Navaloka Media News Mangalore| Kannada Online News Portal

ಮೇ15,16 : ಚಾರ್ಟಡ್್ರ ಅಕೌಂಟೆಂಟ್ಸ್ಗಳ ರಾಷ್ಟ್ರೀಯ ಸಮ್ಮೇಳನ
ಮಂಗಳೂರು, ಮೇ15 : ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ (ICAI) ಮಂಗಳೂರು ಶಾಖೆಯ ವತಿಯಿಂದ ಚಾರ್ಟರ್ಡ್ ಅಕೌಂಟೆಂಟ್ ಸದಸ್ಯರಿಗಾಗಿ ‘ಅಧಿಗಮ – ಜ್ಞಾನ ಬಲವರ್ಧನೆ’ ಎಂಬ ಶೀರ್ಷಿಕೆಯಡಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಖೆಯ ಅಧ್ಯಕ್ಷರಾದ ಸಿಎ ಡ್ಯಾನಿಯಲ್ ಮಾರ್ಷ್ ಪೆರಿಯೆರಾ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೊಂಚಾಡಿ ಮೆರಿಹಿನಲ್ಲಿರುವ ‘ ಪಾಲೆಮಾರ್ ಕನ್ವೆನ್ಸನ್ ಸೆಂಟರ್’ನಲ್ಲಿ ಮೇ 15 ಮತ್ತು 16 ರಂದು ಈ ಬೃಹತ್ ಸಮ್ಮೇಳನ ನಡೆಯಲಿದೆ. ದೇಶದ ವಿವಿಧ ಭಾಗಗಳಿಂದ ಸುಮಾರು 500ಕ್ಕೂ ಹೆಚ್ಚು ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ವೃತ್ತಿಪರರು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ವೃತ್ತಿಯಲ್ಲಿನ ಉದಯೋನ್ಮುಖ ಬೆಳವಣಿಗೆಗಳು, ತಂತ್ರಜ್ಞಾನ ಆಧಾರಿತ ರೂಪಾಂತರ ಮತ್ತು ಪ್ರಸಕ್ತ ಹಣಕಾಸು ನಿಯಂತ್ರಣ ಬದಲಾವಣೆಗಳ ಬಗ್ಗೆ ವೃತ್ತಿಪರರನ್ನು ಸಜ್ಜುಗೊಳಿಸುವುದು ಈ ಸಮ್ಮೇಳನದ ಪ್ರಮುಖ ಉದ್ದೇಶವಾಗಿದೆ ಎಂದರು.

ಮೇ 15ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಸಹ- ಕುಲಾಧಿಪತಿಗಳಾದ ಪ್ರೊ. ಶಾಂತಾರಾಮ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮ್ಮೇಳನವು ಒಟ್ಟು ಏಳು ತಾಂತ್ರಿಕ ಅಧಿವೇಶನಗಳನ್ನು ಒಳಗೊಂಡಿರಲಿದ್ದು, ಸೈಬರ್ ಭದ್ರತೆ, ಉತ್ತರಾಧಿಕಾರ ಯೋಜನೆ (Succession Planning), ಡಿಜಿಟಲ್ ಯುಗದಲ್ಲಿನ ವೃತ್ತಿಪರ ಅವಕಾಶಗಳು ಮತ್ತು 2025ರ ಆದಾಯ ತೆರಿಗೆ ಕಾಯ್ದೆಯಡಿ ಮರು-ಮೌಲ್ಯಮಾಪನ ಪ್ರಕ್ರಿಯೆಗಳ ಕುರಿತು ದೇಶದ ಖ್ಯಾತ ವಿಷಯ ತಜ್ಞರು ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಖೆಯ ಉಪಾಧ್ಯಕ್ಷರಾದ ಸಿಎ ಮಮತಾ ರಾವ್, ಕಾರ್ಯದರ್ಶಿ ಸಿಎ ಬಾಲಸುಬ್ರಹ್ಮಣ್ಯ ಎನ್., ಖಜಾಂಚಿ ಸಿಎ ನಿತಿನ್ ಬಾಳಿಗಾ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ
ಮಂಗಳೂರು, ಮೇ 15: ಪತ್ರಕರ್ತ, ಸಾಹಿತಿ ರೇಮಂಡ್ ಡಿಕುನ್ಹಾ ತಾಕೋಡೆ ಅವರು ಬರೆದಿರುವ, ಕನ್ನಡ ಮತ್ತು ದೇವನಾಗರಿ ಲಿಪಿಯಲ್ಲಿರುವ ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿಯು ಪತ್ರಿಕಾಭವನದಲ್ಲಿ ಗುರುವಾರ ಬಿಡುಗಡೆಗೊಂಡಿತು.

