Author: admin

ಬಂಟ್ವಾಳ, ಮೇ. 24 :: ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ಗುರುವಾರ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ (43) ಮೃತಪಟ್ಟ ವ್ಯಕ್ತಿ. ಸತೀಶ್ ಅವರು ಬಾಕ್ರಬೈಲಿನಲ್ಲಿ ಮರದ ಮಿಲ್ ನಲ್ಲಿ ಕೆಲಸಗಾರನಾಗಿದ್ದು, ಗುರುವಾರ ರಸ್ತೆಯ ಬದಿಯಲ್ಲಿ ಟ್ರಾನ್ಸ್ ಫಾರ್ಮರ್ ಪಕ್ಕದಲ್ಲಿ ನಿಂತುಕೊಂಡಿರುವ ಸಮಯದಲ್ಲಿ ಆಕಸ್ಮಿಕವಾಗಿ ಸಿಡಿಲು ಬಡಿದು, ಒಮ್ಮೆಲೇ ವಿದ್ಯುತ್ ಪ್ರವೇಶಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಕಾಸರಗೋಡು, ಮೇ. 23 : ಚಲಿಸುತ್ತಿದ್ದ ಟ್ಯಾಂಕರ್ ನಿಂದ ಅನಿಲ ಸೋರಿಕೆ ಉಂಟಾದ ಘಟನೆ ಕಾಞ೦ಗಾಡ್ ಸಮೀಪದ ಚಿತ್ತಾರಿಯಲ್ಲಿ ಗುರುವಾರ ನಡೆದಿದೆ. ಟ್ಯಾಂಕರ್ ಮಂಗಳೂರಿನಿಂದ ಕೋಜಿಕ್ಕೋಡ್ಗೆ ತೆರಳುತ್ತಿತ್ತು. ಈ ವೇಳೆ ಟ್ಯಾಂಕರ್ ನಿಂದ ಅನಿಲ ಸೋರಿಕೆ ಉಂಟಾಗಿದೆ. ಕೂಡಲೇ ಚಾಲಕ ಟ್ಯಾಂಕರ್ ನಿಲುಗಡೆ ಗೊಳಿಸಿ ಕಂಪೆನಿ ಅಧಿಕಾರಿಗಳಿಗೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಗಂಟೆಗಳ ಬಳಿಕ ಸೋರಿಕೆ ತಡೆಗಟ್ಟಲಾಗಿದೆ.. ಕಾಞ೦ಗಾಡ್ , ಕಾಸರಗೋಡು ಮೊದಲಾದೆಗಳಿಂದ ಮೂರು ಘಟಕ ಅಗ್ನಿಶಾಮಕ ದಳದ ಸಿಬಂದಿಗಳು ಸೋರಿಕೆ ತಡೆಗಟ್ಟಲು ಹಸರಸಾಹಸಪಟ್ಟಿದ್ದು. ಮಂಗಳೂರಿನಿಂದ ಅಧಿಕಾರಿಗಳ ತಂಡವು ಸ್ಥಳಕ್ಕೆ ಆಗಮಿಸಿದ್ದು , ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ .

