Author: admin

ನವದೆಹಲಿ:76ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಆ.15 ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿ  ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದ  ಪ್ರಧಾನಿ ನರೇಂದ್ರ ಮೋದಿ, ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದ ದೇಶವಾಸಿಗಳಿಗೆ ಶುಭಾಶಯಗಳು. ಸ್ವಾತಂತ್ರ್ಯದ ಈ ಅಮೃತ ಮಹೋತ್ಸವಕ್ಕಾಗಿ ನಾನು ವಿಶ್ವದಾದ್ಯಂತ ಹರಡಿರುವ ಭಾರತದ ಪ್ರೇಮಿಗಳನ್ನು, ಭಾರತೀಯರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು. ಮಂಗಲ್ ಪಾಂಡೆ, ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಜವಹಾರ್ ಲಾಲ್ ನೆಹರೂ, ಬಾಬಾ ಸಾಹೇಬ್ ಅಂಬೇಡ್ಕರ್, ವೀರ ಸಾವರ್ಕರ್ ಸೇರಿದಂತೆ ಹಲವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಅವರಿಗೆ ಕೃತಜ್ಞರಾಗಿದ್ದೇವೆ. ಹೋರಾಟಗಾರರು ತಮ್ಮ ಸರ್ವಸ್ವವನ್ನೂ ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.

Read More

ಕಡಬ : ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಡಬ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಡೆದಿದೆ. ಕುಟ್ರುಪಾಡಿ ಗ್ರಾಮ ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಆ.15,2022 ರಂದು ಧ್ವಜಾರೋಹಣ  ಕಾರ್ಯಕ್ರಮ ಆಯೋಜಿಸಲಾಗಿತ್ತು. ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ   ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮದ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಜಿ ಯೋಧ ಗಂಗಾಧರ ಗೌಡ ಎಂದು ಹೇಳಲಾಗಿದೆ

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದು ಶಾಂತಿ ಸುವ್ಯವಸ್ಥೆಗೆ ತೊಂದರೆಯುಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜು. 29ರಿಂದ ಆಗಸ್ಟ್ 1ರವರೆಗೆ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಕೆಲವು ಅಹಿತಕರ ಘಟನೆಗಳಿಂದಾಗಿ ಪರಿಸ್ಥಿತಿ ಬೂದಿಮುಟ್ಟಿದ ಕೆಂಡದಂತಿದ್ದು, ಉದ್ವಿಗ್ನತೆಯಿಂದ ಕೂಡಿರುವುದರಿಂದ ಕಾನೂನು ಸುವ್ಯವಸ್ಥೆಗೆ ಯಾವುದೇ ದಕ್ಕೆಯುಂಟಾಗದಂತೆ  ಜಿಲ್ಲೆಯಾದ್ಯಂತ ಬಿಗಿ ಕ್ರಮಗಳನ್ನು ಕೈ ಗೊಳ್ಳಲಾಗಿದೆ. ಅದರ ಪ್ರಕಾರ ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರೆ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಜಿಲ್ಲೆಯಾದ್ಯಂತ ತೆರೆಯಲು ಅವಕಾಶವಿರುವುದಿಲ್ಲ. ಬಸ್ಸು, ಟ್ಯಾಕ್ಸಿ ಮತ್ತು ಆಟೋರಿಕ್ಷಾಗಳ ಸಂಚಾರಕ್ಕೆ ಅವಕಾಶವಿರುತ್ತದೆ . ಅಗತ್ಯ ವಸ್ತುಗಳ ಸಾಗಾಣಿಕೆಗೆ ಅವಕಾಶವಿದೆ. ಅನಗತ್ಯ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಹೋಟೆಲ್ ನಲ್ಲಿ ಪಾರ್ಸೆಲ್ಗೆ  ಅವಕಾಶವಿದೆ ಎಂದು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

Read More

ಸುರತ್ಕಲ್ : ಇಲ್ಲಿನ ಮಂಗಳಪೇಟೆ ನಿವಾಸಿ ಫಾಝಿಲ್(23) ಎಂಬ ಯುವಕನ ಕೊಲೆ ಜುಲೈ 28ರ ಗುರುವಾರ ರಾತ್ರಿ ವೇಳೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಮಂಗಳೂರು ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿದ್ದಾರೆ. ಸುರತ್ಕಲ್ ಜಂಕ್ಷನ್ನ ಎಸ್.ಕೆ ಮೊಬೈಲ್ ಅಂಗಡಿ ಮುಂಭಾಗದಲ್ಲಿ ಮೂವರು ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ ಎಂದು ಅವರು ಹೇಳಿದ್ದಾರೆ. ಸುರತ್ಕಲ್ನಲ್ಲಿ ನಡೆದಿರುವ  ಫಾಝಿಲ್ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಸು ರತ್ಕಲ್, ಬಜಪೆ, ಮುಲ್ಕಿ ಮತ್ತು ಪಣಂಬೂರು ಠಾಣಾ ವ್ಯಾಪ್ತಿಗಳಲ್ಲಿ ಶನಿವಾರದವರೆಗೆ ಸೆಕ್ಷನ್ 144 ಜಾರಿಗೊಳಿಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ

Read More

ಬೆಳ್ಳಾರೆ : ಸುಳ್ಯದ ಬೆಳ್ಳಾರೆಯಲ್ಲಿನಿನ್ನೆ ರಾತ್ರಿ ಹತ್ಯೆಯಾಗಿರುವ ಬಿಜೆಪಿಯ ಮುಖಂಡ ಪ್ರವೀಣ್ ನೆಟ್ಟಾರು ಅವರ ಅಂತಿಮ ದರ್ಶನದ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು,ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ಲಾಠಿಚಾರ್ಜ್ ವೇಳೆ ಕೆಲವು  ಬಿಜೆಪಿ  ಕಾರ್ಯಕರ್ತರಿಗೆ  ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸುದ್ದಿಯಾಗಿದೆ.  ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಹೆಚ್ಚಿಸಿದ್ದಾರೆ.

Read More

ಮಂಗಳೂರು :  ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸವಾರ ಸಾವನ್ನಪ್ಪಿದ್ದಾರೆ.ಮೃತ ವ್ಯಕ್ತಿಯನ್ನು ಕಾವೂರು ಜ್ಯೋತಿನಗರದ ನಿವಾಸಿ ಪ್ರದೀಪ್ (24) ಎಂದು ಗುರುತಿಸಲಾಗಿದೆ. ಈ ಘಟನೆ ಸೋಮವಾರ ಸಂಜೆ ಸುಮಾರು 6ಕ್ಕೆ ನಂತೂರು ಬಳಿ ಸ್ಕೂಟರ್ ಮತ್ತು ಕಾರು ಡಿಕ್ಕಿಯಾಗಿ  ಬಳಿಕ ಲಾರಿಗೆ ಸ್ಕೂಟರ್ ಡಿಕ್ಕಿಯಾದ  ಪರಿಣಾಮವಾಗಿ ಸಂಭವಿಸಿದೆ. ಅಪಘಾತದಲ್ಲಿ ಪ್ರದೀಪ್‌ರ ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು:ಬೀಡಿ ಕಾರ್ಮಿಕರ ಈಗಿರುವ ಆರ್ಥಿಕ ಹಾಗೂ ಆರೋಗ್ಯಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅವರ ಉನ್ನತ್ತಿಗೆ ಕೇಂದ್ರ ಸರಕಾರ ಪ್ರತ್ಯೇಕ ಕಾನೂನು ರೂಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಯ್ಲಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಯೂನಿಯನ್ ಹಾಗೂ ಸೌತ್ ಕೆನರಾ-ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟರ್‍ಸ್ ಯೂನಿಯನ್ (ಎಚ್‌ಎಂಎಸ್ ಸಂಯೋಜಿತ) ಆಶ್ರಯದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ರವಿವಾರ ಜರಗಿದ ಬೀಡಿ ಕಾರ್ಮಿಕರ ಸಮಾವೇಶ ಹಾಗೂ ಬೀಡಿ ಬದುಕು ಅಧ್ಯಯನ ಗ್ರಂಥವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೀಡಿ ಉದ್ಯಮ ಆರ್ಥಿಕತೆಗೆ ದೊಡ್ಡ ಶಕ್ತಿ ನೀಡಿದೆ. ಬೀಡಿ ಉದ್ಯಮಕ್ಕೆ ಶೇ.28 ಜಿಎಸ್‌ಟಿ ವಿಧಿಸಿರುವುದು ಕಾರ್ಮಿಕರಿಗೆ, ಉದ್ಯಮಕ್ಕೆ ಬಹುದೊಡ್ಡ ಹೊಡೆತ ನೀಡಲಿದೆ. ಅದುದರಿಂದ ಬೀಡಿ ಉದ್ಯಮಕ್ಕೆ ಜಿಎಸ್‌ಟಿಯಿಂದ ಸಂಪೂರ್ಣ ವಿನಾಯತಿ ನೀಡಬೇಕುಎಂದು ಅಭಿಪ್ರಾಯ ಪಟ್ಟಿದ್ದಾರೆ. ಶಾಸಕ ವೇದವ್ಯಾಸ ಕಾಮತ್  ಅವರು ಮಾತನಾಡಿ ಬೀಡಿ ಕಾರ್ಮಿಕರ ಬೇಡಿಕೆಗಳನ್ನು  ಸರ್ಕಾರದ ಮಟ್ಟದಲ್ಲಿ  ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು…

Read More

ಮುಂಬೈ : ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಮೇರಿಕಾದ ಡಾಲರ್ ಎದುರು ರೂಪಾಯಿ ಮೌಲ್ಯ ಭಾರೀ ಕುಸಿತ ಕಂಡಿದ್ದು ಫಾರೆಕ್ಸ್ ಮಾರುಕಟ್ಟೆಯಲ್ಲಿ ರೂಪಾಯಿ ವಿನಿಮಯ ದರ ರೂ80.04 ತಲುಪಿದೆ. ಇನ್ನು ರೂಪಾಯಿ ದುರ್ಬಲವಾದರೆ ಆಮದು ಹೊರೆಯಾಗಲಿದ್ದು, ನಾವು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳಿಗೆ ಡಾಲರ್ನಲ್ಲಿ ಪಾವತಿಸಿದರೆ, ನಾವು ಹೆಚ್ಚುವರಿ ಹಣವನ್ನು ಪಾವತಿಸಬೇಕಾಗುತ್ತದೆ. ಇನ್ನು ತೈಲ ದರ ಏರಿಕೆ ಮತ್ತು ನಿರಂತರ ಹಣದುಬ್ಬರದ ಪರಿಣಾಮ ಭಾರತೀಯ ಷೇರುಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Read More

ಕೊಲಂಬೊ : ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಜು 15,ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಜಯಂತ ಜಯಸೂರ್ಯ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ಇದೇ ವೇಳೆ ಮಾತನಾಡಿದ ರಾನಿಲ್ ಸಿಂಘೆ ಅವರು, ನಾನು ಶಾಂತಿಯುತವಾಗಿ ಪ್ರತಿಭಟಿಸುವವರ ಪರವಾಗಿದ್ದೇನೆ. ಪ್ರತಿಭಟನಕಾರರು ಹಾಗೂ ಗಲಭೆಕೋರರ ನಡುವೆ ವ್ಯತ್ಯಾಸವಿದೆ. ಹೀಗಾಗಿ ಹಿಂಸಾಚಾರ ಹಾಗೂ ವಿಧ್ವಂಸಕ ಕೃತ್ಯಗಳನ್ನು ಹತ್ತಿಕ್ಕುವ ಸಲುವಾಗಿ ಸಶಸ್ತ್ರ  ಪಡೆಗಳಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ಹೇಳಿದ್ದಾರೆ. ಗೊಟಬಯ ರಾಜಪಕ್ಸೆ ಅವರು ಸಿಂಗಾಪುರಕ್ಕೆ ಪಲಾಯನಗೈದಿದ್ದು, ಅವರು ಸ್ಪೀಕರ್ ಮಹಿಂದಾ ಯಾಪಾ ಅಬೆವರ್ದನ ಅವರಿಗೆ ಇ–ಮೇಲ್ ಮುಖಾಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರ ಕಳುಹಿಸಿದ್ದರು. ಇನ್ನು ಜುಲೈ 20 ರಂದು ಸಂಸತ್ತಿನಲ್ಲಿ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಸ್ಪೀಕರ್ ಹೇಳಿದ್ದಾರೆ.

Read More

ಕುಂದಾಪುರ : ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಬೈಂದೂರು ಸಮೀಪದ ಕಂಬದಕೋಣೆ ಸೇತುವೆ ಬಳಿ ಸಂಭವಿಸಿದೆ. ಮೃತ ವಿದ್ಯಾರ್ಥಿಗಳು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಆದಿತ್ಯ ರೆಡ್ಡಿ (18), ಹಾಗೂ ತರುಣ್ ಕುಮಾರ್ ರೆಡ್ಡಿ (19) ಎಂದು ಗುರುತಿಸಲಾಗಿದೆ. ರವಿವಾರದಂದು ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ. ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More