ಸಮಾಜ ಸೇವಕ ಮೈಕಲ್ ಡಿಸೋಜಾ ಕೃತಿ ಬಿಡುಗಡೆಗೊಳಿಸಿದರು. ನಂತರ ಮಾತನಾಡಿ, ವಿಷನ್ ಕೊಂಕಣ ಸಂಸ್ಥೆಯ ಮುಖಾಂತರ ಮಾತಭಾಷೆಯಲ್ಲಿ ಕೃತಿ ಪ್ರಕಟಿಸುವ ಬರೆಹಗಾರರ ಪುಸ್ತಕವನ್ನು ಮುದ್ರಣ ಮಾಡಲು ಸಹಾಯ ಮಾಡುತ್ತಿದ್ದೇನೆ. ಈಗ ಬಿಡುಗಡೆಗೊಂಡಿರುವ ಪುಸ್ತಕ ಸಂಸ್ಥೆಯ 42ನೇ ಪುಸ್ತಕವಾಗಿದೆ. ಮುಂದಿನ 5 ವರ್ಷಗಳಲ್ಲಿ 100 ಪುಸ್ತಕಗಳನ್ನು ಹೊರತರುವ ಗುರಿ ಹೊಂದಲಾಗಿದೆ. ಕೃತಿಯನ್ನು ರಚಿಸಿ ಅದನ್ನು ಮುದ್ರಿಸಲು ಅನುದಾನದ ಕೊರತೆ ಎದುರಿಸುತ್ತಿರುವ ಕೃತಿಕಾರರಿಗೆ ಸಹಾಯ ಮಾಡಲು ವಿಷನ್ ಕೊಂಕಣಿ ಸಹಾಯ ಮಾಡುತ್ತಿದೆ ಎಂದು ತಿಳಿಸಿದರು.

ವಿಷನ್ ಕೊಂಕಣಿ ಮುಖ್ಯಸ್ಥ ಮುಖ್ಯಸ್ಥ ಹೆನ್ರಿ ಮೆಂಡೋನ್ಸಾ ಪೆರ್ನಾಲ್ ಮಾತನಾಡಿ, ಮೈಕಲ್ ಡಿಸೋಜ ಅವರು ತಮ್ಮ ವಿಷನ್ ಕೊಂಕಣಿ ಮೂಲಕ ಸಾಹಿತಿಗಳಿಗೆ ಸಹಾಯ ಮಾಡುತ್ತಿದ್ದಾರೆ. 40 ಲಕ್ಷಕ್ಕೂ ಮಿಕ್ಕಿದ ನೆರವಿನ ಪಂಚವಾರ್ಷಿಕ ಯೋಜನೆ ಇದಾಗಿದೆ. ನಮ್ಮಲ್ಲಿ ಪುಸ್ತಕ ಪ್ರಕಟಿಸುವವರು ಪುಸ್ತಕದ ಕರಡು ಪ್ರತಿ ಹಾಗೂ ಪಿಡಿಎಫ್ ಪ್ರತಿಯನ್ನು ಕಳುಹಿಸಿದರೆ ಆಯ್ಕೆ ಸಮಿತಿ ವತಿಯಿಂದ ಪರಾಮರ್ಶಿಸಿ ಪುಸ್ತಕ ಮುದ್ರಿಸಿಕೊಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕೃತಿಕಾರ ರೇಮಂಡ್ ಡಿಕುನಾ ತಾಕೊಡೆ, ಮೈಕಲ್ ಡಿಸೋಜಾ ಅವರನ್ನು ಸನ್ಮಾನಿಸಲಾಯಿತು. ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಮುಖರಾದ ಮೆಲ್ವಿನ್ ರೊಡ್ರಿಗಸ್, ಟೈಟಸ್ ನೊರೊನ್ಹಾ ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ. ಎನ್. ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಉಪಸ್ಥಿತರಿದ್ದರು. ಭಾಸ್ಕರ ರೈ ಕಟ್ಟ ನಿರೂಪಿಸಿದರು. ರಿಯಾನಾ ಡಿಕುನ್ಹಾ ವಂದಿಸಿದರು.