Read More

ಮಂಗಳೂರು,ಮೇ23 : ಎಂಡೋ ಸಂತ್ರಸ್ತರ ಹಾಗೂ ತುಳುನಾಡಿನ ದೈವ ದೇವರ ಕಥೆಯನ್ನೊಳಗೊಂಡ ಬಲಿಪೆ ತುಳು ಚಲನಚಿತ್ರವು ಮೇ 24ರಂದು ಕರಾವಳಿಯದ್ಯಂತ ಬಿಡುಗಡೆಗೊಳ್ಳಲಿದೆ. ತುಳುನಾಡಿನ ಶ್ರೀ ಕ್ಷೇತ್ರ ಪೆರಾರ,ಕಾರಂಜಿ ಕ್ಷೇತ್ರ,ಬಜ್ಪೆ ಭಾಗಗಳಲ್ಲಿ ಚಿತ್ರೀಕರಣ ನಡೆದಿದೆ ಎಂದು ಈ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿರುವ ದಯಾನಂದ ಕತ್ತಲ್ ಸಾರ್ ಅವರು ಪತ್ರಿಕಾ ಭವನದಲ್ಲಿ ನಡೆದಿರುವ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು. ಈ ಚಿತ್ರದಲ್ಲಿ , ನಿರ್ಮಾಪಕರಾಗಿ  ಹೇಮಂತ್ ಸುವರ್ಣ,ನಾಯಕ ನಟನಾಗಿ ಹರ್ಷಿತ್ ಬಂಗೇರ ,ನಾಯಕಿಯಾಗಿ ಅಂಕಿತಾ ಪಟ್ಲ ಮುಖ್ಯ ಪಾತ್ರದಲ್ಲಿ ಅರವಿಂದ್ ಬೋಳಾರ್,ರಚನೆ – ನಿರ್ದೇಶನ ಪ್ರಸಾದ್ ಪೂಜಾರಿ, ಆಕಾಶ್ ರೆಡ್ಡಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ನಿರ್ಮಾಪಕರಾದ ಹೇಮಂತ್ ಸುವರ್ಣ,,ನಾಯಕ ನಟ ಹರ್ಷಿತ್ ಬಂಗೇರ,ನಾಯಕಿ ಅಂಕಿತಾ ಪಟ್ಲ ರಚನೆ- ನಿರ್ದೇಶಕ ಪ್ರಸಾದ್ ಪೂಜಾರಿ, ಆಕಾಶ್ ರೆಡ್ಡಿಮೊದಲಾದವರು ಉಪಸ್ಥಿತರಿದ್ದರು.

Read More

ಮಂಗಳೂರು,ಮೇ.22 : ಬಜ್ಪೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ 14 ವರ್ಷ ಕಳೆದಿವೆ. ಈ ಘಟನೆಯಲ್ಲಿ ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. 2010ರ ಮೇ 22ರಂದು ದುಬೈನಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಹಂತದಲ್ಲಿ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ 166 ಜನರ ಪೈಕಿ 158 ಜನರು ಸಾವನಪ್ಪಿದ್ದರು. 8 ಜನರು ಬದುಕುಳಿದಿದ್ದರು. ವಿಮಾನ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಗುರುತು ಹಿಡಿಯಲಾಗದ 12 ಮಂದಿಯ ಮೃತದೇಹಗಳನ್ನು ಕುಳೂರಿನ ನದಿ ಕಿನಾರೆಯಲ್ಲಿ ಸಮಾಧಿ ಮಾಡಲಾಗಿತ್ತು. ಅದೇ ಜಾಗದಲ್ಲಿ ದುರಂತದಲ್ಲಿ ಮಡಿದವರ ನೆನಪಿಗಾಗಿ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ಪೊಲೀಸ್ ಅಧಿಕಾರಿಗಳು, ವಿಮಾನ ನಿಲ್ದಾಣದ ಅಧಿಕಾರಿಗಳು ಸೇರಿದಂತೆ ಮಡಿದವರ ಕುಟುಂಬಸ್ಥರು ಭಾಗವಹಿಸಿದರು.

