ಬಿಹಾರದ ಖಗಾರಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ಬರುತ್ತಿದ್ದ ವೇಳೆ ಕಾರು ಟ್ರ್ಯಾಕ್ಟರ್ ಗೆ   ಡಿಕ್ಕಿ ಹೊಡೆದಿದೆ . ಅಪಘಾತದಲ್ಲಿ ಕಾರಿನಲ್ಲಿದ್ದ 7ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More