ಮೇ 15 ರಿಂದ 17ರವರೆಗೆ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರ ಪ್ರೀಮಿಯರ್ ಶೋ
ಮಂಗಳೂರು, ಮೇ 14: ರಾಘವೇಂದ್ರ ಸ್ಟುಡಿಯೋ ಪ್ರೆಸೆಂಟ್ಸ್ ಹಾಗೂ ಕೋಸ್ಟಲ್ ಫಿಲಂಸ್ ಸಹಯೋಗದಲ್ಲಿ ನಿರ್ಮಾಣವಾಗಿರುವ ಕನ್ನಡ ಟೆಲಿಚಿತ್ರ ‘ಮೊನಾಲಿಸಾ- ಇಸ್ ಇನ್ ಟ್ರಬಲ್ ಪ್ರೀಮಿಯರ್ ಪ್ರದರ್ಶನ ಮೇ 15ರಿಂದ 17ರ ವರೆಗೆ ಮಂಗಳೂರಿನ ಭಾರತ್ ಸಿನೆಮಾಸ್ನಲ್ಲಿ ನಡೆಯಲಿದೆ. ಎಂದು ಚಿತ್ರದ ನಿರ್ದೇಶಕ ಬೃಂದಾವನ್ ಎನ್. ಶೆಟ್ಟಿ  ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚಿತ್ರವು ಡ್ರಿಲ್ಲರ್, ಸಸ್ಪೆನ್ಸ್ ಅಂಶಗಳನ್ನು ಒಳಗೊಂಡಿದೆ. ಚಿತ್ರದ ಕಥೆಯನ್ನು ಶ್ರೇಯಸ್ ಕುಮಾರ್ ಫರಂಗಿಪೇಟೆ ಬರೆದಿದ್ದು ಮಂಗಳೂರಿನ ಸುತ್ತಮುತ್ತಲಲ್ಲಿ ಚಿತ್ರೀಕರಣಗೊಂಡಿದೆ. ರಂಗಿತರಂಗ ಖ್ಯಾತಿಯ ಕಾರ್ತಿಕ್ ವಿ.ಆರ್., ಯಜೇಶ್ ಬರ್ಕೆ ಈ ಟೆಲಿಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ನ್ಯಾಯವಾದಿ ನವೀನ್ ಕುಮಾರ್ ಶೆಟ್ಟಿ, ಶ್ರೇಯಸ್ ಕುಮಾರ್ ಫರಂಗಿಪೇಟೆ, ನಟಿ ವಿನುತಾ ಸಿ. ನಾಯಕ್, ನ್ಯಾಯವಾದಿ ಪ್ರಸಾದ್ ಪಾಲನ್, ದೇವಿ ಪ್ರಸಾದ್ ಕೊಂಚಾಡಿ, ದಿನೇಶ್ ಕೋಟ್ಯಾನ್, ಅಭಿನವ್ ಉಪಸ್ಥಿತರಿದ್ದರು.

ಮಂಗಳೂರು: ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ
ಮಂಗಳೂರು, ಮೇ 14: ಮಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ (77) ಅವರು ಮೇ. 13,ಬುಧವಾರ ನಿಧನರಾದರು.

1982 ರಲ್ಲಿ ಹಂಪನಕಟ್ಟೆಯ ‘ಧನ್ಯವಾದ್’ , 1984 ರಲ್ಲಿ ‘ಪಾಂಪೆ ಶೇಡ್ ಅಪಾರ್ಟ್ಮೆಂಟ್’ ನಿರ್ಮಿಸಿದ್ದರು. ಹಾಗೆನೇ ಅವರು ಎಲ್ಜೆನ್ ಪ್ರಮೋಟರ್ಸ್, ನಿಶಾಲ್ ಅಸೋಸಿಯೇಟ್ಸ್  ಸಂಸ್ಥೆಗಳನ್ನು ಹೊಂದಿದ್ದರು

ಬಜ್ಪೆ ಚರ್ಚ್, ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಚರ್ಚ್ ಸೇರಿದಂತೆ 25ಕ್ಕೂ ಹೆಚ್ಚು ಚರ್ಚ್‌ಗಳು, 4 ಮಸೀದಿಗಳು ಮತ್ತು 3 ದೇವಾಲಯಗಳನ್ನು ನಿರ್ಮಿಸಿ ದ್ದಾರೆ. ಹಾಗೆನೇ ಸಂಘ ನಿಕೇತನದ ಬಹುಮಹಡಿ ಸಭಾಂಗಣ ಸಂಕೀರ್ಣವನ್ನು ನಿರ್ಮಿಸಿದ್ದರು.

ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು, ಸೈಂಟ್ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿ ಬ್ಲಾಕ್ ಮತ್ತು ಯುನಿಟಿ ಹೆಲ್ತ್ ಕಾಂಪ್ಲೆಕ್ಸ್ನ ನರ್ಸಿಂಗ್ ಸ್ಕೂಲ್ ಇವರ ಸಂಸ್ಥೆಯ ಮೂಲಕ ನಿರ್ಮಾಣಗೊಂಡಿದೆ.

ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ಅವರ  ಉದ್ಯಮಶೀಲತೆ ಮತ್ತು ವೃತ್ತಿಪರತೆಯನ್ನು ಗುರುತಿಸಿ 2006 ರಲ್ಲಿ ‘ರಚನಾ ವರ್ಷದ ಉದ್ಯಮಿ’ ಪ್ರಶಸ್ತಿ, 2012 ರಲ್ಲಿ ‘ಎಫ್‌ಕೆಸಿಎ ವೃತ್ತಿಪರ ಶ್ರೇಷ್ಠತಾ ಪ್ರಶಸ್ತಿ’ ನೀಡಿ ಗೌರವಿಸಲಾಗಿತ್ತು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಅಭಿನಂದನಾ ಸಮಾರಂಭ
ಮಂಗಳೂರು,ಮೇ. 13 : 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಅಭಿನಂದನಾ ಸಮಾರಂಭವು ಮೇ 15, ಶುಕ್ರವಾರ ನಗರದ ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಸಂಚಾಲಕ ಮೆಲ್ವಿನ್ ರೋಡ್ರಿಗಸ್ ಅವರುಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಅಭಿನಂದನಾ ಸಮಿತಿಯ ಸಂಚಾಲಕರಾದ ಮೆಲ್ವಿನ್ ರೊಡ್ರಿಗಸ್ ಅವರ ನೇತೃತ್ವದಲ್ಲಿ ಬಹಳ ಆಯೋಜಿಸಲಾಗಿದೆ.ಅನಿವಾಸಿ ಉದ್ಯಮಿ ಮೈಕಲ್ ಡಿಸೋಜಾ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಖ್ಯಾತ ಕನ್ನಡ ಕವಿ ಮತ್ತು ಸಾಹಿತಿ ಜಯಂತ್ ಕಾಯ್ಕಿಣಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.

ಸಂಜೆ 5.30ಕ್ಕೆ ಕಾರ್ಯಕ್ರಮವು ಆರಂಭವಾಗಲಿದ್ದು, 5:45ಕ್ಕೆ ಉಸ್ತಾದ್ ರಫೀಕ್ ಖಾನ್ ಮತ್ತು ಅವರ ಸಂಗಾತಿಗಳಿಂದ ‘ಸಿತಾರ್ ಪ್ಯೂಷನ್’ ಎಂಬ ವಿಶಿಷ್ಟ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಎಡ್ಡಿ ಸಿಕೇರ್ ಮತ್ತು ಮುಹಮ್ಮದ್ ಮುಆದ್ ಜಿ.ಎಂ. ಅವರಿಂದ ಎಚ್.ಎಂ. ಪೆರ್ನಾಲ್ ಅವರ ಕವಿತೆಗಳ ಸಾದರೀಕರಣದ ಮೂಲಕ ಕವಿತಾ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಸಂಜೆ 7:00ಕ್ಕೆ ‘ಜಿವಿತಾಚೊ, ಸಾಹಿತ್ಯಾಚೊ ಸಂಭ್ರಮ್’ ಅಂಗವಾಗಿ ಶಕುಂತಳಾ ಆರ್. ಕಿಣಿ ಮತ್ತು ವಿಲ್ಸನ್ ಕಟೀಲ್ ಅವರು ಎಚ್.ಎಂ. ಅವರೊಂದಿಗೆ ವಿಶೇಷ ಸಂವಾದ ನಡೆಸಲಿದ್ದಾರೆ. ಸಮಾರಂಭದ ಪ್ರಮುಖ ಘಟ್ಟವಾದ ‘ಅಭಿನಂದನ್ ಸಂಭ್ರಮ್’ ಸಂಜೆ 7:30ಕ್ಕೆ ಶುರುವಾಗಲಿದ್ದು, ಟಾಯ್ಸಸ್ ನೊರೊನ್ಹಾ ಅವರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ. ಎಮ್‌ಡಿವಿಕೆ-ಎಚ್ಚೆಮ್ ಅಭಿನಂದನ್ ಸಮಿತಿ ಹಾಗೂ ವಿವಿಧ ಕೊಂಕಣಿ ಸಂಘ-ಸಂಸ್ಥೆಗಳ ವತಿಯಿಂದ ಪೆರ್ನಾಲ್ ಅವರಿಗೆ ಸನ್ಮಾನ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಚ್.ಎಂ. ಪೆರ್ನಾಲ್, ಜಯಂತ್ ಕಾಯ್ಕಿಣಿ ಮತ್ತು ಮೈಕಲ್ ಡಿಸೋಜಾ ಅವರು ಮಾತನಾಡಲಿದ್ದಾರೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಮೆಲ್ವಿನ್ ರೊಡ್ರಿಗಸ್, ಎಡ್ಡಿ ಸಿಕ್ವೆರಾ ಮತ್ತು ಟಾಯ್ಸಸ್ ನೊರೊನ್ಹಾ ಉಪಸ್ಥಿತರಿದ್ದರು.

ಮೇ16,17:‘ಸ್ಪಾರ್ಕ್ ಟ್ರೀ’ ವತಿಯಿಂದ ಪಾಲೇಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ‘ಕಿಡ್‌ಫೆಸ್ಟ್ 2026’ ವಿಶೇಷ ಮಕ್ಕಳ ಉತ್ಸವ
ಮಂಗಳೂರು, ಮೇ. 12: ಮಕ್ಕಳ ಪ್ರತಿಭೆ, ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಪಾರ್ಕ್ ಟ್ರೀ ವತಿಯಿಂದ ಮೇ 16 ಮತ್ತು 17ರಂದು ನಗರದ ಪಾಲೇಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ‘ಕಿಡ್‌ಫೆಸ್ಟ್ 2026’ ಎಂಬ ವಿಶೇಷ ಮಕ್ಕಳ ಉತ್ಸವ ಆಯೋಜಿಸಲಾಗಿದೆ ಎಂದು ಸ್ಪಾರ್ಕ್ ಟ್ರೀ ಸಂಸ್ಥೆಯ ಸೌಜನ್ಯ ಹೆಗ್ಡೆ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉತ್ಸವದಲ್ಲಿ ಮಕ್ಕಳಿಗೆ ಕಲಿಕೆ, ಆಟೋಟ, ಸೃಜನಾತ್ಮಕ ಚಟುವಟಿಕೆಗಳು ಹಾಗೂ ವಿವಿಧ ಕಾರ್ಯಾಗಾರಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿಶೇಷ ಆಕರ್ಷಣೆಯಾಗಿ ಮೊದಲ ಬಾರಿಗೆ ಮಕ್ಕಳಿಗಾಗಿ ‘ಕಿಡ್ಸ್ ಮ್ಯಾರಥಾನ್’ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರೀತಮ್ ಪೊನ್ನಪ್ಪ ಉಪಸ್ಥಿತರಿದ್ದರು.

ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ
ಮಂಗಳೂರು, ಮೇ 12 : ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಆಚರಿಸಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಅನಿಲ್ ಲೋಬೊ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ಸಂಸ್ಥಾಪಕರ ಕುಟುಂಬ ಸದಸ್ಯರು ದಿವಂಗತ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ಭಾವಚಿತ್ರಕ್ಕೆ ಪುಷ್ಪ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು.

ಅಧ್ಯಕ್ಷರಾದ ಅನಿಲ್ ಲೋಬೊ ಅವರು ಸ್ವಾಗತ ಭಾಷಣದಲ್ಲಿ, ಸಂಸ್ಥಾಪಕರ ದೃಷ್ಟಿಕೋನ ಮತ್ತು ಧ್ಯೇಯವನ್ನು ಸ್ಮರಿಸುವ ಉದ್ದೇಶದಿಂದ ಸಂಸ್ಥಾಪಕರ ದಿನಾಚರಣೆಯನ್ನು ಪ್ರಾರಂಭಿಸಲಾಗಿದೆ.2018ರಲ್ಲಿ ಹೊಸ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ನಂತರ ಬ್ಯಾಂಕ್ ವೃತ್ತಿಪರತೆಯೊಂದಿಗೆ ಗಮನಾರ್ಹ ಬೆಳವಣಿಗೆ ಸಾಧಿಸಿದೆ.24 ವರ್ಷಗಳ ಬಳಿಕ ಶಾಖೆಗಳ ಸಂಖ್ಯೆ 16ರಿಂದ 21ಕ್ಕೆ ಏರಿಕೆಯಾಗಿದೆ.ಬ್ಯಾಂಕಿನ ಒಟ್ಟು ವ್ಯವಹಾರ ರೂ.500 ಕೋಟಿಯಿಂದ ರೂ.1,525 ಕೋಟಿಗೆ ಏರಿಕೆಯಾಗಿದ್ದು, ಠೇವಣಿಗಳು ರೂ.300 ಕೋಟಿಯಿಂದ ರೂ.875 ಕೋಟಿಗೆ ಹೆಚ್ಚಳವಾಗಿವೆ ಎಂದರು. ಬ್ಯಾಂಕ್ ರೂ.13 ಕೋಟಿ ಲಾಭ ದಾಖಲಿಸಿದೆ ಎಂದು ಹೇಳಿದರು.

ವಂ. ಡಾ| ಪ್ರವೀಣ್ ಮಾರ್ಟಿಸ್ ಅವರು ತಮ್ಮ ಭಾಷಣದಲ್ಲಿ, ಅಧ್ಯಕ್ಷರಾದ ಅನಿಲ್ ಲೋಬೊ ಅವರ ನಾಯಕತ್ವವನ್ನು ಶ್ಲಾಘಿಸಿ, ಬ್ಯಾಂಕ್ ಕಳೆದ ಕೆಲವು ವರ್ಷಗಳಲ್ಲಿ ಸಾಧಿಸಿರುವ ಪರಿವರ್ತನೆಯನ್ನು ಮೆಚ್ಚಿದರು. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ನೆರವಾಗುವ “ವಿದ್ಯಾಧನ ವಿದ್ಯಾರ್ಥಿ ಕ್ರೆಡಿಟ್ ಯೋಜನೆ”ಯನ್ನು ವಿಶೇಷವಾಗಿ ಪ್ರಶಂಸಿಸಿದರು. ಎಂಸಿಸಿ ಬ್ಯಾಂಕ್ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸುವ ಜನಪರ ಬ್ಯಾಂಕಾಗಿ ಹೊರಹೊಮ್ಮಿದೆ ಎಂದರು.

ಕಾರ್ಯಕ್ರಮದಲ್ಲಿ ಐಸಾಕ್ ವಾಸ್ ಅವರು ಸಂಪಾದಕರಾದ ಡಾ. ಜೆರಾಲ್ಡ್ ಪಿಂಟೊ ಅವರೊಂದಿಗೆ ಬ್ಯಾಂಕಿನ ಬುಲೆಟಿನ್ ಬಿಡುಗಡೆ ಮಾಡಿದರು. ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಹೊಸದಾಗಿ ಅರ್ಹತೆ ಪಡೆದ ಚಾರ್ಟರ್ಡ್ ಅಕೌಂಟೆಂಟ್ಸ್ ಗಳಾದ ಸಿಎ ಮ್ಯೂರಿಯಲ್ ಮಸ್ಕರೇನ್ಹಾಸ್ ಹಾಗೂ ಸಿಎ ಜಾಯ್ಸ್ಟನ್ ಡಿಸೋಜಾ ಅವರನ್ನು ಸನ್ಮಾನಿಸಲಾಯಿತು. ಕೇಂದ್ರ ಸೆಂಟ್ರಲ್ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಹೆನ್ರಿ ಮೆಂಡೋನ್ಕಾ (ಎಚ್.ಎಂ. ಪೆರ್ನಾಲ್), ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ರಿಶೆಲ್ ಫೆರ್ನಾಂಡಿಸ್ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ| ಜೋಸೆಫ್ ಲೋಬೊ, ಶ್ರೀ ಝೇವಿಯರ್ ಡಿಸೋಜಾ ಮತ್ತು ಶ್ರೀ ಪ್ರೇಮ್ ಜೆ. ಮೊರಾಸ್ ಅವರನ್ನು ಗೌರವಿಸಲಾಯಿತು.

ನಿರ್ದೇಶಕರಾದ ರೋಶನ್ ಡಿಸೋಜಾ ಹಾಗೂ ಅನಿಲ್ ಪತ್ರಾವೊ ಅವರನ್ನು ಅವರ ಜನ್ಮದಿನದ ಅಂಗವಾಗಿ ಸನ್ಮಾನಿಸಲಾಯಿತು. ಬ್ಯಾಂಕಿನ ಹೊಸ ಲೋಗೋ ವಿನ್ಯಾಸಗೊಳಿಸಿದ ಬನ್ನು ಫೆರ್ನಾಂಡಿಸ್ ಹಾಗೂ ಪಿಎಫ್ಎಕ್ಸ್ ಮೆಮೋರಿಯಲ್ ಆಡಿಟೋರಿಯಂ ವಿನ್ಯಾಸಗೊಳಿಸಿದ ವಾಸ್ತುಶಿಲ್ಪಿ ದೀಪಕ್ ಡಿಸೋಜಾ ಅವರನ್ನು ಸಹ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ಇದರ ಉಪಕುಲಪತಿ ರೆವ್. ಡಾ. ಪ್ರವೀಣ್ ಮಾರ್ಟಿಸ್ ಎಸ್ ಜೆ ,ಕರ್ನಾಟಕ ಬ್ಯಾಂಕಿನ ಮಾಜಿ ಮಹಾಪ್ರಬಂಧಕ ಹಾಗೂ ಮುಖ್ಯ ಅನುಸರಣಾಧಿಕಾರಿ ಡಾ| ಮೀರಾ ಅರನ್ಹಾ, ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಅಧ್ಯಕ್ಷ ರಾಯ್ ಕ್ಯಾಸ್ಟೆಲಿನೋ ಹಾಗೂ ಕೆನರಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಐಸಾಕ್ ವಾಸ್ ಬ್ಯಾಂಕಿನ ಮಹಾಪ್ರಬಂಧಕರಾದ ಸುನಿಲ್ ಮಿನೇನೆಜಸ್, ನಿರ್ದೇಶಕರಾದ ಆಂಡ್ರೂ ಡಿಸೋಜಾ, ಹೆರಾಲ್ಡ್ ಮೊಂತೋರೊ, ಅನಿಲ್ ಪತ್ರಾವೊ, ಡೇವಿಡ್ ಡಿಸೋಜಾ, ಜೆ.ಪಿ. ರೋಡ್ರಿಗಸ್, ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸುಶಾಂತ್ ಸಾಲ್ದಾನ್ಹಾ, ಐರಿನ್ ರೆಬೆಲ್ಲೊ, ಆಲ್ವಿನ್ ಪಿ. ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಡಾ| ಜೆರಾಲ್ಡ್ ಪಿಂಟೊ ಹಾಗೂ ಸಿ.ಜಿ. ಪಿಂಟೊ ಉಪಸ್ಥಿತರಿದ್ದರು.

ಕಾರ್ಯಕ್ರಮವು ಮನೋಜ್ ಲೋಪೆಸ್ ಮತ್ತು ತಂಡದವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಬ್ಯಾಂಕಿನ ಮಹಾಪ್ರಬಂಧಕರಾದ ಸುನಿಲ್ ಮೆನೆಜಸ್ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಜೇಸನ್ ಶಿರ್ತಾಡಿ ನಿರೂಪಿಸಿದರು.

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ
ಚೆನ್ನೈ, ಮೇ. 11 : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ವಿಜಯ್ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.

ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಮಿಳುನಾಡಿನ 13ನೇ ಮುಖ್ಯಮಂತ್ರಿಯಾಗಿ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣ ವಚನ ಬೋಧಿಸಿದರು.

234 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 120 ಶಾಸಕರ ಬೆಂಬಲ ಪಡೆದ ವಿಜಯ್ ಜೊತೆಗೆ, ರಾಜ್ಯಪಾಲ ಅರ್ಲೇಕರ್ ಅವರು ‘ಬಸ್ಸಿ’ ಎನ್ ಆನಂದ್, ಕೆಜಿ ಅರುಣ್‌ರಾಜ್, ಆಧವ್ ಅರ್ಜುನ, ಎ ರಾಜ್‌ಮೋಹನ್, ಕೆಎ ಸೆಂಗೋಟ್ಟೈಯನ್, ಪಿ ವೆಂಕಟರಮಣನ್, ಸಿಟಿಆರ್ ನಿರ್ಮಲ್ ಕುಮಾರ್, ಕೀರ್ತನಾ ಮತ್ತು ಕೆಟಿ ಪ್ರಭು ಅವರನ್ನೊಳಗೊಂಡ ಹೊಸ ಸಚಿವ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಿದರು.

ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು
ಉಪ್ಪಿನಂಗಡಿ, ಮೇ. 10 : ರಸ್ತೆ ಕಾಮಗಾರಿಯ ವೇಳೆ ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮೇ 9, ಶನಿವಾರ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ನಡೆದಿದೆ.

ಮೃತರನ್ನು ಬಿಹಾರ ಮೂಲದ ರಾಮಚಂದ್ರ ಶಿಕಾರಿ (55) ಎಂದು ಗುರುತಿಸಲಾಗಿದೆ.

ಗಾಂಧಿಪಾರ್ಕ್ ಬಳಿ ಚತುಷ್ಪಥ ರಾಷ್ಟ್ರೀಯ ಕಾಮಗಾರಿಯ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ವ್ಯಕ್ತಿಯೋರ್ವ ರಸ್ತೆ ಬದಿ ಮಲಗಿದ್ದ, ಅವರು ಮಲಗಿರುವುದು ಅರಿವಿಗೆ ಬಾರದೆ ಆತನ ಮೇಲೆ ರೋಡ್ ರೋಲರ್ ಚಲಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ಕೋಲ್ಕತ್ತಾ, ಮೇ. 09 : ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಯ ಸುವೇಂದು ಅಧಿಕಾರಿ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುವೇಂದು ಅಧಿಕಾರಿ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಹಾಗೂ ಎನ್‌ಡಿಎ ಆಡಳಿತದ 20 ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

ಸುವೇಂದು ಅಧಿಕಾರಿ ಅವರೊಂದಿಗೆ ಇತರ ಶಾಸಕರಾದ ದಿಲೀಪ್ ಘೋಷ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು, ಅಗ್ನಿಮಿತ್ರಾ ಪೌಲ್, ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧಿಸಿದರು.