National or International news – Navaloka Media News Mangalore| Kannada Online News Portal

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ನವದೆಹಲಿ, ಜು. 25 : ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಆಕ್ರೋಶ ಭುಗಿಲೆದ್ದ ಬೆನ್ನಲ್ಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಈ ವಿಚಾರವನ್ನು ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆʼ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ನಿರ್ಮಾಣವಾಗಿತ್ತು. ಈ ಬೆಳವಣಿಗೆಯ ನಡುವೆ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದಾರೆ.

ಸಿಜೆಪಿ ವಕ್ತಾರರು ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿ ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ ಬೇಡಿಕೆಯಾಗಿತ್ತು. ಸಂಧಾನ ಮಾತುಕತೆಯ ವೇಳೆ ಉಳಿದ ಎರಡು ಬೇಡಿಕೆಗಳಿಗೆ ಕೂಡಲೇ ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸಚಿವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಇಂದು (ಶನಿವಾರ) ಮಧ್ಯಾಹ್ನದವರೆಗೆ ಸಮಯ ಕೋರಿದ್ದರು. ಆದರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿ ದ್ದಾರೆ,

ಕಾರವಾರ : ಬಂದರಿನಲ್ಲಿ ನಿಲ್ಲಿಸಿದ್ದ ಪರ್ಷಿಯನ್ ಬೋಟ್‌ಗೆ ಆಕಸ್ಮಿಕವಾಗಿ ಬೆಂಕಿ
ಕಾರವಾರ, ಜು. 24: ಬಂದರಿನಲ್ಲಿ ನಿಲ್ಲಿಸಿದ್ದ ಪರ್ಷಿಯನ್ ಬೋಟ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಡೊಂಕದಲ್ಲಿ ನಡೆದಿದೆ.

ಆಯುಬ್ ಸಾಬ್ ಎಂಬವರಿಗೆ ಸೇರಿದ ಪರ್ಷಿಯನ್ ಬೋಟ್ ಇದಾಗಿದೆ.ಬಂದರಿನಲ್ಲಿ ಬೋಟ್ ನಿಲ್ಲಿಸಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿ ಉರಿದಿದೆ ಎಂದು ವರದಿಯಾಗಿದೆ.

ಅಲ್ಲಿನ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದಾರೆ. ಬೋಟಿನ ಸಂಪೂರ್ಣ ಭಾಗ ಸುಟ್ಟು ಹೋಗಿದ್ದು, ಅದರಲ್ಲಿದ್ದ ಇಂಜಿನ್‌ಗಳು ಸಹ ಸುಟ್ಟುಹೋಗಿವೆ. ಈ ಘಟನೆಯಲ್ಲಿ 30 ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.ಘಟನೆ ಸಂಬಂಧ ಘಟನೆ ಸಂಬಂಧ ಹೊನ್ನಾವರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು
ಕೋಲ್ಕತ್ತಾ,ಜು. 17 : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್  ನ  ಬೆಹ್ರಾಂಪುರ  ಪ್ರದೇಶದ ಕರ್ಣಸುಬರ್ಣ ರೈಲ್ವೆ ಕ್ರಾಸಿಂಗ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಬೆಳಗ್ಗೆ ಸುಮಾರು 7 ಗಂಟೆ ಹೊತ್ತಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ವ್ಯಾನ್‌ಗೆ ನಿಮ್ತಿತಾ-ಕಟ್ವಾ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವ್ಯಾನ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಕಟ್ವಾದಿಂದ ಸುಮಾರು 48 ಕಿ.ಮೀ ದೂರದಲ್ಲಿರುವ ಕರ್ಣ ಸುಬರ್ಣ ನಿಲ್ದಾಣದ ಬಳಿ ಕ್ರಾಸಿಂಗ್ ಗೇಟ್ ದಾಟುತ್ತಿದ್ದಾಗ ರೈಲು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಹಾಗೂ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಬ್ಯಾಂಕಾಕ್ ನ ಪಬ್‌ವೊಂದರಲ್ಲಿ ಭಾರೀ ಅಗ್ನಿ ಅವಘಡ – 27 ಮಂದಿ ಸಜೀವ ದಹನ
ಬ್ಯಾಂಕಾಕ್, ಜು. 14 : ಪಬ್‌ವೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಕನಿಷ್ಠ 27 ಜನ ಸಾವನ್ನಪ್ಪಿ ದ್ದು , 63 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ ನಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.

ಬ್ಯಾಂಕಾಕ್ ನಗರದ ಉತ್ತರ ಭಾಗದ ಚತುಚಕ್ ಜಿಲ್ಲೆಯ ರೋಂಗ್ ಬೀರ್ ನಾ ಲಾಟ್ ಫ್ರಾವೊ ಪಬ್‌ವೊಂದರಲ್ಲಿ ಮಧ್ಯರಾತ್ರಿ ಸುಮಾರಿಗೆ ಮಧ್ಯರಾತ್ರಿಯ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ. 63 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬ್ಯಾಂಕಾಕ್ ಗವರ್ನರ್ ಚಡ್‌ಚಾರ್ಟ್ ಸಿಟ್ಟಿಪುಂಟ್ ಮಾಧ್ಯಮಗಳೊಂದಿಗೆ ಮಾತನಾಡಿ, ಬೆಂಕಿ ತೀವ್ರ ವೇಗದಲ್ಲಿ ಚಾವಣಿಗೆ ವ್ಯಾಪಿಸಿದೆ. ಪಬ್ ನಲ್ಲಿ ಸಿಕ್ಕಿಬಿದ್ದ ಜನರಿಗೆ ಉಸಿರುಗಟ್ಟುವಂತೆ ಮಾಡಿದ ದಟ್ಟವಾದ ಕಪ್ಪು ಹೊಗೆಯೇ ಇಷ್ಟೊಂದು ದೊಡ್ಡ ಮಟ್ಟದ ಸಾವಿಗೆ ಪ್ರಮುಖ ಕಾರಣವಾಗಿದೆ ಎಂದು  ತಿಳಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಥೈಲ್ಯಾಂಡ್ ಪ್ರಧಾನಿ ಅನುತಿನ್ ಚಾರ್ನ್ವಿರಕುಲ್, ಘಟನೆಯ ತನಿಖೆಗೆ ಆದೇಶಿಸಿದ್ದಾರೆ. ಪಬ್‌ನಲ್ಲಿ ಪ್ರದರ್ಶನ ನೀಡುತ್ತಿದ್ದ ಸಂಗೀತಗಾರನೊಬ್ಬನ ಹೇಳಿಕೆಯ ಪ್ರಕಾರ, ವೇದಿಕೆಯ ಪಕ್ಕದಲ್ಲಿದ್ದ ಸರ್ಕ್ಯೂಟ್ ಬ್ರೇಕರ್‌ನಿಂದ ಮೊದಲು ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಂಡು ಕ್ಷಣಾರ್ಧದಲ್ಲಿ ಇಡೀ ಪಬ್ ಕಡುಗತ್ತಲು ಮತ್ತು ದಟ್ಟ ಹೊಗೆಯಿಂದ ಆವೃತವಾಯಿತು ಎಂದು ಅವರು ತಿಳಿಸಿದ್ದಾರೆ.

ಈ ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಸಾವು
ಕಾಸರಗೋಡು, ಜು. 11 : ಕೆಎಸ್‌ಇಬಿ ಲೈನ್‌ಮ್ಯಾನ್ ಯೊಬ್ಬರು ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ನೀಲೇಶ್ವರ ಮಡಿಕೈನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಪುಲ್ಲೂರು ಮಧುರಂಬಾಡಿ ನಿವಾಸಿ ಭರತನ್ (52) ಎಂದು ಗುರುತಿಸಲಾಗಿದೆ.

ಮಡಿಕೈ ಕಣಿಚ್ಚಿರಾ ಸೇತುವೆಯ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದೆ.ಕಣಿಚ್ಚಿರಾ ಪ್ರದೇಶದಲ್ಲಿ ವಿದ್ಯುತ್ ತಂತಿಯಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಲು ಭರತನ್ ಅವರು ವಿದ್ಯುತ್ ಕಂಬ ಹತ್ತಿದ್ದಾಗ ಅನಿರೀಕ್ಷಿತವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಅವರು ಸೊಂಟಕ್ಕೆ ಸುರಕ್ಷತಾ ಬೆಲ್ಟ್ ಧರಿಸಿದ್ದರಿಂದ, ಶಾಕ್ ತಗುಲಿದ ಬಳಿಕ ಅವರ ಮೃತದೇಹ ಕಂಬದಲ್ಲೇ ಸಿಲುಕಿಕೊಂಡಿತ್ತು. ನಂತರ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ಕೆಳಗಿಳಿಸಿದ್ದಾರೆ.

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ
ನವದೆಹಲಿ,ಜೂ. 13 : ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಧೀರಜ್ ಸೇಠ್ ಅವರು ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಲಿ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಜೂನ್ 30ರಂದು ನಿವೃತ್ತರಾದ ನಂತರ ಧೀರಜ್ ಸೇಠ್ ಅವರು ಭಾರತೀಯ ಸೇನೆಯ ನೂತನ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ದೆಹಲಿಯ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – ಮೂವರು ಸಾವು
ನವದೆಹಲಿ, ಜೂ. 12 : ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಶುಕ್ರವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

22 ವರ್ಷದ ಯುವಕ ಹಾಗೂ ಇಬ್ಬರು ಮಹಿಳೆಯರು ಅಗ್ನಿ ಅವಘಡದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಮತ್ತಿಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶುಕ್ರವಾರ ಮುಂಜಾನೆ ಸುಮಾರು 2:30ರ ವೇಳೆಗೆ ತುಘಲಕಾಬಾದ್ನ ಐದು ಮಹಡಿಗಳ ವಸತಿ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.

ನೆಲಮಹಡಿಯಲ್ಲಿ ಚಾರ್ಜ್ ಮಾಡಲಾಗುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸೇರಿದಂತೆ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು, ಕೆಲವೇ ಕ್ಷಣಗಳಲ್ಲಿ ಬೆಂಕಿ ಕಟ್ಟಡಕ್ಕೆ ವ್ಯಾಪಿಸಿದೆ. ಇದರಿಂದಾಗಿ ಒಳಭಾಗದಲ್ಲಿ ದಟ್ಟ ಹೊಗೆ ಆವರಿಸಿತು.

ಇದರಿಂದ ಕಟ್ಟಡದಲ್ಲಿದ್ದ ನಿವಾಸಿಗಳು ಹೊರಬರಲಾಗದೇ ಅಲ್ಲೇ ಸಿಲುಕಿಕೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳದ ವಾಹನಗಳು ಹಾಗೂ ಅಂಬುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿ,ಕಟ್ಟಡದಲ್ಲಿ ಸಿಲುಕಿಕೊಂಡಿದ್ದ 8 ಜನರನ್ನು ರಕ್ಷಿಸಿ ಕೂಡಲೇ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.

ಅಗ್ನಿ ಅವಘಡ ಸಂಭವಿಸಲು ನಿಖರ ಕಾರಣವೇನು ? ಮತ್ತು ಹಾನಿ  ಎಷ್ಟು ಪ್ರಮಾಣದಲ್ಲಿ ನಡೆದಿದೆ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸ್ಯಾಂಟೊ ಡೊಮಿಂಗೊ : ಖಾಸಗಿ ಜೆಟ್ ಪತನ- ಇಬ್ಬರು ಪೈಲಟ್ ಸಾವು
ಸ್ಯಾಂಟೋ ಡೊಮಿಂಗೊ, ಜೂ. 09 : ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಖಾಸಗಿ ಜೆಟ್ ವೊಂದನ್ನು ಭೂಸ್ಪರ್ಶ ಮಾಡುವ ವೇಳೆ ಪತನಗೊಂಡು, ಪೈಲಟ್ ಹಾಗೂ ಸಹ ಪೈಲಟ್ ಇಬ್ಬರೂ ಸಾವನಪ್ಪಿರುವ ಘಟನೆ ಭಾನುವಾರ ನಡೆದಿದೆ. ವಿಮಾನ ಹೊತ್ತಿಯುರಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಪಘಾತದಲ್ಲಿ ಪೈಲಟ್‌ಗಳಾದ ಎರಿಕ್ ಜೇವಿಯರ್ ಡಿಯಾಗೋ ಮತ್ತು ರೂಡಿ ಗಜಲ್ ಮೃತಪಟ್ಟಿದ್ದಾರೆ. ಪೈಲಟ್ ಹೊರತಾಗಿ ವಿಮಾನದಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ ಎಂದು  ಡೊಮಿನಿಕನ್ ನಾಗರಿಕ ವಿಮಾನ ಯಾನ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಖಾಸಗಿ ಜೆಟ್ ಗಲ್ಫ್ ಸ್ಟ್ರೀಮ್ ಜಿ200 ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೆಕ್ಸಾಸ್ನ ಆಸ್ಟಿನ್‌ಗೆ ಹೊರಟಿತ್ತು.ಈ ವೇಳೆ ಜೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ತುರ್ತು ಲ್ಯಾಂಡ್ ಆಗುತ್ತಿದ್ದಾಗ ವಿಮಾನ ನಿಯಂತ್ರಣ ಕಳೆದುಕೊಂಡಿದ್ದು, ಪಕ್ಕದ ಹುಲ್ಲುಗಾವಲು ಪ್ರದೇಶಕ್ಕೆ ನುಗ್ಗಿ, ಕ್ಷಣಾರ್ಧದಲ್ಲಿ ಹೊತ್ತಿಉರಿದಿದೆ ಎಂದು ವರದಿಯಾಗಿದೆ.

ವಿಮಾನ ನಿಲ್ದಾಣದ ರಕ್ಷಣಾ ತಂಡ ಮತ್ತು ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವಲ್ಲಿ ಕಾರ್ಯನಿರತರಾದರೂ ಕೂಡ ಪೈಲಟ್‌ಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಹಿಮಾಚಲ ಪ್ರದೇಶದಲ್ಲಿ 5.0 ತೀವ್ರತೆಯ ಭೂಕಂಪ
ಶಿಮ್ಲಾ, ಜೂ. 06 : ಹಿಮಾಚಲ ಪ್ರದೇಶದಲ್ಲಿ ಶುಕ್ರವಾರ ರಾತ್ರಿ 5.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಾಂಗ್ರಾ, ಚಂಬಾ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಕಂಪನದ ಅನುಭವವಾಗುತ್ತಿದ್ದಂತೆ ಜನರು ಭಯದಿಂದ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

ಕಾಂಗ್ರಾ–ಚಂಬಾ ಗಡಿಯ ಸಮೀಪ ಇರುವ ಧರ್ಮಶಾಲಾದಿಂದ ಸುಮಾರು 40 ಕಿ.ಮೀ. ದೂರದಲ್ಲಿ 5 ಕಿ.ಮೀ. ಆಳದಲ್ಲಿ ರಾತ್ರಿ 10.04ಕ್ಕೆ ಈ ಭೂಕಂಪ ಸಂಭವಿಸಿದೆ. ಈ ಭೂಕಂಪದ ಕೇಂದ್ರಬಿಂದು ಕಾಂಗ್ರಾದ ಧರ್ ಗೊಡೋಯ್ ಸಮೀಪದಲ್ಲಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಯಾವುದೇ ಭಾಗದಲ್ಲಿ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿ ಉಂಟಾದ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ ಡಿ ಸತೀಶನ್ ಪ್ರಮಾಣವಚನ ಸ್ವೀಕಾರ
ತಿರುವನಂತಪುರಂ, ಮೇ. 19: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಮೇ. 18, ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಅವರಿಗೆ ಹಾಗೂ 20 ಮಂದಿ ಸಚಿವರಿಗೆ ಪದ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು.

ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ನ 11 ಮಂದಿಗೆ ಸ್ಥಾನ ದೊರೆತಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ಐವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಕೇರಳ ಕಾಂಗ್ರೆಸ್-ಜೋಸೆಫ್ನ ಮಾನ್ಸ್ ಜೋಸೆಫ್, ಕೇರಳ ಕಾಂಗ್ರೆಸ್-ಜಾಕೋಬ್ನ ಅನೂಪ್ ಜಾಕೋಬ್, ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಶಿಬು ಬೇಬಿ ಜಾನ್, ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷದ ಸಿಪಿ ಜಾನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕಾಂಗ್ರೆಸ್ನಿಂದ ರಮೇಶ್ ಚೆನ್ನಿತ್ತಲ್, ಕೆ. ಮುರಳೀಧರನ್, ಸನ್ನಿ ಜೋಸೆಫ್, ಎ.ಪಿ. ಅನಿಲ್ ಕುಮಾರ್, ರೋಜಿ ಎಂ ಜಾನ್, ಬಿಂದು ಕೃಷ್ಣ, ಪಿ.ಸಿ. ವಿಷ್ಣುನಾಥ್, ಎಂ. ಲಿಜು, ಟಿ. ಸಿದ್ದಿಕ್, ಕೆ.ಎ. ತುಳಸಿ ಮತ್ತು ಒ.ಜೆ. ಜನೀಶ್ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕ ಗಾಂಧಿ, ಕೆ.ಸಿ ವೇಣು ಗೋಪಾಲ್‌, ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ,  ಮಾಜಿ ಸಿಎಂ ಪಿಣರಾಯ್‌ ವಿಜಯನ್‌,ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದರು.