Author: admin

ಮಂಗಳೂರು, ಫೆ.4 : ಜಪ್ಪಿನ ಮೊಗರು ಬಳಿಯ ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿರುವ ಘಟನೆ ಫೆ.3, ಶುಕ್ರವಾರ  ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ. ಘಟನೆ  ಸಂಭವಿಸಿದ  ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಅಗಮಿಸಿ ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ. ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ಫರ್ಮರ್ ಸ್ಪೋಟಗೊಂಡು ಈ  ಅಗ್ನಿ  ಅವಘಡ ಸಂಭವಿಸಿರಬಹುದು ಎಂದು ಆರಂಭಿಕ ಮಾಹಿತಿ ಲಭ್ಹವಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಪುತ್ತೂರು, ಫೆ 03 : ಕಾರಿಗೆ ಡಿಕ್ಕಿಯಾದ ನಾಯಿಯೊಂದು ಕಾರಿನ ಬಂಪರಿನೊಳಗೆ ಸಿಲುಕಿಕೊಂಡು ಸುಮಾರು 70 ಕಿ.ಮೀ. ಯಾವುದೇ ಗಾಯಗಳಾಗದೆ ಪ್ರಯಾಣಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸುಬ್ರಹ್ಮಣ್ಯ ಟಿ.ಎಸ್. ಕುಟುಂಬ ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಬರುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಬಳ್ಪ ಎಂಬಲ್ಲಿ ನಾಯೊಂದು ಚಲಿಸುವ ಕಾರಿಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಪತ್ತೆಯಾಗಿರಲಿಲ್ಲ. ಮನೆಗೆ ಬಂದ ಬಳಿಕ ಕಾರನ್ನು ಪರಿಶೀಲಿಸಿದಾಗ ಬಂಪರ್ನೊಳಗೆ ನಾಯಿ ಪತ್ತೆಯಾಗಿದೆ. ಕೂಡಲೇ ಸ್ಥಳೀಯ ಮೆಕ್ಯಾನಿಕ್ ಅವರನ್ನು ಕರೆಸಿ ನಾಯಿಯನ್ನು ಹೊರಕ್ಕೆ ತೆಗೆಯಲಾಗಿದೆ.

Read More

ಪುತ್ತೂರು, ಫೆ 03 : ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಪ. ಪೂ. ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಇಂದು ಮುಂಜಾನೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Read More

ಸುರತ್ಕಲ್, ಜ. 20 : ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಹಸ್ತಾಂತರಿಸಿದರು. ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಮೃತರಾಗಿದ್ದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಮೊಯಿದೀನ್ ಬಾವಾ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಷರೀಫ್ ಚೊಕ್ಕಬೆಟ್ಟು, ಜಲೀಲ್ ಬದ್ರಿಯ, ಎಸ್ ಸಿ ಎಸ್ ಟಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕೋಡಿಕಲ್, ಮತ್ತಿತರರು ಉಪಸ್ಥಿತರಿದ್ದರು.

Read More

ಮಂಗಳೂರು, ಜ. 20 : ವಿಶ್ವ ಹಿಂದು ಪರಿಷತ್-ಬಜರಂಗದಳದಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬುದಾಗಿ ಅಳವಡಿಸಲಾಗಿದ್ದ ಬ್ಯಾನರನ್ನು ಪೊಲೀಸರು ಜ. 19 ಗುರುವಾರ ತೆರವುಗೊಳಿಸಿದ್ದಾರೆ. ಜನವರಿ 15ರಿಂದ 21ರವರೆಗೆ ಕದ್ರಿ ದೇವಸ್ಥಾನದಲ್ಲಿ ಜಾತ್ರೆ ನಡೆಯಲಿದೆ. ಆದರೆ ಜಾತ್ರೆಯಲ್ಲಿ ಸನಾತನ ಧರ್ಮದ ಹಾಗೂ ಆಚರಣೆಯಲ್ಲಿ ನಂಬಿಕೆ ಹಾಗೂ ವಿಶ್ವಾಸ ಉಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶವಿದೆ ಎಂದು ಗುರುವಾರ ಕ್ಷೇತ್ರದ ಬಳಿ ಬ್ಯಾನರ್ ಹಾಕಲಾಗಿದೆ. ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಶ್ರೀ ಮಂಜುನಾಥ ದೇವಸ್ಥಾನವನ್ನು, ಅದ್ದರಿಂದ ಅಂತಹ ಮನಸ್ಥಿತಿ ಇರುವವರಿಗೆ ಹಾಗೂ ವಿಗ್ರಹಾರಾಧನೆಯನ್ನು ಹರಾಮ್ ಎಂದು ನಂಬಿರುವವರಿಗೆ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದೂ ಬ್ಯಾನರಲ್ಲಿ ಬರೆಯಲಾಗಿತ್ತು. ಕದ್ರಿ ದೇವಸ್ಥಾನವು ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವುದರಿಂದ ಬ್ಯಾನರ್ ಅಳವಡಿಕೆಗೆ ಆಡಳಿತ ಮಂಡಳಿಯ ಅನುಮತಿ ಇರಲಿಲ್ಲ. ಹೀಗಾಗಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬ್ಯಾನರನ್ನು ಪೊಲೀಸರು ತೆರವುಗೊಳಿಸಿದ್ದಾರೆ.  ಈ…