Read More

ಬಂಟ್ವಾಳ, ಮೇ. 22 : : ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮಾಜಿ ಸೈನಿಕ ಮೃತಪಟ್ಟ ಘಟನೆ ಮಂಚಿ ಸಮೀಪದ ಮೋಂತಿಮರದ ಕಾರ್ಯಪಡ್ಪು ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಪುತ್ತೂರು ನೆಹರು ನಗರದ ಶ್ರೀ ರಕ್ತೇಶ್ವರಿ ಗುಡಿ ಬಳಿಯ ನಿವಾಸಿ ಚಿದಾನಂದ ಕಾಮತ್ ಎಂದು ಗುರುತಿಸಲಾಗಿದೆ. ಚಿದಾನಂದ ಕಾಮತ್ ಅವರು ಸ್ಕೂಟರ್ ನಲ್ಲಿ ಸಾಲೆತ್ತೂರಿನಿಂದ ಮುಡಿಪುವಿಗೆ ತೆರಳುತ್ತಿದ್ದ ವೇಳೆ ಅತಿವೇಗದಿಂದ ಚಲಿಸಿ ಬಂದ ಕಾರು ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಚಿದಾನಂದ ಕಾಮತ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಕೂಟರ್ಗೆ ಢಿಕ್ಕಿ ಹೊಡೆದ ಕಾರು ಸ್ಥಳದಿಂದ ಪರಾರಿಯಾಗಿದೆ. ಬಂಟ್ವಾಳ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಟೆಹ್ರಾನ್, ಮೇ 20 : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಪರ್ವತ ಶ್ರೇಣಿಗಳ ನಡುವೆ ಭಾನುವಾರ ಪತನಗೊಂಡಿದ್ದು, ಈ ಅಪಘಾತದಲ್ಲಿ ಅವರು ಸಾವನ್ನಪ್ಪಿರುವುದಾಗಿ ಇರಾನ್ ಮಾಧ್ಯಮಗಳಲ್ಲಿ ವರದಿಯಾಗಿದೆ. ಹೆಲಿಕಾಪ್ಟರ್ ಅಪಘಾತದಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್ಮ್ಯಾನ್ಗಳು ಕೂಡ ಪ್ರಯಾಣಿಸುತ್ತಿದ್ದರು. ಈ ಅವಘಡದಲ್ಲಿ ಅವರೆಲ್ಲರೂ ಕೂಡ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

Read More

ಸಿಂಗಾಪುರ, ಮೇ. 19: ದಿನದಿಂದ ದಿನಕ್ಕೆ ಸಿಂಗಾಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಒಂದು ವಾರಕ್ಕೆ ಸುಮಾರು 26 ಸಾವಿರ ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ಸಿಂಗಾಪುರ ಸರ್ಕಾರ ಜನರಿಗೆ ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಿದೆ. ಒಂದೇ ವಾರದಲ್ಲಿ 26 ಸಾವಿರ ಜನರಿಗೆ ಕೋವಿಡ್ ಸೋಂಕು ತಗುಲಿದೆ. ಕೊರೊನಾ ಸೋಂಕಿತರ ಸಂಖ್ಯೆ ವಾರದಿಂದ ವಾರಕ್ಕೆ ದುಪ್ಪಟ್ಟಾಗುತ್ತಿದೆ. ಒಂದೇ ವಾರದಲ್ಲಿ ಶೇಕಡಾ 90ರಷ್ಟು ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಕಂಡಿದೆ. ಕೊರೊನಾ ಸೋಂಕು ಏರಿಕೆ ಕಂಡ ಹಿನ್ನೆಲೆ ಸಿಂಗಾಪುರದ ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗುತ್ತಿದೆ. ತುರ್ತು ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಗಳನ್ನು ಮುಂದೂಡುವಂತೆ ಹಾಗೂ ಸೂಕ್ತ ರೋಗಿಗಳನ್ನು ಮನೆಗೆ ವಾಪಾಸ್ಸು ಕಳುಹಿಸಿ ಸಂಚಾರಿ ಚಿಕಿತ್ಸಾಲಯದ ಸೇವೆ ಮುಂದುವರಿಸುವಂತೆ ಆರೋಗ್ಯ ಸಚಿವಾಲಯ ತಿಳಿಸಿದೆ. ನಾವು ಮತ್ತೊಂದು ಕೋವಿಡ್ ಅಲೆಯ ಆರಂಭದಲ್ಲಿದ್ದೆವೆ. ಪ್ರಕರಣಗಳ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ. ಮುಂದಿನ 2 ರಿಂದ 4 ವಾರಗಳಲ್ಲಿ, ಅಂದರೆ ಜೂನ್ ಅಂತ್ಯದ ವೇಳೆಗೆ ಅಲೆ ಗರಿಷ್ಟ ಮಟ್ಟ ತಲುಪಲಿದೆ ಆರೋಗ್ಯ…

Read More

ಕಾಸರಗೋಡು, ಮೇ.19 : ಕಾರು ಮತ್ತು ಸ್ಕೂಟರ್ ಅಪಘಾತ ಸಂಭವಿಸಿ ದಂಪತಿ ಸಾವನ್ನಪ್ಪಿದಘಟನೆ ಬೇತೂರುಪಾರ ದಲ್ಲಿ ನಡೆದಿದೆ. ಮೃತರನ್ನು ಬೇಡಡ್ಕದ ವಸ್ತ್ರ ಮಳಿಗೆ ಮಾಲಕ ಕೆ.ಕೆ ಕೃಷ್ಣನ್ ( 71) ಮತ್ತು ಪತ್ನಿ ಚಿತ್ರಕಲಾ ( 57) ಎಂದು ಗುರುತಿಸಲಾಗಿದೆ. ಬೋವಿಕ್ಕಾನ – ಕುತ್ತಿ ಕೋಲ್ ರಸ್ತೆಯ ಬೇತೂರು ಪಾರ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ನಡೆದಿದೆ. ಅಪಘಾತ ದಲ್ಲಿ ದಂಪತಿ ಕೆ.ಕೆ ಕೃಷ್ಣನ್ ಪತ್ನಿ ಚಿತ್ರಕಲಾ ಸಾವನ್ನಪ್ಪಿದ್ದಾರೆ. ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ .

Read More

ಮುಂಬೈ, ಮೇ. 14: ಅನಧಿಕೃತ ಜಾಹೀರಾತು ಫಲಕವೊಂದು ಪೆಟ್ರೋಲ್ ಪಂಪ್ ಮೇಲೆ ಬಿದ್ದ ಪರಿಣಾಮ 14 ಮಂದಿ ಮೃತಪಟ್ಟ ಘಟನೆ ಮುಂಬೈನ ಘಾಟ್ಕೋಪರ್ನಲ್ಲಿ ಸೋಮವಾರ ನಡೆದಿದೆ. ಗಾಳಿ ಸಹಿತ ಮಳೆಯಿಂದಾಗಿ ಪೆಟ್ರೋಲ್ ಪಂಪ್ ಎದುರಲ್ಲಿದ್ದ ಬೃಹತ್ ಜಾಹೀರಾತು ಫಲಕ ಕುಸಿದು ಪೆಟ್ರೋಲ್ ಪಂಪ್ ಸಮೀಪ ನಿಂತಿದ್ದ ಕಾರುಗಳ ಮೇಲೆ ಬಿದ್ದಿದೆ. ಈ ಪರಿಣಾಮ 14 ಮಂದಿ ಮೃತಪಟ್ಟು, 74 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳಲ್ಲಿ 35 ಮಂದಿ ಬಿಡುಗಡೆಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

Read More

ಕಡಬ, ಮೇ.13: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಡಬ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ನಡೆದಿದೆ. ಮೃತರನ್ನು ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಎಂದು ಗುರುತಿಸಲಾಗಿದೆ. ಮಹಾಲಿಂಗ ನಾಯ್ಕ ಅವರು ರೈಲ್ವೇ ಹಳಿಯಲ್ಲಿ ಶನಿವಾರ ಸಂಜೆ ವೇಳೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ರೈಲು ಢಿಕ್ಕಿಯಾಗಿರಬಹುದು ಎಂದು ಶಂಕಿಸಲಾಗಿದೆ.

Read More