Read More

ವಿಟ್ಲ, ಜ 19 : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ  ಮಾಣಿ ಸಮೀಪ ನಡೆದಿದೆ. ಈ ಘಟನೆಯಿಂದ ಮನೆಯಲ್ಲಿದ್ದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ್ಡ ಕಾರಣ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಪುತ್ತೂರು ಅಗ್ಮಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Read More

ಕಾಸರಗೋಡು : ಪುಲ್ಲೂರು ಎಂಬಲ್ಲಿ ಅತೀ ವೇಗದಿಂದ ಬಂದ ಕಾರೊಂದು ಬಸ್ಸು ತಂಗುದಾಣದೊಳಗೆ ನುಗ್ಗಿದ ಪರಿಣಾಮ ವ್ಯಕ್ತಿಯೋರ್ವ ರು ಮೃತಪಟ್ಟ ಘಟನೆ ಜ. 18 ಬುಧವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಪುಲ್ಲೂರು ಮಕ್ಕರಕೋಡ್ ನ ಗಂಗಾಧರ(65) ಎಂದು ಗುರುತಿಸಲಾಗಿದೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಧ್ಯಪ್ರದೇಶ, ಜ. 06 :ಮಧ್ಯಪ್ರದೇಶದ ರೇವಾ ಎಂಬಲ್ಲಿ ತರಬೇತಿ ನಿರತ ವಿಮಾನವು ದೇವಸ್ಥಾನದ ಮೇಲಿನ ಗರ್ಭಗುಡಿಗೆ ಡಿಕ್ಕಿ ಹೊಡೆದು ನೆಲಕ್ಕಪ್ಪಳಿಸಿದೆ. ಈ ಘಟನೆ ಚೌರ್ಹತಾ ಪೊಲೀಸ್ ಠಾಣೆ ವ್ಯಾಪ್ತಿಯ ಉಮ್ರಿ ಗ್ರಾಮದಲ್ಲಿ ಶುಕ್ರವಾರ,ಜ.6 ರಂದು ನಡೆದಿದೆ. ಈ ವೇಳೆ ಹಿರಿಯ ಪೈಲಟ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ತರಬೇತು ಪೈಲಟ್ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

Read More

ಕುಂದಾಪುರ, ಡಿ. 31: ಆನೆಗುಡ್ಡೆ ದೇವಸ್ಥಾನದ ಬಳಿ ನಿಲ್ಲಿಸಿದ ಬಸ್ಸಿನ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ಕುಂಬಾರಪೇಟೆ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಮೃತಪಟ್ಟ ವ್ಯಕ್ತಿ . ಡಿಸೆಂಬರ್ 28 ರಂದು ಶಬರಿಮಲೆ ಯಾತ್ರೆ ಮುಗಿಸಿ ಬಂದು ಕುಂದಾಪುರದ ಆನೆಗುಡ್ಡೆ ದೇವಸ್ಥಾನದ ಬಳಿ ನಿಲ್ಲಿಸಿದ ಬಸ್ಸಿನ ಟಾಪ್ ನಲ್ಲಿ ಮಲಗಿದ್ದರು. ಆಕಸ್ಮಿಕವಾಗಿ ಬಸ್ಸಿನ ಮೇಲಿಂದ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿ ದ್ದು, ಆಸ್ಪತ್ರೆಗೆ ದಾಖ ಲಿಸ ಲಾಗಿತ್ತು. ಆದರೆ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

Read More

ಕೋಟ, ಡಿ. 31: ಕತಾರ್ ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್ (45) ಅವರು 29, ಗುರುವಾರ ಮಿದುಳು ನಿಷ್ಕ್ರಿಯಗೊಂಡು ಸಾವನಪ್ಪಿದ್ದಾರೆ. ಮೃತರು  4 ದಿನಗಳ ಹಿಂದೆ ಕತಾರ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು, ಮಿದುಳು ನಿಷ್ಕ್ರಿಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ  ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.  ಮೃತರು ತಾಯಿ, ಪತ್ನಿಯನ್ನು ಅಗಲಿದ್ದಾರೆ.

Read More